ಮೀಕ 1:6 - ಕನ್ನಡ ಸಮಕಾಲಿಕ ಅನುವಾದ6 ಹೀಗಿರುವುದರಿಂದ ನಾನು ಸಮಾರ್ಯವನ್ನು ಹೊಲದ ದಿಬ್ಬವನ್ನಾಗಿಯೂ ದ್ರಾಕ್ಷಿಬಳ್ಳಿ ನೆಡುವ ಸ್ಥಳವನ್ನಾಗಿಯೂ ಮಾಡುವೆನು. ಅದರ ಕಲ್ಲುಗಳನ್ನು ತಗ್ಗಿನಲ್ಲಿ ಸುರಿದುಬಿಟ್ಟು, ಅದರ ಅಸ್ತಿವಾರಗಳನ್ನು ಹೊರಗೆಡಹುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆದಕಾರಣ ನಾನು ಸಮಾರ್ಯವನ್ನು ಹೊಲದಲ್ಲಿನ ಹಾಳು ದಿಬ್ಬವನ್ನಾಗಿಯೂ, ದ್ರಾಕ್ಷಿಯ ತೋಟದ ಮಡಿಗಳನ್ನಾಗಿಯೂ ಮಾಡುವೆನು. ಅದರ ಕಲ್ಲುಗಳನ್ನು ತಗ್ಗಿಗೆ ಸುರಿದುಬಿಡುವೆನು. ಅದರ ಅಸ್ತಿವಾರಗಳನ್ನು ಬಯಲನ್ನಾಗಿ ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಆದಕಾರಣ, “ನಾನು ಸಮಾರ್ಯವನ್ನು ಧೂಳಿನ ರಾಶಿಯನ್ನಾಗಿಯೂ ದ್ರಾಕ್ಷಾತೋಟಕ್ಕೆ ಒಳ್ಳೆಯ ಬಯಲನ್ನಾಗಿಯೂ ಮಾಡುವೆನು. ಕಲ್ಲುಹೆಂಟೆಗಳನ್ನು ಕಣಿವೆಗೆ ಸುರಿದುಬಿಡುವೆನು. ಅದರ ತಳಪಾಯವೇ ತೆರೆದು ಕಾಣುವಂತೆ ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಆದಕಾರಣ ನಾನು ಸಮಾರ್ಯವನ್ನು ಹೊಲದಲ್ಲಿನ ಹಾಳು ದಿಬ್ಬವನ್ನಾಗಿಯೂ ದ್ರಾಕ್ಷೆಯ ತೋಟದ ಮಡಿಗಳನ್ನಾಗಿಯೂ ಮಾಡುವೆನು; ಅದರ ಕಲ್ಲುಗಳನ್ನು ತಗ್ಗಿಗೆ ಸುರಿದು ಬಿಡುವೆನು; ಅದರ ಅಸ್ತಿವಾರಗಳನ್ನು ಬೈಲುಮಾಡುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಆದ್ದರಿಂದ ನಾನು ಸಮಾರ್ಯವನ್ನು ಕಲ್ಲಿನ ರಾಶಿಯನ್ನಾಗಿ ಮಾಡುವೆನು. ಅದು ದ್ರಾಕ್ಷಿಬಳ್ಳಿ ನೆಡಲು ಸಿದ್ಧವಾಗುವುದು. ಸಮಾರ್ಯದ ಕಲ್ಲುಗಳನ್ನೆಲ್ಲಾ ತಗ್ಗಿಗೆ ನೂಕಿಬಿಡುವೆನು; ಆಗ ಅಲ್ಲಿ ಕೇವಲ ಅಸ್ತಿವಾರಗಳು ಕಾಣುವವು. ಅಧ್ಯಾಯವನ್ನು ನೋಡಿ |