Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 9:28 - ಕನ್ನಡ ಸಮಕಾಲಿಕ ಅನುವಾದ

28 ಯೇಸು ಮನೆಯೊಳಕ್ಕೆ ಬಂದಾಗ, ಅವರ ಶಿಷ್ಯರು ಅವರಿಗೆ ಪ್ರತ್ಯೇಕವಾಗಿ, “ಆ ಅಶುದ್ಧಾತ್ಮವನ್ನು ಹೊರಗೆ ಹಾಕುವುದಕ್ಕೆ ನಮ್ಮಿಂದ ಏಕೆ ಆಗಲಿಲ್ಲ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಯೇಸು ಮನೆಗೆ ಬಂದಾಗ ಆತನ ಶಿಷ್ಯರು, “ಅದನ್ನು ಬಿಡಿಸಲಿಕ್ಕೆ ನಮ್ಮಿಂದ ಏಕೆ ಆಗಲಿಲ್ಲವೆಂದು” ಆತನನ್ನು ಏಕಾಂತದಲ್ಲಿ ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಅಂದು ಯೇಸುಸ್ವಾಮಿ ಮನೆಗೆ ಬಂದಾಗ, ಶಿಷ್ಯರು ಪ್ರತ್ಯೇಕವಾಗಿ ಅವರ ಬಳಿಗೆ ಬಂದು, “ಆ ದೆವ್ವವನ್ನು ಹೊರಗಟ್ಟಲು ನಮ್ಮಿಂದೇಕೆ ಆಗಲಿಲ್ಲ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಯೇಸು ಮನೆಗೆ ಬಂದಾಗ ಆತನ ಶಿಷ್ಯರು - ಅದನ್ನು ಬಿಡಿಸಲಿಕ್ಕೆ ನವ್ಮಿುಂದ ಯಾಕೆ ಆಗಲಿಲ್ಲವೆಂದು ಆತನನ್ನು ಏಕಾಂತದಲ್ಲಿ ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಯೇಸು ಮನೆಯೊಳಗೆ ಹೋದ ಮೇಲೆ ಆತನ ಶಿಷ್ಯರು ಪ್ರತ್ಯೇಕವಾದ ಸ್ಥಳದಲ್ಲಿ ಆತನಿಗೆ, “ಆ ದೆವ್ವವನ್ನು ಬಿಡಿಸಲು ನಮಗೆ ಏಕೆ ಸಾಧ್ಯವಾಗಲಿಲ್ಲ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಮಾನಾ ಜೆಜು ಘರಾತ್ ಭುತ್ತುರ್ ಗೆಲೊ, ಶಿಸಾನಿ ತೊ ಎಕ್ಲೊ ಹೊತ್ತ್ಯಾ ತನ್ನಾ “ತ್ಯಾ ಗಿರ್‍ಯಾಕ್ ಭಾಯ್ರ್ ಕಾಡುಕ್ ಅಮ್ಕಾ ಕಶ್ಯಾಕ್ ಹೊವ್ಕ್ ನಾ?” ಮನುನ್ ಇಚಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 9:28
11 ತಿಳಿವುಗಳ ಹೋಲಿಕೆ  

ಆಮೇಲೆ ಯೇಸು ಜನರ ಗುಂಪನ್ನು ಬಿಟ್ಟು ಮನೆಯೊಳಗೆ ಪ್ರವೇಶಿಸಿದಾಗ, ಶಿಷ್ಯರು ಯೇಸುವಿನ ಬಳಿಗೆ ಬಂದು, ಆ ಸಾಮ್ಯದ ವಿಷಯವಾಗಿ ಪ್ರಶ್ನಿಸಿದರು.


ಸಾಮ್ಯವಿಲ್ಲದೆ ಯೇಸು ಅವರಿಗೆ ಏನೂ ಹೇಳುತ್ತಿರಲಿಲ್ಲ. ಆದರೆ ಯೇಸು ತಮ್ಮ ಶಿಷ್ಯರೊಡನೆ ಏಕಾಂತವಾಗಿದ್ದಾಗ ಮಾತ್ರ ಅವರಿಗೆ ಎಲ್ಲವನ್ನು ವಿವರಿಸಿ ಹೇಳುತ್ತಿದ್ದರು.


ಯೇಸು ಒಬ್ಬರೇ ಇದ್ದಾಗ, ಹನ್ನೆರಡು ಮಂದಿ ಶಿಷ್ಯರು ಮತ್ತು ಯೇಸುವಿನ ಸುತ್ತಲಿದ್ದವರು ಬಂದು ಆ ಸಾಮ್ಯಗಳ ವಿಷಯವಾಗಿ ಕೇಳಿದರು.


ಪೇತ್ರನು, “ಈ ಸಾಮ್ಯವನ್ನು ನಮಗೆ ವಿವರಿಸು,” ಎಂದನು.


ತರುವಾಯ ಯೇಸು ಜನಸಮೂಹವನ್ನು ಕಳುಹಿಸಿಬಿಟ್ಟು ಮನೆಯೊಳಕ್ಕೆ ಹೋದರು. ಆಗ ಶಿಷ್ಯರು ಯೇಸುವಿನ ಬಳಿಗೆ ಬಂದು, “ಹೊಲದಲ್ಲಿರುವ ಕಳೆಯ ಸಾಮ್ಯವನ್ನು ನಮಗೆ ವಿವರಿಸಿರಿ,” ಎಂದರು.


ತರುವಾಯ ಶಿಷ್ಯರು ಬಂದು ಯೇಸುವಿಗೆ, “ನೀವು ಸಾಮ್ಯಗಳಲ್ಲಿ ಅವರೊಡನೆ ಮಾತನಾಡುವುದೇಕೆ?” ಎಂದು ಕೇಳಿದರು.


ಕೆಲವು ದಿನಗಳಾದ ಮೇಲೆ ಯೇಸು ಕಪೆರ್ನೌಮಿಗೆ ಹಿಂದಿರುಗಿದಾಗ, ಅವರು ಮನೆಗೆ ಬಂದಿದ್ದಾರೆಂಬ ವಾರ್ತೆಯು ಜನರಲ್ಲಿ ಹಬ್ಬಿತು.


ಯೇಸು ಒಂದು ಮನೆಯೊಳಗೆ ಹೋದಾಗ, ಜನರು ತಿರುಗಿ ಗುಂಪಾಗಿ ನೆರೆದು ಬಂದದ್ದರಿಂದ ಯೇಸುವಿಗೂ ಅವರ ಶಿಷ್ಯರಿಗೂ ಊಟಮಾಡುವುದಕ್ಕೂ ಸಾಧ್ಯವಾಗಲಿಲ್ಲ.


ಆದರೆ ಯೇಸು ಕೈಹಿಡಿದು ಅವನನ್ನು ಮೇಲಕ್ಕೆತ್ತಲು ಅವನು ಎದ್ದು ನಿಂತನು.


ಯೇಸು ಅವರಿಗೆ, “ಈ ತರವಾದದ್ದು ದೇವರ ಪ್ರಾರ್ಥನೆ ಉಪವಾಸಗಳಿಂದ ಹೊರತು ಬೇರೆ ಯಾವುದರಿಂದಲೂ ಹೋಗಲಾರದು,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು