Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 9:50 - ಕನ್ನಡ ಸಮಕಾಲಿಕ ಅನುವಾದ

50 “ಉಪ್ಪು ಒಳ್ಳೆಯದು. ಆದರೆ ಉಪ್ಪೇ ಸಪ್ಪಗಾದರೆ, ಇನ್ನಾವುದರಿಂದ ನೀವು ಅದನ್ನು ರುಚಿಗೊಳಿಸುವಿರಿ? ನಿಮ್ಮೊಳಗೆ ಉಪ್ಪು ಇರುವಂತೆ, ಒಬ್ಬರಿಗೊಬ್ಬರು ಸಮಾಧಾನದಿಂದಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

50 ಉಪ್ಪು ಒಳ್ಳೆಯ ಪದಾರ್ಥವೇ; ಉಪ್ಪು ಸಪ್ಪಗಾದರೆ ಅದನ್ನು ಇನ್ಯಾತರಿಂದ ರುಚಿಗೊಳಿಸಲು ಸಾಧ್ಯ? ನಿಮ್ಮೊಳಗೆ ಉಪ್ಪು ಇರಲಿ, ಒಬ್ಬರಿಗೊಬ್ಬರು ಸಮಾಧಾನದಿಂದಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

50 ಉಪ್ಪೇನೋ ಪ್ರಯೋಜನಕರ. ಆದರೆ ಉಪ್ಪೇ ಸಪ್ಪೆಯಾದರೆ, ಇನ್ನು ಯಾವುದರಿಂದ ಅದನ್ನು ಪುನಃ ರುಚಿಗೊಳಿಸಲಾದೀತು? ನೀವು ಉಪ್ಪಿನಂತೆ ಒಬ್ಬರಿಗೊಬ್ಬರು ಒಪ್ಪಿಗೆಯಾಗಿ ಸಮಾಧಾನದಿಂದಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

50 ಉಪ್ಪು ಒಳ್ಳೆಯ ಪದಾರ್ಥವೇ; ಉಪ್ಪು ಸಪ್ಪೆಯಾದರೆ ಅದನ್ನು ಇನ್ಯಾತರಿಂದ ರುಚಿಗೊಳಿಸುವಿರಿ? ನಿಮ್ಮೊಳಗೆ ಉಪ್ಪು ಇರಲಿ, ಒಬ್ಬರಿಗೊಬ್ಬರು ಸಮಾಧಾನದಿಂದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

50 “ಉಪ್ಪು ಒಳ್ಳೆಯದು. ಆದರೆ ಉಪ್ಪು ತನ್ನ ರುಚಿಯನ್ನು ಕಳೆದುಕೊಂಡರೆ, ಅದನ್ನು ಮತ್ತೆ ನೀವು ಉಪ್ಪನ್ನಾಗಿ ಮಾಡಲಾರಿರಿ. ಆದ್ದರಿಂದ ಒಳ್ಳೆಯತನದಿಂದ ತುಂಬಿದವರಾಗಿರಿ ಮತ್ತು ಒಬ್ಬರೊಡನೊಬ್ಬರು ಸಮಾಧಾನದಿಂದಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

50 “ಮಿಟ್ ಬರೆ ಹೊಯ್, ಖರೆ ಮಿಟ್ಟಾನುಚ್ ಅಪ್ನಾಚಿ ರುಚಿ ಕಳ್ದುನ್ ಘೆಟ್ಲ್ಯಾನ್ ತರ್ ತೆಕಾ ಖಾರ್ಪಾನ್ ಖೈತ್ನಾ ಹಾಂತ್ಯಾಸಿ? ತುಮ್ಚ್ಯಾ ಮದ್ದಿ ಮಿಟಾ ಸಾರ್ಕೊ ಪ್ರೆಮ್ ರ್‍ಹಂವ್ದಿತ್, ಎಕಾಮೆಕಾಕ್ ಸಮಾದಾನಾನ್ ರ್‍ಹಾವಾ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 9:50
28 ತಿಳಿವುಗಳ ಹೋಲಿಕೆ  

ನಿಮ್ಮ ಸಂಭಾಷಣೆ ಯಾವಾಗಲೂ ಪೂರ್ಣ ಕೃಪೆಯುಳ್ಳದ್ದೂ, ಉಪ್ಪಿನಿಂದ ಹದವುಳ್ಳದ್ದೂ ಆಗಿರಲಿ. ಹೀಗೆ ನೀವು ಪ್ರತಿಯೊಬ್ಬರಿಗೂ ಹೇಗೆ ಉತ್ತರಕೊಡಬೇಕು ಎಂಬುದನ್ನು ತಿಳಿದುಕೊಳ್ಳುವಿರಿ.


ಸಾಧ್ಯವಾದರೆ, ನಿಮ್ಮಿಂದ ಆದಷ್ಟು ಎಲ್ಲರೊಂದಿಗೂ ಸಮಾಧಾನದಿಂದಿರಿ.


“ನೀವು ಭೂಮಿಗೆ ಉಪ್ಪಾಗಿದ್ದೀರಿ. ಉಪ್ಪು ಸಪ್ಪಗಾದರೆ, ಅದಕ್ಕೆ ಉಪ್ಪಿನ ರುಚಿ ಹೇಗೆ ಬಂದೀತು? ಅದು ಹೊರಗೆ ಹಾಕಿ ತುಳಿಯುವುದಕ್ಕೆ ಯೋಗ್ಯವೇ ಹೊರತು ಬೇರೆ ಯಾವ ಕೆಲಸಕ್ಕೂ ಬರುವುದಿಲ್ಲ.


ಎಲ್ಲರ ಸಂಗಡ ಸಮಾಧಾನದಿಂದ ಜೀವಿಸಲು ಮತ್ತು ಪವಿತ್ರರಾಗಿರಲು ಸರ್ವಪ್ರಯತ್ನ ಮಾಡಿರಿ. ಪರಿಶುದ್ಧತೆಯಿಲ್ಲದೆ ಯಾರೂ ದೇವರನ್ನು ಕಾಣುವುದಿಲ್ಲ.


ಪ್ರಿಯರೇ, ಕಡೆಯ ಮಾತೇನೆಂದರೆ, ಆನಂದಪಡಿರಿ! ನಿಮ್ಮನ್ನು ಪೂರ್ಣ ಪುನಃಸ್ಥಾಪನೆಗಾಗಿ ಕ್ರಮಪಡಿಸಿಕೊಳ್ಳಿರಿ, ಉತ್ತೇಜನಗೊಳ್ಳಿರಿ, ಒಂದೇ ಮನಸ್ಸುಳ್ಳವರಾಗಿರಿ, ಸಮಾಧಾನದಿಂದಿರಿ. ಆಗ ಪ್ರೀತಿ ಹಾಗೂ ಶಾಂತಿಯ ದೇವರು ನಿಮ್ಮ ಸಂಗಡ ಇರುವರು.


ಏನೇ ಸಂಭವಿಸಿದರೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿದರೂ ಸರಿ, ದೂರದಲ್ಲಿದ್ದು ನಿಮ್ಮ ವಿಷಯವಾಗಿ ಕೇಳಿದರೂ ಸರಿ, ನೀವು ಒಂದೇ ಆತ್ಮದಲ್ಲಿ ದೃಢವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗಾಗಿ ಒಂದೇ ಮನಸ್ಸಿನಿಂದ ಒಟ್ಟಿಗೆ ಹೋರಾಡುವವರಾಗಿದ್ದೀರೆಂದು ನಾನು ತಿಳಿದುಕೊಳ್ಳುವೆನು.


ರುಚಿ ಇಲ್ಲದ ಆಹಾರನ್ನು ಉಪ್ಪಿಲ್ಲದೆ ತಿನ್ನಬಹುದೋ? ಕೋಳಿ ಮೊಟ್ಟೆಯ ಲೋಳೆಯಲ್ಲಿ ರುಚಿಯುಂಟೋ?


ಅವರ ಕೆಲಸದ ನಿಮಿತ್ತ ಅವರನ್ನು ಪ್ರೀತಿಯಿಂದ ಅತ್ಯಧಿಕವಾಗಿ ಸನ್ಮಾನ ಮಾಡಬೇಕೆಂದು ನಿಮ್ಮನ್ನು ಕೇಳಿಕೊಳ್ಳುತ್ತೇವೆ. ನಿಮ್ಮನಿಮ್ಮೊಳಗೆ ಸಮಾಧಾನದಿಂದಿರಿ.


ನಿಮ್ಮ ಬಾಯೊಳಗಿಂದ ಯಾವ ಕೆಟ್ಟಮಾತೂ ಹೊರಡದಿರಲಿ. ಕೇಳುವವರಿಗೆ ಆತ್ಮಿಕ ಹಿತವನ್ನುಂಟು ಮಾಡಿ, ಇತರರಿಗೆ ಅವಶ್ಯವಿರುವ ಮಾತುಗಳನ್ನು ಮಾತ್ರ ಆಡಿರಿ.


ಕಡೆಗೆ ನೀವೆಲ್ಲರೂ ಏಕ ಮನಸ್ಸುಳ್ಳವರಾಗಿರಿ, ಒಬ್ಬರಿಗೊಬ್ಬರೂ ಕರುಣೆಯುಳ್ಳವರಾಗಿದ್ದು ಸಹೋದರರಂತೆ ಪ್ರೀತಿಸಿರಿ. ಕನಿಕರವೂ ದೀನತೆ ಉಳ್ಳವರಾಗಿರಿ,


ಏಕೆಂದರೆ ಮನುಷ್ಯನ ಕೋಪವು ದೇವರು ಬಯಸುವ ನೀತಿಯ ಜೀವನವನ್ನು ತರುವುದಿಲ್ಲ.


ಯೌವನದ ಆಶೆಗಳನ್ನು ಬಿಟ್ಟು ಓಡಿಹೋಗು. ಶುದ್ಧ ಹೃದಯವುಳ್ಳವರಾಗಿ ಕರ್ತ ಯೇಸುವನ್ನು ಬೇಡಿಕೊಳ್ಳುವವರ ಸಂಗಡ ನೀತಿ, ವಿಶ್ವಾಸ, ಪ್ರೀತಿ, ಸಮಾಧಾನ ಇವುಗಳನ್ನು ಬೆನ್ನಟ್ಟು.


ಆದಕಾರಣ ದೇವರಿಂದ ಆಯ್ಕೆಯಾದವರೂ ಪರಿಶುದ್ಧರೂ ಪ್ರಿಯರೂ ಆಗಿರುವ ನೀವು ಕನಿಕರ, ದಯೆ, ದೀನತ್ವ, ಸಾತ್ವಿಕತ್ವ, ದೀರ್ಘಶಾಂತಿ ಇವುಗಳನ್ನು ಧರಿಸಿಕೊಳ್ಳಿರಿ.


ಪವಿತ್ರಾತ್ಮರ ಫಲವೇನೆಂದರೆ: ಪ್ರೀತಿ, ಆನಂದ, ಸಮಾಧಾನ, ಸಹನೆ, ದಯೆ, ಸದ್ಗುಣ, ನಂಬಿಗಸ್ತಿಕೆ,


ಕೇಡಿನಿಂದ ತೊಲಗಿ ಒಳ್ಳೆಯದನ್ನು ಮಾಡು; ಸಮಾಧಾನವನ್ನು ಹುಡುಕಿ ಅದನ್ನು ಹಿಂಬಾಲಿಸು.


ಆದರೆ ಅವರು ಸುಮ್ಮನಿದ್ದರು. ಏಕೆಂದರೆ ಅವರು ತಮ್ಮೊಳಗೆ ಯಾವನು ಅತಿ ದೊಡ್ಡವನು ಎಂದು ದಾರಿಯಲ್ಲಿ ವಾಗ್ವಾದ ಮಾಡಿದ್ದರು.


ಸಹೋದರರು ಒಂದಾಗಿ ಬಾಳುವುದು ಎಷ್ಟೋ ಒಳ್ಳೆಯದು! ಎಷ್ಟೋ ರಮ್ಯವಾದದ್ದು!


ನೀನು ಅವುಗಳನ್ನು ಯೆಹೋವ ದೇವರ ಮುಂದೆ ಅರ್ಪಿಸಬೇಕು. ಯಾಜಕರು ಅವುಗಳ ಮೇಲೆ ಉಪ್ಪನ್ನು ಹಾಕಿ ಅವುಗಳನ್ನು ಯೆಹೋವ ದೇವರಿಗೆ ದಹನಬಲಿಯಾಗಿ ಅರ್ಪಿಸಬೇಕು.


ಉಪ್ಪನ್ನು ಪರೀಕ್ಷಿಸುವಂತೆ ಪ್ರತಿಯೊಬ್ಬರು ಬೆಂಕಿಯ ಮೂಲಕ ಪರೀಕ್ಷೆಗೆ ಒಳಪಡಬೇಕಾಗುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು