ಮಾರ್ಕ 8:31 - ಕನ್ನಡ ಸಮಕಾಲಿಕ ಅನುವಾದ31 ಮನುಷ್ಯಪುತ್ರನಾದ ನಾನು ಅನೇಕ ಬಾಧೆಗಳನ್ನು ಅನುಭವಿಸಿ, ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ನಿಯಮ ಬೋಧಕರಿಂದಲೂ ತಿರಸ್ಕೃತನಾಗಿ ಕೊಲೆಗೆ ಗುರಿಯಾಗಿ ಮೂರು ದಿವಸಗಳಾದ ಮೇಲೆ ಜೀವಂತವಾಗಿ ಎದ್ದು ಬರುವುದು ಅವಶ್ಯ ಎಂದು ಅವರಿಗೆ ಬೋಧಿಸಲಾರಂಭಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಇದಲ್ಲದೆ ಆತನು, ಮನುಷ್ಯಕುಮಾರನು ಬಹು ಕಷ್ಟಗಳನ್ನು ಅನುಭವಿಸಿ ಹಿರಿಯರಿಂದಲೂ, ಮುಖ್ಯಯಾಜಕರಿಂದಲೂ, ಶಾಸ್ತ್ರಿಗಳಿಂದಲೂ ತಿರಸ್ಕರಿಸಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರು ದಿನಗಳ ನಂತರ ಜೀವಿತನಾಗಿ ಎದ್ದು ಬರಬೇಕಾಗಿದೆ ಎಂದು ಉಪದೇಶಮಾಡುವುದಕ್ಕೆ ಪ್ರಾರಂಭಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಈ ಘಟನೆಯ ಬಳಿಕ ಯೇಸುಸ್ವಾಮಿ, “ನರಪುತ್ರನು ಕಠಿಣವಾದ ಯಾತನೆಯನ್ನು ಅನುಭವಿಸಬೇಕಾಗಿದೆ. ಸಭಾಪ್ರಮುಖರಿಂದಲೂ ಪ್ರಧಾನ ಯಾಜಕರಿಂದಲೂ ಧರ್ಮಶಾಸ್ತ್ರಿಗಳಿಂದಲೂ ಆತನು ತಿರಸ್ಕೃತನಾಗಿ ಕೊಲ್ಲಲ್ಪಡುವನು; ಆದರೆ ಮೂರನೇ ದಿನ ಪುನರುತ್ಥಾನ ಹೊಂದುವನು,” ಎಂದು ತಮ್ಮ ಶಿಷ್ಯರಿಗೆ ಮುಚ್ಚುಮರೆಯಿಲ್ಲದೆ ಬೋಧಿಸಲಾರಂಭಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಇದಲ್ಲದೆ ಆತನು - ಮನುಷ್ಯಕುಮಾರನು ಬಹು ಕಷ್ಟಗಳನ್ನನುಭವಿಸಿ ಹಿರಿಯರಿಂದಲೂ ಮಹಾಯಾಜಕರಿಂದಲೂ ಶಾಸ್ತ್ರಿಗಳಿಂದಲೂ ನಿರಾಕೃತವಾಗಿ ಕೊಲ್ಲಲ್ಪಟ್ಟು ಮೂರು ದಿನದ ಮೇಲೆ ಜೀವಿತನಾಗಿ ಎದ್ದು ಬರಬೇಕಾಗಿದೆ ಎಂದು ಉಪದೇಶಮಾಡುವದಕ್ಕೆ ಪ್ರಾರಂಭಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ನಂತರ ಯೇಸು ತನ್ನ ಶಿಷ್ಯರಿಗೆ ಉಪದೇಶಿಸುತ್ತಾ “ಮನುಷ್ಯಕುಮಾರನು ಅನೇಕ ಕಷ್ಟಗಳನ್ನು ಅನುಭವಿಸಬೇಕಾಗುತ್ತದೆ. ಹಿರಿಯ ಯೆಹೂದ್ಯನಾಯಕರು, ಮಹಾಯಾಜಕರು ಮತ್ತು ಧರ್ಮೋಪದೇಶಕರು ಆತನನ್ನು ತಿರಸ್ಕರಿಸಿ ಕೊಲ್ಲುವರು. ಆದರೆ ಮೂರನೆಯ ದಿನದಲ್ಲಿ ಆತನು ಸತ್ತವರೊಳಗಿಂದ ಜೀವಂತವಾಗಿ ಎದ್ದುಬರುತ್ತಾನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್31 ತನ್ನಾ ಜೆಜುನ್ ಅಪ್ಲ್ಯಾ ಶಿಸಾಕ್ನಿ "ಮಾನ್ಸಾಚ್ಯಾ ಲೆಕಾಕ್ ಕಸ್ಟ್ ಸೊಸುಕುಚ್ ಪಾಜೆ, ಜಾನ್ತ್ಯಾ ಲೊಕಾನಿ, ಮೊಟ್ಯಾ ಯಾಜಕಾನಿ ಅನಿ ಶಾಸ್ತರಾ ಶಿಕ್ವುತಲ್ಯಾನಿ ತೆಕಾ ತಿರಸ್ಕಾರ್ ಕರುಕುಚ್ ಪಾಜೆ. ಅನಿ ತೊ ಮರುಕ್ ಪಾಜೆ, ಖರೆ, ತೊ ತಿನ್ವ್ಯಾ ದಿಸಿ ಮರಲ್ಲ್ಯಾತ್ನಾ ಝಿತ್ತೊ ಹೊವ್ನ್ ಉಟುನ್ ಯೆತಾ."ಮನುನ್ ಸಾಂಗುಕ್ಲಾಗ್ಲೊ. ಅಧ್ಯಾಯವನ್ನು ನೋಡಿ |