Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 2:12 - ಕನ್ನಡ ಸಮಕಾಲಿಕ ಅನುವಾದ

12 “ಯಾಕೋಬೇ, ನಿನ್ನವರನ್ನೆಲ್ಲಾ ನಿಶ್ಚಯವಾಗಿ ಕೂಡಿಸುವೆನು. ಇಸ್ರಾಯೇಲಿನಲ್ಲಿ ಉಳಿದವರನ್ನು ನಿಶ್ಚಯವಾಗಿ ಕೂಡಿಸುವೆನು. ಬೊಚ್ರದ ಕುರಿಗಳಂತೆಯೂ ತಮ್ಮ ಹಟ್ಟಿಯ ನಡುವೆ ಇರುವ ಮಂದೆಯಂತೆಯೂ ಅವರನ್ನು ಒಟ್ಟಾಗಿ ಕೂಡಿಸುವೆನು. ಹುಲ್ಲುಗಾವಲಿನ ಕುರಿಮಂದೆಯಂತೆ, ಸ್ಥಳವು ಜನರಿಂದ ತುಂಬಿ ತುಳುಕುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಯಾಕೋಬೇ ನಿನ್ನವರೆಲ್ಲರನ್ನು ಒಂದುಗೂಡಿಸುವೆನು. ಇಸ್ರಾಯೇಲಿನ ಉಳಿದ ಜನರನ್ನು ಒಟ್ಟಿಗೆ ಸೇರಿಸುವೆನು. ಅವರನ್ನು ಹಟ್ಟಿಯಲ್ಲಿನ ಕುರಿಗಳಂತೆ ಒಟ್ಟಿಗೆ ಇಡುವೆನು. ಹುಲ್ಲುಗಾವಲಿನ ಮಧ್ಯದಲ್ಲಿನ ಮಂದೆಯ ಹಾಗೆ ಗುಂಪು ಕೂಡಿಸುವೆನು. ಜನರು ದೊಡ್ಡ ಶಬ್ದಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 “ಯಕೋಬ ವಂಶಜರೇ, ನಾನು ನಿಮ್ಮನ್ನೆಲ್ಲಾ ಖಂಡಿತವಾಗಿ ಒಟ್ಟುಗೂಡಿಸುವೆನು. ಇಸ್ರಯೇಲಿನ ಅಳಿದುಳಿದ ಜನರನ್ನು ಸೇರಿಸಿಯೇ ಸೇರಿಸುವೆನು. ಹಟ್ಟಿಯಲ್ಲಿರುವ ಕುರಿಗಳಂತೆ ಅವರನ್ನು ಒಟ್ಟಿಗೆ ಸೇರಿಸುವೆನು. ಹುಲ್ಲುಗಾವಲಿನಲ್ಲಿರುವ ಕುರಿಮಂದೆಯಂತೆ ಒಂದುಗೂಡಿಸುವೆನು,” ಎನ್ನುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಯಾಕೋಬೇ, ನಿನ್ನವರನ್ನೆಲ್ಲಾ ಕೂಡಿಸೇ ಕೂಡಿಸುವೆನು; ಇಸ್ರಾಯೇಲಿನ ಜನಶೇಷವನ್ನು ಸೇರಿಸೇ ಸೇರಿಸುವೆನು. ಅವರನ್ನು ಹಟ್ಟಿಯಲ್ಲಿನ ಕುರಿಗಳಂತೆ ಒಟ್ಟಿಗಿಡುವೆನು, ಕಾವಲ ಮಧ್ಯದಲ್ಲಿನ ಮಂದೆಯ ಹಾಗೆ ಗುಂಪು ಹಾಕುವೆನು; ಜನರು ಗಿಜಿಗುಟ್ಟುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಯಾಕೋಬಿನ ಜನರೇ, ನಾನು ನಿಮ್ಮೆಲ್ಲರನ್ನು ಒಟ್ಟಾಗಿ ಸೇರಿಸುತ್ತೇನೆ. ಇಸ್ರೇಲಿನಲ್ಲಿ ಉಳಿದವರನ್ನೆಲ್ಲಾ ಒಟ್ಟುಗೂಡಿಸುತ್ತೇನೆ. ಹಟ್ಟಿಯೊಳಗೆ ಕುರಿಗಳನ್ನು ಸೇರಿಸುವಂತೆ, ಹುಲ್ಲುಗಾವಲಿನಲ್ಲಿ ಕುರಿಮಂದೆ ಸೇರಿಸಲ್ಪಡುವಂತೆ ನಾನು ಅವರನ್ನು ಒಟ್ಟುಗೂಡಿಸುವೆನು. ಆಗ ಆ ಸ್ಥಳವು ಜನಸಮೂಹದ ಗದ್ದಲದಿಂದ ತುಂಬಿಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 2:12
28 ತಿಳಿವುಗಳ ಹೋಲಿಕೆ  

“ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಇನ್ನೊಂದು ವಿಷಯದಲ್ಲಿ, ಇಸ್ರಾಯೇಲರ ಮತ್ತೊಂದು ಕೋರಿಕೆಯನ್ನು ಆಲಿಸಿ ನೆರವೇರಿಸುವೆನು. ನಾನು ಅವರನ್ನು ಮನುಷ್ಯರಲ್ಲಿ ಮಂದೆಯಂತೆ ಹೆಚ್ಚಿಸುವೆನು.


ಪಾಪಗಳನ್ನು ಮತ್ತು ಅಪರಾಧಗಳನ್ನು ಮನ್ನಿಸುವವನೂ, ತನ್ನ ಬಾಧ್ಯತೆಯ ಶೇಷದ ದ್ರೋಹವನ್ನು ಲಕ್ಷಿಸದವನೂ, ನಿನ್ನ ಹಾಗೆ ಇರುವ ದೇವರು ಯಾರು? ಆತನು ತನ್ನ ಕೋಪವನ್ನು ಎಂದೆಂದಿಗೂ ಇಟ್ಟುಕೊಳ್ಳುವುದಿಲ್ಲ. ಏಕೆಂದರೆ ನೀವು ಕರುಣೆಯಲ್ಲಿ ಸಂತೋಷಪಡುತ್ತೀರಿ.


ನಿನ್ನ ಜನರನ್ನೂ ಏಕಾಂತವಾಗಿ ಅಡವಿಯಲ್ಲಿ ಕರ್ಮೆಲಿನ ನಡುವೆ ವಾಸವಾಗಿರುವ ನಿನ್ನ ಬಾಧ್ಯತೆಯ ಮಂದೆಯನ್ನೂ ನಿನ್ನ ಕೋಲಿನಿಂದ ಮೇಯಿಸು. ಅವರು ಪೂರ್ವದ ದಿವಸಗಳಲ್ಲಾದ ಹಾಗೆ ಬಾಷಾನಿನಲ್ಲಿಯೂ ಗಿಲ್ಯಾದಿನಲ್ಲಿಯೂ ಮೇಯಲಿ.


ಇದಲ್ಲದೆ ಯಾಕೋಬನ ಶೇಷವು ಅನೇಕ ಜನಾಂಗಳ ಮಧ್ಯದಲ್ಲಿ ಯೆಹೋವ ದೇವರಿಂದ ಬಂದ ಮಂಜಿನ ಹಾಗೆಯೂ ಹುಲ್ಲಿನ ಮೇಲೆ ಜಡಿಮಳೆಯ ಹಾಗೆಯೂ ಇರುವುದು. ಅದು ಮನುಷ್ಯರಿಗೋಸ್ಕರ ಆತುಕೊಳ್ಳುವುದಿಲ್ಲ, ಮನುಷ್ಯ ಮಕ್ಕಳಿಗಾಗಿ ಕಾದುಕೊಳ್ಳುವುದಿಲ್ಲ.


ಆದರೆ ನಾನು ತೇಮಾನಿನ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಬೊಚ್ರದ ಕೋಟೆಗಳನ್ನು ದಹಿಸಿಬಿಡುವುದು.”


ಆಗ ಯೆಹೂದದ ಜನರು ಮತ್ತು ಇಸ್ರಾಯೇಲ್ ಜನರು ಒಟ್ಟುಗೂಡಿಕೊಂಡು ತಮಗೆ ಒಬ್ಬ ನಾಯಕನನ್ನು ನೇಮಕ ಮಾಡಿಕೊಂಡು, ದೇಶದೊಳಗಿಂದ ಹೊರಗೆ ಬರುವರು. ಏಕೆಂದರೆ ಇಜ್ರೆಯೇಲಿನ ಆ ದಿನವು ಮಹಾದಿನವಾಗಿರುವುದು.


‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ನಾನು ಇಸ್ರಾಯೇಲರನ್ನು ಅವರು ಹೋಗಿರುವ ಕಡೆಯಿಂದ ಒಂದುಗೂಡಿಸಿ ಅವರ ಸ್ವಂತ ದೇಶಕ್ಕೆ ತರುವೆನು.


ನೀವು ನನ್ನ ಕುರಿಗಳು, ನನ್ನ ಹುಲ್ಲುಗಾವಲಿನ ಕುರಿಗಳು, ಮತ್ತು ನಾನು ನಿಮ್ಮ ದೇವರು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’ ”


ಆದ್ದರಿಂದ ನಾನು ನನ್ನ ಮಂದೆಯನ್ನು ಕಾಪಾಡುತ್ತೇನೆ. ಅವು ಎಂದೆಂದೂ ಕೊಳ್ಳೆಯಾಗುವುದಿಲ್ಲ. ನಾನು ಕುರಿಮೇಕೆಗಳ ಮಧ್ಯೆ ನ್ಯಾಯತೀರಿಸುವೆನು.


“ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನೇ ನನ್ನ ಕುರಿಗಳನ್ನು ಹುಡುಕಿ ಅವುಗಳನ್ನು ಮೇಯಿಸುತ್ತೇನೆ.


“ಆದರೆ ನಾನು ನನ್ನ ಮಂದೆಯ ಶೇಷವನ್ನು, ನಾನು ಅವರನ್ನು ಓಡಿಸಿಬಿಟ್ಟ ಎಲ್ಲಾ ದೇಶಗಳಿಂದ ಕೂಡಿಸಿ, ಅವರನ್ನು ತಮ್ಮ ಹಟ್ಟಿಗಳಿಗೆ ತಿರುಗಿ ತರುವೆನು. ಅವರು ಪೀಳಿಗೆಯಾಗಿ ಹೆಚ್ಚುವರು.


ಯೆಹೋವ ದೇವರ ಖಡ್ಗವು ರಕ್ತದಲ್ಲಿ ಸ್ನಾನ ಮಾಡಿದೆ. ಅದು ಕುರಿ ಮತ್ತು ಹೋತಗಳ ರಕ್ತದಿಂದಲೂ, ಟಗರುಗಳ ಮೂತ್ರಪಿಂಡದ ಕೊಬ್ಬಿನಿಂದಲೂ ಮುಚ್ಚಲಾಗಿದೆ. ಏಕೆಂದರೆ ಯೆಹೋವ ದೇವರಿಗೆ ಬೊಚ್ರದಲ್ಲಿ ಬಲಿಯು, ಎದೋಮಿನ ದೇಶದಲ್ಲಿ ದೊಡ್ಡ ಕೊಲೆಯು ಉಂಟು.


ಇಸ್ರಾಯೇಲರೇ, ಯೆಹೋವ ದೇವರು ಯೂಫ್ರೇಟೀಸ್ ನದಿ ಮೊದಲುಗೊಂಡು ಈಜಿಪ್ಟ್ ದೇಶದ ನದಿಯವರೆಗೆ ಹೊಡೆಯುವರು, ಆಗ ನಿಮ್ಮನ್ನು ಒಬ್ಬೊಬ್ಬರನ್ನಾಗಿ ಕೂಡಿಸುವರು.


ಆ ದಿನದಲ್ಲಿ ಯೆಹೋವ ದೇವರು ಉಳಿದ ತಮ್ಮ ಜನರನ್ನು ಬಿಡಿಸಿಕೊಳ್ಳುವುದಕ್ಕೆ ಎರಡನೇ ಸಾರಿ ಕೈಹಾಕಿ ಅಸ್ಸೀರಿಯ, ಈಜಿಪ್ಟ್, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾತ್ ಮತ್ತು ಮೆಡಿಟರೇನಿಯನ್ ಸಮುದ್ರದ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವರು.


ಆ ಕಾಲದಲ್ಲಿ ಯೆಹೂದದ ವಂಶವು ಇಸ್ರಾಯೇಲ್ ವಂಶದೊಡನೆ ಜೊತೆಯಾಗಿ ಬಾಳುವುದು. ಈ ಎರಡು ವಂಶಗಳೂ ಉತ್ತರ ಪ್ರಾಂತಗಳನ್ನು ಬಿಟ್ಟು, ನಾನು ನಿಮ್ಮ ಪೂರ್ವಜರಿಗೆ ಬಾಧ್ಯವಾಗಿ ಕೊಟ್ಟ ನಾಡಿಗೆ ಬರುವುವು.”


ಬೆಲಗನ ಮರಣದ ನಂತರ ಅವನ ಬದಲಾಗಿ ಬೊಚ್ರದವನಾದ ಜೆರಹನ ಮಗ ಯೋಬಾಬನು ಉತ್ತರಾಧಿಕಾರಿಯಾದನು.


ಪಟ್ಟಣ ಪ್ರದೇಶಗಳು ಹಾಳಾಗಿ ಮೇಕೆಮರಿಗಳಿಗೆ ಹುಲ್ಲುಗಾವಲುಗಳಾಗುವುವು. ಕುರಿಮರಿಗಳು ಅಲ್ಲಿ ಮೇಯುವುವು.


ಮಾರ್ಗ ತೆರೆಯುವಾತನು ಅವರ ಮುಂದೆ ಹೋಗುವನು. ಅವರು ಬಾಗಿಲು ತೆರೆದು ಹೊರಗೆ ಹೋಗುವರು. ಅವರ ಅರಸನು ಅವರ ಮುಂದೆ ಹಾದು ಹೋಗುತ್ತಾನೆ. ಯೆಹೋವ ದೇವರು ಅವರ ಮುಂದಾಳತ್ವವನ್ನು ವಹಿಸುವರು.”


ಕುರಿಮಂದೆಯ ಬುರುಜೇ, ಚೀಯೋನ್ ಪುತ್ರಿಯ ದುರ್ಗವೇ, ಮೊದಲಿದ್ದ ರಾಜ್ಯಾಧಿಕಾರವೂ ನಿಮಗೆ ಲಭಿಸುವುದು. ಯೆರೂಸಲೇಮಿನ ಪುತ್ರಿಗೆ ರಾಜ್ಯತ್ವವೂ ಬರುವುದು.”


ಯಾಕೋಬನ ಜನಶೇಷವು ದೇಶದೇಶಗಳೊಳಗೆ ಅನೇಕ ಜನಾಂಗಗಳ ಮಧ್ಯದಲ್ಲಿ, ಅಡವಿಯ ಮೃಗಗಳಲ್ಲಿ ಸಿಂಹದಂತೆಯೂ ಕುರಿಮಂದೆಗಳಲ್ಲಿ ಪ್ರಾಯದ ಸಿಂಹದಂತೆಯೂ ಇರುವುದು. ಅದು ಹಾದುಹೋದರೆ ಇಳಿದುಬಿಟ್ಟು ಹರಿದುಬಿಡುತ್ತದೆ, ಯಾರೂ ಬಿಡಿಸಲಾರರು,


ಬೆಲಗನ ಮರಣದ ನಂತರ ಅವನ ಬದಲಾಗಿ ಬೊಚ್ರದವನಾದ ಜೆರಹನ ಮಗ ಯೋಬಾಬನು ಉತ್ತರಾಧಿಕಾರಿಯಾದನು.


ಜನಗಳೊಳಗಿಂದ ಅವುಗಳನ್ನು ಹೊರಗೆ ತೆಗೆದು, ದೇಶಗಳಿಂದ ಅವುಗಳನ್ನು ಕೂಡಿಸಿ, ಅವುಗಳನ್ನು ಸ್ವಂತ ದೇಶಕ್ಕೆ ತರುವೆನು. ಅವುಗಳನ್ನು ಇಸ್ರಾಯೇಲಿನ ಪರ್ವತಗಳ ಮೇಲೆ ಹಳ್ಳಗಳಲ್ಲಿ ನಿವಾಸಿಗಳುಳ್ಳ ಎಲ್ಲಾ ದೇಶಗಳಲ್ಲಿಯೂ ಮೇಯಿಸುವೆನು.


ಆ ಕಾಲದಲ್ಲಿ ನಾನು ನಿಮ್ಮನ್ನು ಒಟ್ಟುಗೂಡಿಸುವೆನು. ಆ ಸಮಯದಲ್ಲಿ ನಾನು ಮನೆಗೆ ನಿಮ್ಮನ್ನು ಕರೆದುಕೊಂಡು ಬರುವೆನು. ನಾನು ನಿಮ್ಮ ಸೌಭಾಗ್ಯವನ್ನು ನಿಮ್ಮ ಕಣ್ಣೆದುರಿಗೆ ಪುನಃಸ್ಥಾಪಿಸಿ ಭೂಮಿಯ ಎಲ್ಲಾ ಜನರಲ್ಲಿ ನಿಮಗೆ ಕೀರ್ತಿಯನ್ನೂ ಹೊಗಳಿಕೆಯನ್ನೂ ಉಂಟುಮಾಡುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು