Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 4:10 - ಕನ್ನಡ ಸಮಕಾಲಿಕ ಅನುವಾದ

10 ಚೀಯೋನ್ ಪುತ್ರಿಯೇ ಹೆರುವವಳಂತೆ ವೇದನೆ ತಾಳಿಕೋ, ಏಕೆಂದರೆ ಈಗ ಪಟ್ಟಣದೊಳಗಿಂದ ಹೊರಟು ಹೊಲದಲ್ಲಿ ವಾಸಮಾಡಿ ಬಾಬಿಲೋನಿಗೆ ಹೋಗುವೆ, ಅಲ್ಲಿ ನಿನಗೆ ಬಿಡುಗಡೆಯಾಗುವುದು. ಅಲ್ಲಿ ಯೆಹೋವ ದೇವರು ನಿನ್ನನ್ನು ನಿನ್ನ ಶತ್ರುಗಳ ಕೈಯೊಳಗಿಂದ ವಿಮೋಚಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಚೀಯೋನ್ ಯುವತಿಯೇ, ಹೆರುವವಳಂತೆ ವೇದನೆಗೆ ಒಳಗಾಗು, ಯಾತನೆಪಡು. ನೀನೀಗ ಪಟ್ಟಣದಿಂದ ಹೊರಟು ಕಾಡಿನಲ್ಲಿ ವಾಸಿಸುತ್ತಾ ಬಾಬೆಲಿಗೆ ಸೇರುವಿ. ಅಲ್ಲೇ ನಿನಗೆ ಉದ್ಧಾರವಾಗುವುದು. ಅಲ್ಲೇ ಯೆಹೋವನು ಶತ್ರುಗಳ ಕೈಯಿಂದ ನಿನ್ನನ್ನು ಬಿಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಸಿಯೋನ್ ಕುವರಿಯೇ, ಪ್ರಸವವೇದನೆಯಿಂದ ನರಳಾಡು; ಪಟ್ಟಣವನ್ನು ಬಿಟ್ಟು, ಬಯಲಿನಲ್ಲಿ ವಾಸಮಾಡು. ಬಾಬಿಲೋನಿಗೆ ತೆರಳು. ಅಲ್ಲೇ ನಿನಗೆ ಉದ್ಧಾರವಾಗುವುದು. ಅಲ್ಲೇ ನಿನ್ನ ಶತ್ರುಗಳಿಂದ ಸರ್ವೇಶ್ವರ ಬಿಡುಗಡೆ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಚೀಯೋನ್ ಯುವತಿಯೇ, ಹೆರುವವಳಂತೆ ವೇದನೆಗೆ ಒಳಗಾಗು, ಯಾತನೆಪಡು; ನೀನೀಗ ಪಟ್ಟಣದೊಳಗಿಂದ ಹೊರಟು ಕಾಡಿನಲ್ಲಿ ವಾಸಿಸುತ್ತಾ ಬಾಬೆಲಿಗೆ ಸೇರುವಿ; ಅಲ್ಲೇ ನಿನಗೆ ಉದ್ಧಾರವಾಗುವದು, ಅಲ್ಲೇ ಯೆಹೋವನು ಶತ್ರುಗಳ ಕೈಯಿಂದ ನಿನ್ನನ್ನು ಬಿಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಚೀಯೋನ್ ಕುಮಾರಿಯೇ, ಪ್ರಸವವೇದನೆಯಲ್ಲಿರುವ ಸ್ತ್ರೀಯಂತೆ ನೀನು ನೋವನ್ನು ಅನುಭವಿಸು. ನೀನು ಜೆರುಸಲೇಮ್ ಪಟ್ಟಣದಿಂದ ಹೊರಗೆ ಹೋಗಿ ಹೊಲದಲ್ಲಿ ವಾಸಿಸುವೆ. ನಾನು ಹೇಳುವುದೇನೆಂದರೆ, ನೀನು ಬಾಬಿಲೋನಿಗೆ ಹೋಗುವೆ, ಆದರೆ ಅಲ್ಲಿ ನೀನು ರಕ್ಷಿಸಲ್ಪಡುವೆ. ಯೆಹೋವನು ಅಲ್ಲಿಗೆ ಬಂದು ನಿನ್ನನ್ನು ರಕ್ಷಿಸುವನು. ನಿನ್ನ ವೈರಿಗಳಿಂದ ನಿನ್ನನ್ನು ಬಿಡುಗಡೆ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 4:10
27 ತಿಳಿವುಗಳ ಹೋಲಿಕೆ  

ಬಾಬಿಲೋನಿನಿಂದ ಹೊರಡಿರಿ. ಕಸ್ದೀಯರ ಕಡೆಯಿಂದ ಓಡಿಹೋಗಿರಿ. ಹರ್ಷಧ್ವನಿಯಿಂದ ಇದನ್ನು ಹೇಳಿ ಪ್ರಕಟಿಸಿರಿ. ಭೂಮಿಯ ಕಟ್ಟಕಡೆಯವರೆಗೂ ಪ್ರಚಾರಪಡಿಸಿರಿ. “ಯೆಹೋವ ದೇವರು ತಮ್ಮ ಸೇವಕನಾದ ಯಾಕೋಬನ್ನು ವಿಮೋಚಿಸಿದ್ದಾರೆ,” ಎಂದು ನೀವು ಹೇಳಿರಿ.


ಎಫ್ರಾಯೀಮಿಗೆ ಪ್ರಸವವೇದನೆ ಬಂದಿದೆ. ಅಷ್ಟೇ ಅಲ್ಲ. ಅದೊಂದು ಮಂಕು ಮಗುವಿನಂತಿದೆ. ಹುಟ್ಟಿ, ಹೊರಗೆ ಬರಬಹುದಾದರೂ, ಅವನು ಬಾರದೆ ಇದ್ದಾನೆ.


ಆದ್ದರಿಂದ ನಾನು ಅವಳನ್ನು ಮೋಹಿಸಿ, ಅವಳನ್ನು ಮರುಭೂಮಿಯೊಳಗೆ ಕರೆದುಕೊಂಡು ಬಂದು, ಅವಳ ಸಂಗಡ ಹಿತಕರವಾಗಿ ಮಾತನಾಡುವೆನು.


ನಾನೇ, ಅವನನ್ನು ನೀತಿಯಲ್ಲಿ ಎಬ್ಬಿಸಿದ್ದೇನೆ. ಅವನ ಮಾರ್ಗಗಳನ್ನು ಸರಾಗ ಮಾಡುತ್ತೇನೆ. ಅವನು ನನ್ನ ಪಟ್ಟಣವನ್ನು ಕಟ್ಟಿ, ಕ್ರಯವನ್ನಾಗಲೀ, ಬಹುಮಾನವನ್ನಾಗಲೀ ಕೇಳಿಕೊಳ್ಳದೆ, ನನ್ನ ಸೆರೆಯವರನ್ನು ಕಳುಹಿಸಿಬಿಡುವನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾನೆ.


ನಿಮ್ಮ ವಿಮೋಚಕನೂ ಇಸ್ರಾಯೇಲಿನ ಪರಿಶುದ್ಧನೂ ಆಗಿರುವ ಯೆಹೋವ ದೇವರು ಹೇಳುವುದೇನೆಂದರೆ: ನಾನು ನಿಮಗೋಸ್ಕರ ಬಾಬಿಲೋನಿಗೆ ಕಳುಹಿಸಿ, ಅವರ ಘನವಂತರನ್ನೆಲ್ಲಾ ಮತ್ತು ಹಡಗುಗಳಲ್ಲಿ ಆರ್ಭಟಿಸುವ ಕಸ್ದೀಯರನ್ನು ತಗ್ಗಿಸಿದೆನು.


ಬಾಬಿಲೋನಿನವರು ನಿನ್ನಿಂದ ಹುಟ್ಟುವಂಥ, ನಿನ್ನ ಮಕ್ಕಳಲ್ಲಿ ಕೆಲವರನ್ನು ತೆಗೆದುಕೊಂಡು ಹೋಗುವರು, ಅವರು ಬಾಬಿಲೋನಿನ ರಾಜನ ಅರಮನೆಯಲ್ಲಿ ಕಂಚುಕಿಗಳಾಗಿರುವರು,” ಎಂದನು.


ಆ ಸ್ತ್ರೀಯು ಅರಣ್ಯದಲ್ಲಿದ್ದ ತನ್ನ ಸ್ಥಳಕ್ಕೆ ಹಾರಿಹೋಗುವುದಕ್ಕಾಗಿ ಆಕೆಗೆ ದೊಡ್ಡ ಹದ್ದಿನ ಎರಡು ರೆಕ್ಕೆಗಳು ಕೊಡಲಾದವು. ಅಲ್ಲಿ ಆಕೆಯು ಒಂದುಕಾಲ, ಎರಡುಕಾಲ ಮತ್ತು ಅರ್ಧಕಾಲ ಸರ್ಪನಿಗೆ ಸಿಗದಂತೆ ಪೋಷಣೆ ಹೊಂದಿದಳು.


“ಆದರೂ ಇಸ್ರಾಯೇಲ್ ಜನರು ಅಳೆಯುವುದಕ್ಕೂ ಎಣಿಸುವುದಕ್ಕೂ ಅಸಾಧ್ಯವಾದ ಕಡಲತೀರದ ಮರಳಿನಂತಾಗುವರು. ದೇವರು ಯಾವ ಸ್ಥಳದಲ್ಲಿ ಅವರನ್ನು, ‘ನೀವು ನನ್ನ ಜನರಲ್ಲ’ ಎಂದಿದ್ದಾರೋ ಆ ಸ್ಥಳದಲ್ಲಿಯೇ, ‘ನೀವು ಜೀವಸ್ವರೂಪಿಯಾದ ದೇವರ ಮಕ್ಕಳು’ ಎನಿಸಿಕೊಳ್ಳುವ ದಿನ ಬರುವುದು.


“ಕೆಟ್ಟವರ ಕೈಯೊಳಗಿಂದ ನಿನ್ನನ್ನು ತಪ್ಪಿಸುತ್ತೇನೆ, ದುಷ್ಟರ ಕೈಯೊಳಗಿಂದ ನಿನ್ನನ್ನು ವಿಮೋಚಿಸುತ್ತೇನೆ.”


ವೈರಿಯ ಕೈಯೊಳಗಿಂದ ಅವರನ್ನು ರಕ್ಷಿಸಿದರು, ಶತ್ರುವಿನ ಕೈಯಿಂದ ಅವರನ್ನು ಬಿಡುಗಡೆ ಮಾಡಿದರು.


ಇದಲ್ಲದೆ ಖಡ್ಗದಿಂದ ತಪ್ಪಿಸಿಕೊಂಡವರನ್ನು ಅವನು ಬಾಬಿಲೋನಿಗೆ ಸೆರೆಹಿಡಿದು ಕರೆದುಕೊಂಡು ಹೋದನು. ಅವರು ಅಲ್ಲಿ ಪಾರಸಿಯ ಸಾಮ್ರಾಜ್ಯ ಸ್ಥಾಪಿತವಾಗುವವರೆಗೆ ಅವರು ಅವನಿಗೂ ಅವನ ಮಕ್ಕಳಿಗೂ ಸೇವಕರಾಗಿದ್ದರು.


ಆದಕಾರಣ ಯೆಹೋವ ದೇವರು ಅಸ್ಸೀರಿಯದ ಅರಸನ ಸೈನ್ಯದ ಅಧಿಪತಿಗಳನ್ನೂ ಅವನ ಮೇಲೆ ಬರಮಾಡಿದರು. ಆ ಅಧಿಪತಿಗಳು ಮನಸ್ಸೆಯ ಮೂಗಿಗೆ ಕೊಂಡಿಗಳನ್ನು ಹಾಕಿ, ಅವನಿಗೆ ಕಂಚಿನ ಸಂಕೋಲೆಗಳಿಂದ ಬಂಧಿಸಿ, ಅವನನ್ನು ಬಾಬಿಲೋನಿಗೆ ಒಯ್ದರು.


ಆಗ ಪಟ್ಟಣದ ಗೋಡೆ ಮುರಿಯಲಾಯಿತು. ಸೈನಿಕರೆಲ್ಲರು ಓಡಿಹೋಗಿ, ಅರಸನ ತೋಟದ ಬಳಿಯಲ್ಲಿದ್ದ ಎರಡು ಗೋಡೆಗಳ ಮಧ್ಯದಲ್ಲಿ ಇದ್ದ ಬಾಗಿಲಿನ ಮಾರ್ಗವಾಗಿ ಹೊರಟು, ಬಾಬಿಲೋನಿನವರು ಪಟ್ಟಣದ ಬಳಿಯಲ್ಲಿ ಇದ್ದದ್ದರಿಂದ ಅವರು ಅರಾಬಾ ಎಂಬ ಕಣಿವೆ ಪ್ರದೇಶದ ಕಡೆಗೆ ಪಲಾಯನ ಮಾಡಿದರು.


ಆದ್ದರಿಂದ ನಾನು ಯೆರೂಸಲೇಮಿನಿಂದ ಬಾಬಿಲೋನಿಗೆ ಕಳುಹಿಸಿದ ಸೆರೆಯವರೆಲ್ಲರೇ, ಯೆಹೋವ ದೇವರ ವಾಕ್ಯವನ್ನು ಕೇಳಿರಿ,


ಕೆರೀಯೋತ್ ಅವನಿಗೆ ವಶವಾಗುವುದು; ಬಲವಾದ ಕೋಟೆಗಳು ಅವನ ಕೈವಶವಾಗುವುವು; ಆ ದಿವಸದಲ್ಲಿ ಮೋವಾಬಿನ ಪರಾಕ್ರಮಶಾಲಿಗಳ ಹೆರುವ ಹೆಣ್ಣಿನ ಎದೆಯದಂತೆ ಅದರುವುದು.


ಬಾಬಿಲೋನಿನ ಅರಸನು ಹಮಾತಿನ ರಿಬ್ಲದಲ್ಲಿ ಅವರನ್ನು ಕೊಂದುಹಾಕಿಸಿದನು. ಈ ಪ್ರಕಾರ ಯೆಹೂದ್ಯರು ಸೆರೆಯಾಳುಗಳಾಗಿ ತಮ್ಮ ದೇಶವನ್ನು ಬಿಟ್ಟುಹೋಗಬೇಕಾಯಿತು.


ಆದ್ದರಿಂದ ಹೆರುವವಳು ಒಬ್ಬ ಮಗನನ್ನು ಹೆರುವ ಕಾಲದವರೆಗೂ ಇಸ್ರಾಯೇಲನ್ನು ಕೈಬಿಡಲಾಗುವುದು. ಆಗ ಅವನ ಸಹೋದರರಲ್ಲಿ ಉಳಿದವರು ಇಸ್ರಾಯೇಲರ ಬಳಿಗೆ ಹಿಂದಿರುಗುವರು.


“ಪಾರಸಿಯ ಅರಸ ಕೋರೆಷನು ಹೀಗೆ ಹೇಳುತ್ತಾನೆ: “ ‘ಪರಲೋಕದ ದೇವರಾದ ಯೆಹೋವ ದೇವರು ಭೂಲೋಕದ ರಾಜ್ಯಗಳನ್ನೆಲ್ಲಾ ನನಗೆ ಕೊಟ್ಟಿದ್ದಾರೆ ಮತ್ತು ಅವರು ಯೆಹೂದ ದೇಶದ ಯೆರೂಸಲೇಮಿನಲ್ಲಿ ತಮಗೆ ಆಲಯವನ್ನು ಕಟ್ಟಿಸಲು ನನಗೆ ಆಜ್ಞಾಪಿಸಿದ್ದಾರೆ. ನಿಮ್ಮಲ್ಲಿ ಯಾರು ಅವರ ಪ್ರಜೆಗಳಾಗಿರುತ್ತೀರೋ, ಅಂಥವರು ಸ್ವಂತನಾಡಿಗೆ ಹೋಗಬಹುದು. ದೇವರಾದ ಯೆಹೋವ ದೇವರು ಅವರ ಸಂಗಡ ಇರಲಿ!’ ” ಎಂದನು.


ಏಕೆಂದರೆ ಪ್ರಸವವೇದನೆ ಪಡುವವಳಂತೆ, ಚೊಚ್ಚಲನ್ನು ಹೆರುವವಳ ಸಂಕಟಕ್ಕೆ ಸಮಾನವಾಗಿರುವ ಚೀಯೋನಿನ ಮಗಳ ಕಿರಿಚುವ ಕೂಗನ್ನು ಕೇಳಿದ್ದೇನೆ. ಆಕೆಯು ಗೋಳಾಡುತ್ತಾಳೆ, ಕೈಗಳನ್ನು ಚಾಚಿ, “ಅಯ್ಯೋ, ನನಗೀಗ ಕಷ್ಟ! ಕೊಲೆಗಾರರ ನಿಮಿತ್ತ ನನ್ನ ಪ್ರಾಣವು ಬೇಸರಗೊಳ್ಳುತ್ತದೆ,” ಎಂದು ಅರಚಿಕೊಳ್ಳುತ್ತಾಳೆ.


ಯೂಫ್ರೇಟೀಸ್ ನದಿಗೆ ಹೋಗಿ ಅದನ್ನು ಅಲ್ಲಿಯ ಬಂಡೆಯ ಸಂದಿಯೊಳಗೆ ಬಚ್ಚಿಡು,” ಎಂಬುದಾಗಿ ಯೆಹೋವ ದೇವರ ಎರಡನೆಯ ಆದೇಶ ನನಗೆ ಬಂದಿತು.


ಆದರೆ ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಗೋತ್ರಗಳಲ್ಲಿ ಸಣ್ಣದಾಗಿದ್ದರೂ ಇಸ್ರಾಯೇಲಿನಲ್ಲಿ ದೊರೆತನ ಮಾಡತಕ್ಕವನು ನಿನ್ನೊಳಗಿಂದ ನನಗಾಗಿ ಹೊರಡುವನು. ಆತನ ಮೂಲವು ಪೂರ್ವದಿಂದಲೂ ಅನಾದಿ ಕಾಲದಿಂದಲೂ ಆದದ್ದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು