Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 2:13 - ಕನ್ನಡ ಸಮಕಾಲಿಕ ಅನುವಾದ

13 ಮಾರ್ಗ ತೆರೆಯುವಾತನು ಅವರ ಮುಂದೆ ಹೋಗುವನು. ಅವರು ಬಾಗಿಲು ತೆರೆದು ಹೊರಗೆ ಹೋಗುವರು. ಅವರ ಅರಸನು ಅವರ ಮುಂದೆ ಹಾದು ಹೋಗುತ್ತಾನೆ. ಯೆಹೋವ ದೇವರು ಅವರ ಮುಂದಾಳತ್ವವನ್ನು ವಹಿಸುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಹೊಡೆದು ಹೋಗುವವನು ಅವರ ಮುಂದೆ ಹೊರಟಿದ್ದಾನೆ. ಅವರೂ ಬಾಗಿಲನ್ನು ಒಡೆದು ನುಗ್ಗಿ ಹೊರಟಿದ್ದಾರೆ. ಅವರ ಅರಸನು ಅವರ ಮುಂದೆ ತೆರಳಿದ್ದಾನೆ. ಯೆಹೋವನು ಅವರ ಮುಂಭಾಗದಲ್ಲಿ ನಡೆಯುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಬಾಗಿಲನ್ನು ಒಡೆದು ತೆರೆಯುವಂಥವನು ಜನರ ಮುಂದಾಳಾಗಿ ಹೊರಡುವನು; ಅವರೂ ಬಾಗಿಲನ್ನು ಒಡೆದು ನುಗ್ಗುವರು; ಅವರ ಅರಸನು ಮುಂದಾಳಾಗಿ ಹೋಗುವನು. ಸರ್ವೇಶ್ವರಸ್ವಾಮಿಯೇ ಅವರ ಮುಂದಾಳತ್ವವನ್ನು ವಹಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಒಡೆಯುವವನು ಅವರ ಮುಂದೆ ಹೊರಟಿದ್ದಾನೆ; ಅವರೂ ಬಾಗಿಲನ್ನು ಒಡೆದು ನುಗ್ಗಿ ಹೊರಟಿದ್ದಾರೆ; ಅವರ ಅರಸನು ಅವರ ಮುಂದೆ ತೆರಳಿದ್ದಾನೆ, ಯೆಹೋವನು ಅವರ ಮುಂಭಾಗದಲ್ಲಿ ನಡೆಯುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆಗ ಒಡೆದುಹಾಕುವವನು ಜನಗಳ ಮುಂದೆ ಮುನ್ನುಗ್ಗಿ ಹೋಗಿ, ದ್ವಾರಗಳನ್ನು ಒಡೆದುಹಾಕಿದಾಗ ಜನರು ಪಟ್ಟಣವನ್ನು ಬಿಟ್ಟುಹೋಗುವರು. ಅವರು ತಮ್ಮ ರಾಜನನ್ನೂ ಕರ್ತನನ್ನೂ ಹಿಂಬಾಲಿಸಿಕೊಂಡು ಅಲ್ಲಿಂದ ಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 2:13
36 ತಿಳಿವುಗಳ ಹೋಲಿಕೆ  

ನೀವು ತ್ವರೆಯಾಗಿ ಹೋಗುವುದಿಲ್ಲ, ಓಡಿ ಹೋಗುವುದಿಲ್ಲ. ಏಕೆಂದರೆ ಯೆಹೋವ ದೇವರೇ ನಿಮ್ಮ ಮುಂದೆ ಹೋಗುವರು, ಇಸ್ರಾಯೇಲಿನ ದೇವರು ನಿಮ್ಮ ಹಿಂದೆ ಕಾವಲು ಕಾಯುವರು.


ಅವರು ಕುರಿಮರಿಯಾದವರ ಮೇಲೆ ಯುದ್ಧಮಾಡುವರು. ಆದರೆ ಕುರಿಮರಿಯಾದವರು ಕರ್ತರ ಕರ್ತರೂ ರಾಜಾಧಿರಾಜರೂ ಆಗಿರುವುದರಿಂದ ಅವರನ್ನು ಜಯಿಸುವರು. ಅವರೊಂದಿಗಿದ್ದವರು ದೇವರಿಂದ ಕರೆಹೊಂದಿದವರೂ ಆಯ್ದುಕೊಂಡವರೂ ನಂಬಿಗಸ್ತರೂ ಆಗಿರುವರು.”


ಏಕೆಂದರೆ, ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿ ಆಗಿರುವವರು ಇವರನ್ನು ಮೇಯಿಸಿ; ‘ಜೀವಜಲದ ಒರತೆಗಳ ಬಳಿ ನಡೆಸುವರು.’ ‘ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವರು,’” ಎಂದು ಹೇಳಿದನು.


ಯೇಸು ಸದಾಕಾಲವೂ ಮೆಲ್ಕಿಜೆದೇಕನ ಕ್ರಮದ ಮಹಾಯಾಜಕರಾಗಿ ಅತಿ ಪರಿಶುದ್ಧ ಸ್ಥಳಕ್ಕೆ ಮುಂದಾಗಿ ಹೋಗಿ ಯೇಸು ನಮ್ಮ ಪರವಾಗಿ ಪ್ರವೇಶಿಸಿದ್ದಾರೆ.


ಯೆಹೋವ ದೇವರಲ್ಲಿ ನಾನು ಅವರನ್ನು ಬಲಪಡಿಸುವೆನು. ದೇವರ ಹೆಸರಿನಲ್ಲಿ ಅವರು ಸುರಕ್ಷಿತರಾಗಿ ಬಾಳುವರು,” ಎಂದು ಯೆಹೋವ ದೇವರು ಹೇಳುತ್ತಾರೆ.


ಆಗ ಯೆಹೂದದ ಜನರು ಮತ್ತು ಇಸ್ರಾಯೇಲ್ ಜನರು ಒಟ್ಟುಗೂಡಿಕೊಂಡು ತಮಗೆ ಒಬ್ಬ ನಾಯಕನನ್ನು ನೇಮಕ ಮಾಡಿಕೊಂಡು, ದೇಶದೊಳಗಿಂದ ಹೊರಗೆ ಬರುವರು. ಏಕೆಂದರೆ ಇಜ್ರೆಯೇಲಿನ ಆ ದಿನವು ಮಹಾದಿನವಾಗಿರುವುದು.


“ಆ ಅರಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವರು. ಅದು ಬೇರೆ ಜನರಿಗೆ ಸೇರಿ ಹೋಗುವುದಿಲ್ಲ. ಅದು ಆ ರಾಜ್ಯಗಳನ್ನೆಲ್ಲಾ ಧ್ವಂಸಮಾಡಿ, ಮುಗಿಸಿ, ತಾನು ಎಂದೆಂದಿಗೂ ನಿಲ್ಲುವುದು.


ನಾನು ಅವನನ್ನು ಜನರಿಗೆ ಸಾಕ್ಷಿಯನ್ನಾಗಿಯೂ, ಜನರಿಗೆ ನಾಯಕನನ್ನಾಗಿಯೂ, ಅಧಿಪತಿಯನ್ನಾಗಿಯೂ ಕೊಟ್ಟೆನು.


“ಸಮಾಧಿಯ ಶಕ್ತಿಯಿಂದ ಅವರನ್ನು ಕ್ರಯಕೊಟ್ಟು ವಿಮೋಚಿಸುವೆನು. ಮರಣದಿಂದ ಅವರನ್ನು ಬಿಡಿಸುವೆನು. ಮರಣವೇ ನಿನ್ನ ಉಪದ್ರವ ಎಲ್ಲಿ? ಪಾತಾಳವೇ ನಿನ್ನ ವಿನಾಶವೆಲ್ಲಿ? “ಅನುಕಂಪವು ನನ್ನಿಂದ ದೂರವಾಗಿದೆ.


ಆಮೇಲೆ ಇಸ್ರಾಯೇಲರು ತಿರುಗಿಕೊಂಡು ಅವರ ದೇವರಾದ ಯೆಹೋವ ದೇವರನ್ನು ಮತ್ತು ಅವರ ಅರಸನಾದ ದಾವೀದನನ್ನು ಹುಡುಕಿಕೊಂಡು, ಅಂತ್ಯ ದಿವಸಗಳಲ್ಲಿ ಯೆಹೋವ ದೇವರನ್ನೂ, ಆತನ ಒಳ್ಳೆಯತನವನ್ನೂ ಭಯಭಕ್ತಿಯಿಂದ ಪಡೆಯುವರು.


“ನಾನೇ, ನಾನೇ ನಿಮ್ಮನ್ನು ಸಂತೈಸುವವನಾಗಿದ್ದೇನೆ. ಹಾಗಾದರೆ ಸಾಯುವ ಮನುಷ್ಯನಿಗೂ, ಹುಲ್ಲಿನಂತ್ತಿರುವ ಮಾನವನಿಗೂ ಭಯಪಡುವ ನೀನು ಯಾರು?


“ಯಾಕೋಬೇ, ನಿನ್ನವರನ್ನೆಲ್ಲಾ ನಿಶ್ಚಯವಾಗಿ ಕೂಡಿಸುವೆನು. ಇಸ್ರಾಯೇಲಿನಲ್ಲಿ ಉಳಿದವರನ್ನು ನಿಶ್ಚಯವಾಗಿ ಕೂಡಿಸುವೆನು. ಬೊಚ್ರದ ಕುರಿಗಳಂತೆಯೂ ತಮ್ಮ ಹಟ್ಟಿಯ ನಡುವೆ ಇರುವ ಮಂದೆಯಂತೆಯೂ ಅವರನ್ನು ಒಟ್ಟಾಗಿ ಕೂಡಿಸುವೆನು. ಹುಲ್ಲುಗಾವಲಿನ ಕುರಿಮಂದೆಯಂತೆ, ಸ್ಥಳವು ಜನರಿಂದ ತುಂಬಿ ತುಳುಕುವುದು.


ಆಗ ನಾನು, “ಯಾಕೋಬಿನ ಮುಖ್ಯಸ್ಥರೇ, ಇಸ್ರಾಯೇಲಿನ ಮನೆತನದ ಪ್ರಧಾನರೇ, ಈಗ ಕೇಳಿರಿ. ನೀವು ನ್ಯಾಯವನ್ನು ಪ್ರೀತಿಸಬಾರದೇ.


ಆಗ ಇಸ್ರಾಯೇಲ್ ದಂಡಿನ ಮುಂದೆ ಹೋಗುತ್ತಿದ್ದ ದೇವದೂತನು ತನ್ನ ಸ್ಥಳವನ್ನು ಬಿಟ್ಟು ಅವರ ಹಿಂದೆ ಬಂದನು. ಅವರ ಮುಂದೆ ಇದ್ದ ಮೇಘಸ್ತಂಭವು ಅಲ್ಲಿಂದ ಬಂದು ಅವರ ಹಿಂದೆ ನಿಂತುಕೊಂಡಿತು.


ಆಗ ಯೆಹೋಶುವನು ಯಾಜಕರಿಗೆ, “ನೀವು ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರಿಗೆ ಮುಂದಾಗಿ ಹೋಗಿರಿ,” ಎಂದನು. ಹಾಗೆಯೇ ಅವರು ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರ ಮುಂದೆ ಹೊರಟರು.


“ನಿಮ್ಮ ತಾಯಿಯ ಸಂಗಡ ವಾದಮಾಡಿರಿ, ಅವಳೊಂದಿಗೆ ವಾದಮಾಡಿರಿ, ಏಕೆಂದರೆ ಅವಳು ನನ್ನ ಹೆಂಡತಿಯಲ್ಲ, ಮತ್ತು ನಾನು ಅವಳ ಗಂಡನಲ್ಲ. ಅವಳು ತನ್ನ ವ್ಯಭಿಚಾರದ ನೋಟವನ್ನು ಮತ್ತು ತನ್ನ ಸ್ತನಗಳ ಮಧ್ಯದಿಂದ ಅಪನಂಬಿಗಸ್ತಿಕೆಯನ್ನು ತ್ಯಜಿಸಲಿ.


“ಕುಂಟಾದದ್ದನ್ನು ಉಳಿದದ್ದನ್ನಾಗಿಯೂ ತಳ್ಳಿಬಿಟ್ಟಿದ್ದನ್ನು ಬಲವಾದ ಜನಾಂಗವಾಗಿಯೂ ಮಾಡುವೆನು. ಯೆಹೋವ ದೇವರು ಇಂದಿನಿಂದ ಸದಾಕಾಲವೂ ಚೀಯೋನ್ ಪರ್ವತದಲ್ಲಿ ಅವರ ಮೇಲೆ ಆಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು