ಮೀಕ 3:6 - ಕನ್ನಡ ಸಮಕಾಲಿಕ ಅನುವಾದ6 ದರ್ಶನವಿಲ್ಲದೆ, ನಿಮಗೆ ರಾತ್ರಿಯಾಗುವುದು; ಶಕುನವಿಲ್ಲದೆ ನಿಮಗೆ ಕತ್ತಲಾಗುವುದು. ಪ್ರವಾದಿಗಳಿಗೆ ಸೂರ್ಯ ಮುಳುಗುವುದು. ಅವರ ಮೇಲೆ ಹಗಲು ಕತ್ತಲೆಯಾಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 “ನೀವು ಇಂಥವರಾದ ಕಾರಣ ನಿಮಗೆ ರಾತ್ರಿಯಾಗುವುದು, ದಿವ್ಯದರ್ಶನವಾಗದು, ನಿಮಗೆ ಕತ್ತಲು ಕವಿಯುವುದು ಮತ್ತು ಕಣಿಹೇಳಲಾಗದು. ಸೂರ್ಯನು ಪ್ರವಾದಿಗಳಿಗೆ ಮುಣುಗುವನು, ಹಗಲು ಅವರಿಗೆ ಕಾರ್ಗತ್ತಲಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಅಂಥ ಪ್ರವಾದಿಗಳಿಗೆ ಸರ್ವೇಶ್ವರ: “ಅಂಧಕಾರ ನಿಮ್ಮನ್ನು ಆವರಿಸುವುದು. ದಿವ್ಯದರ್ಶನ ನಿಮಗೆ ದೊರಕದು. ನಿಮಗೆ ಕತ್ತಲು ಕವಿದಂತಾಗಿ ಕಣಿಹೇಳಲು ಸಾಧ್ಯವಾಗದು. ಸೂರ್ಯ ನಿಮ್ಮ ಪಾಲಿಗೆ ಮುಳುಗಿದಂತೆಯೇ, ಹಗಲು ನಿಮಗೆ ಕಾರ್ಗತ್ತಲೆಯಂತೆಯೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ನೀವು ಇಂಥವರಾದಕಾರಣ ನಿಮಗೆ ರಾತ್ರಿಯಾಗುವದು, ದಿವ್ಯದರ್ಶನವಾಗದು; ನಿಮಗೆ ಕತ್ತಲುಕವಿಯುವದು, ಕಣಿಹೇಳಲಾಗದು; ಸೂರ್ಯನು ಪ್ರವಾದಿಗಳಿಗೆ ಮುಣುಗುವನು, ಹಗಲು ಅವರಿಗೆ ಕಾರ್ಗತ್ತಲಾಗುವದು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 “ಹೀಗಿರುವದರಿಂದ ನಿಮಗೆ ರಾತ್ರಿಯಂತಿರುವದು. ನಿಮಗೆ ದರ್ಶನಗಳಾಗುವದಿಲ್ಲ. ಮುಂದೆ ಏನು ಸಂಭವಿಸುತ್ತದೆ ಎಂಬುದನ್ನು ನೀವು ನೋಡುವದಿಲ್ಲ. ಆದ್ದರಿಂದ ನಿಮಗೆ ಕತ್ತಲೆಯಂತಿದೆ. ಪ್ರವಾದಿಗಳಿಗೆ ಸೂರ್ಯನು ಮುಳುಗಿರುತ್ತಾನೆ. ಅವರಿಗೆ ಮುಂದೆ ಆಗುವಂಥದು ಕಾಣಿಸುವುದಿಲ್ಲ. ಆದ್ದರಿಂದ ಅವರಿಗೆ ಎಲ್ಲಾ ಕತ್ತಲೆಯಾಗಿದೆ. ಅಧ್ಯಾಯವನ್ನು ನೋಡಿ |