Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 3:7 - ಕನ್ನಡ ಸಮಕಾಲಿಕ ಅನುವಾದ

7 ಆಗ ದರ್ಶಿಗಳು ನಾಚಿಕೆಪಡುವರು, ಶಕುನಗಾರರು ಅವಮಾನಗೊಳ್ಳುವರು. ದೇವರಿಂದ ಉತ್ತರವಿಲ್ಲದ ಕಾರಣ, ಎಲ್ಲರೂ ತಮ್ಮ ತುಟಿಗಳನ್ನು ಮುಚ್ಚಿಕೊಳ್ಳುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ದಿವ್ಯದರ್ಶಿಗಳು ಆಶಾಭಂಗಪಡುವರು, ಕಣಿಯವರು ನಾಚಿಕೊಳ್ಳುವರು. ಎಲ್ಲರೂ ಬಟ್ಟೆಯಿಂದ ಬಾಯಿಮುಚ್ಚಿಕೊಳ್ಳುವರು. ಅವರಿಗೆ ದೈವೋತ್ತರವೇ ದೊರೆಯುವುದಿಲ್ಲ” ಎಂದು ನುಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಹೀಗಾಗಿ ದಿವ್ಯದರ್ಶಿಗಳಿಗೆ ಅವಮಾನವಾಗುವುದು. ಕಣಿ ಹೇಳುವವರಿಗೆ ನಾಚಿಕೆಯಾಗುವುದು. ಅವರೆಲ್ಲರೂ ಬಟ್ಟೆಯಿಂದ ಬಾಯಿ ಮುಚ್ಚಿಕೊಳ್ಳಬೇಕಾಗುವುದು. ಕಾರಣ, ಅವರಿಗೆ ದೇವರಿಂದ ಯಾವ ಪ್ರತ್ಯುತ್ತರವೂ ಬರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ದಿವ್ಯದರ್ಶಿಗಳು ಆಶಾಭಂಗಪಡುವರು, ಕಣಿಯವರು ನಾಚಿಕೆಗೊಳ್ಳುವರು, ಎಲ್ಲರೂ ಬಟ್ಟೆಯಿಂದ ಬಾಯಿಮುಚ್ಚಿಕೊಳ್ಳುವರು; ಅವರಿಗೆ ದೈವೋತ್ತರವೇ ದೊರೆಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ದೇವದರ್ಶಿಗಳು ನಾಚಿಕೆಗೊಂಡಿದ್ದಾರೆ. ಭವಿಷ್ಯ ಹೇಳುವವರು ನಾಚಿಕೆಗೊಳಗಾಗಿದ್ದಾರೆ. ಯಾಕೆಂದರೆ ದೇವರು ಅವರ ಕೂಡ ಮಾತನಾಡುವದನ್ನು ನಿಲ್ಲಿಸಿರುವದರಿಂದ ಅವರು ಏನನ್ನೂ ಹೇಳುವದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 3:7
19 ತಿಳಿವುಗಳ ಹೋಲಿಕೆ  

“ಆ ದಿವಸದಲ್ಲಿ, ಪ್ರವಾದಿಗಳು ಪ್ರವಾದಿಸುವಾಗ, ಅವರು ತಮ್ಮ ತಮ್ಮ ದರ್ಶನಗಳಿಗೆ ನಾಚಿಕೆಪಡುವರು. ಅವರು ಮೋಸಗೊಳಿಸಲು ಪ್ರವಾದಿಯ ಒರಟಾದ ವಸ್ತ್ರವನ್ನು ಧರಿಸುವುದಿಲ್ಲ.


ಸುಳ್ಳುಗಾರರ ಗುರುತುಗಳನ್ನು ನಿರರ್ಥಕ ಮಾಡುವವನೂ ಮತ್ತು ಕಣಿ ಹೇಳುವವರನ್ನು ಹುಚ್ಚರನ್ನಾಗಿ ಮಾಡುವವನೂ ಜ್ಞಾನಿಗಳನ್ನು ಹಿಂದಕ್ಕೆ ತಳ್ಳಿ, ಅವರ ತಿಳುವಳಿಕೆಯನ್ನು ಬುದ್ಧಿಹೀನವಾಗ ಮಾಡುವವನೂ


ದಿನಗಳು ಬರುವುವು, ಆಗ ನಾನು ದೇಶದಲ್ಲಿ ಕ್ಷಾಮವನ್ನು ಕಳುಹಿಸುವೆನು. ಅದು ರೊಟ್ಟಿಯ ಕ್ಷಾಮವಲ್ಲ, ನೀರಿನ ದಾಹದ ಬರವಲ್ಲ. ಯೆಹೋವ ದೇವರ ವಾಕ್ಯಗಳನ್ನು ಕೇಳಬೇಕೆಂಬ ಕ್ಷಾಮವನ್ನೇ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾನೆ.


ಸದ್ದಿಲ್ಲದೆ ಮೊರೆಯಿಡು, ವಿಯೋಗ ದುಃಖ ತೋರಿಸಬೇಡ. ಮುಂಡಾಸವನ್ನು ಸುತ್ತಿಕೊಂಡಿರು, ಕೆರಗಳನ್ನು ಮೆಟ್ಟಿಕೊಂಡಿರು, ನಿನ್ನ ಮೀಸೆ ಮತ್ತು ಗಡ್ಡವನ್ನು ಮುಚ್ಚಿಕೊಳ್ಳಬೇಡ, ದುಃಖಿಸುವವರ ಸಾಂಪ್ರದಾಯಿಕ ಆಹಾರವನ್ನು ತಿನ್ನಬೇಡಿರಿ.”


ಸೌಲನು ಯೆಹೋವ ದೇವರನ್ನು ಕೇಳಿಕೊಂಡಾಗ, ಯೆಹೋವ ದೇವರು ಅವನಿಗೆ ಸ್ವಪ್ನಗಳಿಂದಲಾದರೂ, ಊರೀಮಿನಿಂದಲಾದರೂ, ಪ್ರವಾದಿಗಳಿಂದಲಾದರೂ ಉತ್ತರ ಕೊಡಲಿಲ್ಲ.


“ಚರ್ಮರೋಗ ಇರುವ ಅವನು ತನ್ನ ಬಟ್ಟೆಗಳನ್ನು ಹರಿದುಕೊಂಡವನಾಗಿ, ತಲೆಗೂದಲನ್ನು ಕೆದರಿಕೊಂಡು, ಮುಖದ ಕೆಳಭಾಗವನ್ನು ಮುಚ್ಚಿಕೊಂಡು, ‘ನಾನು ಅಶುದ್ಧನು, ಅಶುದ್ಧನು,’ ಎಂದು ಕೂಗಬೇಕು.


ಜನಾಂಗಗಳು ನೋಡಿ ನಾಚಿಕೊಳ್ಳುವರು ತಮ್ಮ ತಮ್ಮ ಶಕ್ತಿಗೆ ವಂಚಿತರಾಗಿ ನಾಚಿಕೆಪಡುವರು. ತಮ್ಮ ಕೈಗಳನ್ನು ಬಾಯಿಯ ಮೇಲೆ ಇಡುವರು; ಅವರ ಕಿವಿಗಳು ಕಿವುಡಾಗಿ ಹೋಗುವುವು.


ನಾನು ಮಾಡಿದ ಹಾಗೆ ನೀವು ಮಾಡುವಿರಿ; ನಿಮ್ಮ ಮೀಸೆ ಮತ್ತು ಗಡ್ಡವನ್ನು ಮುಚ್ಚಿಕೊಳ್ಳುವುದಿಲ್ಲ ಅಥವಾ ದುಃಖಿಸುವವರ ಸಾಂಪ್ರದಾಯಿಕ ಆಹಾರವನ್ನು ತಿನ್ನುವುದಿಲ್ಲ.


ದೇವರಿಂದ ನಮಗೆ ಅದ್ಭುತವಾದ ಸಂಕೇತಗಳು ಕೊಟ್ಟಿರುವುದಿಲ್ಲ. ಪ್ರವಾದಿಗಳು ನಮಗೆ ಉಳಿದಿರುವುದಿಲ್ಲ. ಇದು ಎಷ್ಟು ಕಾಲ ಎಂದು ನಾವ್ಯಾರೂ ತಿಳಿದಿರುವುದಿಲ್ಲ.


ಆಗ ಸಮುಯೇಲನು ಸೌಲನಿಗೆ, “ನೀನು ನನ್ನನ್ನು ಇಲ್ಲಿ ಬರಮಾಡಿ ವಿಶ್ರಾಂತಿ ಕೆಡಿಸಿದೆ,” ಎಂದನು. ಅದಕ್ಕೆ ಸೌಲನು, “ನಾನು ಬಹಳ ಇಕ್ಕಟ್ಟಿನಲ್ಲಿದ್ದೇನೆ. ಏಕೆಂದರೆ ಫಿಲಿಷ್ಟಿಯರು ನನಗೆ ವಿರೋಧವಾಗಿ ಯುದ್ಧಮಾಡುತ್ತಾರೆ. ಆದರೆ ದೇವರು ನನ್ನನ್ನು ಬಿಟ್ಟುಹೋದರು. ಅವರು ಪ್ರವಾದಿಗಳ ಮುಖಾಂತರವಾದರೂ, ಸ್ವಪ್ನದ ಮುಖಾಂತರವಾದರೂ ನನಗೆ ಉತ್ತರ ಕೊಡಲಿಲ್ಲ. ಆದ್ದರಿಂದ ನಾನು ಮಾಡಬೇಕಾದದ್ದನ್ನು ನೀನು ತಿಳಿಸುವ ಹಾಗೆ ನಿನ್ನನ್ನು ಕರೆಸಿದೆನು,” ಎಂದನು.


ಅದಕ್ಕೆ ಸೌಲನು, “ನಾನು ಫಿಲಿಷ್ಟಿಯರನ್ನು ಹಿಂಬಾಲಿಸಿ ಹೋಗಲೋ? ನೀವು ಅವರನ್ನು ಇಸ್ರಾಯೇಲರ ಕೈಗೆ ಒಪ್ಪಿಸಿಕೊಡುವಿರೋ?” ಎಂದು ದೇವರ ಆಲೋಚನೆಯನ್ನು ಕೇಳಿದನು. ಆದರೆ ಅವರು ಅವನಿಗೆ ಆ ದಿವಸದಲ್ಲಿ ಉತ್ತರ ಕೊಡದೆ ಹೋದರು.


ಪೂರ್ವದಲ್ಲಿ ಇಸ್ರಾಯೇಲಿನಲ್ಲಿ ಯಾವನಾದರೂ ದೇವರ ಹತ್ತಿರ ವಿಚಾರಿಸಬೇಕಾದರೆ, “ಪ್ರವಾದಿಯ ಬಳಿಗೆ ಹೋಗೋಣ ಬನ್ನಿರಿ,” ಎನ್ನುವನು. ಏಕೆಂದರೆ ಈ ಕಾಲದಲ್ಲಿ ಪ್ರವಾದಿ ಎಂದು ಕರೆಯಿಸಿಕೊಳ್ಳುವವರನ್ನು ಪೂರ್ವಕಾಲದಲ್ಲಿ ದರ್ಶಿ ಎಂದು ಕರೆಯುತ್ತಿದ್ದರು.


ಇದಲ್ಲದೆ ಮಂತ್ರಗಾರರು ಹುಣ್ಣಿನ ನಿಮಿತ್ತ ಮೋಶೆಯ ಮುಂದೆ ನಿಂತುಕೊಳ್ಳಲಾರದೆ ಹೋದರು. ಏಕೆಂದರೆ ಹುಣ್ಣುಗಳು ಮಂತ್ರಗಾರರ ಮೇಲೆಯೂ ಈಜಿಪ್ಟಿನವರ ಮೇಲೆಯೂ ಇದ್ದವು.


ಆಗ ಅವರು ಯೆಹೋವ ದೇವರಿಗೆ ಮೊರೆಯಿಡುವರು; ಆದರೆ ಅವರು ಅವರಿಗೆ ಉತ್ತರ ಕೊಡುವುದಿಲ್ಲ. ಅವರು ಕೆಟ್ಟ ಕ್ರಿಯೆಗಳನ್ನು ಮಾಡಿದ ಪ್ರಕಾರವೇ, ಆ ಕಾಲದಲ್ಲಿ ಅವರಿಗೆ ತಮ್ಮ ಮುಖವನ್ನು ಮರೆಮಾಡುವರು.


ಆಗ ಜನರು, “ಬನ್ನಿರಿ, ಯೆರೆಮೀಯನಿಗೆ ವಿರೋಧವಾಗಿ ಯುಕ್ತಿಯನ್ನು ಕಲ್ಪಿಸೋಣ. ಯಾಜಕನಿಂದ ನಿಯಮ ಬೋಧನೆಯೂ, ಜ್ಞಾನಿಯಿಂದ ಆಲೋಚನೆಯೂ, ಪ್ರವಾದಿಯಿಂದ ವಾಕ್ಯವೂ ನಿಂತುಹೋಗುವುದಿಲ್ಲ. ಬನ್ನಿರಿ, ನಾಲಿಗೆಯಿಂದ ಅವನನ್ನು ಆಕ್ರಮಿಸೋಣ. ಅವನ ಮಾತುಗಳಲ್ಲಿ ಒಂದನ್ನಾದರೂ ಲಕ್ಷಿಸದೆ ಇರೋಣ,” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು