Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 7:5 - ಕನ್ನಡ ಸಮಕಾಲಿಕ ಅನುವಾದ

5 ಆದ್ದರಿಂದ ಫರಿಸಾಯರು ಮತ್ತು ನಿಯಮ ಬೋಧಕರು, “ನಿನ್ನ ಶಿಷ್ಯರು ಪೂರ್ವಿಕರ ಸಂಪ್ರದಾಯದ ಪ್ರಕಾರ ಏಕೆ ನಡೆಯುವುದಿಲ್ಲ? ಅವರು ಮೈಲಿಗೆಯಾದ ಕೈಗಳಿಂದ ಊಟಮಾಡುತ್ತಾರಲ್ಲಾ?” ಎಂದು ಯೇಸುವನ್ನು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆದುದರಿಂದ ಫರಿಸಾಯರೂ ಶಾಸ್ತ್ರಿಗಳೂ ಯೇಸುವನ್ನು, “ನಿನ್ನ ಶಿಷ್ಯರು ಹಿರಿಯರ ಆಚಾರಗಳನ್ನೇಕೆ ಅನುಸರಿಸುವುದಿಲ್ಲ? ಅಶುದ್ಧವಾದ ಕೈಗಳಿಂದಲೇ ಅವರು ಊಟಮಾಡುತ್ತಿದ್ದಾರಲ್ಲಾ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆದುದರಿಂದ ಫರಿಸಾಯರೂ ಧರ್ಮಶಾಸ್ತ್ರಿಗಳೂ, “ನಿನ್ನ ಶಿಷ್ಯರು ಪೂರ್ವಜರಿಂದ ಬಂದ ಆಚಾರಗಳನ್ನೇಕೆ ಅನುಸರಿಸುವುದಿಲ್ಲ? ಅಶುದ್ಧವಾದ ಕೈಗಳಿಂದಲೇ ಅವರು ಊಟಮಾಡುತ್ತಿದ್ದಾರಲ್ಲಾ?" ಎಂದು ಯೇಸುವನ್ನು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆತನನ್ನು - ನಿನ್ನ ಶಿಷ್ಯರು ಹಿರಿಯರಿಂದ ಬಂದ ಸಂಪ್ರದಾಯದಂತೆ ಯಾಕೆ ನಡೆದುಕೊಳ್ಳುವದಿಲ್ಲ? ಮೈಲಿಗೆಯ ಕೈಯಿಂದ ಯಾಕೆ ಆಹಾರ ತೆಗೆದುಕೊಳ್ಳುತ್ತಾರೆ ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಫರಿಸಾಯರು ಮತ್ತು ಧರ್ಮೋಪದೇಶಕರು ಯೇಸುವಿಗೆ, “ನಮ್ಮ ಪಿತೃಗಳ ಸಂಪ್ರದಾಯವನ್ನು ನಿನ್ನ ಶಿಷ್ಯರು ಅನುಸರಿಸದೆ ಅಶುದ್ಧವಾದ ಕೈಗಳಿಂದ ಆಹಾರವನ್ನು ತಿನ್ನುವುದೇಕೆ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ತೆಚೆ ಸಾಟ್ನಿ ಫಾರಿಜೆವಾನಿ ಅನಿ ಶಾಸ್ತರಾ ಶಿಕ್ವುತಲ್ಯಾನಿ ಜೆಜುಕ್ಡೆ ಯೆವ್ನ್ “ತುಜಿ ಶಿಸಾ ಅದ್ಲ್ಯಾ ಲೊಕಾನಿ ಕರಲ್ಲ್ಯಾ ಖಾಯ್ದ್ಯಾ ಪರ್ಕಾರ್ ಚಲಿನಸ್ತಾನಾ ಮ್ಹೆಳ್ಕ್ಯಾ ಹಾತಾನಿ ಜೆವಾನ್ ಕರ್‍ತ್ಯಾತ್ ಕಶ್ಯಾಕ್?” ಮನುನ್ ಇಚಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 7:5
12 ತಿಳಿವುಗಳ ಹೋಲಿಕೆ  

ಪ್ರಿಯರೇ, ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಹೆಸರಿನಲ್ಲಿ ನಾವು ನಿಮಗೆ ಆಜ್ಞಾಪಿಸುವುದೇನೆಂದರೆ, ನಮ್ಮಿಂದ ಸ್ವೀಕರಿಸಿದ ಬೋಧನೆಯನ್ನು ಅನುಸರಿಸದೆ, ಸೋಮಾರಿಯಾಗಿ ಅಶಿಸ್ತಿನಿಂದ ನಡೆಯುವ ಪ್ರತಿ ವಿಶ್ವಾಸಿಗೆ ನೀವು ದೂರವಾಗಿರಬೇಕು.


ನೀನು ಯೆಹೂದ್ಯರಲ್ಲದವರ ಮಧ್ಯದಲ್ಲಿ ವಾಸಿಸುತ್ತಿರುವ ಯೆಹೂದ್ಯರಿಗೆ, ‘ನೀವು ಮೋಶೆಯ ನಿಯಮವನ್ನು ಅನುಸರಿಸಬೇಡಿರಿ, ನಿಮ್ಮ ಮಕ್ಕಳಿಗೆ ಸುನ್ನತಿ ಮಾಡಿಸಬೇಡಿರಿ, ನಿಮ್ಮ ಆಚಾರಗಳನ್ನು ಅನುಸರಿಸಬೇಡಿರಿ,’ ಎಂದು ಬೋಧಿಸುವುದಾಗಿ ನಿನ್ನ ವಿಷಯದಲ್ಲಿ ಅವರಿಗೆ ತಿಳಿದು ಬಂದಿದೆ.


ಇದಲ್ಲದೆ ನಾನು ನನ್ನ ಪಿತೃಗಳ ಸಂಪ್ರದಾಯಗಳಲ್ಲಿ ಅತ್ಯಂತ ಅಭಿಮಾನವುಳ್ಳವನಾಗಿ ಸಮಕಾಲಿಕರಾದ ನನ್ನ ಜನರೊಳಗೆ ಅನೇಕರಿಗಿಂತ ಯೆಹೂದ್ಯ ವಿಶ್ವಾಸದಲ್ಲಿ ಎಷ್ಟೋ ಪ್ರಗತಿಯನ್ನು ಹೊಂದಿದವನಾಗಿದ್ದೆನು.


ನೀನು ಇವರನ್ನು ಕರೆದುಕೊಂಡು ಹೋಗಿ, ಅವರೊಂದಿಗೆ ನಿನ್ನನ್ನು ಶುದ್ಧಿಮಾಡಿಕೊಂಡು, ಅವರು ತಮ್ಮ ಕ್ಷೌರ ಮಾಡಿಸಿಕೊಳ್ಳುವ ಖರ್ಚನ್ನು ನೀನೇ ಪೂರೈಸು. ಆಗ ನಿನ್ನ ವಿಷಯದಲ್ಲಿ ಕೇಳಿರುವ ಸಂಗತಿಗಳು ನಿಜವಲ್ಲ ಮತ್ತು ನೀನು ಮೋಶೆಯ ನಿಯಮಕ್ಕನುಸಾರವಾಗಿ ನಡೆದುಕೊಳ್ಳುತ್ತೀ ಎಂದು ಎಲ್ಲರಿಗೂ ತಿಳಿದುಬರುವುದು.


“ನಿನ್ನ ಶಿಷ್ಯರು ಪೂರ್ವಿಕರ ಸಂಪ್ರದಾಯವನ್ನು ಏಕೆ ಮೀರುತ್ತಾರೆ? ಅವರು ಊಟಕ್ಕೆ ಮುಂಚೆ ತಮ್ಮ ಕೈಗಳನ್ನು ಏಕೆ ತೊಳೆದುಕೊಳ್ಳುವುದಿಲ್ಲ?” ಎಂದರು.


ನಮ್ಮ ಪಿತೃವಾದ ಅಬ್ರಹಾಮನು ಸುನ್ನತಿ ಹೊಂದಿದವರಿಗೆ ಮಾತ್ರವೇ ತಂದೆಯಾಗಿರದೆ ಅವನಿಗೆ ಸುನ್ನತಿ ಆಗುವ ಮೊದಲು ಇದ್ದ ನಂಬಿಕೆಯ ಹೆಜ್ಜೆಯಲ್ಲಿ ನಡೆಯುವವರಿಗೂ ತಂದೆಯಾಗಿರುತ್ತಾನೆ.


ಆದರೆ ನಿಮ್ಮಲ್ಲಿ ಕೆಲವರು ಯಾವ ಕೆಲಸವನ್ನೂ ಮಾಡದೆ ಇತರರ ಕೆಲಸದಲ್ಲಿ ಮಾತ್ರ ತಲೆಹಾಕಿ ಅಶಿಸ್ತಿನಿಂದ ನಡೆಯುತ್ತಾರೆಂದು ಕೇಳಿದ್ದೇವೆ.


ನೀವು ದೇವರ ಆಜ್ಞೆಯನ್ನು ತೊರೆದು, ಮನುಷ್ಯರ ಸಂಪ್ರದಾಯಗಳನ್ನು ಹಿಡಿದುಕೊಂಡಿದ್ದೀರಿ,” ಎಂದರು.


ಯೇಸು ಇನ್ನೂ ಅವರಿಗೆ, “ನಿಮ್ಮ ಸಂಪ್ರದಾಯಗಳನ್ನು ಪಾಲಿಸುವುದಕ್ಕಾಗಿ ಬಹು ಜಾಣತನದಿಂದ ದೇವರ ಆಜ್ಞೆಯನ್ನು ನಿರ್ಲಕ್ಷಿಸುತ್ತೀರಿ.


ಹೀಗೆ ನೀವು ಮಾಡುತ್ತಾ ಬಂದಿರುವ ಸಂಪ್ರದಾಯಗಳ ಮೂಲಕ ದೇವರ ವಾಕ್ಯವನ್ನು ನಿರರ್ಥಕಮಾಡುತ್ತೀರಿ. ಇಂಥ ಕಾರ್ಯಗಳನ್ನು ಇನ್ನೂ ಎಷ್ಟೋ ಮಾಡುತ್ತೀರಿ,” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು