Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 6:6 - ಕನ್ನಡ ಸಮಕಾಲಿಕ ಅನುವಾದ

6 ಯೇಸು ಅವರ ಅಪನಂಬಿಕೆಯನ್ನು ಕಂಡು ಆಶ್ಚರ್ಯಪಟ್ಟರು. ಆಮೇಲೆ ಯೇಸು ಸುತ್ತಮುತ್ತಲಿನ ಊರುಗಳಲ್ಲಿ ಬೋಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವರ ಅಪನಂಬಿಕೆಗೆ ಆತನು ಆಶ್ಚರ್ಯಪಟ್ಟನು. ಆ ನಂತರ ಯೇಸು ಸುತ್ತಮುತ್ತಲಿನ ಊರುಗಳಲ್ಲಿ ಬೋಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆ ಜನರ ಅವಿಶ್ವಾಸವನ್ನು ಕಂಡು ಯೇಸುವಿಗೆ ಬಹಳ ಅಚ್ಚರಿಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅವರು ತನ್ನನ್ನು ನಂಬದೆ ಹೋದದ್ದಕ್ಕೆ ಆತನು ಆಶ್ಚರ್ಯಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆ ಜನರಲ್ಲಿ ನಂಬಿಕೆಯಿಲ್ಲದಿರುವುದನ್ನು ಕಂಡು ಯೇಸುವಿಗೆ ಬಹಳ ಆಶ್ಚರ್ಯವಾಯಿತು. ಬಳಿಕ ಯೇಸು ಆ ಪ್ರದೇಶದ ಇತರ ಹಳ್ಳಿಗಳಿಗೆ ಹೋಗಿ ಉಪದೇಶಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ತ್ಯಾ ಲೊಕಾಕ್ನಿ ವಿಶ್ವಾಸ್ ನಸಲ್ಲೆ ಬಗುನ್ ಜೆಜು ಅಜಾಪ್ ಹೊಲೊ. ತನ್ನಾ ಜೆಜು ಅಜು-ಬಾಜುಚ್ಯಾ ಗಾಂವಾತ್ನಿ ಗೆಲೊ ಅನಿ ಸಿಕ್ವುಕ್ಲಾಗ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 6:6
12 ತಿಳಿವುಗಳ ಹೋಲಿಕೆ  

ಯೇಸು ಎಲ್ಲಾ ಹಳ್ಳಿಗಳಲ್ಲಿಯೂ ಪಟ್ಟಣಗಳಲ್ಲಿಯೂ ಇದ್ದ ಸಭಾಮಂದಿರಗಳಲ್ಲಿ ಬೋಧಿಸುತ್ತಾ, ರಾಜ್ಯದ ಸುವಾರ್ತೆಯನ್ನು ಸಾರುತ್ತಾ, ಜನರ ಪ್ರತಿಯೊಂದು ವ್ಯಾಧಿಯನ್ನೂ ರೋಗವನ್ನೂ ಗುಣಪಡಿಸುತ್ತಾ ಸಂಚರಿಸಿದರು.


ಯೇಸು ಇದನ್ನು ಕೇಳಿ, ಆಶ್ಚರ್ಯಪಟ್ಟು ತಮ್ಮ ಹಿಂದೆ ಬರುತ್ತಿದ್ದವರಿಗೆ, “ಇಂಥ ಮಹಾ ನಂಬಿಕೆಯನ್ನು ನಾನು ಇಸ್ರಾಯೇಲ್ ಜನರಲ್ಲಿಯೂ ಕಾಣಲಿಲ್ಲ ಎಂದು ನಿಮಗೆ ನಿಜವಾಗಿ ಹೇಳುತ್ತೇನೆ.


ಯೇಸು ಪಟ್ಟಣಗಳನ್ನೂ ಹಳ್ಳಿಗಳನ್ನೂ ಸಂಚರಿಸಿ, ಅಲ್ಲೆಲ್ಲಾ ಬೋಧಿಸುತ್ತಾ ಯೆರೂಸಲೇಮಿನ ಕಡೆಗೆ ಪ್ರಯಾಣಮಾಡಿದರು.


ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮರಿಂದಲೂ ಶಕ್ತಿಯಿಂದಲೂ ಅಭಿಷೇಕಿಸಿದ್ದರು. ಮಾತ್ರವಲ್ಲದೆ, ದೇವರು ಯೇಸುವಿನೊಡನೆ ಇದ್ದುದರಿಂದ, ಅವರು ಬೇರೆ ಬೇರೆ ಕಡೆಗಳಿಗೆ ಹೋಗಿ ಒಳಿತನ್ನು ಮಾಡಿ, ಪಿಶಾಚನಿಂದ ಪೀಡಿತರಾದವರನ್ನು ಗುಣಪಡಿಸುತ್ತಾ ಸಂಚರಿಸಿದ್ದನ್ನು ನೀವು ಬಲ್ಲಿರಿ.


ಮಧ್ಯಸ್ಥಿಕನು ಒಬ್ಬನೂ ಇಲ್ಲವೆಂದು ಕಂಡು ಸ್ಥಬ್ಧನಾದನು. ಆದ್ದರಿಂದ ಆತನ ಸ್ವಹಸ್ತವೇ ಆತನಿಗೆ ರಕ್ಷಣೆಯ ಸಾಧನವಾಯಿತು. ಆತನ ನೀತಿಯೇ ಆತನಿಗೆ ಆಧಾರವಾಯಿತು.


ಅದಕ್ಕೆ ಅವನು ಅವರಿಗೆ, “ಏನಾಶ್ಚರ್ಯ! ಅವರು ನನ್ನ ಕಣ್ಣುಗಳನ್ನು ತೆರೆದರೂ ಅವರು ಎಲ್ಲಿಂದ ಬಂದವನೆಂದು ನಿಮಗೆ ತಿಳಿಯದೆ ಇರುವುದು.


ಯೇಸು ಗಲಿಲಾಯದಲ್ಲೆಲ್ಲಾ ಸಂಚರಿಸಿ, ಯೆಹೂದ್ಯರ ಸಭಾಮಂದಿರಗಳಲ್ಲಿ ಬೋಧಿಸುತ್ತಾ, ರಾಜ್ಯದ ಸುವಾರ್ತೆಯನ್ನು ಸಾರುತ್ತಾ, ಜನರಲ್ಲಿದ್ದ ಸಕಲ ವಿಧವಾದ ವ್ಯಾಧಿಗಳನ್ನೂ ಸಕಲ ವಿಧವಾದ ಬೇನೆಗಳನ್ನೂ ಗುಣಪಡಿಸುತ್ತಾ ಬಂದರು.


ಜನಾಂಗವು ತಮ್ಮ ದೇವರುಗಳನ್ನು ಅವು ದೇವರುಗಳಲ್ಲದೆ ಇದ್ದರೂ ಬದಲು ಮಾಡಿದ್ದುಂಟೋ? ಆದರೆ ನನ್ನ ಜನರು ತಮ್ಮ ವೈಭವವಾದ ದೇವರನ್ನು ಪ್ರಯೋಜನವಿಲ್ಲದ್ದಕ್ಕೆ ಬದಲು ಮಾಡಿದ್ದಾರೆ.


ಅನಂತರ ಯೇಸು ಯೂದಾಯದ ಸಭಾಮಂದಿರಗಳಲ್ಲಿ ಸುವಾರ್ತೆ ಸಾರುತ್ತಾ ಇದ್ದರು.


ಯೇಸು ಗಲಿಲಾಯದ ಕಪೆರ್ನೌಮಿಗೆ ಬಂದು, ಸಬ್ಬತ್ ದಿನಗಳಲ್ಲಿ ಅವರಿಗೆ ಬೋಧಿಸುತ್ತಿದ್ದರು.


ಆದ್ದರಿಂದ ಯೇಸು ಗಲಿಲಾಯ ಪ್ರಾಂತವನ್ನೆಲ್ಲಾ ಸಂಚರಿಸಿ, ಅವರ ಸಭಾಮಂದಿರಗಳಲ್ಲಿ ಉಪದೇಶ ಮಾಡುತ್ತಾ, ದೆವ್ವಗಳನ್ನು ಓಡಿಸುತ್ತಾ ಇದ್ದರು.


ಯೇಸು ಅಲ್ಲಿಂದ ಹೊರಟು ಯೊರ್ದನ್ ನದಿಯ ಆಚೆಯ ಯೂದಾಯ ಪ್ರಾಂತಕ್ಕೆ ಬಂದರು. ಅಲ್ಲಿ ಜನರು ತಿರುಗಿ ಅವರ ಬಳಿಗೆ ಬರಲು, ಯೇಸು ತಮ್ಮ ವಾಡಿಕೆಯಂತೆ ಅವರಿಗೆ ಮತ್ತೆ ಬೋಧಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು