Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 8:29 - ಕನ್ನಡ ಸಮಕಾಲಿಕ ಅನುವಾದ

29 ಅದಕ್ಕೆ ಯೇಸು ಅವರಿಗೆ, “ಆದರೆ ನೀವು ನನ್ನನ್ನು ಯಾರೆನ್ನುತ್ತೀರಿ?” ಎಂದು ಕೇಳಲು, ಪೇತ್ರನು ಯೇಸುವಿಗೆ, “ನೀನು ಕ್ರಿಸ್ತನೇ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಆತನು ಅವರನ್ನು, ಕುರಿತು “ನೀವು ನನ್ನನ್ನು ಯಾರನ್ನುತ್ತೀರಿ?” ಎಂದು ಕೇಳಲಾಗಿ ಪೇತ್ರನು, “ನೀನು ಕ್ರಿಸ್ತನು” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಆಗ ಯೇಸು, “ಆದರೆ ನೀವು ನನ್ನನ್ನು ಯಾರೆನ್ನುತ್ತೀರಿ?” ಎಂದು ಪ್ರಶ್ನಿಸಿದರು. ಅದಕ್ಕೆ ಪೇತ್ರನು, “ಅಭಿಷಿಕ್ತರಾದ ಲೋಕೋದ್ಧಾರಕ ತಾವೇ” ಎಂದು ಉತ್ತರವಿತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಆತನು ಅವರನ್ನು - ಆದರೆ ನೀವು ನನ್ನನ್ನು ಯಾರನ್ನುತ್ತೀರಿ? ಎಂದು ಕೇಳಲಾಗಿ ಪೇತ್ರನು - ನೀನು ಬರಬೇಕಾಗಿರುವ ಕ್ರಿಸ್ತನು ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಆಗ ಯೇಸು ಅವರಿಗೆ, “ನೀವು ನನ್ನನ್ನು ಯಾರೆಂದು ಹೇಳುತ್ತೀರಿ?” ಎಂದು ಕೇಳಿದನು. ಕೂಡಲೇ ಪೇತ್ರನು, “ನೀನು ಬರಬೇಕಾದ ಕ್ರಿಸ್ತನು” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ತನ್ನಾ ಜೆಜುನ್ ತುಮಿ ಮಾಕಾ ಕಾಯ್ ಮನುನ್ ಯವಜ್ತ್ಯಾಶಿ? “ತುಮಿ ಮಾಕಾ ಕೊನ್ ಮನುನ್ ಮನ್ತ್ಯಾಶಿ?” ಮನುನ್ ಇಚಾರ್‍ಲ್ಯಾನ್. ತನ್ನಾ ಪೆದ್ರುನ್ “ತಿಯಾ ಕ್ರಿಸ್ತ್” ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 8:29
13 ತಿಳಿವುಗಳ ಹೋಲಿಕೆ  

ಯೇಸು ದೇವರ ಪುತ್ರರಾಗಿದ್ದಾರೆಂದು ಯಾರು ಒಪ್ಪಿಕೊಳ್ಳುತ್ತಾರೋ, ಅವರಲ್ಲಿ ದೇವರು ಬಾಳುತ್ತಾರೆ ಮತ್ತು ಅವರು ದೇವರಲ್ಲಿ ಬಾಳುವವರಾಗಿದ್ದಾರೆ.


ಯೇಸುವೇ ಕ್ರಿಸ್ತ ಎಂದು ನಂಬುವ ಪ್ರತಿಯೊಬ್ಬರೂ ದೇವರಿಂದ ಹುಟ್ಟಿದವರಾಗಿದ್ದಾರೆ. ತಂದೆಯನ್ನು ಪ್ರೀತಿಸುವ ಪ್ರತಿಯೊಬ್ಬರು ದೇವರಿಂದ ಹುಟ್ಟಿದವರನ್ನು ಸಹ ಪ್ರೀತಿಸುತ್ತಾರೆ.


ಆಕೆಯು ಯೇಸುವಿಗೆ, “ಹೌದು, ಸ್ವಾಮೀ, ಲೋಕಕ್ಕೆ ಬರಬೇಕಾಗಿದ್ದ ದೇವರ ಪುತ್ರನಾದ ಕ್ರಿಸ್ತನು ನೀವೇ ಎಂದು ನಾನು ನಂಬಿದ್ದೇನೆ,” ಎಂದಳು.


ಯೇಸು ಅವರಿಗೆ, “ಆದರೆ ನೀವು ನನ್ನನ್ನು ಯಾರೆನ್ನುತ್ತೀರಿ?” ಎಂದು ಕೇಳಿದರು. ಆಗ ಪೇತ್ರನು, “ನೀವು ದೇವರು ಕಳುಹಿಸಿಕೊಟ್ಟ ಕ್ರಿಸ್ತನು,” ಎಂದು ಹೇಳಿದನು.


ತಡಮಾಡದೆ, ಯೇಸುವೇ “ದೇವಪುತ್ರ” ಎಂದು ಸಭಾಮಂದಿರಗಳಲ್ಲಿ ಸಾರಲು ಪ್ರಾರಂಭಿಸಿದನು.


ಜನರು ಆ ಸ್ತ್ರೀಗೆ, “ನಾವು ಇನ್ನು ಮುಂದೆ ನಂಬುವುದು ನಿನ್ನ ಮಾತಿನಿಂದಲ್ಲ. ಏಕೆಂದರೆ ನಾವೇ ಸ್ವತಃ ಕೇಳಿದ್ದೇವೆ. ಈತನು ನಿಜವಾಗಿಯೂ ಲೋಕ ರಕ್ಷಕನೆಂದು ತಿಳಿದಿದ್ದೇವೆ,” ಎಂದರು.


ಈಗ ನಂಬುವವರಾದ ನಿಮಗೆ ಈ ಕಲ್ಲು ಅಮೂಲ್ಯವಾದುದು. ನಂಬದವರಿಗಾದರೋ, “ಮನೆ ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು,”


ನೀವು ದೇವರ ಪರಿಶುದ್ಧರು ಎಂದು ನಾವು ನಂಬಿ ತಿಳಿದಿದ್ದೇವೆ,” ಎಂದನು.


ಮಾರ್ಗದಲ್ಲಿ ಅವರು ಮುಂದೆ ಪ್ರಯಾಣ ಮಾಡುತ್ತಿದ್ದಾಗ, ನೀರಿದ್ದ ಸ್ಥಳಕ್ಕೆ ಬಂದರು. ಆಗ ಕಂಚುಕಿ, “ಇಗೋ ಇಲ್ಲಿ ನೀರಿದೆ. ನನಗೆ ಏಕೆ ದೀಕ್ಷಾಸ್ನಾನ ಕೊಡಬಾರದು?” ಎಂದನು.


ಅದಕ್ಕೆ ಯೇಸು, “ದೇವರ ರಾಜ್ಯದ ರಹಸ್ಯವನ್ನು ತಿಳಿದುಕೊಳ್ಳುವ ಜ್ಞಾನ ನಿಮಗೆ ಕೊಡಲಾಗಿದೆ. ಆದರೆ ಹೊರಗಿನವರಿಗೆ ಎಲ್ಲವೂ ಸಾಮ್ಯದ ರೂಪದಲ್ಲಿ ಹೇಳಲಾಗಿದೆ.


ಸೀಮೋನ್ ಪೇತ್ರನು ಯೇಸುವಿಗೆ, “ಸ್ವಾಮೀ, ನಾವು ಯಾರ ಬಳಿಗೆ ಹೋಗೋಣ? ನಿಮ್ಮಲ್ಲಿಯೇ ನಿತ್ಯಜೀವದ ವಾಕ್ಯಗಳಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು