Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 9:41 - ಕನ್ನಡ ಸಮಕಾಲಿಕ ಅನುವಾದ

41 ಇದಲ್ಲದೆ ನೀವು ಕ್ರಿಸ್ತನಲ್ಲಿ ಸೇರಿದವರಾದ್ದರಿಂದ ಯಾರಾದರೂ ನನ್ನ ಹೆಸರಿನಲ್ಲೆ ನಿಮಗೆ ಒಂದು ಲೋಟ ನೀರನ್ನು ಕೊಟ್ಟರೂ ಅವರು ತಮ್ಮ ಪ್ರತಿಫಲವನ್ನು ಕಳೆದುಕೊಳ್ಳುವುದೇ ಇಲ್ಲವೆಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ನೀವು ಕ್ರಿಸ್ತನವರೆಂದು ನಿಮಗೆ ಯಾರಾದರೂ ಒಂದು ತಂಬಿಗೆ ನೀರನ್ನು ಕುಡಿಯುವುದಕ್ಕೆ ಕೊಟ್ಟರೆ ಬರತಕ್ಕ ಪ್ರತಿಫಲವು ಅವನಿಗೆ ತಪ್ಪುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ” ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 ನೀವು ಕ್ರಿಸ್ತಭಕ್ತರು ಎಂದು ಯಾವನಾದರೂ ನಿಮಗೆ ಕುಡಿಯಲು ಒಂದು ಲೋಟ ನೀರನ್ನು ಕೊಟ್ಟರೂ ಅದಕ್ಕೆ ತಕ್ಕ ಪ್ರತಿಫಲವನ್ನು ಅವನು ತಪ್ಪದೆ ಪಡೆಯುವನು ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ನೀವು ಕ್ರಿಸ್ತನವರೆಂದು ನಿಮಗೆ ಯಾವನಾದರೂ ಒಂದು ತಂಬಿಗೆ ನೀರನ್ನು ಕುಡಿಯುವದಕ್ಕೆ ಕೊಟ್ಟರೆ ಬರತಕ್ಕ ಪ್ರತಿಫಲವು ಅವನಿಗೆ ತಪ್ಪುವದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಕ್ರಿಸ್ತನವರೆಂದು ಯಾವನಾದರೂ ನಿಮಗೆ ಕುಡಿಯಲು ನೀರು ಕೊಟ್ಟರೂ ಅವನಿಗೆ ಅದರ ಪ್ರತಿಫಲ ಖಂಡಿತವಾಗಿ ಸಿಕ್ಕುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

41 ಖರೆಚ್ ಮಿಯಾ ತುಮ್ಕಾ ಸಾಂಗ್ತಾ, ತುಮಿ ಮಾಜ್ಯೆ ಮನುನ್ ಕಳುನ್, ಕೊನ್ ತರ್ ತುಮ್ಕಾ ಎಕ್ ತಾಂಬ್ಯಾ ಪಾನಿ ದಿಲ್ಯಾರ್ಬಿ, ತೆಂಕಾ ತೆಚೊ ಪ್ರತಿಫಳ್ ಖರೆಚ್ ವಾವುನುಚ್ ಗಾವ್ತಾ.” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 9:41
11 ತಿಳಿವುಗಳ ಹೋಲಿಕೆ  

ಯಾವನಾದರೂ ಈ ಚಿಕ್ಕವರಲ್ಲಿ ಒಬ್ಬನಿಗೆ ನನ್ನ ಶಿಷ್ಯನೆಂದು ಕೇವಲ ಒಂದು ಲೋಟ ತಣ್ಣೀರನ್ನು ಕುಡಿಯುವುದಕ್ಕೆ ಕೊಡುವವನು ತನ್ನ ಪ್ರತಿಫಲವನ್ನು ಕಳೆದುಕೊಳ್ಳುವುದೇ ಇಲ್ಲವೆಂದು ಸತ್ಯವಾಗಿ ನಾನು ನಿಮಗೆ ಹೇಳುತ್ತೇನೆ.”


“ಅದಕ್ಕೆ ನಾನು ಉತ್ತರವಾಗಿ ಅವರಿಗೆ, ‘ನಾನು ನಿಮಗೆ ನಿಜವಾಗಿ ಹೇಳುತ್ತೇನೆ: ನೀವು ಈ ನನ್ನ ಸಹೋದರರಲ್ಲಿ ಅತ್ಯಲ್ಪನಾದವನೊಬ್ಬನಿಗೆ, ಮಾಡಿದ್ದು ನನಗೇ ಮಾಡಿದಂತಾಯಿತು,’ ಎನ್ನುವೆನು.


ನೀವು ಹೊರಗಿನ ತೋರಿಕೆಗಳನ್ನು ಮಾತ್ರ ತೀರ್ಪುಮಾಡುವವರಾಗಿದ್ದೀರಿ. ಯಾರಾದರೂ ತಾನು ಯೇಸುವಿಗೆ ಸೇರಿದವನು ಎಂದು ದೃಢವಾಗಿ ನಂಬುವುದಾದರೆ, ತಾನು ಹೇಗೆ ಕ್ರಿಸ್ತ ಯೇಸುವಿನವನೋ, ಹಾಗೆಯೇ ನಾವೂ ಕ್ರಿಸ್ತ ಯೇಸುವಿನವರು ಎಂದು ಅವನು ತಿಳಿದುಕೊಳ್ಳಲಿ.


ಆದರೆ ಒಬ್ಬೊಬ್ಬರು ತಮ್ಮ ತಮ್ಮ ಕ್ರಮದ ಅನುಸಾರವಾಗಿ ಎದ್ದು ಬರುವರು. ಪ್ರಥಮಫಲವಾಗಿ ಕ್ರಿಸ್ತನು, ತರುವಾಯ ಕ್ರಿಸ್ತನ ಪುನರಾಗಮನದಲ್ಲಿ ಕ್ರಿಸ್ತನಿಗೆ ಸೇರಿದವರು ಎದ್ದು ಬರುವರು.


ನೀವು ಆಹಾರದಿಂದ ನಿಮ್ಮ ಸಹೋದರರನ್ನು ದುಃಖ ಪಡಿಸುವುದಾದರೆ ನೀವು ಪ್ರೀತಿಯಿಂದ ನಡೆದುಕೊಳ್ಳುವುದಿಲ್ಲ. ನೀವು ತಿನ್ನುವುದರ ಮೂಲಕ ಕ್ರಿಸ್ತನು ಯಾವನಿಗೋಸ್ಕರವಾಗಿ ಸತ್ತರೋ ಅಂಥವರನ್ನು ನಾಶಮಾಡಬೇಡಿರಿ.


ಆದರೆ ದೇವರ ಆತ್ಮವು ನಿಮ್ಮಲ್ಲಿ ಇರುವುದು ನಿಜವಾಗಿದ್ದರೆ ನೀವು ಮಾಂಸಭಾವಾಧೀನರಾಗಿರದೆ ದೇವರ ಆತ್ಮನಿಗೆ ಅಧೀನರಾಗಿದ್ದೀರಿ. ಕ್ರಿಸ್ತ ಯೇಸುವಿನ ಆತ್ಮ ಇಲ್ಲದವನು ಕ್ರಿಸ್ತ ಯೇಸುವಿಗೆ ಸೇರಿದವನಲ್ಲ.


ಕ್ರಿಸ್ತ ಯೇಸುವಿನವರು ತಮ್ಮ ಮಾಂಸಭಾವವನ್ನೂ ಅದರ ಆಶೆ ಹಾಗೂ ಅಪೇಕ್ಷೆಗಳ ಸಹಿತವಾಗಿ ಶಿಲುಬೆಗೆ ಹಾಕಿದ್ದಾರೆ.


ಆದರೆ ನೀವು ಕ್ರಿಸ್ತನವರಾಗಿದ್ದರೆ, ಅಬ್ರಹಾಮನ ಸಂತತಿಯವರಾಗಿದ್ದೀರಿ ಮಾತ್ರವಲ್ಲದೆ ವಾಗ್ದಾನಕ್ಕನುಸಾರವಾಗಿ ವಾರಸುದಾರರೂ ಆಗಿದ್ದೀರಿ.


ನೀವು ಕ್ರಿಸ್ತ ಯೇಸುವಿನವರು, ಕ್ರಿಸ್ತ ಯೇಸು ದೇವರವರು.


ಯೇಸು ಒಬ್ಬರೇ ಇದ್ದಾಗ, ಹನ್ನೆರಡು ಮಂದಿ ಶಿಷ್ಯರು ಮತ್ತು ಯೇಸುವಿನ ಸುತ್ತಲಿದ್ದವರು ಬಂದು ಆ ಸಾಮ್ಯಗಳ ವಿಷಯವಾಗಿ ಕೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು