Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 9:42 - ಕನ್ನಡ ಸಮಕಾಲಿಕ ಅನುವಾದ

42 “ಆದರೆ ನನ್ನಲ್ಲಿ ನಂಬಿಕೆಯಿಡುವ ಈ ಚಿಕ್ಕವರಲ್ಲಿ ಒಬ್ಬರಿಗೆ ಯಾರಾದರೂ ಪಾಪಕ್ಕೆ ಕಾರಣರಾದರೆ, ಅಂಥವರ ಕೊರಳಿಗೆ ಬೀಸುವ ಕಲ್ಲನ್ನು ನೇತುಹಾಕಿ ಅವರನ್ನು ಸಮುದ್ರದಲ್ಲಿ ಬಿಸಾಡಿಬಿಡುವುದು ಅವರಿಗೆ ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ನನ್ನಲ್ಲಿ ನಂಬಿಕೆ ಇಟ್ಟಿರುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾರಾದರೂ ಪಾಪ ಮಾಡುವುದಕ್ಕೆ ಕಾರಣನಾದರೆ, ಅಂಥವನ ಕೊರಳಿಗೆ ಬೀಸುವ ಕಲ್ಲನ್ನು ಕಟ್ಟಿ ಅವನನ್ನು ಸಮುದ್ರದಲ್ಲಿ ಬಿಸಾಡಿಬಿಡುವುದು ಅವನಿಗೆ ಉತ್ತಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ಯೇಸುಸ್ವಾಮಿ ತಮ್ಮ ಬೋಧನೆಯನ್ನು ಮುಂದುವರಿಸುತ್ತಾ, “ನನ್ನಲ್ಲಿ ವಿಶ್ವಾಸ ಇಟ್ಟಿರುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವನಾದರೂ ಪಾಪಕ್ಕೆ ಕಾರಣನಾದರೆ, ಅಂಥವನ ಕೊರಳಿಗೆ ದೊಡ್ಡ ಬೀಸುಕಲ್ಲನ್ನು ಕಟ್ಟಿ, ಅವನನ್ನು ಸಮುದ್ರದಲ್ಲಿ ದಬ್ಬುವುದೇ ಅವನಿಗೆ ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ಮತ್ತು ನಂಬುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವನಾದರೂ ಅಡ್ಡಿಯಾದರೆ ಅಂಥವನ ಕೊರಳಿಗೆ ಬೀಸುವ ಕಲ್ಲು ಕಟ್ಟಿ ಅವನನ್ನು ಸಮುದ್ರದಲ್ಲಿ ಹಾಕಿದರೂ ಅವನಿಗೆ ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 “ನನ್ನಲ್ಲಿ ನಂಬಿಕೆಯಿಟ್ಟಿರುವ ಈ ಚಿಕ್ಕ ಮಕ್ಕಳಲ್ಲಿ ಒಬ್ಬನನ್ನು ಪಾಪಕ್ಕೆ ನಡೆಸುವ ವ್ಯಕ್ತಿಯು ತನ್ನ ಕುತ್ತಿಗೆಗೆ ಬೀಸುವ ಕಲ್ಲನ್ನು ಕಟ್ಟಿಕೊಂಡು, ಸಮುದ್ರದಲ್ಲಿ ಮುಳುಗುವುದೇ ಒಳ್ಳೆಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

42 “ಮಾಜೆ ವರ್‍ತಿ ವಿಶ್ವಾಸ್ ಥವ್ತಲ್ಯಾ ಹ್ಯಾ ಬಾರಿಕ್ಲ್ಯಾತ್ನಿ, ಎಕ್ಲ್ಯಾಕ್ ಸೈತ್ ವಿಶ್ವಾಸ್ ಕಳ್ದುನ್ ಘೆವ್ಕ್ ಕೊನ್ ಕಾರನ್ ಹೊತಾ, ತೆಚಾ ಗಳ್ಯಾತ್ ಎಕ್ ಮೊಟೊ ಜಾತ್ಯಾಚೊ ಗುಂಡೊ ಭಾಂದುನ್ ಸಮುಂದರಾತ್ ತಾಕಲ್ಲೆ ಬರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 9:42
19 ತಿಳಿವುಗಳ ಹೋಲಿಕೆ  

“ಆದರೆ ನನ್ನಲ್ಲಿ ನಂಬಿಕೆಯಿಡುವ ಈ ಚಿಕ್ಕವರಲ್ಲಿ ಒಬ್ಬರಿಗೆ ಯಾರಾದರೂ ಪಾಪಕ್ಕೆ ಕಾರಣರಾದರೆ, ಅಂಥವರ ಕೊರಳಿಗೆ ಬೀಸುವ ಕಲ್ಲನ್ನು ನೇತುಹಾಕಿ ಅವರನ್ನು ಸಮುದ್ರದ ಆಳದಲ್ಲಿ ಮುಳುಗಿಸಿಡುವುದೇ ಲೇಸು, ಎಂದರು.


“ಚಿಕ್ಕವರಲ್ಲಿ ಒಬ್ಬನನ್ನಾದರೂ ನೀವು ಹೀನೈಸದಂತೆ ನೋಡಿಕೊಳ್ಳಿರಿ. ಪರಲೋಕದಲ್ಲಿರುವ ಅವರ ದೂತರು ಪರಲೋಕದ ನನ್ನ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಿದ್ದಾರೆ.


ನಮ್ಮ ಸೇವೆಯು ಅಪವಾದಕ್ಕೆ ಗುರಿಯಾಗದಂತೆ ನಾವು ಯಾರಿಗೂ ಅಡ್ಡಿಯನ್ನು ಒಡ್ಡಲಿಲ್ಲ.


ಪ್ರಿಯರೇ, ನೀವು ಕಲಿತುಕೊಂಡ ಬೋಧನೆಗೆ ವಿರೋಧವಾಗಿರುವ ಭೇದಗಳನ್ನೂ ಅಭ್ಯಂತರಗಳನ್ನೂ ಮಾಡುವವರ ಬಗ್ಗೆ ಎಚ್ಚರಿಕೆಯಿಂದಿರಿ. ಅಂಥವರಿಂದ ದೂರವಾಗಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ಆದ್ದರಿಂದ ನಾವು ಒಬ್ಬರ ಮೇಲೊಬ್ಬರು ತೀರ್ಪುಮಾಡದಿರೋಣ. ಇದಲ್ಲದೆ ಸಹೋದರರಿಗೆ ಅಡೆತಡೆಯನ್ನಾಗಲಿ, ಅಡ್ಡಿಯನ್ನಾಗಲಿ, ಹಾಕದಿರೋಣ.


ಆ ಸುಳ್ಳು ಬೋಧಕರ ಅಸಹ್ಯ ಕೃತ್ಯಗಳನ್ನು ಅನೇಕರು ಅನುಸರಿಸುವರು. ಅವರ ನಿಮಿತ್ತ ಸತ್ಯಮಾರ್ಗಕ್ಕೆ ದೂಷಣೆ ಉಂಟಾಗುವುದು.


ಅವನು ನೆಲದ ಮೇಲೆ ಬೀಳಲು, “ಸೌಲನೇ, ಸೌಲನೇ, ಏಕೆ ನನ್ನನ್ನು ಹಿಂಸೆಪಡಿಸುತ್ತೀ?” ಎಂದು ಹೇಳುವ ವಾಣಿಯನ್ನು ಕೇಳಿಸಿಕೊಂಡನು.


ಆದ್ದರಿಂದ ಯೌವನಸ್ಥ ವಿಧವೆಯರು ಮದುವೆಮಾಡಿಕೊಂಡು, ಮಕ್ಕಳನ್ನು ಹೆತ್ತು, ಮನೆಯ ಕೆಲಸಮಾಡಿ, ವಿರೋಧಿಯ ನಿಂದೆಗೆ ಆಸ್ಪದ ಕೊಡಬಾರದೆಂಬುದೇ ನನ್ನ ಅಪೇಕ್ಷೆ.


ಆಗ, ಅತ್ಯುತ್ತಮ ಕಾರ್ಯಗಳನ್ನು ನೀವು ವಿವೇಚಿಸಿಕೊಳ್ಳುವಿರಿ. ಕ್ರಿಸ್ತನ ಪುನರಾಗಮನ ದಿನದವರೆಗೆ ನೀವು ಪರಿಶುದ್ಧರಾಗಿಯೂ ನಿರ್ದೋಷಿಗಳಾಗಿಯೂ ಇರಬೇಕೆಂತಲೂ


ಪವಿತ್ರ ವೇದದಲ್ಲಿ ಬರೆದಿರುವಂತೆ : “ಯಾರಿಗೆ ಆತನ ಸುದ್ದಿ ಮುಟ್ಟಲಿಲ್ಲವೋ ಅವರು ಆತನನ್ನು ಕಾಣುವರು; ಯಾರು ಆತನ ವರ್ತಮಾನ ಕೇಳಲಿಲ್ಲವೋ ಅವರು ಗ್ರಹಿಸಿಕೊಳ್ಳುವರು.”


ಆದರೂ ನಾವು ಅವರನ್ನು ಅಭ್ಯಂತರಪಡಿಸದಂತೆ, ನೀನು ಸರೋವರಕ್ಕೆ ಹೋಗಿ ಗಾಳವನ್ನು ಹಾಕು. ಆಗ ಮೊದಲು ಬರುವ ಮೀನನ್ನು ಹಿಡಿ. ನೀನು ಅದರ ಬಾಯನ್ನು ತೆರೆದಾಗ ಅದರಲ್ಲಿ ನಾಲ್ಕು ಬೆಳ್ಳಿ ನಾಣ್ಯಗಳನ್ನು ಕಾಣುವೆ. ಅದನ್ನು ತಂದು ನನ್ನ ಮತ್ತು ನಿನ್ನ ಪರವಾಗಿ ಅವರಿಗೆ ಕೊಡು,” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು