Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 6:20 - ಕನ್ನಡ ಸಮಕಾಲಿಕ ಅನುವಾದ

20 ಏಕೆಂದರೆ, ಯೋಹಾನನು ನೀತಿವಂತನು ಮತ್ತು ಪವಿತ್ರ ಮನುಷ್ಯನು ಎಂದು ತಿಳಿದು ಹೆರೋದನು ಭಯಪಟ್ಟು ಅವನನ್ನು ಸುರಕ್ಷಿತವಾಗಿಟ್ಟಿದ್ದನು. ಯೋಹಾನನು ಹೇಳಿದ್ದನ್ನು ಹೆರೋದನು ಕೇಳಿದಾಗಲೆಲ್ಲಾ ಅವನಿಗೆ ಗಲಿಬಿಲಿಯಾಗುತ್ತಿತ್ತು. ಆದರೂ ಅವನ ಮಾತನ್ನು ಕೇಳಲು ಇಷ್ಟಪಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಏಕೆಂದರೆ ಹೆರೋದನು ಯೋಹಾನನನ್ನು ನೀತಿವಂತನೆಂದೂ ಪರಿಶುದ್ಧನೆಂದೂ ತಿಳಿದು ಭಯಪಟ್ಟು ಅವನಿಗೆ ಯಾವ ಅಪಾಯವೂ ಬಾರದಂತೆ ಕಾಪಾಡಿದ್ದನು. ಇದಲ್ಲದೆ ಯೋಹಾನನು ಹೇಳುತ್ತಿದ್ದ ಸಂದೇಶವನ್ನು ಅವನು ಕೇಳಿದಾಗ ಮನಸ್ಸಿನಲ್ಲಿ ಅಸಮಾಧಾನ ಉಂಟಾದರೂ ಅವನ ಮಾತನ್ನು ಸಂತೋಷದಿಂದ ಕೇಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಏಕೆಂದರೆ, ಯೊವಾನ್ನನು ಸಂತನು ಹಾಗೂ ಸತ್ಪುರುಷನು ಎಂದು ಹೆರೋದನು ಅರಿತು, ಆತನಿಗೆ ಭಯಪಟ್ಟು ಯಾವ ಅಪಾಯವೂ ಆತನಿಗೆ ಬಾರದಂತೆ ನೋಡಿಕೊಳ್ಳುತ್ತಿದ್ದನು. ಯೊವಾನ್ನನು ಹೇಳುತ್ತಿದ್ದ ಮಾತುಗಳನ್ನು ಕೇಳಿದಾಗಲೆಲ್ಲಾ ಹೆರೋದನ ಮನಸ್ಸು ಅಲ್ಲೋಲಕಲ್ಲೋಲವಾಗುತ್ತಿತ್ತು. ಆದರೂ ಆತನ ಮಾತುಗಳನು ಕಿವಿಗೊಟ್ಟು ಕೇಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಹೆರೋದನು ಯೋಹಾನನನ್ನು ನೀತಿವಂತನೆಂದೂ ದೇವಭಕ್ತನೆಂದೂ ತಿಳಿದು ಅಂಜಿಕೊಂಡು ಅವನಿಗೆ ಯಾವ ಅಪಾಯವೂ ಬಾರದಂತೆ ಇಟ್ಟಿದ್ದನು. ಇದಲ್ಲದೆ ಯೋಹಾನನು ಹೇಳಿದ್ದನ್ನು ಅವನು ಕೇಳಿದಾಗ ಮನಸ್ಸಿನಲ್ಲಿ ಬಹು ಗಲಿಬಿಲಿ ಹುಟ್ಟಿದರೂ ಅವನ ಮಾತನ್ನು ಸಂತೋಷದಿಂದ ಕೇಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆದರೆ ಆಕೆಗೆ ಸಾಧ್ಯವಾಗಲಿಲ್ಲ. ಹೆರೋದನು ಯೋಹಾನನನ್ನು ಕೊಲ್ಲಿಸಲು ಭಯಪಟ್ಟನು. ಯೋಹಾನನನ್ನು ಒಳ್ಳೆಯವನೆಂದೂ ಪವಿತ್ರನೆಂದೂ ಜನರೆಲ್ಲರು ನಂಬಿದ್ದಾರೆಂಬುದು ಹೆರೋದನಿಗೆ ತಿಳಿದಿತ್ತು. ಆದ್ದರಿಂದ ಹೆರೋದನು ಯೋಹಾನನನ್ನು ರಕ್ಷಿಸಿದನು. ಹೆರೋದನು ಯೋಹಾನನ ಉಪದೇಶವನ್ನು ಕೇಳಿದಾಗಲೆಲ್ಲಾ ಗಲಿಬಿಲಿಗೊಳ್ಳುತ್ತಿದ್ದನು. ಆದರೂ ಅವನ ಉಪದೇಶವನ್ನು ಸಂತೋಷದಿಂದ ಕೇಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಖರೆ ಹೆರೊದ್ ಭಿಂವ್ ಲಾಗಲ್ಲೊ ಕಶ್ಯಾಕ್ ಮಟ್ಲ್ಯಾರ್ ಜುವಾಂವ್ ಎಕ್ ಬರೊ ಅನಿ ಪವಿತ್ರ್ ಮಾನುಸ್ ಮನುನ್ ತೆಕಾ ಗೊತ್ತ್ ಹೊತ್ತೆ,ತಸೆ ಮನುನ್ ತೊ ತೆಕಾ ಕಾಯ್ಬಿ ತರಾಸ್ ಹೊವ್ಕ್ ದಿ ನಸಿ, ತೊ ಸಾಂಗ್ತಾನಾ ತೆಕಾ ತರಾಸ್ ಹೊಲ್ಯಾರ್ಬಿ, ತೊ ಕುಶಿನ್ ತೆಚೆ ಆಯ್ಕಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 6:20
21 ತಿಳಿವುಗಳ ಹೋಲಿಕೆ  

‘ಮನುಷ್ಯರಿಂದ ಬಂತು,’ ಎಂದು ಹೇಳಿದರೆ ಜನರಿಗೆ ನಾವು ಭಯಪಡಬೇಕಾಗಿದೆ. ಏಕೆಂದರೆ ಯೋಹಾನನು ಪ್ರವಾದಿಯೆಂದು ಎಲ್ಲರೂ ಗೌರವಿಸುತ್ತಾರೆ,” ಎಂದುಕೊಂಡರು.


ಹೆರೋದನು ಯೋಹಾನನನ್ನು ಕೊಲ್ಲಬೇಕೆಂದಿದ್ದರೂ ಜನಸಮೂಹಕ್ಕೆ ಭಯಪಟ್ಟನು. ಅವರು ಯೋಹಾನನನ್ನು ಪ್ರವಾದಿಯೆಂದು ಎಣಿಸಿದ್ದರು.


ಯೋಹಾನನು ಉರಿದು ಪ್ರಕಾಶಿಸುವ ದೀಪವಾಗಿದ್ದನು. ನೀವು ಸ್ವಲ್ಪಕಾಲ ಅವನ ಬೆಳಕಿನಲ್ಲಿ ಅತ್ಯಾನಂದಪಡಲು ನೀವು ಇಚ್ಚಿಸಿದಿರಿ.


ಮುಖ್ಯಯಾಜಕರೂ ನಿಯಮ ಬೋಧಕರೂ ಅದನ್ನು ಕೇಳಿ ಯೇಸುವನ್ನು ಹೇಗೆ ಕೊಲ್ಲಬೇಕೆಂದು ಆಲೋಚಿಸಿದರು. ಆದರೆ ಜನರೆಲ್ಲರೂ ಯೇಸುವಿನ ಬೋಧನೆಗೆ ಅತ್ಯಾಶ್ಚರ್ಯಪಟ್ಟದ್ದರಿಂದ ಅವರು ಯೇಸುವಿಗೆ ಭಯಪಟ್ಟರು.


ಇನ್ನೂ ಕೆಲವರು ಕಲ್ಲು ನೆಲದ ಮೇಲೆ ಬಿದ್ದ ಬೀಜದಂತಿರುವರು. ಅವರು ವಾಕ್ಯವನ್ನು ಕೇಳಿದ ಕೂಡಲೇ ಸಂತೋಷದಿಂದ ಅದನ್ನು ಸ್ವೀಕರಿಸುತ್ತಾರೆ.


ಆಗ ದಾನಿಯೇಲನು ಅರಸನ ಮುಂದೆ, “ನಿನ್ನ ದಾನಗಳು ನಿನಗಿರಲಿ, ನಿನ್ನ ಬಹುಮಾನಗಳು ಮತ್ತೊಬ್ಬರಿಗೆ ದೊರಕಲಿ. ಆದರೂ ನಾನು ಅರಸನಿಗಾಗಿ ಬರಹವನ್ನು ಓದಿ, ಅದರ ಅರ್ಥವನ್ನು ಅರಸನಿಗೆ ತಿಳಿಸುವೆನು,” ಎಂದನು.


ಆದ್ದರಿಂದ ಅರಸನೇ, ನನ್ನ ಆಲೋಚನೆಯು ನಿನಗೆ ಸರಿಯಾದದ್ದಾಗಿರಲಿ. ಸರಿಯಾದದ್ದನ್ನು ಮಾಡುವುದರಿಂದ ನಿನ್ನ ಪಾಪಗಳನ್ನು ಬಿಟ್ಟುಬಿಡು. ದಬ್ಬಾಳಿಕೆಯಾದವರಿಗೆ ದಯೆ ತೋರುವುದರಿಂದ ನಿನ್ನ ದುಷ್ಟತ್ವವನ್ನು ಬಿಟ್ಟುಬಿಡು. ಹೀಗಾದರೆ ಒಂದು ವೇಳೆ ನಿನ್ನ ಸಮೃದ್ಧಿ ಮುಂದುವರಿಯುವುದು.”


“ಈ ಕನಸನ್ನು ನೆಬೂಕದ್ನೆಚ್ಚರನೆಂಬ ಅರಸನಾದ ನಾನು ಕಂಡಿದ್ದೇನೆ. ಈಗ ಬೇಲ್ತೆಶಚ್ಚರನೆಂಬ ನೀನು ಅದರ ಅರ್ಥವನ್ನು ಹೇಳು. ಏಕೆಂದರೆ ನನ್ನ ರಾಜ್ಯದಲ್ಲಿರುವ ಸಕಲ ಜ್ಞಾನಿಗಳು ಅದರ ಅರ್ಥವನ್ನು ನನಗೆ ಹೇಳಲು ಶಕ್ತರಾದವರಲ್ಲ. ಆದರೆ ನಿನ್ನಲ್ಲಿ ಪರಿಶುದ್ಧ ದೇವರುಗಳ ಆತ್ಮವು ಇರುವುದರಿಂದ ನೀನು ಹೇಳಲು ಶಕ್ತನು,” ಎಂದನು.


ಇಗೋ, ನಿನ್ನ ಮಾತು ಅವರ ಎಣಿಕೆಯಲ್ಲಿ ಒಬ್ಬ ಸಂಗೀತಗಾರನು ವಾದ್ಯವನ್ನು ಜಾಣತನದಿಂದ ಬಾರಿಸಿ ಮಧುರಸ್ವರದಿಂದ ಹಾಡುವ ಪ್ರೇಮಗೀತೆಗೆ ಸಮಾನವಾಗಿದೆ; ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಕೈಗೊಳ್ಳುವುದಿಲ್ಲ.


ದೇವರ ದರ್ಶನಗಳಲ್ಲಿ ಗ್ರಹಿಕೆಯುಳ್ಳವನಾದ ಜೆಕರ್ಯನ ದಿವಸಗಳಲ್ಲಿ ಅವನು ದೇವರನ್ನು ಹುಡುಕಿದನು. ಯೆಹೋವ ದೇವರನ್ನು ಹುಡುಕುವ ದಿವಸಗಳ ಮಟ್ಟಿಗೂ, ದೇವರು ಅವನನ್ನು ಅಭಿವೃದ್ಧಿ ಪಡಿಸಿದರು.


ಯೋವಾಷನು ಯಾಜಕನಾದ ಯೆಹೋಯಾದನ ಸಮಸ್ತ ದಿವಸಗಳಲ್ಲಿ ಯೆಹೋವ ದೇವರ ಸಮ್ಮುಖದಲ್ಲಿ ಸರಿಯಾದದ್ದನ್ನು ಮಾಡಿದನು.


ಆಗ ಎಲೀಷನು ಮರಣಕರ ವ್ಯಾಧಿಯಿಂದ ಬಳಲುತ್ತಿದ್ದಾಗ, ಇಸ್ರಾಯೇಲಿನ ಅರಸನಾದ ಯೋವಾಷನು ಅವನ ಬಳಿಗೆ ಬಂದು, ಅವನ ಮೇಲೆ ಬಿದ್ದು, “ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಾಯೇಲಿನ ರಥಗಳೂ ಕುದುರೆ ಸವಾರರು ಆಗಿದ್ದವನೇ!” ಎಂದು ಹೇಳುತ್ತಾ ಅತ್ತನು.


ಇಸ್ರಾಯೇಲಿನ ಅರಸನು ಅವರನ್ನು ಕಂಡಾಗ ಎಲೀಷನಿಗೆ, “ನನ್ನ ತಂದೆಯೇ, ನಾನು ಸಂಹರಿಸಲೋ, ಸಂಹರಿಸಲೋ?” ಎಂದನು.


ಆಗ ಅಹಾಬನು ಎಲೀಯನಿಗೆ, “ನನ್ನ ಶತ್ರುವೇ, ನೀನು ನನ್ನನ್ನು ಕಂಡುಹಿಡಿದೆಯಾ,” ಎಂದನು. ಅದಕ್ಕೆ ಎಲೀಯನು, “ಕಂಡುಕೊಂಡೆನು, ನೀನು ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡುವಂತೆ ನಿನ್ನನ್ನು ಮಾರಿಕೊಂಡದ್ದರಿಂದ,


ಇದಲ್ಲದೆ ಯೆಹೋವ ದೇವರು ಈಜಿಪ್ಟಿನವರ ದೃಷ್ಟಿಯಲ್ಲಿ ಜನರಿಗೆ ದಯೆ ದೊರಕುವಂತೆ ಮಾಡಿದರು. ಇದಲ್ಲದೆ ಮೋಶೆಯು ಈಜಿಪ್ಟ್ ದೇಶದಲ್ಲಿಯೂ ಫರೋಹನ ಅಧಿಕಾರಿಗಳ ದೃಷ್ಟಿಯಲ್ಲಿಯೂ ಜನರ ದೃಷ್ಟಿಯಲ್ಲಿಯೂ ಬಹಳ ಗೌರವ ಹೊಂದಿದನು.


ಅವರು ಆಶ್ಚರ್ಯದಿಂದಲೂ ಗಲಿಬಿಲಿಗೊಂಡವರಾಗಿಯೂ, “ಇದರ ಅರ್ಥವೇನು?” ಎಂದು ತಮ್ಮತಮ್ಮೊಳಗೆ ಪ್ರಶ್ನೆಮಾಡಿಕೊಂಡರು.


ಈ ವರದಿಯನ್ನು ಕೇಳಿದಾಗ, ದೇವಾಲಯದ ಕಾವಲುಗಾರರ ದಳಪತಿಯೂ ಮುಖ್ಯಯಾಜಕರೂ ಇದರಿಂದ ಏನಾಗುವುದೋ ಎಂದು ಕಳವಳಪಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು