Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 2:5 - ಕನ್ನಡ ಸಮಕಾಲಿಕ ಅನುವಾದ

5 ಆದ್ದರಿಂದ ಚೀಟುಹಾಕಿ ದೇಶವನ್ನು ಹಂಚುವದಕ್ಕೆ ಯೆಹೋವ ದೇವರ ಸಭೆಯಲ್ಲಿ ನಿನಗೆ ಯಾರೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಹೀಗಿರಲು ಯೆಹೋವನ ಸಭೆಯವರ ಭೂಮಿಯ ಮೇಲೆ ಚೀಟು ಹಾಕಿ ನೂಲೆಳೆಯಲಿಕ್ಕೆ ನಿಮ್ಮಲ್ಲಿ ಯಾರೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಹೀಗಿರಲು ನೂಲೆಳೆದು ಭೂಮಿಯನ್ನು ಹಂಚಿಕೊಡಲು ಸ್ವಾಮಿಯ ಸಭೆಯಲ್ಲಿ ಯಾರೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಹೀಗಿರಲು ಯೆಹೋವನ ಸಭೆಯವರ ಭೂವಿುಯ ಮೇಲೆ ನೂಲೆಳೆಯಲಿಕ್ಕೆ ನಿಮ್ಮಲ್ಲಿ ಯಾರೂ ಇರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಈಗ ನಾವು ನಮ್ಮ ದೇಶವನ್ನು ಅಳತೆಮಾಡಿ ದೇವಜನರಿಗೆ ಹಂಚಲು ಆಗುವದಿಲ್ಲ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 2:5
12 ತಿಳಿವುಗಳ ಹೋಲಿಕೆ  

ಒಂದೊಂದು ಗೋತ್ರಕ್ಕೆ ಮೂರು ಮಂದಿಯ ಪ್ರಕಾರ ನಿಮ್ಮೊಳಗಿಂದ ಕರೆದುಕೊಂಡು ಬನ್ನಿರಿ. ನಾನು ಅವರನ್ನು ಕಳುಹಿಸುವೆನು. ಅವರು ಎದ್ದು ದೇಶದಲ್ಲೆಲ್ಲಾ ಹೋಗಿ ತಮ್ಮ ಬಾಧ್ಯತೆಗಳ ಪ್ರಕಾರ ಅದನ್ನು ಅಳತೆಮಾಡಿ ವಿವರವಾಗಿ ಬರೆಯಲಿ. ತರುವಾಯ ನನ್ನ ಬಳಿಗೆ ಅವರು ಬರಲಿ.


ಮಹೋನ್ನತ ದೇವರು ಜನಾಂಗಗಳಿಗೆ ಸ್ಥಳವನ್ನು ಕೊಡುವಾಗಲೂ, ಅವರು ಮಾನವರನ್ನು ವಿಂಗಡಿಸುವಾಗಲೂ, ಇಸ್ರಾಯೇಲರ ಲೆಕ್ಕದ ಪ್ರಕಾರ ಜನರ ಮೇರೆಗಳನ್ನು ಗುರುತಿಸಿಕೊಂಡರು.


ಆಗ ಯೆಹೋಶುವನು ಅವರಿಗೆ ಶೀಲೋವಿನಲ್ಲಿ ಯೆಹೋವ ದೇವರ ಮುಂದೆ ಚೀಟುಗಳನ್ನು ಹಾಕಿದನು. ಅಲ್ಲಿ ಯೆಹೋಶುವನು ಇಸ್ರಾಯೇಲರಿಗೆ ನಾಡನ್ನು ಅವರ ಗೋತ್ರಗಳ ಪ್ರಕಾರ ಪಾಲುಗಳನ್ನು ಹಂಚಿಕೊಟ್ಟನು.


ಅವರು ಯೆಹೋವ ದೇವರ ದೇಶದಲ್ಲಿ ನೆಲೆಸುವುದಿಲ್ಲ. ಆದರೆ ಎಫ್ರಾಯೀಮು ಈಜಿಪ್ಟಿಗೆ ಹಿಂದಿರುಗುವುದು. ಅವರು ಅಸ್ಸೀರಿಯದಲ್ಲಿ ಅಶುದ್ಧವಾದವುಗಳನ್ನು ತಿನ್ನುವರು.


ನನ್ನ ಪಾಲಿಗೆ ಬಂದ ಮೇರೆಯ ಸ್ಥಳವೂ ಸುಂದರವಾದದ್ದು; ನಿಶ್ಚಯವಾಗಿಯೂ, ನನಗೆ ದೊರೆತ ಸ್ವತ್ತು ಆನಂದಕರವಾದದ್ದು.


ತೇಲ್ಮೆಲಹ, ತೇಲ್ಹರ್ಷ, ಕೆರೂಬ್, ಅದ್ದಾನ್, ಇಮ್ಮೇರ್ ಎಂಬ ಊರುಗಳಿಂದ ಹೊರಟುಬಂದವರಾಗಿದ್ದು, ತಮ್ಮ ಗೋತ್ರವಂಶಾವಳಿಗಳನ್ನು ತೋರಿಸಿ, ತಾವು ಇಸ್ರಾಯೇಲರೆಂಬುದನ್ನು ರುಜುಪಡಿಸಲಾಗದೇ ಇದ್ದವರು ಯಾರೆಂದರೆ:


ಅವರಿಗೆ ಹುಟ್ಟುವ ಮಕ್ಕಳಲ್ಲಿ ಮೂರನೆಯ ತಲಾಂತರದವರು ಯೆಹೋವ ದೇವರ ಸಭೆಯಲ್ಲಿ ಸೇರಬಹುದು.


ಅನೈತಿಕ ಸಂಬಂಧದಿಂದ ಹುಟ್ಟಿದ ಸಂತತಿಯವರು, ಹತ್ತನೆಯ ತಲಾಂತರದವರೆಗೂ ಯೆಹೋವ ದೇವರ ಸಭೆಗೆ ಸೇರಬಾರದು.


ಮೋಶೆಯು ಇಸ್ರಾಯೇಲರಿಗೆ ಆಜ್ಞಾಪಿಸಿ, “ನೀವು ಚೀಟುಹಾಕಿ ಸ್ವಾಧೀನಪಡಿಸಿಕೊಳ್ಳಬೇಕಾದ ದೇಶವು ಒಂಬತ್ತುವರೆ ಗೋತ್ರಗಳಿಗೆ ಕೊಡಬೇಕೆಂದು ಯೆಹೋವ ದೇವರು ಆಜ್ಞಾಪಿಸಿದ ದೇಶವು ಇದೇ.


ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ,


ಯೆಹೋವ ದೇವರು ಪ್ರವಾದಿಗಳಾದ ತಮ್ಮ ಸೇವಕರ ಮುಖಾಂತರ ಎಚ್ಚರಿಸಿದ ಹಾಗೆ, ಇಸ್ರಾಯೇಲನ್ನು ದೇವರು ತಮ್ಮ ಸಮ್ಮುಖದಿಂದ ತೆಗೆದುಹಾಕಿದರು. ಹೀಗೆ ಇಸ್ರಾಯೇಲರು ಬಹು ಕಾಲದವರೆಗೂ ತಮ್ಮ ದೇಶದಿಂದ ಅಸ್ಸೀರಿಯ ದೇಶಕ್ಕೆ ಸೆರೆಯಾಗಿ ಇರಬೇಕಾಯಿತು. ಅವರು ಇಂದಿನವರೆಗೂ ಅಲ್ಲಿಯೇ ಇದ್ದಾರೆ.


“ನಾನು ನಿಮಗೆ ಕಾನಾನ್ ದೇಶವನ್ನು ನಿಮ್ಮ ಬಾಧ್ಯತೆಯ ಪಾಲಾಗಿ ಕೊಡುವೆನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು