ಮೀಕ 1:7 - ಕನ್ನಡ ಸಮಕಾಲಿಕ ಅನುವಾದ7 ಅದರ ವಿಗ್ರಹಗಳೆಲ್ಲಾ ತುಂಡುಗಳಾಗುವಂತೆ ಮಾಡುವೆನು. ಅದರ ಆಲಯದ ಕಾಣಿಕೆಗಳೆಲ್ಲಾ ಬೆಂಕಿಯಿಂದ ಸುಟ್ಟುಹೋಗುವುದು. ಅದರ ವಿಗ್ರಹಗಳನ್ನೆಲ್ಲಾ ಹಾಳುಮಾಡುವೆನು. ಅದು ವೇಶ್ಯಾವೃತ್ತಿಯ ಕೂಲಿಯಿಂದ ಕೂಡಿಸಿಕೊಂಡವು. ವೇಶ್ಯಾವೃತ್ತಿಯ ಕೂಲಿಯನ್ನಾಗಿಯೇ ಅವುಗಳನ್ನು ಉಪಯೋಗಿಸಬೇಕಾಗುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅದರ ಎರಕದ ಬೊಂಬೆಗಳನ್ನೆಲ್ಲಾ ಪುಡಿಪುಡಿ ಮಾಡುವೆನು. ಅದರ ಸಮಸ್ತ ಸಂಪಾದನೆಯು ಸುಟ್ಟುಹೋಗುವುದು. ಅದರ ಸಕಲ ವಿಗ್ರಹಗಳನ್ನು ಹಾಳುಮಾಡುವೆನು. ಅದು ವೇಶ್ಯಾವಾಟಿಕೆಯಿಂದ ಸಂಪಾದನೆಯಾಗಿ ಕೂಡಿಸಿಟ್ಟುಕೊಂಡವುಗಳು ಹಾಗೂ ವೇಶ್ಯಾವಾಟಿಕೆಯ ಸಂಪಾದನೆಯಾಗಿಯೇ ಪರರ ಪಾಲಾಗುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಅದರಲ್ಲಿನ ಎರಕದ ಪ್ರತಿಮೆಗಳನ್ನು ಪುಡಿಪುಡಿ ಮಾಡುವೆನು. ಅದರ ಸಂಪಾದನೆಯೆಲ್ಲ ಅಗ್ನಿಗೆ ಆಹುತಿಯಾಗುವುದು. ಅದರ ವಿಗ್ರಹಗಳನ್ನೆಲ್ಲ ಹಾಳುಮಾಡುವೆನು. ಅವು ಸೂಳೆತನದಿಂದ ಸಂಪಾದನೆಯಾದುವು, ಸೂಳೆತನದ ಸಂಪಾದನೆಯಾಗಿಯೇ ಪರರ ಪಾಲಾಗುವುದು,” ಎಂದು ಸರ್ವೇಶ್ವರ ಹೇಳುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅದರ ಎರಕದ ಬೊಂಬೆಗಳೆಲ್ಲಾ ಒಡೆಯಲ್ಪಡುವವು; ಅದರ ಸಮಸ್ತ ಸಂಪಾದನೆಯು ಸುಟ್ಟುಹೋಗುವದು, ಅದರ ಸಕಲ ವಿಗ್ರಹಗಳನ್ನು ಹಾಳುಮಾಡುವೆನು; ಅದು ಸೂಳೆತನದ ಸಂಪಾದನೆಯಾಗಿ ಕೂಡಿಸಿಟ್ಟುಕೊಂಡವುಗಳು, ಸೂಳೆತನದ ಸಂಪಾದನೆಯಾಗಿಯೇ ಪರರಪಾಲಾಗುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಆಕೆಯ ವಿಗ್ರಹಗಳೆಲ್ಲಾ ಒಡೆದು ಪುಡಿಮಾಡಲ್ಪಡುವವು. ಆಕೆಯ ಸೂಳೆತನದ ಹಣವು ಬೆಂಕಿಯಲ್ಲಿ ಸುಡಲ್ಪಡುವುದು. ಆಕೆಯ ಸುಳ್ಳುದೇವರ ವಿಗ್ರಹಗಳನ್ನೆಲ್ಲಾ ನಾಶಮಾಡುವೆನು. ಯಾಕೆಂದರೆ ಸಮಾರ್ಯ ನನಗೆ ಅಪನಂಬಿಗಸ್ತಳಾಗಿ ಧನಿಕಳಾದಳು. ನನಗೆ ನಂಬಿಗಸ್ತರಲ್ಲದವರು ಆಕೆಯಿಂದ ಅದನ್ನು ಕಸಿದುಕೊಳ್ಳುವರು. ಅಧ್ಯಾಯವನ್ನು ನೋಡಿ |
ಇದಾದನಂತರ ಅಲ್ಲಿ ಇರುವವರಾದ ಸಮಸ್ತ ಇಸ್ರಾಯೇಲರು ಯೆಹೂದ ಪಟ್ಟಣಗಳಿಗೆ ಹೊರಟುಹೋಗಿ, ವಿಗ್ರಹಗಳನ್ನು ಮುರಿದು, ಅಶೇರ ಸ್ತಂಭಗಳನ್ನು ಕಡಿದು, ಸಮಸ್ತ ಯೆಹೂದ, ಬೆನ್ಯಾಮೀನ್, ಎಫ್ರಾಯೀಮ್, ಮನಸ್ಸೆ ದೇಶಗಳಲ್ಲಿ ಯಾವುದನ್ನೂ ಉಳಿಸಲಿಲ್ಲ, ಉನ್ನತ ಪೂಜಾಸ್ಥಳಗಳನ್ನು ಮತ್ತು ಬಲಿಪೀಠಗಳನ್ನು ಕೆಡವಿಹಾಕಿದರು. ಆಗ ಇಸ್ರಾಯೇಲರೆಲ್ಲರು ತಮ್ಮ ತಮ್ಮ ಆಸ್ತಿಪಾಸ್ತಿಯಿರುವ ಪಟ್ಟಣಗಳಿಗೆ ತಿರುಗಿ ಹೋದರು.