ಮಾರ್ಕ 8:17 - ಕನ್ನಡ ಸಮಕಾಲಿಕ ಅನುವಾದ17 ಯೇಸು ಅವರು ಮಾತನಾಡಿದ್ದನ್ನು ತಿಳಿದುಕೊಂಡು ಅವರಿಗೆ, “ನಿಮ್ಮಲ್ಲಿ ರೊಟ್ಟಿ ಇಲ್ಲವೆಂದು ಏಕೆ ಚರ್ಚಿಸಿಕೊಳ್ಳುತ್ತೀರಿ? ನೀವು ಇನ್ನೂ ಕಾಣದೆಯೂ ತಿಳಿದುಕೊಳ್ಳದೆಯೂ ಇದ್ದೀರೋ? ನೀವು ನಿಮ್ಮ ಹೃದಯವನ್ನು ಇನ್ನೂ ಕಠಿಣ ಮಾಡಿಕೊಂಡಿದ್ದೀರೋ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆತನು ಅದನ್ನು ತಿಳಿದು, “ರೊಟ್ಟಿಯಿಲ್ಲವಲ್ಲಾ ಎಂದು ನಿಮ್ಮೊಳಗೆ ಚರ್ಚಿಸಿಕೊಳ್ಳುವುದೇಕೆ? ನೀವು ಇನ್ನೂ ಗ್ರಹಿಸಲಿಲ್ಲವೋ? ನಿಮಗೆ ತಿಳಿವಳಿಕೆ ಬರಲಿಲ್ಲವೋ? ನಿಮ್ಮ ಮನಸ್ಸು ಅಷ್ಟು ಕಠಿಣವಾಗಿದೆಯೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಆ ಚರ್ಚೆಯನ್ನು ಯೇಸು ಗಮನಿಸಿ, “ರೊಟ್ಟಿ ಇಲ್ಲವೆಂದು ಚರ್ಚೆ ಏಕೆ? ನಿಮಗೆ ಇನ್ನೂ ಅರಿವಾಗಲಿ, ಗ್ರಹಿಕೆಯಾಗಲಿ ಇಲ್ಲವೇ? ನೀವಿನ್ನೂ ಮಂದಮತಿಗಳಾಗಿರುವಿರೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಆತನು ಅದನ್ನು ತಿಳಿದು - ರೊಟ್ಟಿಯಿಲ್ಲವಲ್ಲಾ ಎಂದು ಮಾತಾಡಿಕೊಳ್ಳುವದೇಕೆ? ನೀವು ಇನ್ನೂ ಗ್ರಹಿಸಲಿಲ್ಲವೋ? ತಿಳುವಳಿಕೆ ಬರಲಿಲ್ಲವೋ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಶಿಷ್ಯರು ಇದರ ಬಗ್ಗೆ ಮಾತಾಡುತ್ತಿರುವುದು ಯೇಸುವಿಗೆ ತಿಳಿದಿತ್ತು. ಆದ್ದರಿಂದ ಆತನು ಅವರಿಗೆ, “ರೊಟ್ಟಿ ಇಲ್ಲವೆಂದು ನೀವು ಚರ್ಚಿಸುವುದೇಕೆ? ನಿಮಗಿನ್ನೂ ಕಾಣುವುದಿಲ್ಲವೇ? ನಿಮಗಿನ್ನೂ ಅರ್ಥವಾಗುವುದಿಲ್ಲವೇ? ನಿಮ್ಮ ಹೃದಯಗಳು ಇನ್ನೂ ಕಠಿಣವಾಗಿವೆಯೋ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ತೆನಿ ಬೊಲ್ತಲೆ ಜೆಜುಕ್ ಕಳ್ಳೆ ತನ್ನಾ ಜೆಜುನ್ “ತುಮಿ ಭಾಕ್ರಿಯಾನಾತ್ ಮನುನ್ ಕಶ್ಯಾಕ್ ಬೊಲುಲ್ಯಾಸಿ? ಅಜುನ್ ತುಮ್ಕಾ ಕಳುಕ್ ನಾ? ತುಮ್ಚಿ ಟಕ್ಲಿ ತೌಡಿಬಿ ಮಡ್ಡ್ ಹೊಲ್ಯಾತ್ ಕಾಯ್? ಅಧ್ಯಾಯವನ್ನು ನೋಡಿ |
ಯೇಸು ಮೂರನೆಯ ಸಾರಿ ಪೇತ್ರನಿಗೆ, “ಯೋಹಾನನ ಮಗನಾದ ಸೀಮೋನನೇ, ನೀನು ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ಕೇಳಿದರು. ಯೇಸು ಮೂರನೆಯ ಸಾರಿ, “ನೀನು ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು, “ಕರ್ತನೇ, ನಿಮಗೆ ಎಲ್ಲವೂ ತಿಳಿದಿದೆ. ನಾನು ನಿಮ್ಮ ಮೇಲೆ ಎಷ್ಟು ಮಮತೆ ಇಟ್ಟಿದ್ದೇನೆಂದು ನಿಮಗೆ ತಿಳಿದಿದೆ,” ಎಂದನು. ಆಗ ಯೇಸು ಪೇತ್ರನಿಗೆ, “ನನ್ನ ಕುರಿಗಳನ್ನು ಮೇಯಿಸು,” ಎಂದರು.