Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 7:2 - ಕನ್ನಡ ಸಮಕಾಲಿಕ ಅನುವಾದ

2 ಆಗ ಯೇಸುವಿನ ಶಿಷ್ಯರಲ್ಲಿ ಕೆಲವರು ಅಶುದ್ಧ ಕೈಗಳಿಂದ, ಅಂದರೆ ಆಚಾರ ಪದ್ಧತಿಯಂತೆ ಕೈತೊಳೆದುಕೊಳ್ಳದೆ ಊಟಮಾಡುವುದನ್ನು ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಗ ಯೇಸುವಿನ ಶಿಷ್ಯರಲ್ಲಿ ಕೆಲವರು ಅಶುದ್ಧ ಕೈಗಳಿಂದ ಅಂದರೆ ಕೈತೊಳೆದುಕೊಳ್ಳದೆ ಊಟಮಾಡುವುದನ್ನು ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಯೇಸುವಿನ ಶಿಷ್ಯರಲ್ಲಿ ಕೆಲವರು ಅಶುದ್ಧ ಕೈಗಳಿಂದ, ಎಂದರೆ ಶುದ್ಧಾಚಾರಕ್ಕೆ ಅನುಗುಣವಾಗಿ ಕೈತೊಳೆದುಕೊಳ್ಳದೆ ಊಟಮಾಡುವುದನ್ನು ಅವರು ನೋಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2-4 ಫರಿಸಾಯರೂ ಯೆಹೂದ್ಯರೆಲ್ಲರೂ ಹಿರಿಯರಿಂದ ಬಂದ ಸಂಪ್ರದಾಯವನ್ನು ಹಿಡಿದು ತಮ್ಮ ಕೈಗಳನ್ನು ಚೆನ್ನಾಗಿ ತೊಳಕೊಳ್ಳದೆ ಆಹಾರ ತೆಗೆದುಕೊಳ್ಳುವದಿಲ್ಲ; ಮತ್ತು ಪೇಟೆಗೆ ಹೋಗಿ ಬಂದರೆ ನೀರನ್ನು ಪ್ರೋಕ್ಷಿಸಿಕೊಳ್ಳದೆ ಆಹಾರ ತೆಗೆದುಕೊಳ್ಳುವದಿಲ್ಲ; ಇದಲ್ಲದೆ ಅವರಲ್ಲಿ ತಂಬಿಗೆ ಬಟ್ಟಲು ತಪ್ಪಲೆಗಳನ್ನು ಬೆಳಗಿ ತೊಳೆಯುವದೇ ಮೊದಲಾದ ಅನೇಕಾಚಾರಗಳನ್ನು ನಡಿಸುವ ನೇಮಕವುಂಟು. ಆತನ ಶಿಷ್ಯರಲ್ಲಿ ಕೆಲವರು ಮೈಲಿಗೆಯ ಕೈಯಿಂದ, ಅಂದರೆ ಕೈತೊಳಕೊಳ್ಳದೆ ಆಹಾರ ತೆಗೆದುಕೊಳ್ಳುವದನ್ನು ಆ ಫರಿಸಾಯರೂ ಶಾಸ್ತ್ರಿಗಳೂ ಕಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯೇಸುವಿನ ಶಿಷ್ಯರಲ್ಲಿ ಕೆಲವರು ಕೈಗಳನ್ನು ತೊಳೆಯದೆ ಅಶುದ್ಧವಾದ ಕೈಗಳಿಂದ ಊಟ ಮಾಡುತ್ತಿರುವುದನ್ನು ಫರಿಸಾಯರು ಮತ್ತು ಧರ್ಮೋಪದೇಶಕರು ನೋಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತನ್ನಾ ಜೆಜುಚಿ ಶಿಸಾ ಹಾತ್ ಧುಯ್‍ನಸ್ತಾನಾ ಮ್ಹೆಳ್ಕ್ಯಾ ಹಾತಾನಿ ಜೆವಾನ್ ಕರ್‍ತಲೆ ತೆನಿ ಬಗಟ್ಲ್ಯಾನಿ.ಕಶ್ಯಾಕ್ ಮಟ್ಲ್ಯಾರ್ ತೆನಿ ಖಾಯ್ದ್ಯಾ ಪರ್‍ಕಾರ್ ಹಾತ್ ಧುವ್ನಸಲ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 7:2
12 ತಿಳಿವುಗಳ ಹೋಲಿಕೆ  

ಪೇತ್ರನು ಅವರಿಗೆ: “ಯೆಹೂದ್ಯನು ಯೆಹೂದ್ಯರಲ್ಲದವರೊಂದಿಗೆ ಸೇರಿ, ಅವರನ್ನು ಭೇಟಿ ಮಾಡುವುದಾಗಲಿ ನಮ್ಮ ಯೆಹೂದಿ ನಿಯಮಕ್ಕೆ ವಿರೋಧವಾದದ್ದು ಎಂದು ನಿಮಗೆಲ್ಲರಿರೂ ತಿಳಿದೇ ಇದೆ. ಆದರೆ ಯಾವ ಮನುಷ್ಯನನ್ನೂ ಅಶುದ್ಧನು ಇಲ್ಲವೆ ನಿಷಿದ್ಧವಾದವನು ಎಂದು ಕರೆಯಬಾರದು ಎಂದು ದೇವರು ನನಗೆ ತೋರಿಸಿಕೊಟ್ಟಿದ್ದಾರೆ.


ಯಾವುದೇ ಪದಾರ್ಥವು ತನ್ನಷ್ಟಕ್ಕೆ ಅಶುದ್ಧವಲ್ಲ ಎಂದು ನಾನು ಕರ್ತ ಆಗಿರುವ ಯೇಸುವಿನಲ್ಲಿ ನಿಶ್ಚಯವಾಗಿ ಬಲ್ಲೆನು. ಆದರೆ ಯಾರಾದರೂ ಅಶುದ್ಧವೆಂದು ಪರಿಗಣಿಸಿದರೆ ಅದು ಅವರಿಗೆ ಅಶುದ್ಧವಾಗಿರುವುದು.


“ಅದಕ್ಕೆ ನಾನು, ‘ಸ್ವಾಮಿ, ನನ್ನಿಂದಾಗದು! ಅಶುದ್ಧವಾದದ್ದನ್ನೂ ನಿಷಿದ್ಧವಾದದ್ದನ್ನೂ ನಾನೆಂದೂ ತಿಂದವನಲ್ಲ,’ ಎಂದು ಉತ್ತರಕೊಟ್ಟೆನು.


“ನಿನ್ನ ಶಿಷ್ಯರು ಪೂರ್ವಿಕರ ಸಂಪ್ರದಾಯವನ್ನು ಏಕೆ ಮೀರುತ್ತಾರೆ? ಅವರು ಊಟಕ್ಕೆ ಮುಂಚೆ ತಮ್ಮ ಕೈಗಳನ್ನು ಏಕೆ ತೊಳೆದುಕೊಳ್ಳುವುದಿಲ್ಲ?” ಎಂದರು.


ಆದ್ದರಿಂದ ಫರಿಸಾಯರು ಮತ್ತು ನಿಯಮ ಬೋಧಕರು, “ನಿನ್ನ ಶಿಷ್ಯರು ಪೂರ್ವಿಕರ ಸಂಪ್ರದಾಯದ ಪ್ರಕಾರ ಏಕೆ ನಡೆಯುವುದಿಲ್ಲ? ಅವರು ಮೈಲಿಗೆಯಾದ ಕೈಗಳಿಂದ ಊಟಮಾಡುತ್ತಾರಲ್ಲಾ?” ಎಂದು ಯೇಸುವನ್ನು ಕೇಳಿದರು.


ಆದರೆ ಊಟಕ್ಕೆ ಮೊದಲು ಯೇಸು ಕೈತೊಳೆಯದೆ ಇರುವುದನ್ನು ಫರಿಸಾಯನು ಕಂಡು ಆಶ್ಚರ್ಯಪಟ್ಟನು.


ಯಾವನು ದೇವಪುತ್ರರನ್ನೇ ತುಳಿದು ತನ್ನನ್ನು ಶುದ್ಧೀಕರಿಸಿದ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ ಕೃಪೆಯ ಪವಿತ್ರಾತ್ಮ ದೇವರನ್ನು ತಿರಸ್ಕಾರ ಮಾಡಿದ್ದಾನೋ, ಅವನು ಇನ್ನೂ ಎಷ್ಟೋ ಕ್ರೂರವಾದ ದಂಡನೆಗೆ ಪಾತ್ರನಾಗುವನೆಂಬುದನ್ನು ಯೋಚಿಸಿರಿ.


ಅಶುದ್ಧವಾದದ್ದು ಅದರಲ್ಲಿ ಸೇರುವುದಿಲ್ಲ. ಅಸಹ್ಯವಾದದ್ದನ್ನೂ ವಂಚಕವಾದದ್ದನ್ನೂ ನಡೆಸುವವನು ಅದರಲ್ಲಿ ಪ್ರವೇಶಿಸಲಾರನು. ಕುರಿಮರಿಯ ಜೀವ ಪುಸ್ತಕದಲ್ಲಿ ಯಾರ ಯಾರ ಹೆಸರುಗಳು ಬರೆದಿವೆಯೋ ಅವರು ಮಾತ್ರ ಸೇರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು