Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 7:15 - ಕನ್ನಡ ಸಮಕಾಲಿಕ ಅನುವಾದ

15 ಹೊರಗಿನಿಂದ ಮನುಷ್ಯನ ಒಳಗೆ ಹೋಗುವ ಯಾವುದೂ ಅವನನ್ನು ಅಶುದ್ಧ ಮಾಡುವುದಿಲ್ಲ. ಆದರೆ ಮನುಷ್ಯನೊಳಗಿಂದ ಹೊರಗೆ ಬರುವಂಥದ್ದು ಅವನನ್ನು ಅಶುದ್ಧ ಮಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಹೊರಗಿನಿಂದ ಮನುಷ್ಯನ ಒಳಗೆ ಹೋಗುವ ಯಾವುದು ಅವನನ್ನು ಮೈಲಿಗೆ ಮಾಡುವುದಿಲ್ಲ; ಆದರೆ ಮನುಷ್ಯನೊಳಗಿನಿಂದ ಹೊರಗೆ ಬರುವಂಥದು ಮನುಷ್ಯನನ್ನು ಮೈಲಿಗೆ ಮಾಡುವಂಥವುಗಳಾಗಿವೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 “ನಾನು ಹೇಳುವುದನ್ನು ನೀವೆಲ್ಲರೂ ಕೇಳಿ ಗ್ರಹಿಸಿಕೊಳ್ಳಿ: ಹೊರಗಿನಿಂದ ಮನುಷ್ಯನ ಒಳಗೆ ಹೋಗುವ ಯಾವುದೂ ಅವನನ್ನು ಕಲುಷಿತಗೊಳಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಹೊರಗಿನಿಂದ ಮನುಷ್ಯನೊಳಕ್ಕೆ ಹೋಗಿ ಅವನನ್ನು ಹೊಲೆಮಾಡತಕ್ಕಂಥದು ಒಂದೂ ಇಲ್ಲ; ಆದರೆ ಮನುಷ್ಯನೊಳಗಿಂದ ಹೊರಡುವವುಗಳೇ ಮನುಷ್ಯನನ್ನು ಹೊಲೆಮಾಡುವಂಥವುಗಳಾಗಿವೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಒಬ್ಬ ವ್ಯಕ್ತಿಯ ಅಂತರಂಗದೊಳಕ್ಕೆ ಹೋಗಿ ಅವನನ್ನು ಅಶುದ್ಧನನ್ನಾಗಿ ಮಾಡುವಂಥದ್ದು ಯಾವುದೂ ಇಲ್ಲ. ಒಬ್ಬ ವ್ಯಕ್ತಿಯ ಒಳಗಿಂದ ಬಂದ ಸಂಗತಿಗಳೇ ಅವನನ್ನು ಅಶುದ್ಧನನ್ನಾಗಿ ಮಾಡುತ್ತವೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಜೆ ಕಾಯ್ ಭಾಯ್ನಾ ಎಕ್ ಮಾನ್ಸಾಚ್ಯಾ ಭುತ್ತುರ್ ಜಾತಾ ತೆ ಕಾಯ್ಬಿ ಮಾನ್ಸಾಕ್ ಅಶುದ್ದ್ ಕರಿನಾ, ಮಾನ್ಸಾಚ್ಯಾ ತೊಂಡಾತ್ನಾ ಜೆ ಕಾಯ್ ಭಾಯ್ರ್ ಯೆತಾ ತೆ ಮಾನ್ಸಾಕ್ ಅಶುದ್ದ್ ಕರ್ತಾ”,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 7:15
17 ತಿಳಿವುಗಳ ಹೋಲಿಕೆ  

ಬಹು ಜಾಗ್ರತೆಯಿಂದ ನಿನ್ನ ಹೃದಯವನ್ನು ಕಾಪಾಡಿಕೋ; ಏಕೆಂದರೆ ಅದರೊಳಗಿಂದ ನಿನ್ನ ಕೃತ್ಯಗಳು ಜೀವಧಾರೆಯಾಗಿ ಹೊರಡುತ್ತವೆ.


ಶುದ್ಧರಿಗೆ ಎಲ್ಲವೂ ಶುದ್ಧವೇ. ಆದರೆ ಮಲಿನವಾದವರಿಗೂ ಅವಿಶ್ವಾಸಿಗಳಿಗೂ ಯಾವುದೂ ಶುದ್ಧವಲ್ಲ. ಅವರ ಬುದ್ಧಿಯೂ ಮನಸ್ಸಾಕ್ಷಿಯೂ ಮಲಿನವಾಗಿವೆ.


ವಿಚಿತ್ರವಾದ ವಿವಿಧ ಬೋಧನೆಗಳ ಸೆಳೆತಕ್ಕೆ ಸಿಲುಕದಿರಿ. ಏಕೆಂದರೆ ಕೃಪೆಯ ಮೂಲಕ ಹೃದಯವನ್ನು ಬಲಪಡಿಸಿಕೊಳ್ಳುವುದು ಒಳ್ಳೆಯದು. ಭೋಜನ ಪದಾರ್ಥಗಳಲ್ಲಿ ಮಗ್ನರಾದವರು, ಅವುಗಳಿಂದ ಏನೂ ಪ್ರಯೋಜನ ಹೊಂದಲಿಲ್ಲ.


ಅವು ಅನ್ನಪಾನಾದಿಗಳಲ್ಲಿಯೂ ವಿವಿಧ ಸ್ನಾನಗಳಲ್ಲಿಯೂ ಮುಂತಾದ ಬಾಹ್ಯಾಚಾರದ ಕ್ರಮಗಳಾಗಿದ್ದವು. ಅವು ಹೊಸ ಕ್ರಮಕಾಲದವರೆಗೆ ಮಾತ್ರ ನೇಮಕವಾಗಿದ್ದವು.


ಸರ್ಪಸಂತತಿಯವರೇ, ಕೆಟ್ಟವರಾಗಿರುವ ನೀವು ಒಳ್ಳೆಯದೇನನ್ನಾದರೂ ಮಾತನಾಡುವಿರೋ? ಹೃದಯದಲ್ಲಿ ತುಂಬಿರುವದನ್ನೇ ಅವನ ಬಾಯಿ ಮಾತನಾಡುತ್ತದೆ.


ಏಕೆಂದರೆ ತಿನ್ನುವುದೂ ಕುಡಿಯುವುದೂ ದೇವರ ರಾಜ್ಯವಲ್ಲ. ನೀತಿ, ಸಮಾಧಾನ, ಪವಿತ್ರಾತ್ಮರಲ್ಲಿರುವ ಆನಂದವೂ ಆಗಿದೆ.


ಮಾಂಸದ ಅಂಗಡಿಯಲ್ಲಿ ಮಾರುವುದು ಏನಿದ್ದರೂ ಮನಸ್ಸಾಕ್ಷಿಯನ್ನು ಪ್ರಶ್ನಿಸದೇ ತಿನ್ನಿರಿ.


ಪೇತ್ರನು ಅವರಿಗೆ: “ಯೆಹೂದ್ಯನು ಯೆಹೂದ್ಯರಲ್ಲದವರೊಂದಿಗೆ ಸೇರಿ, ಅವರನ್ನು ಭೇಟಿ ಮಾಡುವುದಾಗಲಿ ನಮ್ಮ ಯೆಹೂದಿ ನಿಯಮಕ್ಕೆ ವಿರೋಧವಾದದ್ದು ಎಂದು ನಿಮಗೆಲ್ಲರಿರೂ ತಿಳಿದೇ ಇದೆ. ಆದರೆ ಯಾವ ಮನುಷ್ಯನನ್ನೂ ಅಶುದ್ಧನು ಇಲ್ಲವೆ ನಿಷಿದ್ಧವಾದವನು ಎಂದು ಕರೆಯಬಾರದು ಎಂದು ದೇವರು ನನಗೆ ತೋರಿಸಿಕೊಟ್ಟಿದ್ದಾರೆ.


ಅದಕ್ಕೆ ಯೇಸು, “ನೀವು ಸಹ ಇನ್ನೂ ಬುದ್ಧಿಯಿಲ್ಲದವರಾಗಿದ್ದೀರಾ?” ಎಂದು ಕೇಳಿ,


ಯೇಸು ಜನಸಮೂಹವನ್ನು ಪುನಃ ತಮ್ಮ ಬಳಿಗೆ ಕರೆದು, “ಎಲ್ಲರೂ ನನ್ನ ಮಾತುಗಳನ್ನು ಕೇಳಿರಿ, ಅರ್ಥಮಾಡಿಕೊಳ್ಳಿರಿ.


ಯಾವನಿಗಾದರೂ ಕೇಳುವುದಕ್ಕೆ ಕಿವಿಯಿದ್ದರೆ ಕೇಳಲಿ,” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು