Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 9:27 - ಕನ್ನಡ ಸಮಕಾಲಿಕ ಅನುವಾದ

27 ಆದರೆ ಯೇಸು ಕೈಹಿಡಿದು ಅವನನ್ನು ಮೇಲಕ್ಕೆತ್ತಲು ಅವನು ಎದ್ದು ನಿಂತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆದರೆ ಯೇಸು ಅವನನ್ನು ಕೈಹಿಡಿದು ಎಬ್ಬಿಸಲು ಹುಡುಗನು ಎದ್ದು ನಿಂತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಆದರೆ ಯೇಸು ಅವನ ಕೈಹಿಡಿದು ಎತ್ತಲು ಅವನು ಎದ್ದುನಿಂತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆದರೆ ಯೇಸು ಅವನನ್ನು ಕೈಹಿಡಿದು ಎಬ್ಬಿಸಲು ಅವನು ಎದ್ದು ನಿಂತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಆದರೆ ಯೇಸು ಆ ಹುಡುಗನ ಕೈ ಹಿಡಿದೆತ್ತಿ, ಎದ್ದುನಿಲ್ಲಲು ಅವನಿಗೆ ಸಹಾಯಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಖರೆ ಜೆಜುನ್ ತ್ಯಾ ಝಿಲ್ಗ್ಯಾಕ್ ಹಾತ್ ಧರುನ್ ಉಟ್ವುಲ್ಯಾನ್, ತನ್ನಾ ತೊ ಝಿಲ್ಗೊ ಉಟುನ್ ಇಬೆ ರ್‍ಹಾಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 9:27
11 ತಿಳಿವುಗಳ ಹೋಲಿಕೆ  

ಬಲಗೈ ಹಿಡಿದೆಬ್ಬಿಸಿದಾಗ ಕೂಡಲೇ ಆ ಮನುಷ್ಯನ ಪಾದ ಮತ್ತು ಹರಡುಗಳು ಬಲಗೊಂಡವು.


ಯೇಸು ಆಕೆಯ ಬಳಿಗೆ ಬಂದು, ಕೈಹಿಡಿದು ಎಬ್ಬಿಸಿದರು. ಜ್ವರವು ಆಕೆಯನ್ನು ಬಿಟ್ಟುಹೋಯಿತು ಮತ್ತು ಆಕೆಯು ಅವರಿಗೆ ಉಪಚರಿಸಿದಳು.


ಪೇತ್ರನು ಆಕೆಯ ಕೈಯನ್ನು ಹಿಡಿದು ಆಕೆ ಎದ್ದು ನಿಂತುಕೊಳ್ಳುವಂತೆ ಮಾಡಿದನು. ಅನಂತರ ದೇವಭಕ್ತರನ್ನೂ ವಿಧವೆಯರನ್ನೂ ಕರೆದು ಜೀವಂತಳಾದ ಆಕೆಯನ್ನು ಅವರಿಗೆ ಒಪ್ಪಿಸಿಕೊಟ್ಟನು.


ಯೇಸು ಆ ಕುರುಡನ ಕೈಹಿಡಿದು ಊರ ಹೊರಗೆ ಕರೆದುಕೊಂಡು ಹೋಗಿ, ಅವನ ಕಣ್ಣುಗಳ ಮೇಲೆ ಉಗುಳಿ ಅವನ ಮೇಲೆ ತಮ್ಮ ಕೈಯಿಟ್ಟು, “ನಿನಗೆ ಏನಾದರೂ ಕಾಣುತ್ತದೋ?” ಎಂದು ಅವನನ್ನು ಕೇಳಿದರು.


ಯೇಸು ಆಕೆಯ ಕೈಹಿಡಿದು, “ತಲಿಥಾ ಕೂಮ್!” ಎಂದರು. ಅರಮೀಯ ಭಾಷೆಯಲ್ಲಿ ಇದರ ಅರ್ಥ, “ಚಿಕ್ಕ ಹುಡುಗಿಯೇ! ನಾನು ನಿನಗೆ ಹೇಳುತ್ತೇನೆ, ಎದ್ದೇಳು!” ಎಂಬುದು.


ಯೇಸು ಕನಿಕರಪಟ್ಟು, ತಮ್ಮ ಕೈಚಾಚಿ ಅವನನ್ನು ಮುಟ್ಟಿ, “ನನಗೆ ಮನಸ್ಸಿದೆ, ನೀನು ಶುದ್ಧನಾಗು,” ಎಂದರು.


ನೀನಂತೂ ಹೆದರಬೇಡ; ಏಕೆಂದರೆ ಯೆಹೋವ ದೇವರಾದ ನಾನೇ ನಿನಗೆ ಸಹಾಯ ಮಾಡುತ್ತೇನೆ, ನಿನ್ನ ದೇವರಾಗಿರುವ ನಾನೇ ನಿನ್ನ ಕೈಹಿಡಿಯುತ್ತೇನಲ್ಲಾ!


ಆದರೆ ಜನರನ್ನು ಹೊರಗೆ ಕಳುಹಿಸಿದ ಮೇಲೆ ಯೇಸು ಒಳಗೆ ಹೋಗಿ, ಬಾಲಕಿಯ ಕೈಯನ್ನು ಹಿಡಿದು ಎಬ್ಬಿಸಿದಾಗ ಬಾಲಕಿಯು ಎದ್ದಳು.


ಆಗ ಅಶುದ್ಧಾತ್ಮವು ಕೂಗಿ ಬಾಲಕನನ್ನು ಕ್ರೂರವಾಗಿ ಒದ್ದಾಡಿಸಿ ಅವನೊಳಗಿಂದ ಹೊರಗೆ ಬಂದಿತು. ಅವನು ಸತ್ತವನ ಹಾಗೆ ಬಿದ್ದಿದ್ದರಿಂದ ಅನೇಕರು, “ಅವನು ಸತ್ತಿದ್ದಾನೆ,” ಎಂದರು.


ಯೇಸು ಮನೆಯೊಳಕ್ಕೆ ಬಂದಾಗ, ಅವರ ಶಿಷ್ಯರು ಅವರಿಗೆ ಪ್ರತ್ಯೇಕವಾಗಿ, “ಆ ಅಶುದ್ಧಾತ್ಮವನ್ನು ಹೊರಗೆ ಹಾಕುವುದಕ್ಕೆ ನಮ್ಮಿಂದ ಏಕೆ ಆಗಲಿಲ್ಲ?” ಎಂದು ಕೇಳಿದರು.


ಸಹಸ್ರಾಧಿಪತಿಯು ಯುವಕನ ಕೈಹಿಡಿದು ಏಕಾಂತವಾಗಿ ಪಕ್ಕಕ್ಕೆ ಕರೆದು, “ನೀನು ನನಗೆ ಹೇಳಬೇಕಾದದ್ದು ಏನು?” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು