Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 6:30 - ಕನ್ನಡ ಸಮಕಾಲಿಕ ಅನುವಾದ

30 ಅಪೊಸ್ತಲರು ಹಿಂದಿರುಗಿ ಯೇಸುವಿನ ಬಳಿಗೆ ಬಂದು ತಾವು ಮಾಡಿದ್ದನ್ನೂ ಬೋಧಿಸಿದ ಎಲ್ಲವನ್ನೂ ಕುರಿತು ಅವರಿಗೆ ವರದಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಅಪೊಸ್ತಲರು ಯೇಸುವಿನ ಬಳಿಗೆ ಕೂಡಿ ಬಂದು ತಾವು ಮಾಡಿದ್ದನ್ನೂ ಉಪದೇಶಿಸಿದ್ದನ್ನೂ ಆತನಿಗೆ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಪ್ರೇಷಿತರು ಯೇಸುಸ್ವಾಮಿಯ ಬಳಿಗೆ ಹಿಂದಿರುಗಿ ಬಂದು ತಾವು ಮಾಡಿದ ಸಕಲ ಕಾರ್ಯಕಲಾಪಗಳ ಹಾಗು ನೀಡಿದ ಬೋಧನೆಯ ವರದಿಯನ್ನು ಒಪ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಇತ್ತಲಾಗಿ ಅಪೊಸ್ತಲರು ಆತನ ಬಳಿಗೆ ಕೂಡಿ ಬಂದು ತಾವು ಮಾಡಿದ್ದನ್ನೂ ಉಪದೇಶಿಸಿದ್ದನ್ನೂ ಎಲ್ಲಾ ಆತನಿಗೆ ತಿಳಿಸಲು ಆತನು ಅವರಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಯೇಸು ಉಪದೇಶಿಸಲು ಕಳುಹಿಸಿದ್ದ ಅಪೊಸ್ತಲರು ಮರಳಿಬಂದು ತಾವು ಮಾಡಿದ ಮತ್ತು ಉಪದೇಶಿಸಿದ ಸಂಗತಿಗಳನ್ನೆಲ್ಲ ಆತನಿಗೆ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ಜೆಜುಚಿ ಅಪೊಸ್ತಲಾ ಪರ್ತುನ್ ಯೆವ್ನ್ ಜೆಜುಕ್ ಭೆಟ್ಲ್ಯಾನಿ, ಅನಿ ಅಪ್ನಿ ಕಾಯ್-ಕಾಯ್ ಕರ್‍ಲ್ಯಾನಿ ಅನಿ ಕಾಯ್-ಕಾಯ್ ಶಿಕ್ವುಲ್ಯಾನಿ ತೆ ಸಗ್ಳೆ ತೆನಿ ಜೆಜುಕ್ ಸಾಂಗ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 6:30
17 ತಿಳಿವುಗಳ ಹೋಲಿಕೆ  

ಅಪೊಸ್ತಲರು ಹಿಂದಿರುಗಿ ಬಂದು, ತಾವು ಮಾಡಿದವುಗಳನ್ನೆಲ್ಲಾ ಯೇಸುವಿಗೆ ತಿಳಿಸಿದರು. ಆಗ ಯೇಸು ಬೇತ್ಸಾಯಿದ ಎಂಬ ಹೆಸರಿನ ಪಟ್ಟಣಕ್ಕೆ ಪ್ರತ್ಯೇಕವಾಗಿ ಅವರನ್ನು ಕರೆದುಕೊಂಡು ಹೋದರು.


ಆ ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳು ಹೀಗಿದ್ದವು: ಮೊದಲನೆಯವನು, ಪೇತ್ರ ಎಂದು ಎನಿಸಿಕೊಂಡ ಸೀಮೋನ, ಅವನ ಸಹೋದರ ಅಂದ್ರೆಯ; ಜೆಬೆದಾಯನ ಮಗ ಯಾಕೋಬ ಮತ್ತು ಅವನ ಸಹೋದರ ಯೋಹಾನ;


ನಿಶ್ಚಿತ ಸಮಯ ಬಂದಾಗ ಯೇಸು ಹನ್ನೆರಡು ಮಂದಿ ಅಪೊಸ್ತಲರ ಸಂಗಡ ಕುಳಿತುಕೊಂಡರು.


ಆಗ ಅಪೊಸ್ತಲರು ಕರ್ತದೇವರಿಗೆ, “ನಮ್ಮ ವಿಶ್ವಾಸವನ್ನು ಹೆಚ್ಚಿಸಿರಿ,” ಎಂದರು.


ಆ ಎಪ್ಪತ್ತೆರಡು ಮಂದಿ ಸಂತೋಷದಿಂದ ಹಿಂತಿರುಗಿ, “ಕರ್ತದೇವರೇ, ನಿಮ್ಮ ಹೆಸರಿನಲ್ಲಿ ದೆವ್ವಗಳು ಸಹ ನಮಗೆ ಅಧೀನವಾದವು,” ಎಂದರು.


ಅನಂತರ ಅವರು ಚೀಟು ಹಾಕಲು, ಅದು ಮತ್ತೀಯನ ಪಾಲಿಗೆ ಬಂದಿತು; ಆದ್ದರಿಂದ ಅವನು ಹನ್ನೊಂದು ಜನ ಅಪೊಸ್ತಲರೊಂದಿಗೆ ಸೇರಿದನು.


ಮಗ್ದಲದ ಮರಿಯಳು, ಯೋಹಾನಳು, ಯಾಕೋಬನ ತಾಯಿ ಮರಿಯಳು ಮತ್ತು ಅವರೊಂದಿಗಿದ್ದ ಬೇರೆ ಸ್ತ್ರೀಯರು ಅಪೊಸ್ತಲರಿಗೆ ಈ ವಿಷಯಗಳನ್ನು ಹೇಳಿದರು.


ಬೆಳಗಾದ ಮೇಲೆ, ಯೇಸು ತಮ್ಮ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಲ್ಲಿ ಹನ್ನೆರಡು ಮಂದಿಯನ್ನು ಆರಿಸಿಕೊಂಡು, ಅವರಿಗೆ “ಅಪೊಸ್ತಲರು” ಎಂದು ಹೆಸರಿಟ್ಟರು.


ಯೇಸು ಹನ್ನೆರಡು ಮಂದಿಯನ್ನು ತಮ್ಮ ಸಂಗಡ ಇರಲು ಮತ್ತು ಅವರನ್ನು ಉಪದೇಶಮಾಡಲು ನೇಮಿಸಿ, ಅವರಿಗೆ “ಅಪೊಸ್ತಲರು” ಎಂದು ಕರೆದರು.


ಇದನ್ನು ಕೇಳಿ ಯೋಹಾನನ ಶಿಷ್ಯರು ಬಂದು ಅವನ ಶವವನ್ನು ತೆಗೆದುಕೊಂಡುಹೋಗಿ ಸಮಾಧಿಯಲ್ಲಿ ಇಟ್ಟರು.


ಆಗ ಸೇವಕನು ಇಸಾಕನಿಗೆ ತಾನು ಮಾಡಿದ ಕಾರ್ಯಗಳನ್ನೆಲ್ಲಾ ತಿಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು