ಮಾರ್ಕ 9:2 - ಕನ್ನಡ ಸಮಕಾಲಿಕ ಅನುವಾದ2 ಯೇಸು ಆರು ದಿನಗಳಾದ ಮೇಲೆ ಪೇತ್ರ, ಯಾಕೋಬ, ಯೋಹಾನನನ್ನೂ ತಮ್ಮೊಂದಿಗೆ ಕರೆದುಕೊಂಡು ಏಕಾಂತವಾಗಿ ಒಂದು ಎತ್ತರವಾದ ಬೆಟ್ಟಕ್ಕೆ ಹೋದರು. ಅಲ್ಲಿ ಯೇಸು ಅವರ ಮುಂದೆ ರೂಪಾಂತರಗೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆರು ದಿನಗಳಾದ ಮೇಲೆ ಯೇಸು ಪೇತ್ರ, ಯಾಕೋಬ, ಯೋಹಾನ ಇವರನ್ನು ಮಾತ್ರ ತನ್ನೊಡನೆ ಕರೆದುಕೊಂಡು ಎತ್ತರವಾದ ಬೆಟ್ಟಕ್ಕೆ ಹೋದನು. ಅಲ್ಲಿ ಅವರ ಕಣ್ಣೆದುರಿಗೇ ಯೇಸುವು ರೂಪಾಂತರಗೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಆರು ದಿನಗಳ ಬಳಿಕ ಪೇತ್ರ, ಯಕೋಬ ಮತ್ತು ಯೊವಾನ್ನ ಇವರನ್ನು ಮಾತ್ರ ತಮ್ಮೊಡನೆ ಕರೆದುಕೊಂಡು ಯೇಸುಸ್ವಾಮಿ ಎತ್ತರವಾದ ಒಂದು ಬೆಟ್ಟಕ್ಕೆ ಹೋದರು. ಅಲ್ಲಿ ಆ ಶಿಷ್ಯರ ಕಣ್ಣೆದುರಿಗೇ ಯೇಸು ರೂಪಾಂತರ ಹೊಂದಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಆರು ದಿವಸಗಳಾದ ಮೇಲೆ ಯೇಸು ಪೇತ್ರ ಯಾಕೋಬ ಯೋಹಾನರನ್ನು ಮಾತ್ರ ವಿಂಗಡವಾಗಿ ಕರಕೊಂಡು ಎತ್ತರವಾದ ಬೆಟ್ಟಕ್ಕೆ ಹೋದನು. ಅಲ್ಲಿ ಅವರ ಕಣ್ಣ ಮುಂದೆ ಆತನ ರೂಪ ಬೇರೆಯಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಆರು ದಿನಗಳ ನಂತರ ಪೇತ್ರ, ಯಾಕೋಬ ಮತ್ತು ಯೋಹಾನರನ್ನು ಕರೆದುಕೊಂಡು ಯೇಸು ಎತ್ತರವಾದ ಬೆಟ್ಟದ ಮೇಲೆ ಹೋದನು. ಅಲ್ಲಿ ಅವರು ಮಾತ್ರ ಇದ್ದರು. ಈ ಶಿಷ್ಯರು ಯೇಸುವನ್ನು ನೋಡುತ್ತಿರಲು, ಇದ್ದಕ್ಕಿದ್ದಂತೆ ಆತನು ರೂಪಾಂತರ ಹೊಂದಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ಸಾ ದಿಸ್ ಹೊಲ್ಲ್ಯಾ ಮಾನಾ, ಜೆಜು ಪೆದ್ರುಕ್, ಜಾಕೊಬಾಕ್ ಅನಿ ಜುವಾಂವಾಕ್ ಬಲ್ವುನ್ ಘೆವ್ನ್, ಎಕ್ ಮಡ್ಡಿ ವರ್‍ತಿ ಗೆಲೊ. ಥೈ ತೆನಿ ಎವ್ಡೆಚ್ ಹೊತ್ತೆ. ತೆನಿ ಜೆಜು ವರ್‍ತಿ ನದರ್ ಮಾರುನ್ ಬಗಟಲ್ಲ್ಯಾನಿ ತನ್ನಾ ತೆಚೆ ವರ್‍ತಿ ಹೊಲ್ಲಿ ಬದ್ಲಾವನ್ ತೆಂಕಾ ದಿಸ್ಲಿ. ಅಧ್ಯಾಯವನ್ನು ನೋಡಿ |