Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 9:33 - ಕನ್ನಡ ಸಮಕಾಲಿಕ ಅನುವಾದ

33 ಅವರು ಕಪೆರ್ನೌಮಿಗೆ ಬಂದು ಮನೆಯಲ್ಲಿದ್ದಾಗ, ಯೇಸು ಅವರಿಗೆ, “ದಾರಿಯಲ್ಲಿ ನಿಮ್ಮೊಳಗೆ ನೀವು ಏನು ವಾಗ್ವಾದ ಮಾಡಿದಿರಿ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಅವರು ಕಪೆರ್ನೌಮಿಗೆ ಬಂದರು. ಅಲ್ಲಿ ಆತನು ಮನೆಯಲ್ಲಿದ್ದಾಗ, “ನೀವು ದಾರಿಯಲ್ಲಿ ಏನು ಚರ್ಚೆಮಾಡಿಕೊಳ್ಳುತ್ತಿದ್ದಿರಿ?” ಎಂದು ಶಿಷ್ಯರನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಅನಂತರ ಅವರೆಲ್ಲರೂ ಕಫೆರ್ನವುಮಿಗೆ ಬಂದರು. ಮನೆ ಸೇರಿದಾಗ ಯೇಸುಸ್ವಾಮಿ, “ದಾರಿಯಲ್ಲಿ ಬರುತ್ತಾ ನೀವು ನಿಮ್ಮಲ್ಲೇ ಏನು ಚರ್ಚೆಮಾಡುತ್ತಿದ್ದಿರಿ?” ಎಂದು ಶಿಷ್ಯರನ್ನು ಕೇಳಿದರು. ಅವರು ಮೌನತಾಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಮತ್ತು ಅವರು ಕಪೆರ್ನೌವಿುಗೆ ಬಂದರು. ಅಲ್ಲಿ ಆತನು ಮನೆಯಲ್ಲಿದ್ದಾಗ - ನೀವು ದಾರಿಯಲ್ಲಿ ಏನು ಮಾತಾಡಿಕೊಳ್ಳುತ್ತಿದ್ದಿರಿ ಎಂದು ಶಿಷ್ಯರನ್ನು ಕೇಳಲು ಅವರು ಸುಮ್ಮನಿದ್ದರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಯೇಸು ಮತ್ತು ಆತನ ಶಿಷ್ಯರು ಕಪೆರ್ನೌಮಿಗೆ ಹೋದರು. ಅವರು ಒಂದು ಮನೆಯೊಳಗಿದ್ದಾಗ ಆತನು ತನ್ನ ಶಿಷ್ಯರಿಗೆ, “ಈ ದಿನ ನೀವು ದಾರಿಯಲ್ಲಿ ವಾದಮಾಡುತ್ತಿದ್ದುದ್ದನ್ನು ಕೇಳಿಸಿಕೊಂಡೆ. ನೀವು ಯಾವುದರ ಬಗ್ಗೆ ವಾದಮಾಡುತ್ತಿದ್ದಿರಿ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ಜೆಜು ಅನಿ ಶಿಸಾ ಕಫರ್‍ನವ್ ಮನ್ತಲ್ಯಾ ಗಾವಾಕ್ ಯೆಲ್ಯಾನಿ. ತೆನಿ ಎಕ್ ಘರಾತ್ ಹೊತ್ತ್ಯಾ ತನ್ನಾ ಜೆಜುನ್ ಅಪ್ಲ್ಯಾ ಶಿಸಾಕ್ನಿ “ಆಜ್ ತುಮಿ ಯೆತಾನಾ ವಾಟೆ ವರ್‍ತಿ ಕಾಯ್ ವಾದ್ ಕರುಕ್ ಲಾಗಲ್ಲ್ಯಾಸಿ?” ಮನುನ್ ಇಚಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 9:33
10 ತಿಳಿವುಗಳ ಹೋಲಿಕೆ  

ನಾವು ಲೆಕ್ಕ ಒಪ್ಪಿಸಬೇಕಾಗಿರುವ ದೇವರ ದೃಷ್ಟಿಗೆ ಸಮಸ್ತವೂ ಬಹಿರಂಗವಾದದ್ದಾಗಿಯೂ ಬಯಲಾದದ್ದಾಗಿಯೂ ಆಗಿದೆ. ಎಲ್ಲಾ ಸೃಷ್ಟಿಯಲ್ಲಿ ದೇವರ ದೃಷ್ಟಿಗೆ ಮರೆಯಾದದ್ದು ಯಾವುದೂ ಇಲ್ಲ.


ಅವಳ ಮಕ್ಕಳನ್ನು ಮರಣಕ್ಕೆ ಒಪ್ಪಿಸುವೆನು. ಆಗ ನಾನು ಮನುಷ್ಯರ ಅಂತರಿಂದ್ರಿಯವನ್ನೂ ಹೃದಯವನ್ನೂ ಪರೀಕ್ಷಿಸುವವನಾಗಿದ್ದೇನೆಂಬುದು ಎಲ್ಲಾ ಸಭೆಗಳಿಗೆ ತಿಳಿದುಬರುವುದು. ನಿಮ್ಮಲ್ಲಿ ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕ ಹಾಗೆ ಪ್ರತಿಫಲವನ್ನು ಕೊಡುವೆನು.


ಯೇಸು ಮೂರನೆಯ ಸಾರಿ ಪೇತ್ರನಿಗೆ, “ಯೋಹಾನನ ಮಗನಾದ ಸೀಮೋನನೇ, ನೀನು ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ಕೇಳಿದರು. ಯೇಸು ಮೂರನೆಯ ಸಾರಿ, “ನೀನು ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು, “ಕರ್ತನೇ, ನಿಮಗೆ ಎಲ್ಲವೂ ತಿಳಿದಿದೆ. ನಾನು ನಿಮ್ಮ ಮೇಲೆ ಎಷ್ಟು ಮಮತೆ ಇಟ್ಟಿದ್ದೇನೆಂದು ನಿಮಗೆ ತಿಳಿದಿದೆ,” ಎಂದನು. ಆಗ ಯೇಸು ಪೇತ್ರನಿಗೆ, “ನನ್ನ ಕುರಿಗಳನ್ನು ಮೇಯಿಸು,” ಎಂದರು.


ಯೇಸು ಮನುಷ್ಯರ ಅಂತರಂಗವನ್ನು ತಿಳಿದವರಾದ ಕಾರಣ ಯಾರೂ ಯಾವ ಮನುಷ್ಯನ ವಿಷಯದಲ್ಲಿಯೂ ಅವರಿಗೆ ಸಾಕ್ಷಿ ಕೊಡಬೇಕಾದ ಅವಶ್ಯವಿರಲಿಲ್ಲ.


ಯೇಸು ಅವರು ಯೋಚಿಸುತ್ತಿರುವುದನ್ನು ಕೂಡಲೇ ತಮ್ಮ ಆತ್ಮದಲ್ಲಿ ಗ್ರಹಿಸಿಕೊಂಡು ಅವರಿಗೆ, “ನೀವು ನಿಮ್ಮ ಮನಸ್ಸಿನಲ್ಲಿ ಹೀಗೆ ಆಲೋಚಿಸುವುದೇಕೆ?


ತರುವಾಯ ಯೇಸು ಕಪೆರ್ನೌಮಿಗೆ ಬಂದಾಗ, ದೇವಾಲಯದ ತೆರಿಗೆಗಾಗಿ ಎರಡು ಬೆಳ್ಳಿ ನಾಣ್ಯಗಳನ್ನು ವಸೂಲಿಮಾಡುವವರು ಪೇತ್ರನ ಬಳಿಗೆ ಬಂದರು. ಅವರು ಪೇತ್ರನಿಗೆ, “ನಿಮ್ಮ ಬೋಧಕನು ತೆರಿಗೆ ಕಟ್ಟುವುದಿಲ್ಲವೋ?” ಎಂದು ಕೇಳಿದರು.


ಯೇಸುವಿಗೆ ದ್ರೋಹಮಾಡಿದ ಇಸ್ಕರಿಯೋತ ಯೂದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು