Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 3:12 - ಕನ್ನಡ ಸಮಕಾಲಿಕ ಅನುವಾದ

12 ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನನ್ನು ಹೊಲದ ಹಾಗೆ ಉಳಲಾಗುವುದು. ಯೆರೂಸಲೇಮು ಹಾಳುದಿಬ್ಬಗಳಾಗುವುದು. ಆಲಯದ ಬೆಟ್ಟವೂ ಕಾಡುಗುಡ್ಡಗಳಂತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಹೀಗಿರಲು ನಿಮ್ಮ ದೆಸೆಯಿಂದ ಚೀಯೋನ್ ಪಟ್ಟಣವು ಹೊಲದಂತೆ ಉಳಲ್ಪಡುವುದು, ಯೆರೂಸಲೇಮು ಹಾಳುದಿಬ್ಬಗಳಾಗುವುದು. ಯೆಹೋವನ ಆಲಯದ ಪರ್ವತವು ಕಾಡುಗುಡ್ಡಗಳಂತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆದುದರಿಂದ ನಿಮ್ಮ ದೆಸೆಯಿಂದಲೇ ಸಿಯೋನ್ ಪಟ್ಟಣವನ್ನು ಹೊಲದಂತೆ ಉಳಲಾಗುವುದು. ಜೆರುಸಲೇಮ್ ನಗರ ಹಾಳುದಿಬ್ಬವಾಗುವುದು. ದೇವಾಲಯದ ಪರ್ವತ ಕಾಡುಗುಡ್ಡದಂತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಹೀಗಿರಲು ನಿಮ್ಮ ದೆಸೆಯಿಂದ ಚೀಯೋನ್ ಪಟ್ಟಣವು ಹೊಲದಂತೆ ಗೇಯಲ್ಪಡುವದು, ಯೆರೂಸಲೇಮು ಹಾಳುದಿಬ್ಬಗಳಾಗುವದು, ಯೆಹೋವನ ಆಲಯದ ಪರ್ವತವು ಕಾಡುಗುಡ್ಡಗಳಂತಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಾಯಕರೇ, ನಿಮ್ಮಿಂದಾಗಿ ಚೀಯೋನ್ ನಾಶವಾಗುವದು. ನೇಗಿಲಿನಿಂದ ಉತ್ತಲ್ಪಟ್ಟ ಹೊಲದಂತೆ ಅದು ಇರುವದು. ಜೆರುಸಲೇಮ್ ಕಲ್ಲಿನ ರಾಶಿಯಾಗುವದು. ಆಲಯದ ಗುಡ್ಡವು ಬರಿದಾದ ಬೆಟ್ಟವಾಗುವುದು. ಅದರ ಮೇಲೆ ಪೊದೆಗಳು ಹುಲುಸಾಗಿ ಬೆಳೆದುಕೊಳ್ಳುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 3:12
18 ತಿಳಿವುಗಳ ಹೋಲಿಕೆ  

“ಮೊರೇಷೆತಿನವನಾದ ಮೀಕಾಯನು ಯೆಹೂದದ ಅರಸನಾದ ಹಿಜ್ಕೀಯನ ದಿನಗಳಲ್ಲಿ ಪ್ರವಾದಿಸಿ, ಯೆಹೂದದ ಜನರಿಗೆಲ್ಲಾ ಹೇಳಿದ್ದೇನೆಂದರೆ: ‘ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ಚೀಯೋನನ್ನು ಹೊಲದ ಹಾಗೆ ಉಳಲಾಗುವುದು; ಯೆರೂಸಲೇಮು ಹಾಳುದಿಬ್ಬಗಳಾಗುವುದು; ಆಲಯದ ಬೆಟ್ಟವೂ ಕಾಡುಗುಡ್ಡಗಳಂತಾಗುವುದು.’


ದೇವರೇ, ಜನಾಂಗಗಳು ನಿಮ್ಮ ಬಾಧ್ಯತೆಗೆ ಬಂದು, ನಿಮ್ಮ ಪರಿಶುದ್ಧ ಮಂದಿರವನ್ನು ಅಪವಿತ್ರ ಮಾಡಿ, ಯೆರೂಸಲೇಮನ್ನು ಹಾಳು ದಿಬ್ಬಗಳಾಗಿ ಮಾಡಿದ್ದಾರೆ.


ಆಗ ಯೇಸು ಅವರಿಗೆ, “ಇವುಗಳನ್ನೆಲ್ಲಾ ನೀವು ನೋಡುತ್ತೀರಲ್ಲಾ? ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯುವುದಿಲ್ಲ; ಎಲ್ಲವೂ ಕೆಡವಲಾಗುವವು ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ,” ಎಂದರು.


ಹೀಗಿರುವುದರಿಂದ ನಾನು ಸಮಾರ್ಯವನ್ನು ಹೊಲದ ದಿಬ್ಬವನ್ನಾಗಿಯೂ ದ್ರಾಕ್ಷಿಬಳ್ಳಿ ನೆಡುವ ಸ್ಥಳವನ್ನಾಗಿಯೂ ಮಾಡುವೆನು. ಅದರ ಕಲ್ಲುಗಳನ್ನು ತಗ್ಗಿನಲ್ಲಿ ಸುರಿದುಬಿಟ್ಟು, ಅದರ ಅಸ್ತಿವಾರಗಳನ್ನು ಹೊರಗೆಡಹುವೆನು.


ದೇವರು ಫಲವುಳ್ಳ ಭೂಮಿಯನ್ನು ಬಂಜರಾಗುವಂತೆ ಮಾಡಿದರು. ಇದಕ್ಕೆಲ್ಲ ಕಾರಣ ಅದರ ನಿವಾಸಿಗಳ ಕೆಟ್ಟತನವೇ ಆಗಿತ್ತು.


ಯೆರೂಸಲೇಮನ್ನು ದಿಬ್ಬಗಳಾಗಿಯೂ, ನರಿಗಳ ಸ್ಥಾನವಾಗಿಯೂ ಮಾಡುತ್ತೇನೆ. ಯೆಹೂದದ ಪಟ್ಟಣಗಳನ್ನು ನಿವಾಸವಿಲ್ಲದೆ ಹಾಳು ಮಾಡುತ್ತೇನೆ.


ನಾಡಿನಲ್ಲಿರುವ ನನ್ನ ಪರ್ವತವೇ, ನಿನ್ನ ಎಲ್ಲಾ ಪ್ರಾಂತಗಳಲ್ಲಿ ಪಾಪಕ್ಕಾಗಿರುವ ನಿನ್ನ ಉನ್ನತ ಪೂಜಾಸ್ಥಳಗಳನ್ನೂ ನಾನು ಕೊಳ್ಳೆಗೆ ಒಪ್ಪಿಸುವೆನು.


ಯೆಹೋವ ದೇವರು ಯೆಹೂದದ ಅರಸನ ಅರಮನೆಗೆ ಹೀಗೆ ಹೇಳುತ್ತಾರೆ: “ನೀನು ನನಗೆ ಗಿಲ್ಯಾದೂ, ಲೆಬನೋನಿನ ಗಿರಿಶೃಂಗ ಆಗಿದ್ದೀ. ಆದರೂ ನಿಶ್ಚಯವಾಗಿ ನಿನ್ನನ್ನು ಮರುಭೂಮಿಯಾಗಿಯೂ, ನಿವಾಸಿಗಳಿಲ್ಲದ ಪಟ್ಟಣಗಳನ್ನಾಗಿಯೂ ಮಾಡುವೆನು.


“ಆದ್ದರಿಂದ ಸರ್ವಶಕ್ತರಾದ ಯೆಹೋವ ದೇವರೂ, ಇಸ್ರಾಯೇಲಿನ ದೇವರೂ ಆದ ನಾನು ಹೇಳುವುದನ್ನು ಗಮನಿಸು: ‘ಯೆಹೂದ್ಯರಿಗೂ, ಯೆರೂಸಲೇಮಿನವರೆಲ್ಲರಿಗೂ ನಾನು ಕೊಟ್ಟ ಶಾಪದ ಕೇಡುಗಳನ್ನೆಲ್ಲಾ ಅವರ ಮೇಲೆ ಬರಮಾಡುವೆನು. ನಾನು ಹೇಳಿದರೂ, ಅವರು ಕೇಳಲಿಲ್ಲ; ಕೂಗಿದರೂ ಉತ್ತರ ಕೊಡಲಿಲ್ಲ.’ ”


“ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಯೆರೂಸಲೇಮಿನ ಮೇಲೆಯೂ, ಯೆಹೂದದ ಎಲ್ಲಾ ಪಟ್ಟಣಗಳ ಮೇಲೆಯೂ ಬರಮಾಡಿದ ಎಲ್ಲಾ ಕೇಡನ್ನು ನೀವು ಕಂಡಿದ್ದೀರಿ.


ಯೆಹೋವ ದೇವರ ಆಲಯವನ್ನೂ, ಅರಮನೆಯನ್ನೂ, ಯೆರೂಸಲೇಮಿನಲ್ಲಿರುವ ಸಮಸ್ತ ಮನೆಗಳನ್ನೂ, ಪ್ರತಿ ದೊಡ್ಡಮನುಷ್ಯರ ಮನೆಗಳನ್ನೂ ಬೆಂಕಿಯಿಂದ ಸುಟ್ಟುಬಿಟ್ಟನು.


ಏಕೆಂದರೆ ಚೀಯೋನ್ ಪರ್ವತವು ಹಾಳಾಗಿರುವುದರಿಂದಲೇ ನರಿಗಳು ಅವುಗಳ ಮೇಲೆ ತಿರುಗಾಡುವುವು.


ಅರಮನೆ ಹಾಳುಬಿದ್ದಿದೆ. ಗಲಭೆಯಪಟ್ಟಣವು ನಿರ್ಜನವಾಗುವುದು, ಪರ್ವತ ಮತ್ತು ಬುರುಜು ಶಾಶ್ವತವಾಗಿ ಗುಹೆಗಳಾಗುವುವು. ಕಾಡುಕತ್ತೆಗಳಿಗೆ ಬಯಲಾಗಿಯೂ, ದನಕರುಗಳಿಗೆ ಹುಲ್ಲುಗಾವಲುಗಳಾಗಿಯೂ ಇರುವುವು.


ಬೆಟ್ಟಗಳಿಗೋಸ್ಕರ ನಾನು ಅಳುವಿಕೆಯನ್ನೂ, ದುಃಖವನ್ನೂ, ಮರುಭೂಮಿಯ ಸ್ಥಳಗಳಿಗೋಸ್ಕರ ಗೋಳಾಟವನ್ನೂ ಎತ್ತುವೆನು. ಅವುಗಳ ಮೂಲಕ ಹಾದುಹೋಗದಂತೆ ಅವು ಸುಟ್ಟುಹೋಗಿದೆ. ದನಗಳ ಕೂಗು ಕಿವಿಗೆ ಬೀಳುವುದಿಲ್ಲ. ಆಕಾಶದ ಪಕ್ಷಿಗಳೂ, ಮೃಗಗಳೂ ಸಹ ಓಡಿ ಹೋಗಿವೆ.


ಆದರೆ ನೀವು ಈ ವಾಕ್ಯಗಳನ್ನು ಕೇಳದೆ ಹೋದರೆ, ಈ ಅರಮನೆ ಹಾಳಾಗುವುದು ಎಂದು ನನ್ನ ಮೇಲೆ ಆಣೆ ಇಡುತ್ತೇನೆಂದು ಯೆಹೋವ ದೇವರು ಹೇಳುತ್ತಾರೆ.’ ”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು