Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 1:1 - ಕನ್ನಡ ಸಮಕಾಲಿಕ ಅನುವಾದ

1 ಯೆಹೂದದ ಅರಸರಾದ ಯೋತಾಮನ ಆಹಾಜನ, ಹಿಜ್ಕೀಯನ, ದಿವಸಗಳಲ್ಲಿ ಮೊರೇಷೆತಿನವನಾದ ಮೀಕನಿಗೆ ಬಂದ ಯೆಹೋವ ದೇವರ ವಾಕ್ಯವು. ಅವನು ಸಮಾರ್ಯ ಮತ್ತು ಯೆರೂಸಲೇಮಿನ ವಿಷಯವಾಗಿ ಕಂಡ ದರ್ಶನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೂದದ ಅರಸನಾದ ಯೋಥಾಮ, ಆಹಾಜ ಮತ್ತು ಹಿಜ್ಕೀಯ ಇವರ ಕಾಲದಲ್ಲಿ ಸಮಾರ್ಯದ ಮತ್ತು ಯೆರೂಸಲೇಮಿನ ವಿಷಯವಾಗಿ ಮೋರೆಷೆತ್ ಊರಿನವನಾದ ಮೀಕನಿಗೆ ಕೇಳಿ ಬಂದ ಯೆಹೋವನ ವಾಕ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಯೋಥಾಮ, ಆಹಾಜ, ಹಿಜ್ಕೀಯ ಇವರು ಜುದೇಯದ ಅರಸರು. ಇವರ ಕಾಲದಲ್ಲಿ ಮೋರೆಷೆತ್ ಊರಿನವನಾದ ಮೀಕನಿಗೆ ಒಂದು ದೈವದರ್ಶನವಾಯಿತು. ಅದು ಸಮಾರ್ಯ ಮತ್ತು ಜೆರುಸಲೇಮನ್ನು ಕುರಿತದ್ದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೂದದ ಅರಸನಾದ ಯೋಥಾಮ, ಆಹಾಜ, ಹಿಜ್ಕೀಯ, ಇವರ ಕಾಲದಲ್ಲಿ ಸಮಾರ್ಯದ ಮತ್ತು ಯೆರೂಸಲೇವಿುನ ವಿಷಯವಾಗಿ ಮೋರೆಷೆತ್ ಊರಿನವನಾದ ಮೀಕನಿಗೆ ಕಂಡುಬಂದ ಯೆಹೋವನ ವಾಕ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನ ಮಾತುಗಳು ಮೀಕನಿಗೆ ಬಂದವು. ಅರಸರಾದ ಯೋಥಾಮ, ಅಹಾಜ ಮತ್ತು ಹಿಜ್ಕೀಯರ ಆಳ್ವಿಕೆಯ ಸಮಯದಲ್ಲಿ ಇದು ನಡೆಯಿತು. ಇವರು ಯೆಹೂದ ರಾಜ್ಯದ ಅರಸರು. ಮೀಕನು ಮೋರೆಷೆತ್‌ನವನು. ಇವನು ಸಮಾರ್ಯ ಮತ್ತು ಜೆರುಸಲೇಮಿನ ವಿಷಯವಾಗಿ ದೇವದರ್ಶನವನ್ನು ಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 1:1
27 ತಿಳಿವುಗಳ ಹೋಲಿಕೆ  

“ಮೊರೇಷೆತಿನವನಾದ ಮೀಕಾಯನು ಯೆಹೂದದ ಅರಸನಾದ ಹಿಜ್ಕೀಯನ ದಿನಗಳಲ್ಲಿ ಪ್ರವಾದಿಸಿ, ಯೆಹೂದದ ಜನರಿಗೆಲ್ಲಾ ಹೇಳಿದ್ದೇನೆಂದರೆ: ‘ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ಚೀಯೋನನ್ನು ಹೊಲದ ಹಾಗೆ ಉಳಲಾಗುವುದು; ಯೆರೂಸಲೇಮು ಹಾಳುದಿಬ್ಬಗಳಾಗುವುದು; ಆಲಯದ ಬೆಟ್ಟವೂ ಕಾಡುಗುಡ್ಡಗಳಂತಾಗುವುದು.’


ಯೆಹೂದ ದೇಶದ ಅರಸರಾಗಿದ್ದ ಉಜ್ಜೀಯ, ಯೋತಾಮ, ಆಹಾಜ, ಹಿಜ್ಕೀಯ ಇವರ ಕಾಲದಲ್ಲಿ ಯೆಹೂದ ಮತ್ತು ಯೆರೂಸಲೇಮಿನ ವಿಷಯವಾಗಿ ಆಮೋಚನ ಮಗನಾದ ಯೆಶಾಯನಿಗೆ ಆದ ದರ್ಶನವು.


ಯೆಹೂದದ ಅರಸರಾದ ಉಜ್ಜೀಯ, ಯೋತಾಮ, ಆಹಾಜ, ಹಿಜ್ಕೀಯ ಇವರ ದಿನಗಳಲ್ಲಿಯೂ ಇಸ್ರಾಯೇಲಿನ ಅರಸನೂ ಯೋವಾಷನ ಮಗನೂ ಆದ ಯಾರೊಬ್ಬಾಮನ ದಿನಗಳಲ್ಲಿಯೂ ಬೆಯೇರಿಯನ ಮಗ ಹೋಶೇಯನಿಗೆ ಯೆಹೋವ ದೇವರ ವಾಕ್ಯವು ಬಂದಿತು.


ತೆಕೋವದ ಕುರುಬರಲ್ಲಿ ಒಬ್ಬನಾದ ಆಮೋಸನು, ಯೆಹೂದದ ಅರಸನಾದ ಉಜ್ಜೀಯನ ದಿವಸಗಳಲ್ಲಿಯೂ ಇಸ್ರಾಯೇಲಿನ ಅರಸನಾದ ಯೋವಾಷನ ಮಗ ಯಾರೊಬ್ಬಾಮನ ದಿವಸಗಳಲ್ಲಿಯೂ ಭೂಕಂಪಕ್ಕೆ ಎರಡು ವರ್ಷಗಳ ಮುಂಚೆ ಇಸ್ರಾಯೇಲಿನ ವಿಷಯವಾಗಿ ಕಂಡ ದರ್ಶನಗಳು.


ಇದೆಲ್ಲಾ ಯಾಕೋಬಿನ ಅಪರಾಧದ ನಿಮಿತ್ತವೇ ಇಸ್ರಾಯೇಲಿನ ಮನೆತನದವರ ಪಾಪದಿಂದಲೇ, ಯಾಕೋಬನ ಅಪರಾಧವೇನು? ಅದು ಸಮಾರ್ಯವಲ್ಲವೇ? ಯೆಹೂದದ ಉನ್ನತ ಪೂಜಾಸ್ಥಳ ಯಾವುದು? ಅದು ಯೆರೂಸಲೇಮು ಅಲ್ಲವೋ?


ಚೀಯೋನಿನಲ್ಲಿ ಹಾಯಾಗಿರುವವರಿಗೂ, ಸಮಾರ್ಯ ಬೆಟ್ಟದಲ್ಲಿ ಸುಭದ್ರವಾಗಿರುವವರಿಗೂ, ಇಸ್ರಾಯೇಲಿನ ಮನೆತನದವರು ಯಾರ ಬಳಿಗೆ ಬರುತ್ತಾರೋ, ಆ ಪ್ರಮುಖ ಜನಾಂಗದಲ್ಲಿ ಹೆಸರುಗೊಂಡವರಿಗೂ ಕಷ್ಟ!


ಇಸ್ರಾಯೇಲರು ತಮ್ಮ ಸೃಷ್ಟಿಕರ್ತನನ್ನು ಮರೆತುಬಿಟ್ಟು, ಅರಮನೆಗಳನ್ನು ಕಟ್ಟುತ್ತಾರೆ. ಯೆಹೂದವು ಸಹ ಕೋಟೆಯುಳ್ಳ ಪಟ್ಟಣಗಳನ್ನು ಹೆಚ್ಚುಮಾಡಿಕೊಂಡಿದೆ. ಆದರೆ ನಾನು ಅದರ ಪಟ್ಟಣಗಳ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಅವರ ಕೋಟೆಗಳನ್ನು ನುಂಗಿಬಿಡುವುದು.”


“ಇಸ್ರಾಯೇಲೇ, ನೀನು ವ್ಯಭಿಚಾರ ಮಾಡಿದರೂ, ಯೆಹೂದವು ಆ ದೋಷಕ್ಕೆ ಒಳಗಾಗದಿರಲಿ. “ಗಿಲ್ಗಾಲಿಗೆ ಹೋಗದೆ, ಇಲ್ಲವೆ ಬೇತಾವೆನಿಗೆ ಏರದೇ, ‘ಯೆಹೋವ ದೇವರ ಜೀವದಾಣೆ,’ ಎಂದು ಪ್ರಮಾಣ ಮಾಡದೆ ಇರಲಿ.


ಎಫ್ರಾಯೀಮಿನ ರಾಜಧಾನಿ ಸಮಾರ್ಯ. ಸಮಾರ್ಯದ ರಾಜಧಾನಿ ರೆಮಲ್ಯನ ಮಗನು. ನೀವು ನಂಬದೆ ಹೋದರೆ ನೀವು ನಿಜವಾಗಿಯೂ ನೆಲೆಗೊಳ್ಳುವುದಿಲ್ಲ,’ ಎಂದು ಹೇಳುತ್ತಾರೆ.”


ಪ್ರವಾದಿಯಾದ ಹಬಕ್ಕೂಕನು ಹೊಂದಿದ ಪ್ರವಾದನೆಯು:


ಯಾವ ಪ್ರವಾದನೆಯೂ ಎಂದೂ ಮನುಷ್ಯನ ಚಿತ್ತದಿಂದ ಬರಲಿಲ್ಲ, ಆದರೆ ಪ್ರವಾದಿಗಳು ಪವಿತ್ರಾತ್ಮ ಪ್ರೇರಿತರಾಗಿ ದೇವರಿಂದ ಪಡೆದುಕೊಂಡಿದ್ದನ್ನೇ ಮಾತನಾಡಿದರು.


ಯೆಹೋವ ದೇವರು ಅರಸನನ್ನು ಮರಣದ ದಿವಸದವರೆಗೂ ಕುಷ್ಠರೋಗದಿಂದ ಬಾಧಿಸಿದ್ದರಿಂದ, ಅವನು ಪ್ರತ್ಯೇಕವಾದ ಮನೆಯಲ್ಲಿ ವಾಸವಾಗಿದ್ದನು. ಅರಸನ ಮಗ ಯೋತಾಮನು ರಾಜಗೃಹಾಧಿಪತ್ಯವನ್ನು ಮತ್ತು ಪ್ರಜಾಪಾಲನೆಯನ್ನೂ ನೋಡಿಕೊಳ್ಳುತ್ತಿದ್ದನು.


ಇಸ್ರಾಯೇಲಿನ ಅರಸನೂ, ರೆಮಲ್ಯನ ಮಗನೂ ಆದ ಪೆಕಹನ ಆಳಿಕೆಯ ಎರಡನೆಯ ವರ್ಷದಲ್ಲಿ ಯೆಹೂದದ ಅರಸನಾದ ಉಜ್ಜೀಯನ ಮಗ ಯೋತಾಮನು ಆಳಲು ಆರಂಭಿಸಿದನು.


ರೆಮಲ್ಯನ ಮಗ ಪೆಕಹನ ಆಳ್ವಿಕೆಯ ಹದಿನೇಳನೆಯ ವರ್ಷದಲ್ಲಿ ಯೆಹೂದದ ಅರಸನಾಗಿರುವ ಯೋತಾಮನ ಮಗ ಆಹಾಜನು ಆಳಲು ಆರಂಭಿಸಿದನು.


ಇಸ್ರಾಯೇಲಿನ ಅರಸನಾಗಿರುವ ಏಲನ ಮಗ ಹೋಶೇಯನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಯೆಹೂದದ ಅರಸನಾಗಿದ್ದ ಆಹಾಜನ ಮಗ ಹಿಜ್ಕೀಯನು ಆಳಲು ಆರಂಭಿಸಿದನು.


ಆಹಾಜನು ಆಳಲು ಆರಂಭಿಸಿದಾಗ ಇಪ್ಪತ್ತು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಹದಿನಾರು ವರ್ಷ ಆಳಿದನು. ಆದರೆ ಅವನು ತನ್ನ ತಂದೆಯಾದ ದಾವೀದನ ಹಾಗೆ ನಡೆಯದೆ, ಯೆಹೋವ ದೇವರ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಲಿಲ್ಲ.


ಹಿಜ್ಕೀಯನು ಅರಸನಾದಾಗ ಇಪ್ಪತ್ತೈದು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಇಪ್ಪತ್ತೊಂಬತ್ತು ವರ್ಷ ಆಳಿದನು. ಅವನ ತಾಯಿಯ ಹೆಸರು ಅಬೀಯಾ. ಅವಳು ಜೆಕರ್ಯನ ಮಗಳಾಗಿದ್ದಳು.


ಯೋತಾಮನ ಮಗನೂ, ಉಜ್ಜೀಯನ ಮೊಮ್ಮಗನೂ, ಯೆಹೂದದ ಅರಸನೂ ಆದ ಆಹಾಜನ ಕಾಲದಲ್ಲಿ, ಅರಾಮ್ಯರ ಅರಸನಾದ ರೆಚೀನ, ರೆಮಲ್ಯನ ಮಗನೂ, ಇಸ್ರಾಯೇಲರ ಅರಸನೂ ಆದ ಪೆಕಹ ಎಂಬುವರು ಯೆರೂಸಲೇಮಿನ ವಿರುದ್ಧವಾಗಿ ಯುದ್ಧಕ್ಕೆ ಹೋದರು. ಆದರೆ ಅದನ್ನು ಜಯಿಸಲು ಸಾಧ್ಯವಾಗಲಿಲ್ಲ.


ಯಾಕೋಬನ ಮನೆತನದವರ ಪ್ರಧಾನರೇ, ಇಸ್ರಾಯೇಲಿನ ಮನೆತನದವರ ನ್ಯಾಯಾಧಿಪತಿಗಳೇ, ನ್ಯಾಯವನ್ನು ನಿಂದಿಸಿ ಸರಿಯಾದದ್ದನ್ನೆಲ್ಲಾ ಡೊಂಕುಮಾಡುವವರೇ,


ಆಕಾಶಗಳೇ, ಕೇಳಿರಿ. ಭೂಮಿಯೇ, ಕಿವಿಗೊಡು. ಏಕೆಂದರೆ ಯೆಹೋವ ದೇವರು ಮಾತನಾಡುತ್ತಿದ್ದಾರೆ: “ನಾನು ಸಾಕಿ ಸಲಹಿದ ಮಕ್ಕಳೇ ನನಗೆ ವಿರೋಧವಾಗಿ ತಿರುಗಿಬಿದ್ದಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು