Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 1:2 - ಕನ್ನಡ ಸಮಕಾಲಿಕ ಅನುವಾದ

2 ಎಲ್ಲಾ ಜನಗಳೇ ಕೇಳಿರಿ, ಭೂಮಿಯೇ, ಅದರಲ್ಲಿರುವವರೆಲ್ಲರೇ, ಕಿವಿಗೊಡಿರಿ. ಸಾರ್ವಭೌಮ ಯೆಹೋವ ದೇವರು ತಮ್ಮ ಪರಿಶುದ್ಧ ಮಂದಿರದೊಳಗಿಂದ ನಿಮಗೆ ವಿರೋಧವಾಗಿ ಸಾಕ್ಷಿ ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಜನಾಂಗಗಳೇ, ನೀವೆಲ್ಲರೂ ಕೇಳಿರಿ. ಭೂಮಂಡಲವೇ, ಭೂಮಿಯಲ್ಲಿರುವ ಸಮಸ್ತರೇ, ಕಿವಿಗೊಡಿರಿ, ಕರ್ತನಾದ ಯೆಹೋವನು ತನ್ನ ಪವಿತ್ರಾಲಯದೊಳಗಿಂದ ನಿಮಗೆ ವಿರುದ್ಧವಾಗಿ ಸಾಕ್ಷಿಕೊಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಕೇಳಿರಿ ಸರ್ವಜನಾಂಗಗಳೇ ಕಿವಿಗೊಡಿ ಬುವಿಯ ಸರ್ವನಿವಾಸಿಗಳೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಜನಾಂಗಗಳೇ, ನೀವೆಲ್ಲರೂ ಕೇಳಿರಿ; ಭೂಮಂಡಲವೇ, ಭೂವಿುಯಲ್ಲಿರುವ ಸಮಸ್ತವೇ, ಕಿವಿಗೊಡಿರಿ! ಕರ್ತನು, ಕರ್ತನಾದ ಯೆಹೋವನು ತನ್ನ ಪವಿತ್ರಾಲಯದೊಳಗಿಂದ ನಿಮಗೆ ವಿರುದ್ಧವಾಗಿ ಸಾಕ್ಷಿ ಕೊಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಎಲ್ಲಾ ಜನರೇ, ಕೇಳಿರಿ! ಭೂಮಿಯೂ ಅದರಲ್ಲಿರುವವರೆಲ್ಲರೂ ಕೇಳಿರಿ! ನನ್ನ ಒಡೆಯನಾದ ಯೆಹೋವನು ತನ್ನ ಪವಿತ್ರ ಆಲಯದಿಂದ ಬರುವನು. ನಿಮ್ಮ ವಿರುದ್ಧ ಸಾಕ್ಷಿಯಾಗಿ ಆತನು ಬರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 1:2
33 ತಿಳಿವುಗಳ ಹೋಲಿಕೆ  

ಆಕಾಶಗಳೇ, ಕೇಳಿರಿ. ಭೂಮಿಯೇ, ಕಿವಿಗೊಡು. ಏಕೆಂದರೆ ಯೆಹೋವ ದೇವರು ಮಾತನಾಡುತ್ತಿದ್ದಾರೆ: “ನಾನು ಸಾಕಿ ಸಲಹಿದ ಮಕ್ಕಳೇ ನನಗೆ ವಿರೋಧವಾಗಿ ತಿರುಗಿಬಿದ್ದಿದ್ದಾರೆ.


ಯೆಹೋವ ದೇವರು ತಮ್ಮ ಪರಿಶುದ್ಧ ಮಂದಿರದಲ್ಲಿ ಇದ್ದಾರೆ; ಯೆಹೋವ ದೇವರು ತಮ್ಮ ಪರಲೋಕ ಸಿಂಹಾಸನದಲ್ಲಿ ಇದ್ದಾರೆ. ಅವರು ಭೂಮಿಯಲ್ಲಿ ಪ್ರತಿಯೊಬ್ಬರನ್ನು ಗಮನಿಸುತ್ತಾರೆ; ಅವರ ಕಣ್ಣುಗಳು ಮಾನವರೆಲ್ಲರನ್ನು ಪರಿಶೋಧಿಸುತ್ತವೆ.


ಪವಿತ್ರಾತ್ಮ ದೇವರು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವರು ಕೇಳಲಿ.”


ಪವಿತ್ರಾತ್ಮ ದೇವರು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವರು ಕೇಳಲಿ.


ಪವಿತ್ರಾತ್ಮ ದೇವರು ಸಭೆಗಳಿಗೆ ಹೇಳುವುದನ್ನು, ಕಿವಿಯುಳ್ಳವರು ಕೇಳಲಿ. ಯಾರು ಜಯ ಹೊಂದುತ್ತಾರೋ ಅವರಿಗೆ ದೇವರ ಪರಲೋಕದಲ್ಲಿರುವ ಜೀವವೃಕ್ಷದ ಹಣ್ಣನ್ನು ತಿನ್ನಲು ಕೊಡುವೆನು.


“ನಾನು ನ್ಯಾಯತೀರಿಸುವದಕ್ಕೆ ನಿಮ್ಮ ಬಳಿಗೆ ಬರುತ್ತೇನೆ. ಆಗ ಮಾಟಗಾರರಿಗೆ, ವ್ಯಭಿಚಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ, ಮತ್ತು ನನಗೆ ಭಯಪಡದಿರುವವರಿಗೂ ನ್ಯಾಯತೀರಿಸಿ, ಶೀಘ್ರಸಾಕ್ಷಿಯಾಗಿರುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಆದರೆ ಯೆಹೋವ ದೇವರು ತಮ್ಮ ಪರಿಶುದ್ಧ ಮಂದಿರದಲ್ಲಿ ಇದ್ದಾರೆ. ಅವರ ಮುಂದೆ ಭೂಮಿಯೆಲ್ಲಾ ಮೌನವಾಗಿರಲಿ.


“ನನ್ನ ಪ್ರಾಣವು ನನ್ನಲ್ಲಿ ಕುಂದಿ ಹೋದಾಗ, ಯೆಹೋವ ದೇವರೇ ನಿಮ್ಮನ್ನು ಜ್ಞಾಪಕಮಾಡಿಕೊಂಡೆನು. ನನ್ನ ಪ್ರಾರ್ಥನೆಯು ನಿಮ್ಮ ಬಳಿಗೆ ನಿಮ್ಮ ಪರಿಶುದ್ಧ ಮಂದಿರದೊಳಗೆ ಬಂದಿತು.


ಓ ದೇಶವೇ, ದೇಶವೇ, ದೇಶವೇ, ಯೆಹೋವ ದೇವರ ವಾಕ್ಯವನ್ನು ಕೇಳು.


“ನನ್ನ ಜನರೇ, ಕೇಳಿರಿ, ನಾನು ಮಾತನಾಡುತ್ತಿದ್ದೇನೆ, ಇಸ್ರಾಯೇಲೇ, ನಿಮಗೆ ವಿರೋಧವಾಗಿ ಹೀಗೆಂದು ನಾನು ಸಾಕ್ಷಿ ಕೊಡುವೆನು: ನಾನು ದೇವರು, ಹೌದು ನಿಮ್ಮ ದೇವರು ನಾನೇ.


ಪವಿತ್ರಾತ್ಮ ದೇವರು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವರು ಕೇಳಲಿ.


ಪವಿತ್ರಾತ್ಮ ದೇವರು ಸಭೆಗಳಿಗೆ ಹೇಳುವುದನ್ನು ಕೇಳಲು ಇಷ್ಟ ಉಳ್ಳವರು ಕೇಳಲಿ.


ಪವಿತ್ರಾತ್ಮ ದೇವರು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವರು ಕೇಳಲಿ. ಯಾರು ಜಯ ಹೊಂದುತ್ತಾರೋ ಅವರಿಗೆ ಬಚ್ಚಿಟ್ಟಿರುವ ಮನ್ನಾವನ್ನು ಕೊಡುವೆನು. ಇದಲ್ಲದೆ ಅವರಿಗೆ ಬಿಳಿಕಲ್ಲನ್ನೂ ಆ ಕಲ್ಲಿನ ಮೇಲೆ ಕೆತ್ತಿದ ಹೊಸ ಹೆಸರನ್ನೂ ಕೊಡುವೆನು. ಆ ಹೆಸರನ್ನು ಹೊಂದಿದವನಿಗೇ ಹೊರತು, ಅದು ಮತ್ತಾರಿಗೂ ತಿಳಿಯದು.


ಪವಿತ್ರಾತ್ಮ ದೇವರು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವರು ಕೇಳಲಿ. ಜಯ ಹೊಂದುವವನಿಗೆ ಎರಡನೆಯ ಮರಣದಿಂದ ಕೇಡಾಗುವುದೇ ಇಲ್ಲ.


ಆದರೂ ಯೆಹೋವ ದೇವರು ನಿನಗೂ, ನಿನ್ನ ಯೌವನದ ಹೆಂಡತಿಗೂ ಸಾಕ್ಷಿಯಾಗಿದ್ದರು. ಆದರೂ ನಿನ್ನ ಜೊತೆಯವಳೂ, ನಿನ್ನ ಒಡಂಬಡಿಕೆಯ ಹೆಂಡತಿಯೂ ಆಗಿದ್ದವಳಿಗೆ ನೀನು ಅಪನಂಬಿಗಸ್ತನಾಗಿದ್ದೀ.


ಏಕೆಂದರೆ ಅವರು ತಮ್ಮ ನೆರೆಯವರ ಹೆಂಡರ ಸಂಗಡ ವ್ಯಭಿಚಾರ ಮಾಡಿ, ನನ್ನ ಹೆಸರಿನಲ್ಲಿ ಸುಳ್ಳಾಗಿ ನಾನು ಅವರಿಗೆ ಆಜ್ಞಾಪಿಸದೆ ಇದ್ದ ಮಾತುಗಳನ್ನಾಡಿ, ಇಸ್ರಾಯೇಲಿನಲ್ಲಿ ನೀಚತನವನ್ನು ನಡೆಸಿದರು. ನಾನೇ ಅದನ್ನು ತಿಳಿದು ಸಾಕ್ಷಿಯಾಗಿದ್ದೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.


ಈ ಭೂಮಿಯೇ, ಕೇಳು. ಇಗೋ, ನಾನು ಈ ಜನರ ಮೇಲೆ ಕೇಡನ್ನು ಅಂದರೆ ಅವರ ಕಲ್ಪನೆಗಳ ಫಲವನ್ನೇ ಬರಮಾಡುತ್ತೇನೆ. ಏಕೆಂದರೆ, ಅವರು ನನ್ನ ವಾಕ್ಯಗಳನ್ನು ಆಲೈಸದೆ ಹೋದರು; ನನ್ನ ನಿಯಮವನ್ನು ತಿರಸ್ಕರಿಸಿದರು.


ನನಗೆ ಹಸಿವಾದರೆ ನಿಮಗೆ ಹೇಳಬೇಕಾಗಿಲ್ಲ, ಏಕೆಂದರೆ ಭೂಲೋಕವೂ ಅದರಲ್ಲಿರುವುದೆಲ್ಲವೂ ನನ್ನವೇ.


ದೇವಾಧಿ ದೇವರಾದ ಯೆಹೋವ ದೇವರು ತಾವೇ ಮಾತನಾಡುತ್ತಿದ್ದಾರೆ, ಸೂರ್ಯೋದಯದಿಂದ ಅಸ್ತಮಾನದವರೆಗೂ ಇರುವ ಭೂಲೋಕದವರು ಕರೆಯುತ್ತಿದ್ದಾರೆ.


ನಾನು ನಿಮಗೆ ಮೊರೆಯಿಡುವಾಗ, ನನ್ನ ಕೈಗಳನ್ನು ನಿಮ್ಮ ಮಹಾಪರಿಶುದ್ಧ ಸ್ಥಳದ ಕಡೆಗೆ ಎತ್ತುವಾಗ ನನ್ನ ವಿಜ್ಞಾಪನೆಯನ್ನು ಲಾಲಿಸಿರಿ.


ಭೂಮಿಯೂ ಅದರಲ್ಲಿರುವ ಸಮಸ್ತವೂ ಯೆಹೋವ ದೇವರದ್ದೇ; ಲೋಕವೂ ಅದರ ನಿವಾಸಿಗಳೂ ಅವರಿಗೇ ಸೇರಿದ್ದು.


ಆಕಾಶವೇ, ಕಿವಿಗೊಡು. ನಾನು ಮಾತನಾಡುತ್ತೇನೆ. ಭೂಮಿಯೇ, ನನ್ನ ಬಾಯಿಯ ಮಾತುಗಳನ್ನು ಕೇಳು.


ಗಿಲ್ಯಾದಿನ ಹಿರಿಯರು ಯೆಫ್ತಾಹನಿಗೆ, “ನಾವು ಈ ನಿನ್ನ ಮಾತಿನ ಹಾಗೆ ಮಾಡದೆ ಹೋದರೆ, ಯೆಹೋವ ದೇವರು ನಮ್ಮ ಮತ್ತು ನಿನ್ನ ಮಧ್ಯದಲ್ಲಿ ಸಾಕ್ಷಿಯಾಗಿರಲಿ,” ಎಂದರು.


ಅದಕ್ಕೆ ಮೀಕಾಯನು, “ನೀನು ಸಮಾಧಾನದಿಂದ ನಿಜವಾಗಿ ಬಂದರೆ, ಯೆಹೋವ ದೇವರು ನನ್ನ ಮುಖಾಂತರ ಮಾತನಾಡಿಲ್ಲ, ಎಂದು ಹೇಳಿ; ಜನರೇ ನೀವೆಲ್ಲರೂ ನನ್ನ ಮಾತನ್ನು ಗಮನದಲ್ಲಿಡಿರಿ!” ಎಂದು ಕೂಗಿ ಹೇಳಿದನು.


ಅದಕ್ಕೆ ಮೀಕಾಯನು, “ನೀನು ಸಮಾಧಾನದಿಂದ ನಿಜವಾಗಿ ಬಂದರೆ, ಯೆಹೋವ ದೇವರು ನನ್ನ ಮುಖಾಂತರ ಮಾತನಾಡಿಲ್ಲ, ಎಂದು ಹೇಳಿ; ಜನರೇ, ನೀವೆಲ್ಲರೂ ನನ್ನ ಮಾತನ್ನು ಗಮನದಲ್ಲಿಡಿರಿ!” ಎಂದು ಕೂಗಿ ಹೇಳಿದನು.


ಜಗದ ಸಕಲ ನಿವಾಸಿಗಳೇ! ಭೂಮಿಯಲ್ಲಿ ವಾಸಿಸುವವರೇ! ಬೆಟ್ಟಗಳ ಮೇಲೆ ಧ್ವಜವನ್ನು ಎತ್ತುವಾಗ ಅದನ್ನು ನೀವು ನೋಡುವಿರಿ, ತುತೂರಿಯನ್ನು ಊದುವಾಗ ಕೇಳಿಸಿಕೊಳ್ಳುವಿರಿ.


ಸಾರ್ವಭೌಮ ಯೆಹೋವ ದೇವರು, ನನಗೆ ಸಹಾಯ ಮಾಡುವನು. ಆದಕಾರಣ ನಾನು ಅವಮಾನ ಪಡುವುದಿಲ್ಲ. ಆದ್ದರಿಂದ ನನ್ನ ಮುಖವನ್ನು ಕಗ್ಗಲ್ಲಿನಂತೆ ಮಾಡಿಕೊಂಡಿದ್ದೇನೆ. ನಾನು ನಾಚಿಕೆಪಡಲಾರೆನೆಂದು ನನಗೆ ಗೊತ್ತು.


ಆಗ ಅವರು ಯೆರೆಮೀಯನಿಗೆ, “ನಿನ್ನ ದೇವರಾದ ಯೆಹೋವ ದೇವರು ನಿನ್ನನ್ನು ಯಾವ ವಿಷಯದಲ್ಲಿ ನಮ್ಮ ಬಳಿಗೆ ಕಳುಹಿಸುತ್ತಾರೋ, ಆ ಎಲ್ಲಾ ಮಾತುಗಳ ಪ್ರಕಾರ ನಾವು ಮಾಡದೆ ಹೋದರೆ, ಯೆಹೋವ ದೇವರು ನಮಗೆ ಸತ್ಯವಾದ ನಂಬಿಕೆಯುಳ್ಳ ಸಾಕ್ಷಿಯಾಗಿರಲಿ. ನಾವು ನಮ್ಮ ದೇವರಾದ ಯೆಹೋವ ದೇವರ ಸ್ವರವನ್ನು ಕೇಳುವಾಗ, ನಮಗೆ ಒಳ್ಳೆಯದಾಗುವ ಹಾಗೆ,


“ಮನುಷ್ಯರೇ, ನಾನು ಕರೆಯುತ್ತಿರುವುದು ನಿಮ್ಮನ್ನೇ, ಮಾನವರಿಗಾಗಿಯೇ ನಾನು ಧ್ವನಿಗೈಯುತ್ತೇನೆ.


“ನಿರುಪಯೋಗ ಮೂರ್ತಿಗಳಿಗೆ ಅಂಟಿಕೊಳ್ಳುವವರು, ಅವರದಾಗುವ ದೇವರ ಪ್ರೀತಿಯನ್ನು ಕಳೆದುಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು