Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 4:3 - ಕನ್ನಡ ಸಮಕಾಲಿಕ ಅನುವಾದ

3 ಆಗ ಆತನು ಅನೇಕ ಜನಗಳ ಮಧ್ಯದಲ್ಲಿ ನ್ಯಾಯತೀರಿಸಿ ದೂರದಲ್ಲಿರುವ ಬಲವಾದ ಜನಾಂಗಗಳಿಗೆ ತೀರ್ಪುಕೊಡುವನು. ಅವರು ತಮ್ಮ ಖಡ್ಗಗಳನ್ನು ನೇಗಿಲಿನ ಗುಳಗಳನ್ನಾಗಿಯೂ ಬರ್ಜಿಗಳನ್ನು ಕುಡುಗೋಲುಗಳನ್ನಾಗಿಯೂ ಮಾಡುವರು. ಜನಾಂಗಕ್ಕೆ ವಿರೋಧವಾಗಿ ಜನಾಂಗವು ಖಡ್ಗವನ್ನು ಪ್ರಯೋಗಿಸುವುದಿಲ್ಲ. ಇನ್ನು ಮೇಲೆ ಯುದ್ಧಾಭ್ಯಾಸದ ಅಗತ್ಯ ಇರುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆತನು ಬಹು ರಾಷ್ಟ್ರದವರ ವ್ಯಾಜ್ಯಗಳನ್ನು ವಿಚಾರಿಸುವನು, ಪ್ರಬಲ ಜನಾಂಗಗಳಿಗೆ ನ್ಯಾಯತೀರಿಸುವನು. ಅವರೋ ತಮ್ಮ ಕತ್ತಿಗಳನ್ನು ಕುಲುಮೆಗೆ ಹಾಕಿ ಗುಳಗಳನ್ನಾಗಿಯೂ, ಬರ್ಜಿಗಳನ್ನು ಕುಡುಗೋಲುಗಳನ್ನಾಗಿಯೂ ಮಾಡುವರು. ಜನಾಂಗವು ಜನಾಂಗಕ್ಕೆ ವಿರುದ್ಧವಾಗಿ ಕತ್ತಿಯನ್ನೆತ್ತದು. ಇನ್ನು ಯುದ್ಧಾಭ್ಯಾಸವು ನಡೆಯುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಬಗೆಹರಿಸುವನಾತ ಹಲವು ರಾಷ್ಟ್ರಗಳಾ ವ್ಯಾಜ್ಯವನು ತೀರಿಸುವನು ಪ್ರಬಲ ಜನಾಂಗಗಳಿಗೆ ನ್ಯಾಯವನು. ಹಾಕುವರವರು ಕುಲುಮೆಗೆ ತಮ್ಮ ಕತ್ತಿಗಳನು ಮಾರ್ಪಡಿಸುವರು ಅವುಗಳನ್ನು ಗುಳಗಳನ್ನಾಗಿ ಭರ್ಜಿಗಳನ್ನೂ ಕುಡುಗೋಲುಗಳನ್ನಾಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆತನು ಬಹು ರಾಷ್ಟ್ರದವರ ವ್ಯಾಜ್ಯಗಳನ್ನು ವಿಚಾರಿಸುವನು, ಪ್ರಬಲ ಜನಾಂಗಗಳಿಗೆ ನ್ಯಾಯತೀರಿಸುವನು; ಅವರೋ ತಮ್ಮ ಕತ್ತಿಗಳನ್ನು ಕುಲುಮೆಗೆ ಹಾಕಿ ಗುಳಗಳನ್ನಾಗಿಯೂ ಬರ್ಜಿಗಳನ್ನು ಕುಡುಗೋಲುಗಳನ್ನಾಗಿಯೂ ಮಾಡುವರು; ಜನಾಂಗವು ಜನಾಂಗಕ್ಕೆ ವಿರುದ್ಧವಾಗಿ ಕತ್ತಿಯನ್ನೆತ್ತದು, ಇನ್ನು ಯುದ್ಧಾಭ್ಯಾಸವು ನಡೆಯುವದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆಗ ಪ್ರಪಂಚದ ಎಲ್ಲಾ ಜನಾಂಗಗಳಿಗೆ ಯೆಹೋವನೇ ನ್ಯಾಯಾಧೀಶನು. ದೂರದೇಶದಲ್ಲಿರುವ ಅನೇಕ ಜನರ ಜಗಳಗಳನ್ನು ಆತನು ನಿಲ್ಲಿಸುವನು. ಆ ಜನರು ಯುದ್ಧದ ಆಯುಧಗಳನ್ನು ಉಪಯೋಗಿಸುವದನ್ನು ನಿಲ್ಲಿಸುವರು. ತಮ್ಮ ಖಡ್ಗಗಳಿಂದ ನೇಗಿಲ ಗುಳಗಳನ್ನು ತಯಾರಿಸುವರು. ಭರ್ಜಿಗಳಿಂದ ಕುಡುಗೋಲುಗಳನ್ನು ತಯಾರಿಸುವರು. ಜನರೊಳಗೆ ಪರಸ್ಪರ ಯುದ್ಧ ಮಾಡುವದನ್ನು ನಿಲ್ಲಿಸುವರು. ಯುದ್ಧಕ್ಕೆ ತರಬೇತಿ ಎಂದಿಗೂ ಮಾಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 4:3
40 ತಿಳಿವುಗಳ ಹೋಲಿಕೆ  

ಅವರು ಅನೇಕ ಜನಾಂಗಗಳ ಮಧ್ಯದಲ್ಲಿ ನ್ಯಾಯತೀರಿಸಿ, ಅನೇಕ ಪ್ರಜೆಗಳನ್ನು ಗದರಿಸುವರು. ಅವರು ತಮ್ಮ ಖಡ್ಗಗಳನ್ನು ನೇಗಿಲಿನ ಗುಳಗಳನ್ನಾಗಿಯೂ ಬರ್ಜಿಗಳನ್ನು ಕುಡುಗೋಲುಗಳನ್ನಾಗಿಯೂ ಮಾಡುವರು. ಜನಾಂಗಕ್ಕೆ ವಿರೋಧವಾಗಿ ಜನಾಂಗವು ಖಡ್ಗವನ್ನು ಪ್ರಯೋಗಿಸುವುದಿಲ್ಲ, ಇನ್ನು ಮೇಲೆ ಯುದ್ಧಾಭ್ಯಾಸದ ಅಗತ್ಯ ಇರುವುದೇ ಇಲ್ಲ.


ಆ ದಿವಸದಲ್ಲಿ, ಅವರಿಗೋಸ್ಕರ ಅಡವಿಯ ಮೃಗಗಳ, ಆಕಾಶದ ಪಕ್ಷಿಗಳ ಮತ್ತು ಭೂಮಿಯ ಕ್ರಿಮಿಗಳ ಸಂಗಡ ಒಡಂಬಡಿಕೆ ಮಾಡುವೆನು. ನಾನು ಬಿಲ್ಲನ್ನೂ, ಖಡ್ಗವನ್ನೂ ಯುದ್ಧವನ್ನೂ ದೇಶದೊಳಗಿಂದ ಮುರಿದುಹಾಕಿ, ಅವರೆಲ್ಲರೂ ಸುರಕ್ಷಿತರಾಗಿ ಮಲಗುವಂತೆ ಮಾಡುವೆನು.


ಏಕೆಂದರೆ ದೇವರು ನೇಮಿಸಿದ ಒಬ್ಬರ ಮುಖಾಂತರ ಇಡೀ ಜಗತ್ತಿಗೆ ನೀತಿಗನುಸಾರವಾಗಿ ನ್ಯಾಯತೀರ್ಪು ಮಾಡುವ ಒಂದು ದಿನವನ್ನು ನೇಮಕ ಮಾಡಿದ್ದಾರೆ. ಇದನ್ನು ಎಲ್ಲರಿಗೂ ಖಚಿತ ಪಡಿಸಲೆಂದೇ ಆ ಒಬ್ಬರನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ್ದಾರೆ.”


ತೋಳವೂ ಕುರಿಮರಿಯೂ ಒಂದಾಗಿ ಮೇಯುವುವು; ಸಿಂಹವು ಎತ್ತಿನ ಹಾಗೆ ಹುಲ್ಲು ತಿನ್ನುವುದು; ಹಾವಿಗೆ ಮಣ್ಣೇ ಆಹಾರವಾಗುವುದು; ಅವು ನನ್ನ ಪರಿಶುದ್ಧ ಪರ್ವತದಲ್ಲೆಲ್ಲಾ ಯಾವ ಕೇಡೂ ಮಾಡುವುದಿಲ್ಲ, ನಾಶವೂ ಮಾಡುವುದಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.


ಅವು ಯೆಹೋವ ದೇವರ ಮುಂದೆ ಹಾಡಲಿ, ಏಕೆಂದರೆ ಅವರು ಭೂಮಿಗೆ ನ್ಯಾಯತೀರಿಸಲು ಬರುತ್ತಾರೆ. ಅವರು ಲೋಕಕ್ಕೆ ನೀತಿಗನುಸಾರವಾಗಿಯೂ ಜನರಿಗೆ ನ್ಯಾಯಾನುಸಾರವಾಗಿಯೂ ತೀರ್ಪು ನೀಡುವರು.


ಸಮಸ್ತ ಸೃಷ್ಟಿಯು ಯೆಹೋವ ದೇವರ ಸನ್ನಿಧಿಯಲ್ಲಿ ಹಾಡಲಿ, ಏಕೆಂದರೆ ಅವರು ಲೋಕಕ್ಕೆ ನೀತಿಯಿಂದಲೂ; ಜನರಿಗೆ ತಮ್ಮ ಸತ್ಯದಿಂದಲೂ ನ್ಯಾಯತೀರಿಸಲು ಬರುತ್ತಾರೆ.


ಪರಲೋಕವು ತೆರೆದಿರುವುದನ್ನು ನಾನು ಕಂಡೆನು. ಇಗೋ, ಬಿಳಿಯ ಕುದುರೆಯು ಕಾಣಿಸಿತು. ಅದರ ಮೇಲೆ ಕುಳಿತಿದ್ದವರ ಹೆಸರು, ನಂಬಿಗಸ್ತರು ಮತ್ತು ಸತ್ಯವಂತರು ಎಂಬುದು. ಅವರ ನೀತಿಯಿಂದ ನ್ಯಾಯವಿಚಾರಿಸುತ್ತಾ ಯುದ್ಧಮಾಡುತ್ತಾರೆ.


ಆಗ ಯೆಹೋವ ದೇವರು ಹೊರಟು, ಯುದ್ಧದ ದಿವಸದಲ್ಲಿ ಹೋರಾಟ ಮಾಡಿದ ಪ್ರಕಾರವೇ, ಆ ಜನಾಂಗಗಳ ಸಂಗಡ ಅವರು ಹೋರಾಟ ಮಾಡುವರು.


ಎಫ್ರಾಯೀಮಿನೊಳಗಿಂದ ರಥಗಳನ್ನೂ ಯೆರೂಸಲೇಮಿನೊಳಗಿಂದ ಯುದ್ಧದ ಕುದುರೆಗಳನ್ನೂ ತೆಗೆದುಬಿಡುವೆನು. ಯುದ್ಧದ ಬಿಲ್ಲು ಸಹ ಮುರಿದು ಹಾಕಲಾಗುವುದು. ಇತರ ರಾಷ್ಟ್ರಗಳಿಗೆ ಸಮಾಧಾನಕರವಾಗಿರುವುದು. ಆತನ ದೊರೆತನವು ಸಮುದ್ರದಿಂದ ಸಮುದ್ರಕ್ಕೂ, ನದಿಯಿಂದ ಭೂಮಿಯ ಅಂತ್ಯಗಳವರೆಗೂ ಇರುವುದು.


ನನಗೆ ಕಿವಿಗೊಡದೆ ಇದ್ದ ಜನಾಂಗಗಳಿಗೆ ಕೋಪದಿಂದಲೂ ಉಗ್ರದಿಂದಲೂ ಮುಯ್ಯಿಗೆ ಮುಯ್ಯಿತೀರಿಸುವೆನು.”


ನಾನು ಎಲ್ಲಾ ಜನಾಂಗಗಳನ್ನು ಕೂಡಿಸುವೆನು. ಯೆಹೋಷಾಫಾಟನ ತಗ್ಗಿಗೆ ಅವರನ್ನು ತರುವೆನು. ಅಲ್ಲಿ ನನ್ನ ಜನರೂ ನನ್ನ ಬಾಧ್ಯತೆಯೂ ಆಗಿರುವ ಇಸ್ರಾಯೇಲಿನ ವಿಷಯವಾಗಿ ಅವರ ಸಂಗಡ ವ್ಯಾಜ್ಯವಾಡುವೆನು. ಅವರು ಅವರನ್ನು ಜನಾಂಗಗಳಲ್ಲಿ ಚದುರಿಸಿ, ನನ್ನ ದೇಶವನ್ನು ಹಂಚಿಕೊಂಡರು.


“ಆ ಅರಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವರು. ಅದು ಬೇರೆ ಜನರಿಗೆ ಸೇರಿ ಹೋಗುವುದಿಲ್ಲ. ಅದು ಆ ರಾಜ್ಯಗಳನ್ನೆಲ್ಲಾ ಧ್ವಂಸಮಾಡಿ, ಮುಗಿಸಿ, ತಾನು ಎಂದೆಂದಿಗೂ ನಿಲ್ಲುವುದು.


ನಿನ್ನನ್ನು ಸೇವಿಸದ ಜನಾಂಗವೂ, ರಾಜ್ಯವೂ ನಾಶವಾಗುವುದು. ಆ ಜನಾಂಗಗಳು ಸಂಪೂರ್ಣವಾಗಿ ಹಾಳಾಗುವುವು.


ನನ್ನ ನೀತಿಯು ತ್ವರೆಯಾಗಿ ಸಮೀಪಿಸಿತು. ನನ್ನ ರಕ್ಷಣೆಯು ಹೊರಟಿತು ಮತ್ತು ನನ್ನ ಕೈ ಜನಾಂಗಕ್ಕೆ ನ್ಯಾಯವನ್ನು ತೀರಿಸುವುದು. ನನ್ನ ಭುಜದ ಮೇಲೆ ಭರವಸೆ ಇಟ್ಟು, ದ್ವೀಪಗಳು ನನಗೋಸ್ಕರ ಕಾದುಕೊಂಡಿರುತ್ತವೆ.


ಬಲಿಷ್ಠವಾದ ಜನಾಂಗವು ನಿಮ್ಮನ್ನು ಘನಪಡಿಸುವರು, ಭಯಂಕರವಾದ ಜನರ ಪಟ್ಟಣವು ನಿಮಗೆ ಅಂಜುವುದು.


ಅವರ ಆಡಳಿತದ ಶ್ರೇಷ್ಠತೆ ಮತ್ತು ಶಾಂತಿಗೆ ಅಂತ್ಯವಿಲ್ಲ. ಅವರ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ಧಿಯಾಗುವುದು, ದಾವೀದನ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವುದು, ಸೇನಾಧೀಶ್ವರ ಯೆಹೋವ ದೇವರ ಅನುಗ್ರಹವು ಇದನ್ನು ನೆರವೇರಿಸುವುದು.


ದೇವರೇ, ಬನ್ನಿರಿ ಭೂಮಿಗೆ ನ್ಯಾಯತೀರಿಸಿರಿ. ಏಕೆಂದರೆ ಜನಾಂಗಗಳೆಲ್ಲಾ ನಿಮಗೇ ಸೇರಿರುತ್ತವೆ.


ಅರಸನ ದಿವಸಗಳಲ್ಲಿ ನೀತಿವಂತರು ವೃದ್ಧಿ ಆಗಲಿ. ಸಮೃದ್ಧಿಯಾದ ಸಮಾಧಾನವು ಚಂದ್ರನು ಇರುವವರೆಗೂ ಇರಲಿ.


ದೇವರು ಯುದ್ಧಗಳನ್ನು ಭೂಮಿಯ ಅಂತ್ಯದವರೆಗೆ ನಿಲ್ಲಿಸುತ್ತಾರೆ. ಬಿಲ್ಲನ್ನೂ ಭಲ್ಲೆಯನ್ನೂ ಮುರಿದು ಹಾಕಿದ್ದಾರೆ. ರಥಗಳನ್ನು ಬೆಂಕಿಯಿಂದ ಸುಡುತ್ತಾರೆ.


ಯೆಹೋವ ದೇವರ ಸಂಗಡ ವಿವಾದಿಸುವವರು ಚದರಿಹೋಗುವರು. ಅವರು ಆಕಾಶದಲ್ಲಿಂದ ಅವರ ಮೇಲೆ ಗುಡುಗುವರು, ಯೆಹೋವ ದೇವರು ಲೋಕಾಂತ್ಯದವರೆಗೂ ನ್ಯಾಯತೀರಿಸುವರು. “ತಮ್ಮ ಅರಸನಿಗೆ ಬಲ ಕೊಡುವರು. ತಮ್ಮ ಅಭಿಷಿಕ್ತನ ಕೊಂಬನ್ನು ಉನ್ನತ ಮಾಡುವರು.”


ಬೆಟ್ಟಗುಡ್ಡಗಳಿಂದ ಸಮೃದ್ಧಿಯೂ ನೀತಿಯ ಫಲವೂ ಜನರಿಗೆ ಬರಲಿ.


ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಅನೇಕ ಜನರೂ, ಅನೇಕ ಪಟ್ಟಣಗಳ ನಿವಾಸಿಗಳೂ ಇನ್ನೂ ಬರುವರು.


“ಶಾಂತವಾಗಿರಿ, ನಾನೇ ದೇವರಾಗಿದ್ದೇನೆಂದು ತಿಳಿದುಕೊಳ್ಳಿರಿ; ಜನಾಂಗಗಳಲ್ಲಿ ಉನ್ನತನಾಗಿರುವೆನು; ಭೂಮಿಯಲ್ಲಿ ಉನ್ನತನಾಗಿರುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


ನಾನು ನಿನ್ನನ್ನು ನಂಬಿಗಸ್ತಿಕೆಯಿಂದಲೇ ನಿಶ್ಚಿತಾರ್ಥ ಮಾಡಿಕೊಳ್ಳುವೆನು. ಆಗ ನೀನು ಯೆಹೋವ ದೇವರನ್ನು ತಿಳಿದುಕೊಳ್ಳುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು