ಮಾರ್ಕ 7:4 - ಕನ್ನಡ ಸಮಕಾಲಿಕ ಅನುವಾದ4 ಪೇಟೆಗೆ ಹೋಗಿ ಬಂದರೆ ಅವರು ಸ್ನಾನ ಮಾಡದೆ ಊಟಮಾಡುತ್ತಿರಲಿಲ್ಲ. ಮಾತ್ರವಲ್ಲದೆ ಲೋಟ, ಚೆಂಬು ಮತ್ತು ತಪ್ಪಲೆಗಳನ್ನು ಬೆಳಗಿ ತೊಳೆಯುವುದು ಮುಂತಾದ ಅನೇಕ ಶುದ್ಧಾಚಾರಗಳನ್ನು ಅವರು ಪಾಲಿಸುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಮತ್ತು ಸಂತೆಗೆ ಹೋಗಿ ಬಂದರೆ ನೀರನ್ನು ಪ್ರೋಕ್ಷಿಸಿಕೊಳ್ಳದೆ ಇರುತ್ತಿರಲಿಲ್ಲ. ಬಹು ಸ್ವಚ್ಛವಾಗಿ ಸ್ನಾನಮಾಡಿಯೇ ಊಟಮಾಡುವುದು; ತಂಬಿಗೆ, ಚೆಂಬು, ತಪ್ಪಲೆಗಳನ್ನು ತೊಳೆಯುವುದು; ಇವೇ ಮೊದಲಾದ ಅನೇಕ ಆಚಾರಗಳು ಅವರಲ್ಲಿ ರೂಢಿಯಲ್ಲಿದ್ದುವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಪೇಟೆ ಬೀದಿಗಳಿಗೆ ಹೋಗಿ ಬಂದರೆ ಸ್ನಾನಮಾಡಿಯೇ ಊಟಮಾಡುವುದು; ತಂಬಿಗೆ, ಚೆಂಬು, ತಪ್ಪಲೆಗಳನ್ನು ಸೂತ್ರಬದ್ಧವಾಗಿ ತೊಳೆಯುವುದು; ಇವೇ ಮೊದಲಾದ ಅನೇಕ ಆಚಾರಗಳು ಅವರಲ್ಲಿ ರೂಢಿಯಲ್ಲಿದ್ದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಅವರು ಏನನ್ನಾದರೂ ಮಾರುಕಟ್ಟೆಯಲ್ಲಿ ಕೊಂಡುಕೊಂಡರೆ, ವಿಶೇಷವಾದ ರೀತಿಯಲ್ಲಿ ಅದನ್ನು ತೊಳೆಯದೆ ತಿನ್ನುತ್ತಿರಲಿಲ್ಲ. ತಮ್ಮ ಪಿತೃಗಳಿಂದ ಬಂದ ಇತರ ಆಚಾರಗಳನ್ನು ಅಂದರೆ ಲೋಟ, ಬಟ್ಟಲು, ತಪ್ಪಲೆ ಮತ್ತು ದೋಲಿಗಳನ್ನು ತೊಳೆಯುವಾಗಲೂ ಈ ನಿಯಮಗಳನ್ನು ಅನುಸರಿಸುತ್ತಿದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ಅನಿ ಬಾಜಾರಾಕ್ನಾ ಖಾವ್ಕ್ ಹಾನಲ್ಲೆ ತರ್ ಧುಯ್ನಾಸ್ತಾನಾ ಖಾಯ್ನಸಿತ್. ವಾಟ್ಕಿ,ಗಾಡ್ಗಿ, ತಾಂಬ್ಯಾ, ಆಯ್ದಾನಾ, ಹಾತ್ರಾನಾ ಧುತಲೆ, ಅಸ್ಲಿ ಲೈ ಪದ್ದತಿಯಾ ಪಾಳಿತ್. ಅಧ್ಯಾಯವನ್ನು ನೋಡಿ |