Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 1:5 - ಕನ್ನಡ ಸಮಕಾಲಿಕ ಅನುವಾದ

5 ಇದೆಲ್ಲಾ ಯಾಕೋಬಿನ ಅಪರಾಧದ ನಿಮಿತ್ತವೇ ಇಸ್ರಾಯೇಲಿನ ಮನೆತನದವರ ಪಾಪದಿಂದಲೇ, ಯಾಕೋಬನ ಅಪರಾಧವೇನು? ಅದು ಸಮಾರ್ಯವಲ್ಲವೇ? ಯೆಹೂದದ ಉನ್ನತ ಪೂಜಾಸ್ಥಳ ಯಾವುದು? ಅದು ಯೆರೂಸಲೇಮು ಅಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಇದಕ್ಕೆಲ್ಲಾ ಕಾರಣ ಯಾಕೋಬಿನ ದ್ರೋಹ ಮತ್ತು ಇಸ್ರಾಯೇಲ್ ವಂಶದ ಪಾಪಗಳೇ. ಯಾಕೋಬಿನ ದ್ರೋಹವೇನು? ಸಮಾರ್ಯವಲ್ಲವೇ! ಯೆಹೂದದ ಕೆಟ್ಟ ಪೂಜಾಸ್ಥಾನಗಳು ಯಾವುವು? ಯೆರೂಸಲೇಮಲ್ಲವೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಇದಕ್ಕೆಲ್ಲಾ ಕಾರಣ ಯಕೋಬನ ದ್ರೋಹ. ಇಸ್ರಯೇಲ್ ಮನೆತನದ ಪಾಪ. ಯಕೋಬನ ದ್ರೋಹಕ್ಕೆ ಕಾರಣ ಯಾವುದು? ಸಮಾರ್ಯ ಅಲ್ಲವೆ? ಜುದೇಯದ ವಿಗ್ರಹಾರಾಧನೆಯ ಸ್ಥಳ ಯಾವುದು? ಜೆರುಸಲೇಮ್ ಅಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಇದಕ್ಕೆಲ್ಲಾ ಕಾರಣವು ಯಾಕೋಬಿನ ದ್ರೋಹವೇ, ಇಸ್ರಾಯೇಲ್ ವಂಶದ ಪಾಪಗಳೇ, ಯಾಕೋಬಿನ ದ್ರೋಹವೇನು? ಸಮಾರ್ಯವಲ್ಲವೇ. ಯೆಹೂದದ [ಕೆಟ್ಟ] ಪೂಜಾಸ್ಥಾನಗಳು ಯಾವವು? ಯೆರೊಸಲೇಮಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಇದಕ್ಕೆಲ್ಲಾ ಕಾರಣ ಯಾಕೋಬನ ಪಾಪಗಳೇ, ಇಸ್ರೇಲರ ದ್ರೋಹಗಳೇ! ಯಾಕೋಬು ಪಾಪಮಾಡಿದ್ದಕ್ಕೆ ಕಾರಣವೇನು? ಸಮಾರ್ಯವೇ ಕಾರಣ. ಯೆಹೂದದ ಎತ್ತರವಾದ ಸ್ಥಳ ಯಾವುದು? ಅದೇ ಜೆರುಸಲೇಮ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 1:5
30 ತಿಳಿವುಗಳ ಹೋಲಿಕೆ  

ಅವರು ಸಮಾರ್ಯದ ಪಾಪದ ಮೇಲೆ ಆಣೆ ಇಟ್ಟುಕೊಂಡು, ದಾನೇ, ನಿನ್ನ ದೇವರ ಜೀವದಾಣೆ ಎಂದೂ, ಬೇರ್ಷೆಬದ ಮಾರ್ಗದ ಜೀವದಾಣೆ ಎಂದೂ ಹೇಳುವರು. ಅವರು ಬಿದ್ದು ಮತ್ತೆ ಮೇಲೆ ಏಳಲಾರರು.”


ನಿನ್ನ ಕೆಟ್ಟತನವೇ ನಿನ್ನನ್ನು ತಿದ್ದುವುದು. ನಿನ್ನ ಹಿಂಜಾರಿಕೆಗಳೇ ನಿನ್ನನ್ನು ಗದರಿಸುವುದು. ಹೀಗಿರುವುದರಿಂದ ನೀನು ನಿನ್ನ ದೇವರಾದ ಯೆಹೋವ ದೇವರನ್ನು ಬಿಟ್ಟದ್ದೂ, ನನ್ನ ಭಯವು ನಿನ್ನಲ್ಲಿ ಇಲ್ಲದಿರುವುದೂ, ಕೆಟ್ಟದ್ದೂ, ಕಹಿಯಾದದ್ದೂ ಎಂದು ತಿಳಿದುಕೊಂಡು ನೋಡು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಕಿರೀಟವು ನಮ್ಮ ತಲೆಯ ಮೇಲಿನಿಂದ ಬಿದ್ದುಹೋಯಿತು. ಅಯ್ಯೋ, ನಾವು ಪಾಪಮಾಡಿದ್ದೇವೆ.


ಈ ಭೂಮಿಯೇ, ಕೇಳು. ಇಗೋ, ನಾನು ಈ ಜನರ ಮೇಲೆ ಕೇಡನ್ನು ಅಂದರೆ ಅವರ ಕಲ್ಪನೆಗಳ ಫಲವನ್ನೇ ಬರಮಾಡುತ್ತೇನೆ. ಏಕೆಂದರೆ, ಅವರು ನನ್ನ ವಾಕ್ಯಗಳನ್ನು ಆಲೈಸದೆ ಹೋದರು; ನನ್ನ ನಿಯಮವನ್ನು ತಿರಸ್ಕರಿಸಿದರು.


“ನಿನ್ನ ಮಾರ್ಗವೂ, ನಿನ್ನ ಕ್ರಿಯೆಗಳೂ, ಇವುಗಳನ್ನು ನಿನಗೆ ಉಂಟುಮಾಡಿದವು, ಇದೇ ನಿನ್ನ ಶಿಕ್ಷೆ. ಅದು ಕಹಿಯಾದದ್ದಲ್ಲವೋ? ನಿನ್ನ ಹೃದಯಕ್ಕೆ ನಾಟುವುದಿಲ್ಲವೋ?”


ಆತನು ನಿನ್ನನ್ನು ದಾರಿಯಲ್ಲಿ ನಡೆಸುತ್ತಿರುವಾಗ ನೀನು ನಿನ್ನ ದೇವರಾದ ಯೆಹೋವ ದೇವರನ್ನು ಬಿಟ್ಟಿದ್ದರಿಂದಲೇ ಇದನ್ನು ನಿನಗೆ ನೀನೇ ಮಾಡಿಕೊಂಡೆಯಲ್ಲವೋ?


ಏಕೆಂದರೆ ಅವನು ಬೇತೇಲಿನಲ್ಲಿರುವ ಬಲಿಪೀಠಕ್ಕೆ ವಿರೋಧವಾಗಿಯೂ, ಸಮಾರ್ಯ ಪಟ್ಟಣಗಳಲ್ಲಿರುವ ಪೂಜಾಸ್ಥಳಗಳ ಸಮಸ್ತ ಮನೆಗಳಿಗೆ ವಿರೋಧವಾಗಿಯೂ, ಯೆಹೋವ ದೇವರ ಮಾತಿನಿಂದ ಕೂಗಿದ ಮಾತು ನಿಶ್ಚಯವಾಗಿ ಆಗುವುದು,” ಎಂದನು.


ಚೀಯೋನಿನಲ್ಲಿ ಹಾಯಾಗಿರುವವರಿಗೂ, ಸಮಾರ್ಯ ಬೆಟ್ಟದಲ್ಲಿ ಸುಭದ್ರವಾಗಿರುವವರಿಗೂ, ಇಸ್ರಾಯೇಲಿನ ಮನೆತನದವರು ಯಾರ ಬಳಿಗೆ ಬರುತ್ತಾರೋ, ಆ ಪ್ರಮುಖ ಜನಾಂಗದಲ್ಲಿ ಹೆಸರುಗೊಂಡವರಿಗೂ ಕಷ್ಟ!


ನಾನು ಇಸ್ರಾಯೇಲನ್ನು ಗುಣ ಮಾಡಬೇಕೆಂದಿರುವಾಗ ಎಫ್ರಾಯೀಮಿನ ಪಾಪಗಳನ್ನು ಬಹಿರಂಗಪಡಿಸುತ್ತೇನೆ. ಮತ್ತು ಸಮಾರ್ಯದ ಕೆಟ್ಟತನವನ್ನು ಪ್ರಕಟಪಡಿಸುತ್ತೇನೆ. ಅವರು ಸುಳ್ಳನ್ನು ನಡೆಸುತ್ತಾರೆ. ಕಳ್ಳನು ಒಳಗೆ ಬರುತ್ತಾನೆ ಮತ್ತು ಕಳ್ಳರ ಗುಂಪು ಹೊರಗೆ ಸುಲಿದುಕೊಳ್ಳುತ್ತದೆ.


ನಿಮ್ಮ ಅಕ್ರಮಗಳು ಇವುಗಳನ್ನು ತಪ್ಪಿಸಿ ಇವೆ; ನಿಮ್ಮ ಪಾಪಗಳು ಒಳ್ಳೆಯವುಗಳನ್ನು ನಿಮ್ಮಿಂದ ಹಿಂದೆಗೆದಿವೆ.


ಅವನು ಇನ್ನೂ ಬಾಲಕನಾಗಿರುವಾಗ, ತನ್ನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ ತನ್ನ ಪೂರ್ವಜನಾದ ದಾವೀದನ ದೇವರನ್ನು ಹುಡುಕಲು ಆರಂಭಿಸಿದನು. ಅವನ ಆಳ್ವಿಕೆಯ ಹನ್ನೆರಡನೆಯ ವರ್ಷದಲ್ಲಿ ಉನ್ನತ ಪೂಜಾಸ್ಥಳಗಳನ್ನೂ, ಅಶೇರ ಸ್ತಂಭಗಳನ್ನೂ, ಕೆತ್ತಿದ ವಿಗ್ರಹಗಳನ್ನೂ ತೆಗೆದುಹಾಕಿ, ಯೆಹೂದ ಮತ್ತು ಯೆರೂಸಲೇಮನ್ನು ಶುಚಿಮಾಡಲು ಆರಂಭಿಸಿದನು.


ಅವರು ಬಾಳನ ಬಲಿಪೀಠಗಳನ್ನು ಅವನ ಸಮ್ಮುಖದಿಂದ ಕೆಡವಿಹಾಕಿದರು. ಅವುಗಳ ಮೇಲಿರುವ ಸೂರ್ಯ ಸ್ತಂಭಗಳನ್ನು ಕಡಿದುಹಾಕಿ; ಅಶೇರ ಸ್ತಂಭಗಳನ್ನೂ, ಕೆತ್ತಿದ ವಿಗ್ರಹಗಳನ್ನೂ, ಎರಕ ಹೊಯ್ದ ವಿಗ್ರಹಗಳನ್ನೂ ಒಡೆದುಬಿಟ್ಟು ಪುಡಿಪುಡಿಮಾಡಿ, ಅವುಗಳಿಗೆ ಬಲಿ ಅರ್ಪಿಸಿದವರ ಸಮಾಧಿಗಳ ಮೇಲೆ ಚಿಲ್ಲಿಸಿ,


ಎಫ್ರಾಯೀಮಿನ ರಾಜಧಾನಿ ಸಮಾರ್ಯ. ಸಮಾರ್ಯದ ರಾಜಧಾನಿ ರೆಮಲ್ಯನ ಮಗನು. ನೀವು ನಂಬದೆ ಹೋದರೆ ನೀವು ನಿಜವಾಗಿಯೂ ನೆಲೆಗೊಳ್ಳುವುದಿಲ್ಲ,’ ಎಂದು ಹೇಳುತ್ತಾರೆ.”


“ಇಸಾಕನ ಉನ್ನತ ಪೂಜಾಸ್ಥಳಗಳು ನಾಶವಾಗುವುವು. ಇಸ್ರಾಯೇಲಿನ ಪರಿಶುದ್ಧ ಸ್ಥಳಗಳು ಹಾಳಾಗುವುವು. ನಾನು ಖಡ್ಗದೊಂದಿಗೆ ಯಾರೊಬ್ಬಾಮನ ಮನೆತನಕ್ಕೆ ವಿರುದ್ಧವಾಗಿ ಏಳುವೆನು.”


ಲಾಕೀಷಿನ ನಿವಾಸಿಗಳೇ, ಕುದುರೆಗಳನ್ನು ರಥಕ್ಕೆ ಕಟ್ಟಿರಿ, ಚೀಯೋನ್ ಮಗಳ ಪಾಪವು ನಿನ್ನಿಂದ ಪ್ರಾರಂಭವಾಯಿತು ಇಸ್ರಾಯೇಲಿನ ದ್ರೋಹಗಳು ನಿಮ್ಮಲ್ಲಿಯೇ ಹುಟ್ಟಿ ಬಂದವು.


ಆಗ ಸೊಲೊಮೋನನು ಮೋವಾಬಿನ ಅಸಹ್ಯಕರವಾದ ಕೆಮೋಷಿಗೋಸ್ಕರವೂ, ಅಮ್ಮೋನ್ಯರ ಅಸಹ್ಯಕರವಾದ ಮೋಲೆಕನಿಗೋಸ್ಕರವೂ ಯೆರೂಸಲೇಮಿನ ಪೂರ್ವದಲ್ಲಿರುವ ಬೆಟ್ಟದಲ್ಲಿ ಎತ್ತರವಾದ ಸ್ಥಳವನ್ನು ಕಟ್ಟಿಸಿದನು.


ಅವನು ಶೆಮೆರ್ ಎಂಬವನಿಗೆ ಆರು ಸಾವಿರ ಬೆಳ್ಳಿ ನಾಣ್ಯಗಳನ್ನು ಕೊಟ್ಟು ಸಮಾರಿಯ ಎಂಬ ಬೆಟ್ಟವನ್ನು ಕೊಂಡುಕೊಂಡನು. ಆ ಬೆಟ್ಟದ ಮೇಲೆ ಒಂದು ಪಟ್ಟಣವನ್ನು ಕಟ್ಟಿಸಿ, ಅದಕ್ಕೆ ಆ ಜಮೀನಿನ ಯಜಮಾನನಾಗಿದ್ದ ಶೆಮೆರನ ಜ್ಞಾಪಕಾರ್ಥವಾಗಿ ತಾನು ಕಟ್ಟಿಸಿದ ಪಟ್ಟಣಕ್ಕೆ ಸಮಾರ್ಯ ಎಂದು ಹೆಸರಿಟ್ಟನು.


“ಸಮಾರ್ಯದ ಪ್ರವಾದಿಗಳಲ್ಲಿ ಅಸಹ್ಯಕರ ವಿಷಯವನ್ನು ನೋಡಿದ್ದೇನೆ. ಅವರು ಬಾಳನಿಂದ ಪ್ರವಾದನೆಯನ್ನು ಕೇಳಿ, ನನ್ನ ಜನರಾದ ಇಸ್ರಾಯೇಲನ್ನು ತಪ್ಪುವಂತೆ ಮಾಡಿದ್ದಾರೆ.


ಯೆರೂಸಲೇಮಿನ ಪ್ರವಾದಿಗಳಲ್ಲಿ ಭಯಂಕರವಾದದ್ದನ್ನು ನೋಡಿದ್ದೇನೆ. ಅವರು ವ್ಯಭಿಚಾರ ಮಾಡಿ, ಸುಳ್ಳಿನಲ್ಲಿ ನಡೆದುಕೊಂಡದ್ದಲ್ಲದೆ, ದುಷ್ಟರು ತಮ್ಮ ದುಷ್ಟತ್ವವನ್ನು ಬಿಟ್ಟು ತಿರುಗದ ಹಾಗೆ ಅವರ ಕೈಗಳನ್ನು ಬಲಪಡಿಸುತ್ತಾರೆ. ಅವರೆಲ್ಲರೂ ನನಗೆ ಸೊದೋಮಿನ ಹಾಗೆಯೂ, ಅದರ ನಿವಾಸಿಗಳು ಗೊಮೋರದ ಹಾಗೆಯೂ ಇದ್ದಾರೆ.”


ನಿನ್ನ ಉತ್ತರ ದಿಕ್ಕಿನಲ್ಲಿ ಪುತ್ರಿಯರೊಂದಿಗೆ ವಾಸಿಸುವ ಸಮಾರ್ಯವೇ ನಿನ್ನ ಅಕ್ಕ. ದಕ್ಷಿಣ ದಿಕ್ಕಿನಲ್ಲಿ ಪುತ್ರಿಯರೊಂದಿಗೆ ವಾಸಿಸುವ ಸೊದೋಮ್ ನಿನ್ನ ತಂಗಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು