Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 9:37 - ಕನ್ನಡ ಸಮಕಾಲಿಕ ಅನುವಾದ

37 “ಯಾವನಾದರೂ ಇಂಥ ಮಕ್ಕಳಲ್ಲಿ ಒಂದನ್ನು ನನ್ನ ಹೆಸರಿನಲ್ಲಿ ಸ್ವೀಕರಿಸಿದರೆ, ಅವನು ನನ್ನನ್ನು ಸ್ವೀಕರಿಸುತ್ತಾನೆ. ಯಾವನು ನನ್ನನ್ನು ಸ್ವೀಕರಿಸುತ್ತಾನೋ ಅವನು ನನ್ನನ್ನು ಅಲ್ಲ ನನ್ನನ್ನು ಕಳುಹಿಸಿದ ತಂದೆಯನ್ನೇ ಸ್ವೀಕರಿಸುತ್ತಾನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 “ಯಾರಾದರೂ ನನ್ನ ಹೆಸರಿನಲ್ಲಿ ಇಂಥ ಚಿಕ್ಕ ಮಕ್ಕಳಲ್ಲಿ ಒಂದನ್ನು ಸೇರಿಸಿಕೊಂಡರೆ ನನ್ನನ್ನು ಸೇರಿಸಿಕೊಂಡ ಹಾಗಾಯಿತು; ಮತ್ತು ಯಾರಾದರೂ ನನ್ನನ್ನು ಸೇರಿಸಿಕೊಂಡರೆ ನನ್ನನ್ನು ಮಾತ್ರವಲ್ಲ, ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸೇರಿಸಿಕೊಂಡ ಹಾಗಾಯಿತು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 “ನನ್ನ ಹೆಸರಿನಲ್ಲಿ ಇಂಥ ಮಗುವೊಂದನ್ನು ಯಾರು ಬರಮಾಡಿಕೊಳ್ಳುತ್ತಾನೋ ಅವನು ನನ್ನನ್ನೇ ಬರಮಾಡಿಕೊಳ್ಳುತ್ತಾನೆ; ಯಾರು ನನ್ನನ್ನು ಬರಮಾಡಿಕೊಳ್ಳುತ್ತಾನೋ ಅವನು ನನ್ನನ್ನು ಅಲ್ಲ, ನನ್ನನ್ನು ಕಳುಹಿಸಿದಾತನನ್ನೇ ಬರಮಾಡಿಕೊಳ್ಳುತ್ತಾನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಯಾವನಾದರೂ ನನ್ನ ಹೆಸರಿನಲ್ಲಿ ಇಂಥ ಚಿಕ್ಕ ಮಕ್ಕಳಲ್ಲಿ ಒಂದನ್ನು ಸೇರಿಸಿಕೊಂಡರೆ ನನ್ನನ್ನು ಸೇರಿಸಿಕೊಂಡ ಹಾಗಾಯಿತು; ಮತ್ತು ಯಾವನಾದರೂ ನನ್ನನ್ನು ಸೇರಿಸಿಕೊಂಡರೆ ನನ್ನನ್ನಲ್ಲ, ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸೇರಿಸಿಕೊಂಡ ಹಾಗಾಯಿತು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 “ನನ್ನ ಹೆಸರಿನಲ್ಲಿ ಇಂಥ ಮಕ್ಕಳನ್ನು ಸ್ವೀಕರಿಸಿಕೊಳ್ಳುವವನು ನನ್ನನ್ನೇ ಸ್ವೀಕರಿಸಿಕೊಂಡಂತಾಯಿತು. ನನ್ನನ್ನು ಸ್ವೀಕರಿಸಿಕೊಳ್ಳುವವನು, ನನ್ನನ್ನು ಕಳುಹಿಸಿದಾತನನ್ನೇ ಸ್ವೀಕರಿಸಿಕೊಂಡಂತಾಯಿತು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

37 “ಜೊ ಮಾನುಸ್ ಎಕ್ ಬಾರಿಕ್ ಪೊರಾಕ್ ಮಾಜ್ಯಾ ನಾವಾನ್ ಸ್ವಿಕಾರ್ ಕರ್‍ತಾ, ತೊ ಮಾಕಾಚ್ ಸ್ವಿಕಾರ್ ಕರ್‍ತಾ, ಮಾಕಾ ಜೊ ಕೊನ್ ಸ್ವಿಕಾರ್ ಕರ್‍ತಾ ತೊ ಮಾಕಾ ಎವ್ಡೆಚ್ ನ್ಹಯ್, ಮಾಕಾ ಧಾಡಲ್ಲ್ಯಾಕುಚ್ ಸ್ವಿಕಾರ್ ಕರ್‍ತಾ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 9:37
13 ತಿಳಿವುಗಳ ಹೋಲಿಕೆ  

“ನಿಮ್ಮ ಮಾತನ್ನು ಕೇಳುವವರು ನನ್ನ ಮಾತನ್ನು ಕೇಳುತ್ತಾರೆ; ನಿಮ್ಮನ್ನು ತಿರಸ್ಕರಿಸುವವರು ನನ್ನನ್ನು ತಿರಸ್ಕರಿಸುತ್ತಾರೆ; ಆದರೆ ನನ್ನನ್ನು ತಿರಸ್ಕರಿಸುವವರು ನನ್ನನ್ನು ಕಳುಹಿಸಿದಾತನನ್ನೇ ತಿರಸ್ಕರಿಸುತ್ತಾರೆ,” ಎಂದರು.


“ಯಾರು ಈ ಚಿಕ್ಕ ಮಗುವನ್ನು ನನ್ನ ಹೆಸರಿನಲ್ಲಿ ಸ್ವೀಕರಿಸಿಕೊಳ್ಳುತ್ತಾರೋ ಅವರು ನನ್ನನ್ನೇ ಸ್ವೀಕರಿಸಿಕೊಳ್ಳುತ್ತಾರೆ; ಯಾರು ನನ್ನನ್ನು ಸ್ವೀಕರಿಸಿಕೊಳ್ಳುತ್ತಾರೋ ನನ್ನನ್ನು ಕಳುಹಿಸಿದಾತನನ್ನೇ ಸ್ವೀಕರಿಸಿಕೊಳ್ಳುತ್ತಾರೆ. ನಿಮ್ಮೆಲ್ಲರಲ್ಲಿ ಚಿಕ್ಕವನಾಗಿರುವವನೇ ದೊಡ್ಡವನಾಗಿರುವನು,” ಎಂದರು.


ನಾನು ಮತ್ತು ನನ್ನ ತಂದೆ ಒಂದೇ ಆಗಿದ್ದೇವೆ,” ಎಂದು ಉತ್ತರಕೊಟ್ಟರು.


ಎಲ್ಲರೂ ತಂದೆಯನ್ನು ಸನ್ಮಾನಿಸುವಂತೆಯೇ ಪುತ್ರನನ್ನೂ ಸನ್ಮಾನಿಸಬೇಕು. ಪುತ್ರನನ್ನು ಸನ್ಮಾನಿಸದವನು ಆತನನ್ನು ಕಳುಹಿಸಿದ ತಂದೆಯನ್ನೂ ಸನ್ಮಾನಿಸುವುದಿಲ್ಲ.


“ಚಿಕ್ಕವರಲ್ಲಿ ಒಬ್ಬನನ್ನಾದರೂ ನೀವು ಹೀನೈಸದಂತೆ ನೋಡಿಕೊಳ್ಳಿರಿ. ಪರಲೋಕದಲ್ಲಿರುವ ಅವರ ದೂತರು ಪರಲೋಕದ ನನ್ನ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಿದ್ದಾರೆ.


“ಅದಕ್ಕೆ ನಾನು ಉತ್ತರವಾಗಿ ಅವರಿಗೆ, ‘ನಾನು ನಿಮಗೆ ನಿಜವಾಗಿ ಹೇಳುತ್ತೇನೆ: ನೀವು ಈ ನನ್ನ ಸಹೋದರರಲ್ಲಿ ಅತ್ಯಲ್ಪನಾದವನೊಬ್ಬನಿಗೆ, ಮಾಡಿದ್ದು ನನಗೇ ಮಾಡಿದಂತಾಯಿತು,’ ಎನ್ನುವೆನು.


ಆದ್ದರಿಂದ, ಈ ಆಜ್ಞೆಗಳನ್ನು ತಿರಸ್ಕರಿಸುವವನು ಮನುಷ್ಯನನ್ನಲ್ಲ ದೇವರನ್ನು ಅಂದರೆ, ತಮ್ಮ ಪವಿತ್ರಾತ್ಮರನ್ನು ನಮಗೆ ಕೊಡುವ ದೇವರನ್ನೇ ತಿರಸ್ಕರಿಸುತ್ತಾನೆ.


ಯೇಸು ಒಂದು ಮಗುವನ್ನು ತೆಗೆದುಕೊಂಡು ಅದನ್ನು ಅವರ ಮಧ್ಯದಲ್ಲಿ ನಿಲ್ಲಿಸಿ, ತಮ್ಮ ಕೈಗಳಲ್ಲಿ ಅದನ್ನು ಎತ್ತಿಕೊಂಡು ಅವರಿಗೆ,


ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನನ್ನು ಕಳುಹಿಸಿದ ತಂದೆಯನ್ನು ಸ್ವೀಕರಿಸುವವನು ನನ್ನನ್ನು ಸ್ವೀಕರಿಸುತ್ತಾನೆ; ನನ್ನನ್ನು ಸ್ವೀಕರಿಸುವವನು ನನ್ನನ್ನು ಕಳುಹಿಸಿದ ತಂದೆಯನ್ನೇ ಸ್ವೀಕರಿಸುತ್ತಾನೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು