Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 9:21 - ಕನ್ನಡ ಸಮಕಾಲಿಕ ಅನುವಾದ

21 ಯೇಸು ಅವನ ತಂದೆಗೆ, “ಇದು ಇವನನ್ನು ಹಿಡಿದು ಎಷ್ಟು ಕಾಲವಾಯಿತು?” ಎಂದು ಕೇಳಲು, ಅವನು, “ಬಾಲ್ಯದಿಂದಲೇ ಹೀಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಯೇಸು ಅವನ ತಂದೆಯನ್ನು, “ಇವನಿಗೆ ಹೀಗಾಗಿ ಎಷ್ಟು ಕಾಲವಾಯಿತು?” ಎಂದು ಕೇಳಿದಾಗ ಅವನು, “ಚಿಕ್ಕಂದಿನಲ್ಲಿಯೇ ಬಂದಿದೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಯೇಸು, “ಇವನಿಗೆ ಎಷ್ಟು ದಿನದಿಂದ ಹೀಗಾಗುತ್ತಿದೆ?” ಎಂದು ಹುಡುಗನ ತಂದೆಯನ್ನು ವಿಚಾರಿಸಿದರು. ಅದಕ್ಕೆ ಅವನು “ಬಾಲ್ಯದಿಂದಲೇ ಹೀಗಾಗುತ್ತಿದೆ; ಇದಲ್ಲದೆ ದೆವ್ವವು ಇವನನ್ನು ಕೊಲ್ಲಬೇಕೆಂದು ಪದೇಪದೇ ಬೆಂಕಿಗೂ ನೀರಿಗೂ ದೂಡಿದೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಯೇಸು ಅವನ ತಂದೆಯನ್ನು - ಇದು ಇವನಿಗೆ ಬಂದು ಎಷ್ಟು ದಿನವಾಯಿತು ಎಂದು ಕೇಳಿದಾಗ ಅವನು - ಚಿಕ್ಕಂದಿನಲ್ಲಿಯೇ ಬಂದಿದೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಯೇಸು, “ಎಷ್ಟು ಕಾಲದಿಂದ ಹೀಗಾಗುತ್ತಿದೆ?” ಎಂದು ಆ ಹುಡುಗನ ತಂದೆಯನ್ನು ಕೇಳಿದನು. ಅದಕ್ಕೆ ತಂದೆಯು, “ಬಾಲ್ಯದಿಂದಲೇ ಹೀಗಾಗುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 “ಹೆಕಾ ಕನ್ನಾಚ್ಯಾನ್ ಅಶೆ ಹೊವ್ಲಾ?” ಮನುನ್ ಜೆಜುನ್ ತ್ಯಾ ಪೊರಾಂಚ್ಯಾ ಬಾಬಾಕ್ ಇಚಾರ್‍ಲ್ಯಾನ್. ತೆನಿ “ತೊ ಬಾರಿಕ್ ಹೊತ್ತೊ ತನ್ನಾಚ್ಯಾನುಚ್ ತೆಕಾ ಅಶೆ ಹೊವ್ಲಾ,” ಮನುನ್ ಸಾಂಗುನ್

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 9:21
15 ತಿಳಿವುಗಳ ಹೋಲಿಕೆ  

ಅಲ್ಲಿ ಐನೇಯ ಎಂಬ ಹೆಸರಿನ ಒಬ್ಬಾತನನ್ನು ಸಂದರ್ಶಿಸಿದನು. ಅವನು ಪಾರ್ಶ್ವವಾಯು ರೋಗ ಪೀಡಿತನಾಗಿ ಎಂಟು ವರ್ಷಗಳಿಂದ ಹಾಸಿಗೆ ಹಿಡಿದಿದ್ದನು.


ಲುಸ್ತ್ರದಲ್ಲಿ ಒಬ್ಬ ಕುಂಟನಿದ್ದನು. ಅವನು ಹುಟ್ಟು ಕುಂಟನಾಗಿದ್ದುದರಿಂದ ಅವನೆಂದೂ ನಡೆದಾಡಿರಲಿಲ್ಲ.


ಅದ್ಭುತ ರೀತಿಯಲ್ಲಿ ಸ್ವಸ್ಥತೆ ಹೊಂದಿದ ಆ ಮನುಷ್ಯನು ನಾಲ್ವತ್ತಕ್ಕಿಂತಲೂ ಹೆಚ್ಚು ವರ್ಷ ವಯಸ್ಸಿನವನಾಗಿದ್ದನು.


ದೇವಾಲಯದೊಳಗೆ ಹೋಗುವವರಿಂದ ಭಿಕ್ಷೆ ಬೇಡಲು ಪ್ರತಿದಿನ “ಸುಂದರದ್ವಾರ” ಎಂದು ಕರೆಯಲಾಗುತ್ತಿದ್ದ ದೇವಾಲಯದ ದ್ವಾರದ ಬಳಿಯಲ್ಲಿ ಹುಟ್ಟುಕುಂಟನೊಬ್ಬನನ್ನು ಕೆಲವರು ಹೊತ್ತುಕೊಂಡು ಬಂದು ಬಿಡುತ್ತಿದ್ದರು.


ಯೇಸು ನಡೆದು ಹೋಗುತ್ತಿದ್ದಾಗ, ಹುಟ್ಟುಕುರುಡನಾಗಿದ್ದ ಒಬ್ಬ ಮನುಷ್ಯನನ್ನು ಕಂಡರು.


ಅಬ್ರಹಾಮನ ಮಗಳಾದ ಈ ಸ್ತ್ರೀಯನ್ನು ಹದಿನೆಂಟು ವರ್ಷಗಳಿಂದ ಸೈತಾನನು ಕಟ್ಟಿಹಾಕಿದ ಈ ಬಂಧನದಿಂದ ಸಬ್ಬತ್ ದಿನದಲ್ಲಿ ಬಿಡಿಸಬಾರದೇ?” ಎಂದರು.


ಹನ್ನೆರಡು ವರ್ಷಗಳಿಂದಲೂ ರಕ್ತಸ್ರಾವ ರೋಗದಿಂದ ನರಳುತ್ತಿದ್ದ ಒಬ್ಬ ಸ್ತ್ರೀ ಆ ಗುಂಪಿನಲ್ಲಿದ್ದಳು. ಅವಳು ತನ್ನ ಆಸ್ತಿಯನ್ನೆಲ್ಲಾ ವೆಚ್ಚಮಾಡಿದ್ದರೂ ಆಕೆಯನ್ನು ಗುಣಪಡಿಸಲು ಯಾರಿಂದಲೂ ಸಾಧ್ಯವಾಗಲಿಲ್ಲ.


ಹನ್ನೆರಡು ವರ್ಷಗಳಿಂದಲೂ ರಕ್ತಸ್ರಾವ ರೋಗದಿಂದ ನರಳುತ್ತಿದ್ದ ಒಬ್ಬ ಸ್ತ್ರೀ ಆ ಗುಂಪಿನಲ್ಲಿದ್ದಳು.


“ಸ್ತ್ರೀಯಿಂದ ಹುಟ್ಟಿದ ಮನುಷ್ಯನು ಅಲ್ಪಾಯುಷ್ಯನೂ, ಕಷ್ಟಸಂಕಟಗಳಿಂದ ತುಂಬಿದವನೂ ಆಗಿದ್ದಾನೆ.


ಆದರೂ ಕಿಡಿಗಳು ಹಾರುವ ಪ್ರಕಾರವೇ, ಮನುಷ್ಯನು ಶ್ರಮೆಹೊಂದಲು ಹುಟ್ಟುತ್ತಾನೆ.


ಹುಟ್ಟಿದಂದಿನಿಂದಲೇ ನಾನು ಪಾಪಿ. ನನ್ನ ತಾಯಿ ನನ್ನನ್ನು ಗರ್ಭಧರಿಸಿದಾಗಲೇ ನಾನು ಪಾಪಿಯೇ.


ಅವರು ಅವನನ್ನು ಯೇಸುವಿನ ಬಳಿಗೆ ತಂದರು. ಯೇಸುವನ್ನು ನೋಡಿದ ತಕ್ಷಣವೇ ಆ ದೆವ್ವವು ಆ ಬಾಲಕನನ್ನು ಒದ್ದಾಡಿಸಿದ್ದರಿಂದ ಅವನು ನೆಲಕ್ಕೆ ಬಿದ್ದು ನೊರೆ ಕಾರುತ್ತಾ ಹೊರಳಾಡಿದನು.


ಅಶುದ್ಧಾತ್ಮವು ಅವನನ್ನು ಕೊಲ್ಲಬೇಕೆಂದು ಅನೇಕ ಸಾರಿ ಬೆಂಕಿಯೊಳಗೂ ನೀರಿನೊಳಗೂ ಹಾಕಿತು. ಆದರೆ ನೀನು ಏನಾದರೂ ಮಾಡಲು ಸಾಧ್ಯವಿದ್ದರೆ, ಕನಿಕರಿಸಿ ನಮಗೆ ಸಹಾಯಮಾಡು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು