Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 6:48 - ಕನ್ನಡ ಸಮಕಾಲಿಕ ಅನುವಾದ

48 ಎದುರುಗಾಳಿ ಬಲವಾಗಿ ಬೀಸುತ್ತಿದ್ದುದರಿಂದ ಶಿಷ್ಯರು ದೋಣಿಯನ್ನು ನಿಯಂತ್ರಿಸಲು ದಣಿದು ಹೋದದ್ದನ್ನು ಯೇಸು ಕಂಡು, ಮುಂಜಾನೆ ಸುಮಾರು ಮೂರು ಗಂಟೆಯಲ್ಲಿ ಅವರ ಬಳಿಗೆ ಸರೋವರದ ಮೇಲೆ ನಡೆಯುತ್ತಾ ಬಂದರು. ಯೇಸು ಅವರನ್ನು ದಾಟಿ ಹೋಗುವುದರಲ್ಲಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

48 ಎದುರು ಗಾಳಿ ಬೀಸುತ್ತಿದ್ದುದರಿಂದ ಶಿಷ್ಯರು ಹುಟ್ಟುಗೋಲು ಹಾಕಿ ದಣಿದು ಹೋದದ್ದನ್ನು ಯೇಸು ಕಂಡು ಹೆಚ್ಚುಕಡಿಮೆ ರಾತ್ರಿಯ ನಾಲ್ಕನೆಯ ಜಾವದಲ್ಲಿ ಸಮುದ್ರದ ಮೇಲೆ ನಡೆದು ಅವರ ಕಡೆಗೆ ಬಂದು ಅವರನ್ನು ದಾಟಿ ಮುಂದಕ್ಕೆ ಹೋಗಬೇಕೆಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

48 ಎದುರುಗಾಳಿ ಬೀಸುತ್ತಿದ್ದುದರಿಂದ ಶಿಷ್ಯರು ಹುಟ್ಟುಹಾಕಿ ದಣಿದುಹೋಗಿದ್ದರು. ಇದನ್ನು ಕಂಡ ಯೇಸು ಸರೋವರದ ನೀರಿನ ಮೇಲೆ ನಡೆದುಕೊಂಡು ಅವರ ಕಡೆಗೆ ಬಂದು, ಅವರನ್ನು ದಾಟಿ ಮುಂದೆ ಹೋಗುವುದರಲ್ಲಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

48 ಎದುರು ಗಾಳಿ ಬೀಸುತ್ತಿದ್ದದರಿಂದ ಶಿಷ್ಯರು ಹುಟ್ಟು ಹಾಕಿ ಹಾಕಿ ಒದ್ದಾಡುವದನ್ನು ಆತನು ಕಂಡು ಹೆಚ್ಚುಕಡಿಮೆ ರಾತ್ರಿಯ ನಾಲ್ಕನೆಯ ಜಾವದಲ್ಲಿ ಸಮುದ್ರದ ಮೇಲೆ ನಡೆದು ಅವರ ಕಡೆಗೆ ಬಂದು ಅವರನ್ನು ದಾಟಿ ಮುಂದಕ್ಕೆ ಹೋಗಬೇಕೆಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

48 ದೋಣಿಯು ಸರೋವರದ ಮೇಲೆ ದೂರದಲ್ಲಿರುವುದನ್ನೂ ಶಿಷ್ಯರು ಅದನ್ನು ದಡಕ್ಕೆ ಸಾಗಿಸಲು ಬಹಳ ಕಷ್ಟಪಡುತ್ತಿರುವುದನ್ನೂ ಯೇಸು ನೋಡಿದನು. ಗಾಳಿಯು ಅವರಿಗೆ ಪ್ರತಿಕೂಲವಾಗಿ ಬೀಸುತ್ತಿತ್ತು. ಮುಂಜಾನೆ ಮೂರರಿಂದ ಆರು ಗಂಟೆಯ ಸಮಯದಲ್ಲಿ, ಯೇಸು ನೀರಿನ ಮೇಲೆ ನಡೆದುಕೊಂಡು ದೋಣಿಯ ಸಮೀಪಕ್ಕೆ ಬಂದು ಅವರನ್ನು ಹಾದು ಮುಂದೆ ಹೋಗುವುದರಲ್ಲಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

48 ಶಿಸಾ ಸಮುಂದರಾತ್ ತರಾಸ್ ಕರುನ್ ಘೆತಲೆ ತೆನಿ ಬಗಟ್ಲ್ಯಾನ್. ಕಶ್ಯಾಕ್ ಮಟ್ಲ್ಯಾರ್ ತೆನಿ ವಾರ್ಯಾಚ್ಯಾ ವಿರೊದ್ ಆವ್ಲೊ ಮಾರಿತ್. ರಾಚ್ಚ್ಯಾ ತಿನ್ ಘಂಟ್ಯಾಕ್ನಾ ಸಾ ಘಂಟ್ಯಾಚ್ಯಾ ಮದ್ದಿ ತೊ ಪಾನಿಯಾ ವರ್‍ತಿ ಚಲುನ್ಗೆತ್ ತೆಂಚ್ಯಾ ಜಗ್ಗೊಳ್ ಯೆವ್ನ್ ತೆಂಕಾ ದಾಟುನ್ ಫಿಡೆ ಜವ್‍ಲಾಗಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 6:48
16 ತಿಳಿವುಗಳ ಹೋಲಿಕೆ  

ಅವರು ಹೋಗಬೇಕಾಗಿದ್ದ ಹಳ್ಳಿಯನ್ನು ಸಮೀಪಿಸುತ್ತಿದ್ದಾಗ, ಯೇಸು ಮುಂದೆ ಹೋಗುವವರಂತೆ ವರ್ತಿಸಿದರು.


ಯಜಮಾನನು ನಡು ರಾತ್ರಿಯಲ್ಲಾಗಲಿ ಮುಂಜಾನೆಯಲ್ಲಾಗಲಿ ಬಂದು, ಸೇವಕರು ಇನ್ನೂ ಎಚ್ಚರದಿಂದಿರುವುದನ್ನು ಕಂಡರೆ ಆ ಸೇವಕರು ಧನ್ಯರು.


ದೇವರೊಬ್ಬರೇ ಆಕಾಶಗಳನ್ನು ಹರಡಿಸುತ್ತಾರೆ; ದೇವರು ಸಮುದ್ರದ ತೆರೆಗಳ ಮೇಲೆ ನಡೆಯುತ್ತಾರೆ.


ಇವರು ರಕ್ತಸಂಬಂಧದಿಂದಾಗಲಿ, ದೈಹಿಕ ಇಚ್ಛೆಯಿಂದಾಗಲಿ, ಪುರುಷನ ಇಚ್ಛೆಯಿಂದಾಗಲಿ ಹುಟ್ಟಿದವರಲ್ಲ, ದೇವರಿಂದಲೇ ಹುಟ್ಟಿದವರು.


ಅಷ್ಟರಲ್ಲಿ ದೋಣಿಯು ತೀರದಿಂದ ಬಹುದೂರ ಹೋಗಿತ್ತು, ಎದುರುಗಾಳಿ ಬೀಸುತ್ತಿದ್ದದರಿಂದ ತೆರೆಗಳ ಬಡಿತಕ್ಕೆ ಸಿಕ್ಕಿ ಹೊಯ್ದಾಡುತ್ತಿತ್ತು.


ಸಂಕಟಕ್ಕೊಳಗಾದವಳೇ! ಬಿರುಗಾಳಿಯಿಂದ ಬಡಿಯಲಾಗಿ ಆದರಣೆ ಹೊಂದದವಳೇ, ನಾನು ನಿನ್ನ ಕಲ್ಲುಗಳನ್ನು ಸುಂದರವಾದ ಬಣ್ಣಗಳೊಂದಿಗೆ ಇಟ್ಟು, ನಿನ್ನ ಅಸ್ತಿವಾರವನ್ನು ನೀಲಮಣಿಗಳಿಂದ ಹಾಕಿ ಗಾರೆಯಿಂದ ಕಟ್ಟುವೆನು.


ದೇವರು ನೀರಿನ ಮೇಲೆ ತನ್ನ ಉಪ್ಪರಿಗೆಗಳ ತೊಲೆಗಳನ್ನು ಇರಿಸುತ್ತಾರೆ. ಮೋಡಗಳನ್ನು ತಮ್ಮ ರಥವಾಗಿ ಮಾಡುತ್ತಾರೆ. ಗಾಳಿಯ ರೆಕ್ಕೆಗಳ ಮೇಲೆ ಸವಾರಿ ಮಾಡುತ್ತಾರೆ.


ಮಹಾಸಾಗರದ ಶಬ್ದಕ್ಕಿಂತಲೂ, ಸಮುದ್ರದ ಬಲವಾದ ಅಲೆಗಳಿಗಿಂತಲೂ ಉನ್ನತದಲ್ಲಿರುವ ಯೆಹೋವ ದೇವರು ಬಲಿಷ್ಠರಾಗಿದ್ದಾರೆ.


ಮಾರನೆಯ ದಿವಸದಲ್ಲಿ ಸೌಲನು ಜನರನ್ನು ಮೂರು ಗುಂಪಾಗಿ ಇರಿಸಿ, ಬೆಳಗಿನ ಜಾವದಲ್ಲಿ ಪಾಳೆಯದಲ್ಲಿ ಬಂದು, ಬಿಸಿಲೇರುವವರೆಗೆ ಅಮ್ಮೋನಿಯರನ್ನು ಸಂಹರಿಸಿದನು. ಉಳಿದವರು ಚದರಿಹೋದರು. ಅವರಲ್ಲಿ ಒಬ್ಬರು ಕೂಡ ಇರಲಿಲ್ಲ.


ಅವನು ಯಾಕೋಬನಿಗೆ, “ಉದಯವಾಯಿತು, ನನ್ನನ್ನು ಹೋಗಗೊಡು,” ಎಂದಾಗ. ಯಾಕೋಬನು, “ನೀನು ನನ್ನನ್ನು ಆಶೀರ್ವದಿಸದ ಹೊರತು, ನಾನು ನಿನ್ನನ್ನು ಹೋಗಗೊಡಿಸೆನು,” ಎಂದನು.


“ಸ್ವಾಮಿಗಳೇ, ನೀವು ನಿಮ್ಮ ದಾಸನ ಮನೆಯಲ್ಲಿ ತಂಗಿ, ರಾತ್ರಿ ಕಳೆಯಿರಿ. ನಿಮ್ಮ ಕಾಲುಗಳನ್ನು ತೊಳೆದುಕೊಳ್ಳಿರಿ. ಬೆಳಿಗ್ಗೆ ಎದ್ದು ನಿಮ್ಮ ಮಾರ್ಗವನ್ನು ಹಿಡಿದು ಹೋಗಬಹುದು,” ಎಂದು ಬೇಡಿಕೊಂಡನು. ಅದಕ್ಕೆ ಅವರು, “ಹಾಗಲ್ಲ, ನಾವು ರಾತ್ರಿಯೆಲ್ಲಾ ಬೀದಿಯಲ್ಲಿ ಇರುತ್ತೇವೆ,” ಎಂದರು.


ಬೆಳಗಿನ ಜಾವದಲ್ಲಿ ಯೆಹೋವ ದೇವರು ಅಗ್ನಿ ಮೇಘಗಳ ಸ್ತಂಭದೊಳಗಿಂದ ಈಜಿಪ್ಟಿನ ದಂಡಿನ ಮೇಲೆ ದೃಷ್ಟಿಯಿಟ್ಟು, ಈಜಿಪ್ಟಿನ ದಂಡನ್ನು ಗಾಬರಿಗೊಳಿಸಿದರು.


ಕಳ್ಳನು ಯಾವ ಗಳಿಗೆಯಲ್ಲಿ ಬರುತ್ತಾನೆಂದು ಮನೆಯ ಯಜಮಾನನಿಗೆ ತಿಳಿದಿದ್ದರೆ, ಅವನು ಎಚ್ಚರವಾಗಿದ್ದು ತನ್ನ ಮನೆಗೆ ಕನ್ನಾಹಾಕದಂತೆ ಕಾಯುತ್ತಿದ್ದನೆಂದು ನೀವು ತಿಳಿದುಕೊಳ್ಳಿರಿ.


ಸಂಜೆಯಾದಾಗ, ದೋಣಿಯು ಸರೋವರದ ಮಧ್ಯದಲ್ಲಿತ್ತು. ಯೇಸು ದಡದಲ್ಲಿ ಒಬ್ಬರೇ ಇದ್ದರು.


ಆದರೆ ಯೇಸು ಸರೋವರದ ಮೇಲೆ ನಡೆಯುವುದನ್ನು ಕಂಡಾಗ, ಅವರು ಯೇಸುವನ್ನು ಭೂತವೆಂದು ಭಾವಿಸಿ, ಕಿರುಚಿದರು.


“ಆದ್ದರಿಂದ ಜಾಗರೂಕರಾಗಿರಿ. ಮನೆಯಜಮಾನನು ಸಂಜೆಯಲ್ಲಿಯೋ ಮಧ್ಯರಾತ್ರಿಯಲ್ಲಿಯೋ ಹುಂಜ ಕೂಗುವಾಗಲೋ ಬೆಳಕಾಗುವಾಗಲೋ, ಯಾವಾಗ ಬರುತ್ತಾನೋ ನಿಮಗೆ ಗೊತ್ತಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು