Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 7:13 - ಕನ್ನಡ ಸಮಕಾಲಿಕ ಅನುವಾದ

13 ಹೀಗೆ ನೀವು ಮಾಡುತ್ತಾ ಬಂದಿರುವ ಸಂಪ್ರದಾಯಗಳ ಮೂಲಕ ದೇವರ ವಾಕ್ಯವನ್ನು ನಿರರ್ಥಕಮಾಡುತ್ತೀರಿ. ಇಂಥ ಕಾರ್ಯಗಳನ್ನು ಇನ್ನೂ ಎಷ್ಟೋ ಮಾಡುತ್ತೀರಿ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಹೀಗೆ ನೀವು ಕಲಿಸುತ್ತಾ ಬಂದಿರುವ ಸಂಪ್ರದಾಯದಿಂದ ದೇವರ ವಾಕ್ಯವನ್ನು ನಿರರ್ಥಕಮಾಡುತ್ತಿದ್ದೀರಿ, ಮತ್ತು ಇಂಥ ಕಾರ್ಯಗಳನ್ನು ಇನ್ನೂ ಎಷ್ಟೋ ಮಾಡುತ್ತೀರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 “ಹೀಗೆ ನೀವು ಬೋಧಿಸುವ ಸಂಪ್ರದಾಯಗಳಿಂದಾಗಿ ದೇವರ ವಾಕ್ಯವನ್ನೇ ನಿರರ್ಥಕಗೊಳಿಸುತ್ತೀರಿ. ಇಂಥಾ ಕೃತ್ಯಗಳು ಇನ್ನೆಷ್ಟೋ!” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಹೀಗೆ ನೀವು ಕಲಿಸುತ್ತಾ ಬಂದಿರುವ ಸಂಪ್ರದಾಯದಿಂದ ದೇವರ ವಾಕ್ಯವನ್ನು ನಿರರ್ಥಕಮಾಡುತ್ತೀರಿ, ಮತ್ತು ಇಂಥ ಕಾರ್ಯಗಳನ್ನು ಇನ್ನೂ ಎಷ್ಟೋ ಮಾಡುತ್ತೀರಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಹೀಗಿರಲು ದೇವರ ಆಜ್ಞೆಯನ್ನು ಅನುಸರಿಸುವುದಕ್ಕಿಂತಲೂ ನಿಮ್ಮ ಸಂಪ್ರದಾಯಗಳನ್ನು ಅನುಸರಿಸುವುದೇ ಬಹಳ ಮುಖ್ಯವೆಂದು ನೀವು ಬೋಧಿಸಿದಂತಾಯಿತು. ಇಂಥ ಅನೇಕ ಕಾರ್ಯಗಳನ್ನು ನೀವು ಮಾಡುತ್ತೀರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಅಶೆ ತುಮಿ ಶಿಕ್ವುತಾನಾ ದೆವಾಚ್ಯಾ ಬರ್ಯಾ ಖಬ್ರೆಚಿ ತಿರಸ್ಕಾರ್ ಕರುನ್ ತುಮ್ಚೆಚ್ ಖಾಯ್ದೆ ಶಿಕ್ವುತ್ಯಾಸಿ. ಅನಿ ಅಸ್ಲಿ ಲೈ ಕಾಮಾ ತುಮಿ ಕರ್ತ್ಯಾಶಿ. ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 7:13
14 ತಿಳಿವುಗಳ ಹೋಲಿಕೆ  

ಯೇಸು ಇನ್ನೂ ಅವರಿಗೆ, “ನಿಮ್ಮ ಸಂಪ್ರದಾಯಗಳನ್ನು ಪಾಲಿಸುವುದಕ್ಕಾಗಿ ಬಹು ಜಾಣತನದಿಂದ ದೇವರ ಆಜ್ಞೆಯನ್ನು ನಿರ್ಲಕ್ಷಿಸುತ್ತೀರಿ.


ಅವರು ಯೆಹೂದ್ಯರ ಕಟ್ಟುಕಥೆಗಳಿಗೂ ಸತ್ಯದಿಂದ ದೂರಮಾಡುವ ಮಾನವರ ಆಜ್ಞೆಗಳಿಗೂ ಲಕ್ಷ್ಯಕೊಡಬಾರದು.


ನಾನು ನನ್ನ ನಿಯಮದ ಅನೇಕ ಸಂಗತಿಗಳನ್ನು ಅವನಿಗೆ ಬರೆದಿದ್ದೇನೆ. ಆದರೆ ಅವನು ಅವುಗಳನ್ನು ಅನ್ಯವಾದವುಗಳೆಂದು ಪರಿಗಣಿಸಿದನು.


ದೇವರ ಶಿಕ್ಷಣ ಮತ್ತು ಎಚ್ಚರಿಸುವ ಸಾಕ್ಷಿಯ ವಿಷಯದಲ್ಲಿ ಈ ವಾಕ್ಯದ ಪ್ರಕಾರ ಒಂದು ವೇಳೆ ಅವರು ಹೇಳದಿದ್ದರೆ, ಅವರಲ್ಲಿ ಮುಂಜಾವಿನ ಬೆಳಕು ಮೂಡಿಬರುವುದಿಲ್ಲ.


ಫರಿಸಾಯರು ಮತ್ತು ಎಲ್ಲಾ ಯೆಹೂದ್ಯರು ಆಚಾರ ಪದ್ಧತಿಯಂತೆ ತಮ್ಮ ಕೈಗಳನ್ನು ಸ್ವಚ್ಛವಾಗಿ ತೊಳೆಯದೆ ಊಟಮಾಡುವುದಿಲ್ಲ. ಹೀಗೆ ಅವರ ಪೂರ್ವಿಕರಿಂದ ಬಂದ ಸಂಪ್ರದಾಯವನ್ನು ಪಾಲಿಸುತ್ತಿದ್ದರು.


‘ಅವನು ತನ್ನ ತಂದೆಯನ್ನಾಗಲಿ ತಾಯಿಯನ್ನಾಗಲಿ ಗೌರವಿಸಬೇಕಾಗಿಲ್ಲ’ ಎಂದು ಹೇಳುತ್ತೀರಿ. ಹೀಗೆ ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ದೇವರ ವಾಕ್ಯವನ್ನು ನಿರರ್ಥಕಮಾಡುತ್ತೀರಿ.


“ಒಂದು ವೇಳೆ ಇವನು ಪಡೆದ ಮಗನು ತನ್ನ ತಂದೆ ಮಾಡಿದ ಪಾಪಗಳನ್ನೆಲ್ಲಾ ಕಂಡು ಆಲೋಚಿಸಿ, ಇಂಥಾ ಕಾರ್ಯಗಳನ್ನು ನಡೆಸದೆ,


ಮತ್ಸರ, ಕುಡಿಕತನ, ದುಂದೌತಣ ಈ ಮೊದಲಾದವುಗಳೇ. ಇಂಥ ಕೃತ್ಯಗಳನ್ನು ನಡೆಸುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲವೆಂದು ನಾನು ನಿಮಗೆ ಮುಂಚೆಯೇ ಹೇಳಿದಂತೆ ಈಗಲೂ ಹೇಳುತ್ತೇನೆ.


ಆದ್ದರಿಂದ ಫರಿಸಾಯರು ಮತ್ತು ನಿಯಮ ಬೋಧಕರು, “ನಿನ್ನ ಶಿಷ್ಯರು ಪೂರ್ವಿಕರ ಸಂಪ್ರದಾಯದ ಪ್ರಕಾರ ಏಕೆ ನಡೆಯುವುದಿಲ್ಲ? ಅವರು ಮೈಲಿಗೆಯಾದ ಕೈಗಳಿಂದ ಊಟಮಾಡುತ್ತಾರಲ್ಲಾ?” ಎಂದು ಯೇಸುವನ್ನು ಕೇಳಿದರು.


ನೀವು ಅವನನ್ನು ತನ್ನ ತಂದೆತಾಯಿಗಳಿಗೆ ಯಾವ ಸಹಾಯವನ್ನು ಮಾಡುವುದಕ್ಕೂ ಅನುಮತಿಸುವುದಿಲ್ಲ.


ಯೇಸು ಜನಸಮೂಹವನ್ನು ಪುನಃ ತಮ್ಮ ಬಳಿಗೆ ಕರೆದು, “ಎಲ್ಲರೂ ನನ್ನ ಮಾತುಗಳನ್ನು ಕೇಳಿರಿ, ಅರ್ಥಮಾಡಿಕೊಳ್ಳಿರಿ.


ಇದಲ್ಲದೆ ನಾನು ನನ್ನ ಪಿತೃಗಳ ಸಂಪ್ರದಾಯಗಳಲ್ಲಿ ಅತ್ಯಂತ ಅಭಿಮಾನವುಳ್ಳವನಾಗಿ ಸಮಕಾಲಿಕರಾದ ನನ್ನ ಜನರೊಳಗೆ ಅನೇಕರಿಗಿಂತ ಯೆಹೂದ್ಯ ವಿಶ್ವಾಸದಲ್ಲಿ ಎಷ್ಟೋ ಪ್ರಗತಿಯನ್ನು ಹೊಂದಿದವನಾಗಿದ್ದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು