Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 9:10 - ಕನ್ನಡ ಸಮಕಾಲಿಕ ಅನುವಾದ

10 “ಸತ್ತವರೊಳಗಿಂದ ಎದ್ದು ಬರುವುದೆಂದರೆ ಏನು?” ಅವರು ಒಬ್ಬರಿಗೊಬ್ಬರು ಆ ಮಾತನ್ನು ತಮ್ಮತಮ್ಮೊಳಗೆ ಚರ್ಚಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವರು ಆ ಮಾತನ್ನು ಮನಸ್ಸಿನಲ್ಲಿಟ್ಟುಕೊಂಡರು “ಸತ್ತು ಜೀವಿತನಾಗಿ ಏಳುವುದೆಂದರೇನು” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅಂತೆಯೇ ಶಿಷ್ಯರು ಇದನ್ನು ಯಾರಿಗೂ ಹೇಳಲಿಲ್ಲ; ಆದರೂ ‘ಸತ್ತು ಪುನರುತ್ಥಾನ ಹೊಂದುವುದು’ ಎಂದರೆ ಏನು? ಎಂದು ತಮ್ಮತಮ್ಮೊಳಗೆ ಚರ್ಚಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅವರು ಈ ಮಾತನ್ನು ಹಿಡಿದು ಸತ್ತುಜೀವಿತನಾಗಿ ಏಳುವದಂದರೇನು ಎಂದು ತಮ್ಮ ತಮ್ಮೊಳಗೆ ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆದ್ದರಿಂದ ಆ ಶಿಷ್ಯರು ಈ ಸಂಗತಿಗಳನ್ನು ಯಾರಿಗೂ ತಿಳಿಸಲಿಲ್ಲ. ಆದರೆ “ಸತ್ತು ಜೀವಂತವಾಗಿ ಎದ್ದುಬರುವುದು” ಎಂದರೇನು? ಎಂದು ತಮ್ಮತಮ್ಮಲ್ಲಿಯೇ ಚರ್ಚಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ತೆನಿ ಜೆಜುಚ್ಯಾ ಹ್ಯಾ ಗೊಸ್ಟಿಕ್ ಖಾಲ್ತಿ ಹೊಲ್ಯಾನಿ, “ಖರೆ ಮರುನ್ ಅನಿ ಝಿತ್ತೆ ಹೊತಲೆ, ಮಟ್ಲ್ಯಾರ್ ಕಾಯ್?” ಮನುನ್ ಅಪ್ನಾಚ್ಯಾ ಮದ್ದಿಚ್ ಬೊಲುನ್ ಘೆವ್ಕ್‌ಲಾಗ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 9:10
15 ತಿಳಿವುಗಳ ಹೋಲಿಕೆ  

ಆದರೆ ಎಪಿಕೂರಿಯರು ಹಾಗೂ ಸ್ತೋಯಿಕರು ಎಂಬ ತತ್ವಜ್ಞಾನಿಗಳಲ್ಲಿ ಸಹ ಕೆಲವರು ಅವನೊಂದಿಗೆ ವಾಗ್ವಾದ ಮಾಡಲು ಪ್ರಾರಂಭಿಸಿ, “ಈ ಬಾಯಿಬಡುಕ ಏನು ಹೇಳಬೇಕೆಂದಿದ್ದಾನೆ?” ಎಂದರು. ಇನ್ನೂ ಕೆಲವರು, “ಅವನು ವಿದೇಶದ ದೇವರುಗಳ ಬಗ್ಗೆ ಪ್ರಸ್ತಾಪಿಸುವಂತೆ ತೋರುತ್ತದೆ,” ಎಂದರು. ಏಕೆಂದರೆ ಅವನು ಯೇಸುವನ್ನು ಮತ್ತು ಪುನರುತ್ಥಾನವನ್ನು ಕುರಿತ ಸುವಾರ್ತೆ ಸಾರುತ್ತಿದ್ದನು.


ಇವುಗಳನ್ನು ಯೇಸುವಿನ ಶಿಷ್ಯರು ಮೊದಲು ತಿಳಿದಿರಲಿಲ್ಲ. ಆದರೆ ಯೇಸು ಮಹಿಮೆ ಹೊಂದಿದಾಗ ಪವಿತ್ರ ವೇದದಲ್ಲಿ ಅವರ ವಿಷಯವಾಗಿ ಬರೆದಿರುವಂತೆಯೇ, ಇವುಗಳನ್ನು ಜನರು ಅವರಿಗೆ ಮಾಡಿದರೆಂದು ಗ್ರಹಿಸಿದರು.


ಆದರೆ ಅವರಲ್ಲಿ ಆ ಮಾತನ್ನು ಯಾರೂ ಗ್ರಹಿಸಲಿಲ್ಲ. ಯೇಸುವನ್ನು ಕೇಳುವುದಕ್ಕೂ ಭಯಪಟ್ಟರು.


ಆಗ ಪೇತ್ರನು ಯೇಸುವಿನ ಕೈಹಿಡಿದು, “ಹಾಗೆ ಆಗಬಾರದು ಸ್ವಾಮೀ! ಅದು ನಿಮಗೆ ಎಂದಿಗೂ ಸಂಭವಿಸಬಾರದು!” ಎಂದು ಹೇಳಿ ಯೇಸುವನ್ನು ಗದರಿಸಲಾರಂಭಿಸಿದನು.


ಹೀಗೆ ಅವನ ಸಹೋದರರು ಅವನ ಮೇಲೆ ಹೊಟ್ಟೆಕಿಚ್ಚುಪಟ್ಟರು. ಆದರೆ ಅವನ ತಂದೆ ಆ ಮಾತನ್ನು ಮನಸ್ಸಿನಲ್ಲಿ ಇಟ್ಟುಕೊಂಡನು.


ಬೆಟ್ಟದಿಂದ ಇಳಿದು ಬರುತ್ತಿದ್ದಾಗ, ಮನುಷ್ಯಪುತ್ರರಾದ ತಾವು ಸತ್ತವರೊಳಗಿಂದ ಎದ್ದು ಬರುವವರೆಗೆ ಅವರು ಕಂಡದ್ದನ್ನು ಯಾರಿಗೂ ಹೇಳಬಾರದೆಂದು ಯೇಸು ಆಜ್ಞಾಪಿಸಿದರು.


ಇದಲ್ಲದೆ ಅವರು ಯೇಸುವಿಗೆ, “ಎಲೀಯನು ಮೊದಲು ಬರುವುದು ಅಗತ್ಯವೆಂದು ನಿಯಮ ಬೋಧಕರು ಏಕೆ ಹೇಳುತ್ತಾರೆ?” ಎಂದು ಕೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು