ಮಾರ್ಕ 6:14 - ಕನ್ನಡ ಸಮಕಾಲಿಕ ಅನುವಾದ14 ಯೇಸುವಿನ ಹೆಸರು ಪ್ರಸಿದ್ಧಿಗೆ ಬಂದಿದ್ದರಿಂದ ಅರಸನಾದ ಹೆರೋದನಿಗೆ ಈ ವಿಷಯ ತಿಳಿಯಿತು. “ಈತನು ಸ್ನಾನಿಕನಾದ ಯೋಹಾನನೇ, ಸತ್ತವರೊಳಗಿಂದ ಅವನು ತಿರುಗಿ ಬದುಕಿ ಬಂದಿದ್ದಾನೆ. ಆದ್ದರಿಂದಲೇ ಈತನಲ್ಲಿ ಅದ್ಭುತಕಾರ್ಯಗಳನ್ನು ನಡೆಸುವ ಶಕ್ತಿಗಳಿವೆ,” ಎಂದು ಕೆಲವರು ಹೇಳುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಅಷ್ಟರಲ್ಲಿ ಅರಸನಾದ ಹೆರೋದನು ಯೇಸುವಿನ ಹೆಸರು ಪ್ರಸಿದ್ಧಿಗೆ ಬಂದಿರುವ ವಿಷಯ ಕೇಳಿದನು ಮತ್ತು ಜನರು ಆತನ ವಿಷಯದಲ್ಲಿ, “ಸ್ನಾನಿಕನಾದ ಯೋಹಾನನೇ ತಿರುಗಿ ಬದುಕಿ ಬಂದಿದ್ದಾನೆ; ಆದುದರಿಂದ ಮಹತ್ಕಾರ್ಯಗಳನ್ನು ನಡಿಸುವ ಶಕ್ತಿ ಈತನಲ್ಲಿ ಇದೆ” ಎಂದು ಹೇಳುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಇಷ್ಟರಲ್ಲಿ ಯೇಸುಸ್ವಾಮಿಯ ಹೆಸರು ಮನೆಮಾತಾಯಿತು. ಅದು ಹೆರೋದ ಅರಸನ ಕಿವಿಗೂ ಬಿತ್ತು. ಯೇಸುವಿನ ವಿಚಾರವಾಗಿ ಕೆಲವರು, “ಮಡಿದ ಸ್ನಾನಿಕ ಯೊವಾನ್ನನೇ ಮರಳಿ ಜೀವಂತವಾಗಿ ಬಂದಿದ್ದಾನೆ; ಆದುದರಿಂದಲೇ ಮಹತ್ಕಾರ್ಯಗಳನ್ನು ಮಾಡುವ ಶಕ್ತಿ ಇವನಿಗಿದೆ,” ಎನ್ನುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಮತ್ತು ಅರಸನಾದ ಹೆರೋದನು [ಯೇಸುವಿನ ಸುದ್ದಿಯನ್ನು] ಕೇಳಿದನು. ಯಾಕಂದರೆ ಆತನ ಹೆಸರು ಪ್ರಸಿದ್ಧವಾಯಿತು, ಮತ್ತು ಜನರು ಆತನ ವಿಷಯದಲ್ಲಿ - ಸ್ನಾನಿಕನಾದ ಯೋಹಾನನೇ ತಿರಿಗಿ ಬದುಕಿಬಂದಿದ್ದಾನೆ; ಆದದರಿಂದ ಮಹತ್ಕಾರ್ಯಗಳನ್ನು ನಡಿಸುವ ಶಕ್ತಿಗಳು ಅವನಲ್ಲಿ ಅವೆ ಎಂದು ಹೇಳುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಯೇಸು ಪ್ರಸಿದ್ಧನಾಗಿದ್ದುದರಿಂದ ರಾಜನಾದ ಹೆರೋದನಿಗೆ ಯೇಸುವಿನ ವಿಷಯ ತಿಳಿಯಿತು. ಕೆಲವು ಜನರು, “ಇವನು (ಯೇಸು) ಸ್ನಾನಿಕನಾದ ಯೋಹಾನ. ಇವನು ಮತ್ತೆ ಬದುಕಿಬಂದಿದ್ದಾನೆ. ಆದಕಾರಣವೇ ಈ ಅದ್ಭುತಕಾರ್ಯಗಳನ್ನು ಮಾಡಲು ಶಕ್ತನಾಗಿದ್ದಾನೆ” ಎಂದು ಹೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ಹೆರೊದ್ ರಾಜಾನ್ ಹೆಚ್ಯಾ ವಿಶಯಾತ್ ಆಯ್ಕ್ಲ್ಯಾನ್, ಕಶ್ಯಾಕ್ ಮಟ್ಲ್ಯಾರ್ ಜೆಜುಚಿ ಖಬರ್ ಸಗ್ಳ್ಯಾಕ್ಡೆ ಫರ್ಗಟಲ್ಲಿ. ಥೊಡೆಜಾನಾ “ಬಾಲ್ತಿಮ್ ದಿತಲೊ ಜುವಾಂವ್ ಮರಲ್ಲೊ ಅನಿ ಝಿತ್ತೊ ಹೊವ್ನ್ ಯೆಲಾ! ತಸೆ ಮನುನ್ ತೆಕಾ ಅಜಾಪಾ ಕರ್‍ತಲೊ ಬಳ್ ಹಾಯ್” ಮನುಲಾಗಲ್ಲ್ಯಾನಿ. ಅಧ್ಯಾಯವನ್ನು ನೋಡಿ |