Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 9:19 - ಕನ್ನಡ ಸಮಕಾಲಿಕ ಅನುವಾದ

19 ಆಗ ಯೇಸು ಅವರಿಗೆ, “ವಿಶ್ವಾಸವಿಲ್ಲದ ಸಂತಾನವೇ, ಎಷ್ಟು ಕಾಲ ನಾನು ನಿಮ್ಮೊಂದಿಗಿರಲಿ? ಎಷ್ಟು ಕಾಲ ನಾನು ನಿಮ್ಮನ್ನು ಸಹಿಸಲಿ? ಅವನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿರಿ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅದಕ್ಕಾತನು, “ಎಲಾ, ಅಪನಂಬಿಕೆಯುಳ್ಳಂಥ ಸಂತಾನವೇ, ನಾನು ಇನ್ನೆಷ್ಟು ದಿನ ನಿಮ್ಮ ಸಂಗಡ ಇರಲಿ! ಇನ್ನೆಷ್ಟು ದಿನ ನಿಮ್ಮನ್ನು ಸಹಿಸಿಕೊಳ್ಳಲಿ? ಅವನನ್ನು ನನ್ನ ಬಳಿಗೆ ತೆಗೆದುಕೊಂಡು ಬನ್ನಿರಿ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಇದನ್ನು ಕೇಳಿ ಯೇಸು, “ಅಯ್ಯೋ, ವಿಶ್ವಾಸವಿಲ್ಲದ ಪೀಳಿಗೆಯೇ, ಇನ್ನೆಷ್ಟು ಕಾಲ ನಿಮ್ಮೊಂದಿಗಿರಲಿ! ಇನ್ನೆಷ್ಟು ಕಾಲ ನಿಮ್ಮನ್ನು ಸಹಿಸಿಕೊಳ್ಳಲಿ! ಅವನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅದಕ್ಕಾತನು - ಎಲಾ, ನಂಬಿಕೆಯಿಲ್ಲದಂಥ ಸಂತಾನವೇ, ನಾನು ಇನ್ನೆಷ್ಟು ದಿನ ನಿಮ್ಮ ಸಂಗಡ ಇರಲಿ? ಇನ್ನೆಷ್ಟು ದಿನ ನಿಮ್ಮನ್ನು ಸಹಿಸಿಕೊಳ್ಳಲಿ? ಅವನನ್ನು ನನ್ನ ಬಳಿಗೆ ತೆಗೆದುಕೊಂಡು ಬನ್ನಿರಿ, ಅನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಯೇಸು, “ವಿಶ್ವಾಸವಿಲ್ಲದ ಸಂತಾನವೇ, ನಾನು ನಿಮ್ಮೊಡನೆ ಇನ್ನೆಷ್ಟು ಕಾಲ ಇರಲಿ? ಇನ್ನೆಷ್ಟು ಕಾಲ ಸಹಿಸಿಕೊಳ್ಳಲಿ? ಆ ಹುಡುಗನನ್ನು ನನ್ನ ಬಳಿಗೆ ತನ್ನಿರಿ!” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ತನ್ನಾ ಜೆಜುನ್ ಶಿಸಾಕ್ನಿ“ತುಮ್ಕಾ ವಿಶ್ವಾಸುಚ್ ನಾ! ಅಜುನ್‍ಬಿ ಕವ್ಡೊ ಎಳ್ ಮಿಯಾ ತುಮ್ಚ್ಯಾ ವಾಂಗ್ಡಾ ರ್‍ಹವ್ಚೆ? ಮಿಯಾ ಕವ್ಡೊ ಎಳ್ ತುಮ್ಕಾ ಸೊಸುನ್ ಘೆವ್ನ್ ಜವ್ಚೆ? ತ್ಯಾ ಪೊರಾಕ್ ಮಾಜೆಕ್ಡೆ ಘೆವ್ನ್ ಯೆವಾ!” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 9:19
17 ತಿಳಿವುಗಳ ಹೋಲಿಕೆ  

ಆಗ ಯೆಹೋವ ದೇವರು ಮೋಶೆಗೆ, “ಈ ಜನರು ಎಷ್ಟರವರೆಗೆ ನನಗೆ ಕೋಪವನ್ನೆಬ್ಬಿಸುವರು? ನಾನು ಅವರ ಮಧ್ಯದಲ್ಲಿ ಮಾಡಿದ ಸಕಲ ಸೂಚಕಕಾರ್ಯಗಳನ್ನು ಕಣ್ಣಾರೆ ನೋಡಿಯೂ ನನ್ನನ್ನು ಎಷ್ಟು ಮಾತ್ರಕ್ಕು ನಂಬದೆ ಇರುವರು?


ಆಮೇಲೆ ಯೇಸು ತೋಮನಿಗೆ, “ನಿನ್ನ ಬೆರಳನ್ನು ಇಲ್ಲಿ ಇಡು. ನನ್ನ ಕೈಗಳನ್ನು ನೋಡು, ನಿನ್ನ ಕೈಚಾಚಿ ನನ್ನ ಪಕ್ಕೆಯಲ್ಲಿ ಇಡು. ನಂಬದವನಾಗಿರಬೇಡ, ನಂಬುವವನಾಗಿರು,” ಎಂದರು.


ತರುವಾಯ ಊಟಕ್ಕೆ ಕುಳಿತಿದ್ದ ಹನ್ನೊಂದು ಮಂದಿಗೆ ಯೇಸು ಕಾಣಿಸಿಕೊಂಡರು. ತಾವು ಜೀವಿತರಾಗಿ ಎದ್ದು ಬಂದ ಮೇಲೆ ತಮ್ಮನ್ನು ಕಂಡವರ ಮಾತನ್ನು ಅವರು ನಂಬದಿದ್ದ ಕಾರಣ ಅವರ ಅಪನಂಬಿಕೆಯನ್ನೂ ಹೃದಯದ ಕಾಠಿಣ್ಯವನ್ನೂ ಯೇಸು ಗದರಿಸಿದರು.


“ಈ ದುಷ್ಟಜನರು ನನಗೆ ವಿರೋಧವಾಗಿ ಗೊಣಗುಟ್ಟುವುದನ್ನು ನಾನು ಎಷ್ಟು ಕಾಲ ಸಹಿಸಲಿ? ಇಸ್ರಾಯೇಲರು ನನಗೆ ವಿರೋಧವಾಗಿ ಗೊಣಗುಟ್ಟಿದ್ದನ್ನು ನಾನು ಕೇಳಿದ್ದೇನೆ.


ಆಗ ಯೇಸು ಅವರಿಗೆ, “ಎಂಥ ಬುದ್ಧಿಹೀನರು ನೀವು, ಪ್ರವಾದಿಗಳು ಹೇಳಿದ್ದೆಲ್ಲವನ್ನು ನಂಬುವುದರಲ್ಲಿ ಮಂದ ಹೃದಯದವರೇ!


ಯೇಸು, “ವಿಶ್ವಾಸವಿಲ್ಲದ ಮೂರ್ಖ ಸಂತತಿಯೇ, ಎಷ್ಟು ಕಾಲ ನಾನು ನಿಮ್ಮೊಂದಿಗಿರಲಿ? ಎಷ್ಟು ಕಾಲ ನಿಮ್ಮನ್ನು ಸಹಿಸಲಿ?” ಎಂದು ಹೇಳಿ, “ನಿನ್ನ ಮಗನನ್ನು ಇಲ್ಲಿಗೆ ಕರೆದುಕೊಂಡು ಬಾ,” ಎಂದರು.


ಆಗ ಯೇಸು, “ವಿಶ್ವಾಸವಿಲ್ಲದ ಮೂರ್ಖ ಸಂತತಿಯೇ, ಇನ್ನೂ ಎಷ್ಟು ಕಾಲ ನಾನು ನಿಮ್ಮೊಂದಿಗಿರಲಿ? ಎಷ್ಟು ಕಾಲ ನಾನು ನಿಮ್ಮನ್ನು ಸಹಿಸಲಿ? ಅವನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿರಿ,” ಎಂದು ಹೇಳಿದರು.


ದೇವರು, “ನನ್ನ ಮುಖವನ್ನು ಅವರಿಗೆ ಮರೆಮಾಡುವೆನು, ಅವರ ಅಂತ್ಯವು ಏನೆಂದು ನೋಡುವೆನು. ಅವರು ಮೂರ್ಖ ಸಂತತಿಯೇ. ನಂಬಿಕೆಯಿಲ್ಲದ ಮಕ್ಕಳೇ.


ಏಕೆಂದರೆ ನನ್ನ ಮಹಿಮೆಯನ್ನೂ, ಈಜಿಪ್ಟ್ ದೇಶದಲ್ಲಿಯೂ, ಮರುಭೂಮಿಯಲ್ಲಿಯೂ ನಾನು ಮಾಡಿದ ಸೂಚಕಕಾರ್ಯಗಳನ್ನೂ ನೋಡಿದ ಈ ಸಕಲ ಜನರು, ನನ್ನನ್ನು ಈಗ ಹತ್ತು ಸಾರಿ ಪರೀಕ್ಷಿಸಿ, ನನ್ನ ಮಾತನ್ನು ಕೇಳದೆ ಹೋದದ್ದರಿಂದ,


“ಈಗ ನನ್ನ ಪ್ರಾಣವು ತತ್ತರಿಸುತ್ತದೆ. ನಾನೇನು ಹೇಳಲಿ? ‘ತಂದೆಯೇ, ಈ ಗಳಿಗೆಯಿಂದ ನನ್ನನ್ನು ತಪ್ಪಿಸಿರಿ’ ಎಂದು ಹೇಳಲೋ? ಇಲ್ಲ. ನಾನು ಈ ಗಳಿಗೆಗಾಗಿಯೇ ಬಂದಿದ್ದೇನಲ್ಲಾ?


ಏಕೆಂದರೆ ಅವರು ದೇವರಲ್ಲಿ ನಂಬಿಕೆ ಇಡಲಿಲ್ಲ. ದೇವರ ರಕ್ಷಣೆಯಲ್ಲಿ ಭರವಸೆ ಇಡಲಿಲ್ಲ.


ಅಶುದ್ಧಾತ್ಮವು ಅವನನ್ನು ಹಿಡಿದುಕೊಂಡಾಗಲೆಲ್ಲಾ ಅವನನ್ನು ಒದ್ದಾಡಿಸುತ್ತದೆ. ಅವನು ನೊರೆ ಕಾರುತ್ತಾ ತನ್ನ ಹಲ್ಲು ಕಡಿದು ಸೆಟೆದುಕೊಂಡು ಬೀಳುತ್ತಾನೆ. ಅದನ್ನು ಬಿಡಿಸಬೇಕೆಂದು ನಾನು ನಿನ್ನ ಶಿಷ್ಯರಿಗೆ ಹೇಳಿದೆನು. ಆದರೆ ಅದು ಅವರಿಂದ ಆಗಲಿಲ್ಲ,” ಎಂದು ಹೇಳಿದನು.


ಅವರು ಅವನನ್ನು ಯೇಸುವಿನ ಬಳಿಗೆ ತಂದರು. ಯೇಸುವನ್ನು ನೋಡಿದ ತಕ್ಷಣವೇ ಆ ದೆವ್ವವು ಆ ಬಾಲಕನನ್ನು ಒದ್ದಾಡಿಸಿದ್ದರಿಂದ ಅವನು ನೆಲಕ್ಕೆ ಬಿದ್ದು ನೊರೆ ಕಾರುತ್ತಾ ಹೊರಳಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು