ಮಾರ್ಕ 6:56 - ಕನ್ನಡ ಸಮಕಾಲಿಕ ಅನುವಾದ56 ಯೇಸು ಹಳ್ಳಿ, ಪಟ್ಟಣ ಊರುಗಳಲ್ಲಿ ಎಲ್ಲೆಲ್ಲಿ ಹೋದರೋ ಅಲ್ಲಿ ಜನರು ರೋಗಿಗಳನ್ನು ತಂದು ಪೇಟೆಗಳಲ್ಲಿ ಇಟ್ಟು, ಯೇಸುವಿನ ಉಡುಪಿನ ಅಂಚನ್ನಾದರೂ ಮುಟ್ಟಗೊಡಿಸಬೇಕೆಂದು ಅವರನ್ನು ಬೇಡಿಕೊಂಡರು. ಯೇಸುವನ್ನು ಮುಟ್ಟಿದವರೆಲ್ಲರೂ ಗುಣಹೊಂದಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201956 ಆತನು ಯಾವ ಗ್ರಾಮಗಳಿಗೆ, ಯಾವ ಊರು ಹಳ್ಳಿಗಳಿಗೆ ಹೋದರೂ ಅಲ್ಲಿಯವರು ರೋಗಿಗಳನ್ನು ತಂದು ಸಂತೆಬೀದಿಗಳಲ್ಲಿ ಇಟ್ಟು, ಆತನ ಉಡುಪಿನ ಅಂಚನ್ನಾದರೂ ಮುಟ್ಟಗೊಡಿಸಬೇಕೆಂದು ಆತನನ್ನು ಬೇಡಿಕೊಂಡರು; ಆತನನ್ನು ಮುಟ್ಟಿದವರೆಲ್ಲರೂ ಗುಣಹೊಂದಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)56 ಅವರ ಉಡುಪಿನ ಅಂಚನ್ನಾದರೂ ಮುಟ್ಟಗೊಡಿಸಬೇಕೆಂದು ಯೇಸುವನ್ನು ಬೇಡಿಕೊಳ್ಳುತ್ತಿದ್ದರು. ಹಾಗೆ ಮುಟ್ಟಿದವರೆಲ್ಲರೂ ಗುಣಹೊಂದುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)56 ಆತನು ಯಾವ ಗ್ರಾಮಗಳಿಗೂ ಯಾವ ಊರು ಹಳ್ಳಿಗಳಿಗೂ ಹೋದನೋ ಅಲ್ಲಿಯವರು ರೋಗಿಗಳನ್ನು ಪೇಟೆಗಳಲ್ಲಿ ಇಟ್ಟು - ನಿನ್ನ ಉಡುಪಿನ ಗೊಂಡೆಯನ್ನಾದರೂ ಮುಟ್ಟಗೊಡಿಸಬೇಕೆಂದು ಆತನನ್ನು ಬೇಡಿಕೊಂಡರು; ಆತನನ್ನು ಮುಟ್ಟಿದವರೆಲ್ಲರೂ ಸ್ವಸ್ಥರಾದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್56 ಯೇಸು ಆ ಪ್ರದೇಶದಲ್ಲಿದ್ದ ಪಟ್ಟಣಗಳಿಗೆ, ನಗರಗಳಿಗೆ ಮತ್ತು ತೋಟಗಳಿಗೆ ಹೋದನು. ಆತನು ಹೋದ ಕಡೆಗಳಲ್ಲೆಲ್ಲಾ ಜನರು ಮಾರುಕಟ್ಟೆಯ ಸ್ಥಳಗಳಿಗೆ ಕಾಯಿಲೆಯ ಜನರನ್ನು ಕರೆತಂದರು. ಅವರು ಯೇಸುವಿಗೆ, ನಿನ್ನ ಮೇಲಂಗಿಯ ಅಂಚನ್ನಾದರೂ ಮುಟ್ಟಲು ತಮಗೆ ಅವಕಾಶ ಕೊಡಬೇಕೆಂದು ಬೇಡಿಕೊಂಡರು. ಆತನನ್ನು ಸ್ಪರ್ಶಿಸಿದ ಜನರೆಲ್ಲರಿಗೂ ಗುಣವಾಯಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್56 ಜೆಜು ಖೈ-ಖೈ ಗೆಲೊ, ತ್ಯಾ ಗಾಂವಾತ್ನಿ, ಶಾರಾತ್ನಿ, ಶೆತಾತ್ನಿ, ಗೆಲೊ ತ್ಯಾ ಜಾಗ್ಯಾನಿತ್ಲ್ಯಾ ಬಾಜಾರಾತ್ನಿ ಶಿಕ್ ಹೊತ್ತ್ಯಾಕ್ನಿ ಘೆವ್ನ್ ಯೆಲ್ಯಾನಿ ಅನಿ ತುಜೆ ಕಪ್ಡೆ ತರ್ಬಿ ಅಪ್ಡುಕ್ ತೆಂಕಾ ಅವ್ಕಾಸ್ ದಿ ಮನುನ್ ಮಾಗ್ಲ್ಯಾನಿ ಅನಿ ಕೊನ್-ಕೊನ್ ಅಪಡ್ಲ್ಲ್ಯಾನಿ ತೆನಿ ಆರಾಮ್ ಹೊಲ್ಯಾನಿ. ಅಧ್ಯಾಯವನ್ನು ನೋಡಿ |