Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 7:6 - ಕನ್ನಡ ಸಮಕಾಲಿಕ ಅನುವಾದ

6 ಅದಕ್ಕೆ ಯೇಸು, “ಕಪಟಿಗಳೇ, ಯೆಶಾಯನು ನಿಮ್ಮ ವಿಷಯವಾಗಿ ಸರಿಯಾಗಿ ಪ್ರವಾದಿಸಿದ್ದಾನೆ,” ಅವನು ಬರೆದಿರುವಂತೆ: “ ‘ಈ ಜನರು ತಮ್ಮ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ. ಆದರೆ ಅವರ ಹೃದಯವು ನನ್ನಿಂದ ದೂರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅದಕ್ಕೆ ಆತನು, “ಕಪಟಿಗಳಾದ ನಿಮ್ಮ ವಿಷಯದಲ್ಲಿ ಯೆಶಾಯನು ಸರಿಯಾಗಿ ಪ್ರವಾದಿಸಿದ್ದಾನೆ; ಅವನು ಬರೆದಿರುವಂತೆ: “‘ಈ ಜನರು ಮಾತಿನಿಂದ ನನ್ನನ್ನು ಗೌರವಿಸುತ್ತಾರೆ, ಆದರೆ ಅವರ ಹೃದಯ ನನ್ನಿಂದ ದೂರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6-7 ಅದಕ್ಕೆ ಯೇಸು, “ಕಪಟಿಗಳೇ, ನಿಮ್ಮ ವಿಷಯದಲ್ಲಿ ಯೆಶಾಯನು ಎಷ್ಟೊಂದು ಚೆನ್ನಾಗಿ ಪ್ರವಾದಿಸಿದ್ದಾನೆ: ‘ಬರಿಯ ಮಾತಿನ ಮನ್ನಣೆಯನೀಯುತ, ಹೃದಯವನು ದೂರವಿರಿಸುತ, ನರಕಲ್ಪಿತ ಕಟ್ಟಳೆಗಳನೆ ದೇವವಾಕ್ಯವೆಂದು ಉಪದೇಶಿಸುತ, ಈ ಜನರೆನಗೆ ಮಾಡುವ ಆರಾಧನೆ ವ್ಯರ್ಥ! ಎಂದರು ದೇವರು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅದಕ್ಕೆ ಆತನು - ಕಪಟಿಗಳಾದ ನಿಮ್ಮ ವಿಷಯದಲ್ಲಿ ಯೆಶಾಯನು ವಿಹಿತವಾಗಿ ಪ್ರವಾದಿಸಿದ್ದಾನೆ; ಅವನು ಬರೆದದ್ದೇನಂದರೆ - ಈ ಜನರು ಮಾತಿನಿಂದ ನನ್ನನ್ನು ಸನ್ಮಾನಿಸುತ್ತಾರೆ, ಆದರೆ ಅವರ ಮನಸ್ಸು ನನಗೆ ದೂರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯೇಸು, “ನೀವೆಲ್ಲ ಕಪಟಿಗಳು. ನಿಮ್ಮ ಬಗ್ಗೆ ಯೆಶಾಯನು ಸರಿಯಾಗಿ ಹೇಳಿದ್ದಾನೆ: ‘ನನ್ನನ್ನು ಗೌರವಿಸುವುದಾಗಿ ಈ ಜನರು ಹೇಳುತ್ತಾರೆ, ಆದರೆ ಇವರ ಹೃದಯಗಳು ನನ್ನಿಂದ ಬಹುದೂರವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ತನ್ನಾ ಜೆಜು ಕುಸ್ಡ್ಯಾ ಲೊಕಾನು, ಇಸಾಯಿಯಾನ್ ತುಮ್ಚ್ಯಾ ವಿಶಯಾತ್ ಹಿ ಲೊಕಾ ಅಪ್ನಾಚ್ಯಾ ತೊಂಡಾಂಚ್ಯಾ ಗೊಸ್ಟಿಯಾನಿ ಮಾಕಾ ಮಾನ್ ಕರ್‍ತ್ಯಾತ್, ಖರೆ ತೆಂಚಿ ಕಾಳ್ಜಾ ಮಾಜೆಕನ್ನಾ ಲೈ ದುರ್ ಹಾತ್‍,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 7:6
14 ತಿಳಿವುಗಳ ಹೋಲಿಕೆ  

ಕರ್ತರು ಹೇಳುವುದೇನೆಂದರೆ: “ಈ ಜನರು ಬಾಯಿಂದ ನನ್ನನ್ನು ಸಮೀಪಿಸಿ, ತಮ್ಮ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ, ಆದರೆ ಅವರ ಹೃದಯವು ನನ್ನಿಂದ ದೂರವಾಗಿದೆ. ಬಾಯಿಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯವನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ.


ತಾವು ದೇವರನ್ನು ತಿಳಿದವರೆಂದು ಅವರು ವಾದಿಸುತ್ತಾರೆ. ಆದರೆ ತಮ್ಮ ಕೃತ್ಯಗಳಿಂದ ದೇವರನ್ನೇ ಅಲ್ಲಗಳೆಯುವರಾಗಿದ್ದಾರೆ. ಅವರು ಅಸಹ್ಯರೂ ಅವಿಧೇಯರೂ ಯಾವ ಸತ್ಕಾರ್ಯಗಳನ್ನು ಮಾಡುವುದಕ್ಕೆ ಅಯೋಗ್ಯರಾಗಿದ್ದಾರೆ.


ಶ್ರದ್ಧೆ ಇರುವ ನನ್ನ ಭಕ್ತರಂತೆ ಅವರು ನಿನ್ನ ಬಳಿಗೆ ಬಂದು ಜನರು ಕುಳಿತುಕೊಳ್ಳುವ ಹಾಗೆ ನಿನ್ನ ಮುಂದೆ ಕುಳಿತುಕೊಳ್ಳುವರು. ಅವರು ನಿನ್ನ ವಾಕ್ಯಗಳನ್ನು ಕೇಳುವರು. ಆದರೆ ಅವರು ಅವುಗಳನ್ನು ಪಾಲಿಸುವುದಿಲ್ಲ. ಅವರು ತಮ್ಮ ಬಾಯಿಂದ ಹೆಚ್ಚಾದ ಪ್ರೀತಿಯನ್ನು ತೋರಿಸುವರು. ಆದರೆ ಅವರ ಹೃದಯವು ಅನ್ಯಾಯದ ಲಾಭದ ಕಡೆಗೆ ಹೋಗುವುದು.


ಭಕ್ತಿಯ ವೇಷವಿದ್ದು ಅದರ ಬಲವನ್ನು ಅಲ್ಲಗಳೆಯುವವರೂ ಆಗಿರುವರು. ಇಂಥವರನ್ನು ಬಿಟ್ಟು ಪ್ರತ್ಯೇಕವಾಗಿರು.


ಆದರೆ ನಿಮ್ಮನ್ನು ಬಲ್ಲೆನು. ನಿಮ್ಮ ಹೃದಯದಲ್ಲಿ ದೇವರ ಪ್ರೀತಿ ಇಲ್ಲ.


ಬೇರೆ ಯಾರೂ ಮಾಡದ ಕ್ರಿಯೆಗಳನ್ನು ನಾನು ಅವರ ನಡುವೆ ಮಾಡದೆ ಹೋಗಿದ್ದರೆ ಅವರಿಗೆ ಪಾಪವು ಇರುತ್ತಿರಲಿಲ್ಲ. ಆದರೆ ಈಗ ಅವರು ನನ್ನ ಕ್ರಿಯೆಗಳನ್ನು ಕಂಡೂ ನನ್ನನ್ನೂ ನನ್ನ ತಂದೆಯನ್ನೂ ದ್ವೇಷಮಾಡಿದ್ದಾರೆ.


ಆದರೆ ಬೇರೆಯವರು ನಂಬಲಿಲ್ಲ. ಅವರು ತಮ್ಮತಮ್ಮಲ್ಲಿಯೇ ಭಿನ್ನಾಭಿಪ್ರಾಯ ಉಳ್ಳವರಾಗಿರಲು ಪೌಲನು ಅವರಿಗೆ, “ಪವಿತ್ರಾತ್ಮ ದೇವರು ನಿಮ್ಮ ಪಿತೃಗಳಿಗೆ ಪ್ರವಾದಿ ಯೆಶಾಯನ ಮುಖಾಂತರ ಈ ಮಾತುಗಳನ್ನು ಸರಿಯಾಗಿಯೇ ಹೇಳಿದ್ದಾರೆ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು