Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 6:2 - ಕನ್ನಡ ಸಮಕಾಲಿಕ ಅನುವಾದ

2 ಸಬ್ಬತ್ ದಿನ ಬಂದಾಗ, ಯೇಸು ಸಭಾಮಂದಿರದಲ್ಲಿ ಬೋಧಿಸಲಾರಂಭಿಸಿದರು. ಅದನ್ನು ಕೇಳಿದ ಅನೇಕರು ವಿಸ್ಮಯಗೊಂಡು, “ಈತನು ಇವೆಲ್ಲವನ್ನು ಎಲ್ಲಿಂದ ಪಡೆದಿದ್ದಾನೆ? ಈತನ ಕೈಗಳಿಂದ ಇಂಥ ಅದ್ಭುತಕಾರ್ಯಗಳನ್ನು ಮಾಡುವ ಜ್ಞಾನವು ಈತನಿಗೆ ಎಲ್ಲಿಂದ ಬಂತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಸಬ್ಬತ್ ದಿನ ಬಂದಾಗ ಆತನು ಅಲ್ಲಿಯ ಸಭಾಮಂದಿರದಲ್ಲಿ ಉಪದೇಶಮಾಡತೊಡಗಿದನು. ಅಲ್ಲಿ ನೆರದಿದ್ದ ಜನರು ಯೇಸುವಿನ ಬೋಧನೆಯನ್ನು ಕೇಳಿ ಬೆರಗಾದರು. “ಈತನಿಗೆ ಈ ಬೋಧನೆಯ ಮಾತುಗಳು ಎಲ್ಲಿಂದ ಬಂದಿತು? ಈತನು ಪಡೆದಿರುವ ಜ್ಞಾನವಾದರೂ ಎಂಥದ್ದು? ಈತನ ಕೈಯಿಂದ ಇಂತಹ ಅದ್ಭುತಕಾರ್ಯಗಳು ಆಗುವುದಾದರು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಸಬ್ಬತ್‍ದಿನ ಅಲ್ಲಿಯ ಪ್ರಾರ್ಥನಾಮಂದಿರದಲ್ಲಿ ಉಪದೇಶ ಮಾಡತೊಡಗಿದರು. ಕಿಕ್ಕಿರಿದು ನೆರೆದಿದ್ದ ಜನರು ಯೇಸುವಿನ ಬೋಧನೆಯನ್ನು ಕೇಳಿ ಬೆರಗಾದರು. “ಇದೆಲ್ಲಾ ಇವನಿಗೆ ಎಲ್ಲಿಂದ ಬಂದಿತು? ಇವನು ಪಡೆದಿರುವ ಜ್ಞಾನವಾದರೂ ಎಂಥಾದ್ದು? ಇವನಿಂದ ಮಹತ್ಕಾರ್ಯಗಳು ಆಗುವುದಾದರೂ ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಸಬ್ಬತ್ ದಿನ ಬಂದಾಗ ಆತನು ಸಭಾಮಂದಿರಕ್ಕೆ ಹೋಗಿ ಉಪದೇಶ ಮಾಡುವದಕ್ಕೆ ಪ್ರಾರಂಭಿಸಿದನು. ಎಲ್ಲರು ಕೇಳಿ ಅತ್ಯಾಶ್ಚರ್ಯಪಟ್ಟು - ಇವನಿಗೆ ಈ ಮಾತುಗಳು ಎಲ್ಲಿಂದ ಬಂದಿದ್ದಾವು? ಇವನು ಪಡೆದಿರುವ ಈ ಜ್ಞಾನವೇನು? ಇವನ ಕೈಯಿಂದ ಇಂಥ ಮಹತ್ಕಾರ್ಯಗಳಾಗುವದೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಸಬ್ಬತ್ ದಿನದಂದು ಯೇಸು ಸಭಾಮಂದಿರದಲ್ಲಿ ಉಪದೇಶಿಸಿದನು. ಆತನ ಉಪದೇಶವನ್ನು ಕೇಳಿ ಆಶ್ಚರ್ಯಗೊಂಡ ಅನೇಕ ಜನರು, “ಈ ಉಪದೇಶವನ್ನು ಮತ್ತು ಈ ಜ್ಞಾನವನ್ನು ಇವನು ಎಲ್ಲಿಂದ ಪಡೆದನು? ಇವನಿಗೆ ಕೊಟ್ಟವರು ಯಾರು? ಇವನಿಗೆ ಅದ್ಭುತಕಾರ್ಯಗಳನ್ನು ಮಾಡುವ ಶಕ್ತಿಯು ಎಲ್ಲಿಂದ ಬಂತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಸಬ್ಬತಾಚ್ಯಾ ದಿಸಿ ಸಿನಾಗೊಗಾತ್ ಜೆಜು ಸಿಕ್ವುಕ್ಲಾಗ್ಲೊ. ಥೈ, ಲೈ ಲೊಕಾ ಹೊತ್ತಿ. ಲೊಕಾ ತೆಚಾ ಗೊಸ್ಟಿಯಾ ಆಯ್ಕುನ್ ಅಜಾಪ್ ಹೊಲಿ, ಅನಿ ತೆನಿ “ಹ್ಯಾ ಗೊಸ್ಟಿಯಾ ಹೆಕಾ ಖೈತ್ನಾ ಗಾವ್ಲ್ಯಾ? ಹೆಕಾ ಕಸ್ಲೆ ಜ್ಞಾನ್ ದಿಲ್ಲೆ ಹಾಯ್? ಅನಿ ಹ್ಯೊ ಅಜಾಪಾ ಕಸೆ ಕರುನ್ ಕರ್‍ತಾ?” ಮನುನ್ ಇಚಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 6:2
11 ತಿಳಿವುಗಳ ಹೋಲಿಕೆ  

“ಈತನು ಯೋಸೇಫನ ಪುತ್ರ ಯೇಸು ಅಲ್ಲವೇ? ಈತನ ತಂದೆತಾಯಿ ನಮಗೆ ಗೊತ್ತಿಲ್ಲವೇ? ಹಾಗಾದರೆ, ‘ನಾನು ಪರಲೋಕದಿಂದ ಬಂದೆನು,’ ಎಂದು ಈತನು ಹೇಳುವುದು ಹೇಗೆ?” ಎಂದರು.


ಯೆಹೂದ್ಯರು ಆಶ್ಚರ್ಯಪಟ್ಟು, “ಏನನ್ನೂ ಕಲಿಯದಿರುವ ಈ ಮನುಷ್ಯನಿಗೆ ಇಷ್ಟೆಲ್ಲಾ ಜ್ಞಾನ ತಿಳಿದಿರುವುದು ಹೇಗೆ?” ಎಂದರು.


ಯೇಸು ಗಲಿಲಾಯದಲ್ಲೆಲ್ಲಾ ಸಂಚರಿಸಿ, ಯೆಹೂದ್ಯರ ಸಭಾಮಂದಿರಗಳಲ್ಲಿ ಬೋಧಿಸುತ್ತಾ, ರಾಜ್ಯದ ಸುವಾರ್ತೆಯನ್ನು ಸಾರುತ್ತಾ, ಜನರಲ್ಲಿದ್ದ ಸಕಲ ವಿಧವಾದ ವ್ಯಾಧಿಗಳನ್ನೂ ಸಕಲ ವಿಧವಾದ ಬೇನೆಗಳನ್ನೂ ಗುಣಪಡಿಸುತ್ತಾ ಬಂದರು.


ಯೇಸು ಈ ಮಾತುಗಳನ್ನು ಹೇಳಿ ಮುಗಿಸಿದ ಮೇಲೆ, ಅವರ ಬೋಧನೆಯನ್ನು ಕೇಳಿ ಜನರು ಆಶ್ಚರ್ಯಪಟ್ಟರು.


ಯೇಸು ಯೆಹೂದ್ಯರ ಸಭಾಮಂದಿರಗಳಲ್ಲಿ ಬೋಧಿಸಿದ್ದರಿಂದ, ಎಲ್ಲರೂ ಅವರನ್ನು ಹೊಗಳಿದರು.


ಆದ್ದರಿಂದ ಯೇಸು ಗಲಿಲಾಯ ಪ್ರಾಂತವನ್ನೆಲ್ಲಾ ಸಂಚರಿಸಿ, ಅವರ ಸಭಾಮಂದಿರಗಳಲ್ಲಿ ಉಪದೇಶ ಮಾಡುತ್ತಾ, ದೆವ್ವಗಳನ್ನು ಓಡಿಸುತ್ತಾ ಇದ್ದರು.


ಯೇಸು ಅಲ್ಲಿಂದ ಹೊರಟು ಯೊರ್ದನ್ ನದಿಯ ಆಚೆಯ ಯೂದಾಯ ಪ್ರಾಂತಕ್ಕೆ ಬಂದರು. ಅಲ್ಲಿ ಜನರು ತಿರುಗಿ ಅವರ ಬಳಿಗೆ ಬರಲು, ಯೇಸು ತಮ್ಮ ವಾಡಿಕೆಯಂತೆ ಅವರಿಗೆ ಮತ್ತೆ ಬೋಧಿಸಿದರು.


ಯೇಸು ಆಡಿದ ಮಾತುಗಳನ್ನು ಕೇಳಿದವರೆಲ್ಲರೂ ಅವರ ಜ್ಞಾನಕ್ಕೂ ಉತ್ತರಗಳಿಗೂ ಬೆರಗಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು