Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 8:11 - ಕನ್ನಡ ಸಮಕಾಲಿಕ ಅನುವಾದ

11 ಫರಿಸಾಯರು ಬಂದು ಯೇಸುವನ್ನು ಪರೀಕ್ಷಿಸುವುದಕ್ಕಾಗಿ ಪರಲೋಕದಿಂದ ತಮಗೆ ಒಂದು ಸೂಚಕಕಾರ್ಯವನ್ನು ಮಾಡಬೇಕೆಂದು ಕೇಳಿ, ಅವರೊಂದಿಗೆ ತರ್ಕಿಸುವುದಕ್ಕೆ ಆರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ತರುವಾಯ ಫರಿಸಾಯರು ಯೇಸುವಿನ ಬಳಿಗೆ ಬಂದು, ಆತನ ಕೂಡ ತರ್ಕಮಾಡಿ, ಆತನನ್ನು ಪರೀಕ್ಷಿಸುವ ಉದ್ದೇಶದಿಂದ, “ನೀನು ಪರಲೋಕದಿಂದ ಒಂದು ಸೂಚಕಕಾರ್ಯವನ್ನು ಮಾಡಿ ತೋರಿಸು” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಫರಿಸಾಯರು ಯೇಸುಸ್ವಾಮಿಯ ಬಳಿಗೆ ಬಂದು, ಅವರೊಡನೆ ತರ್ಕಮಾಡಿ, ಅವರನ್ನು ಪರೀಕ್ಷಿಸುವ ಉದ್ದೇಶದಿಂದ: “ನೀನು ದೇವರಿಂದ ಬಂದವನೆಂಬುದನ್ನು ಸೂಚಿಸಲು ಒಂದು ಅದ್ಭುತವನ್ನು ಮಾಡಿತೋರಿಸು,” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ತರುವಾಯ ಫರಿಸಾಯರು ಹೊರಟು ಬಂದು ಆತನ ಕೂಡ ತರ್ಕಮಾಡುತ್ತಾ ಪರೀಕ್ಷಿಸುವದಕ್ಕಾಗಿ - ನೀನು ಆಕಾಶದಲ್ಲಿ ಒಂದು ಸೂಚಕಕಾರ್ಯವನ್ನು ತೋರಿಸಿಕೊಡಬೇಕೆಂದು ಕೇಳುತ್ತಿರಲು ಆತನು ತನ್ನ ಆತ್ಮದಲ್ಲಿ ನೊಂದು ನಿಟ್ಟುಸುರುಬಿಟ್ಟು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಫರಿಸಾಯರು ಯೇಸುವಿನ ಬಳಿಗೆ ಬಂದು, ಆತನನ್ನು ಪರೀಕ್ಷಿಸಲು ಪ್ರಶ್ನೆಗಳನ್ನು ಕೇಳಿದರು. ಅವರು ಯೇಸುವಿಗೆ, “ನೀನು ದೇವರಿಂದ ಬಂದವನೆಂದು ತೋರಿಸಲು ಒಂದು ಸೂಚಕಕಾರ್ಯವನ್ನು ಮಾಡು” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಫಾರಿಜೆವ್ ಯೆಲೆ ಅನಿ ಕಾಯ್ತರ್ ಚುಕ್ ಹುಡ್ಕುಕ್ ಮನುನ್, ತಿಯಾ ದೆವಾಕ್ನಾ ಯೆಲ್ಲೊ ಮನುನ್ ದಾಕ್ವುಕ್ ಸರ್‍ಗಾ ವೈನಾ ಎಕ್ ಮೊಟೊ ವಳಕ್ ಕರುನ್ ದಾಕ್ವು ಮನುನ್ ತೆಚೆಕ್ಡೆ ವಾದ್ ಕರುಕ್ ಲಾಗ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 8:11
27 ತಿಳಿವುಗಳ ಹೋಲಿಕೆ  

ಅವರಲ್ಲಿ ಕೆಲವರು ಕರ್ತದೇವರನ್ನು ಪರೀಕ್ಷಿಸಿ ಸರ್ಪಗಳಿಂದ ನಾಶವಾದಂತೆ, ನಾವೂ ಪರೀಕ್ಷಿಸದೆ ಇರೋಣ.


ಆಗ ನಿಯಮ ಬೋಧಕರೂ ಫರಿಸಾಯರೂ, “ಬೋಧಕರೇ, ನಿನ್ನಿಂದ ಒಂದು ಸೂಚಕಕಾರ್ಯವನ್ನು ಕಾಣಬೇಕೆಂದಿದ್ದೇವೆ,” ಎಂದು ಕೇಳಿದರು.


ಈಗ ನಾವು ಗರ್ವಿಷ್ಠರನ್ನು ಭಾಗ್ಯವಂತರೆಂದನ್ನುತ್ತೇವೆ. ದುಷ್ಟರು ಅಭಿವೃದ್ಧಿಯಾಗುತ್ತಿದ್ದಾರೆ. ದೇವರಿಗೆ ಸವಾಲು ಹಾಕಿದವರು ತಪ್ಪಿಸಿಕೊಂಡಿದ್ದಾರೆ’ ಎಂದು ಹೇಳಿದ್ದೀರಿ.”


ನೀವು ಮಸ್ಸದಲ್ಲಿ ಪರೀಕ್ಷಿಸಿದ ಹಾಗೆ ನಿಮ್ಮ ದೇವರಾದ ಯೆಹೋವ ದೇವರನ್ನು ಪರೀಕ್ಷಿಸಬಾರದು.


ಯೇಸು ಅವನಿಗೆ, “ನೀವು ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಕಾಣದ ಹೊರತು ನಂಬುವುದೇ ಇಲ್ಲ,” ಎಂದರು.


ಇನ್ನು ಕೆಲವರು ಯೇಸುವನ್ನು ಪರೀಕ್ಷಿಸುವವರಾಗಿ ಪರಲೋಕದಿಂದ ಒಂದು ಸೂಚಕಕಾರ್ಯವನ್ನು ತೋರಿಸಬೇಕೆಂದು ಕೇಳಿದರು.


“ಯೆಹೋವ ದೇವರು ತಮ್ಮ ಮಧ್ಯದಲ್ಲಿ ಇದ್ದಾನೋ ಇಲ್ಲವೋ,” ಎಂದು ಜನರು ಪರೀಕ್ಷಿಸಿದ್ದರಿಂದ ಮೋಶೆ ಆ ಸ್ಥಳಕ್ಕೆ ಮಸ್ಸಾ ಎಂದು ಹೆಸರಿಟ್ಟನು. ಅಲ್ಲಿ ಇಸ್ರಾಯೇಲರು ತನ್ನೊಡನೆ ವಿವಾದ ಮಾಡಿದ್ದರಿಂದ ಮೆರೀಬಾ ಎಂತಲೂ ಹೆಸರಿಟ್ಟನು.


“ನೀವಿಬ್ಬರೂ ಕರ್ತದೇವರ ಆತ್ಮವನ್ನು ಪರೀಕ್ಷಿಸಲು ಒಪ್ಪಿಕೊಂಡದ್ದೇಕೆ? ಇಗೋ! ನಿನ್ನ ಗಂಡನ ಶವವನ್ನು ಹೂಣಿಟ್ಟು ಬಂದವರು ಬಾಗಿಲ ಬಳಿಯಲ್ಲೇ ಇದ್ದಾರೆ. ಅವರು ನಿನ್ನನ್ನೂ ಹೊತ್ತುಕೊಂಡು ಹೋಗುವರು,” ಎಂದು ಆಕೆಗೆ ಪೇತ್ರನು ಹೇಳಿದನು.


ಅಧಿಕಾರಿಗಳಲ್ಲಿಯೂ ಫರಿಸಾಯರಲ್ಲಿಯೂ ಯಾರಾದರೂ ಯೇಸುವನ್ನು ನಂಬಿದ್ದುಂಟೇ?


ಅದಕ್ಕೆ ಅವರು ಯೇಸುವಿಗೆ, “ಹಾಗಾದರೆ ನಾವು ನೋಡಿ ನಿಮ್ಮನ್ನು ನಂಬುವಂತೆ ಯಾವ ಸೂಚಕಕಾರ್ಯವನ್ನು ಮಾಡುತ್ತೀರಿ?


ಒಂದು ಸಂದರ್ಭದಲ್ಲಿ ಒಬ್ಬ ನಿಯಮ ಬೋಧಕನು ಎದ್ದು ನಿಂತು ಯೇಸುವನ್ನು ಪರೀಕ್ಷಿಸುವುದಕ್ಕಾಗಿ, “ಬೋಧಕರೇ, ನಾನು ನಿತ್ಯಜೀವವನ್ನು ಪ್ರಾಪ್ತಿಮಾಡಿಕೊಳ್ಳುವುದಕ್ಕೆ ಏನು ಮಾಡಬೇಕು?” ಎಂದು ಕೇಳಿದನು.


ನಾವು ಕೊಡಬೇಕೋ? ಕೊಡಬಾರದೋ?” ಎಂದು ಕೇಳಿದರು. ಆದರೆ ಯೇಸು ಅವರ ಕಪಟವನ್ನು ತಿಳಿದು ಅವರಿಗೆ, “ನೀವು ನನ್ನನ್ನೇಕೆ ಪರೀಕ್ಷಿಸುತ್ತೀರಿ? ಒಂದು ಬೆಳ್ಳಿ ನಾಣ್ಯವನ್ನು ತಂದು ನನಗೆ ತೋರಿಸಿರಿ,” ಎಂದು ಹೇಳಿದರು.


ಫರಿಸಾಯರಾದ ನಿಯಮ ಬೋಧಕರು ಪಾಪಿಗಳ ಮತ್ತು ಸುಂಕದವರ ಸಂಗಡ ಯೇಸು ಊಟಮಾಡುವುದನ್ನು ಕಂಡು, “ಈತನು ಸುಂಕದವರ ಮತ್ತು ಪಾಪಿಗಳ ಸಂಗಡ ಏಕೆ ಊಟಮಾಡುತ್ತಾನೆ?” ಎಂದು ಯೇಸುವಿನ ಶಿಷ್ಯರನ್ನು ಕೇಳಿದರು.


ಪುನರುತ್ಥಾನವಿಲ್ಲವೆಂದು ಹೇಳುವ ಸದ್ದುಕಾಯರು ಅದೇ ದಿನದಲ್ಲಿ ಯೇಸುವಿನ ಬಳಿಗೆ ಬಂದು,


ಯೇಸು ಅವರ ಕುಯುಕ್ತಿಯನ್ನು ತಿಳಿದುಕೊಂಡು, “ಕಪಟಿಗಳೇ, ನೀವು ನನ್ನನ್ನೇಕೆ ಪರೀಕ್ಷಿಸುತ್ತೀರಿ?


ಆಗ ಫರಿಸಾಯರು ಹೊರಟುಹೋಗಿ ಯೇಸುವನ್ನು ಮಾತಿನಲ್ಲಿ ಹೇಗೆ ಸಿಕ್ಕಿಸಬೇಕೆಂದು ಆಲೋಚನೆ ಮಾಡಿಕೊಂಡರು.


ಅನಂತರ ಯೇಸು ದೇವಾಲಯಕ್ಕೆ ಬಂದು ಬೋಧಿಸುತ್ತಿದ್ದಾಗ, ಮುಖ್ಯಯಾಜಕರೂ ಜನರ ಹಿರಿಯರೂ ಯೇಸುವಿನ ಬಳಿಗೆ ಬಂದು, “ಯಾವ ಅಧಿಕಾರದಿಂದ ನೀನು ಇವುಗಳನ್ನು ಮಾಡುತ್ತೀ? ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು?” ಎಂದು ಕೇಳಿದರು.


ಫರಿಸಾಯರಲ್ಲಿ ಕೆಲವರು ಯೇಸುವನ್ನು ಪರೀಕ್ಷಿಸುವುದಕ್ಕಾಗಿ ಅವರ ಬಳಿಗೆ ಬಂದು, “ಒಬ್ಬ ಪುರುಷನು ಯಾವ ಕಾರಣದಿಂದಾದರೂ ತನ್ನ ಹೆಂಡತಿಯನ್ನು ಬಿಟ್ಟುಬಿಡುವುದು ಧರ್ಮಸಮ್ಮತವೋ?” ಎಂದು ಕೇಳಿದರು.


ಆದಕಾರಣ ಜನರು ಮೋಶೆಯ ಸಂಗಡ ವಿವಾದ ಮಾಡಿ, “ನಮಗೆ ಕುಡಿಯುವುದಕ್ಕೆ ನೀರು ಕೊಡು,” ಎಂದರು. ಮೋಶೆಯು ಅವರಿಗೆ, “ಏಕೆ ನನ್ನ ಸಂಗಡ ವಿವಾದ ಮಾಡುತ್ತೀರಿ? ಯೆಹೋವ ದೇವರನ್ನು ಏಕೆ ಪರೀಕ್ಷಿಸುತ್ತೀರಿ?” ಎಂದನು.


ಅವರು ಯೇಸುವನ್ನು ಮಾತಿನಲ್ಲಿ ಸಿಕ್ಕಿಸಿ ತಪ್ಪು ಹೊರಿಸಬೇಕೆಂದೇ ಹೀಗೆ ಕೇಳಿದರು. ಆದರೆ ಯೇಸು ಬಗ್ಗಿಕೊಂಡು ಬೆರಳಿನಿಂದ ನೆಲದ ಮೇಲೆ ಬರೆಯುತ್ತಾ ಇದ್ದರು.


ಆಗ ಯೇಸು ಅವರಿಗೆ, “ಅವರೊಂದಿಗೆ ನೀವು ಏನು ತರ್ಕಮಾಡುತ್ತಿದ್ದಿರಿ?” ಎಂದು ಕೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು