Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 5:10 - ಕನ್ನಡ ಸಮಕಾಲಿಕ ಅನುವಾದ

10 ಯೆಹೋವ ದೇವರು ಹೀಗೆ ಘೋಷಿಸುತ್ತಾರೆ: “ಆ ದಿವಸದಲ್ಲಿ, ನಾನು ನಿನ್ನ ಮಧ್ಯದೊಳಗಿರುವ ನಿನ್ನ ಕುದುರೆಗಳನ್ನು ಕಡಿದುಬಿಟ್ಟು ನಿನ್ನ ರಥಗಳನ್ನು ನಾಶಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯೆಹೋವನು ಇಂತೆನ್ನುತ್ತಾನೆ, “ಆ ದಿನಗಳಲ್ಲಿ ನಿನ್ನ ಕುದುರೆಗಳನ್ನು ನಿನ್ನೊಳಗಿಂದ ಕಡಿದುಬಿಡುವೆನು. ನಿನ್ನ ರಥಗಳನ್ನು ನಾಶಗೊಳಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಸರ್ವೇಶ್ವರ ಇಂತೆನ್ನುತ್ತಾರೆ: “ಆ ದಿನದಂದು ಕುದುರೆಗಳನ್ನು ಕಡಿದುಬಿಡುವೆನು. ನಿಮ್ಮ ರಥಗಳನ್ನು ಧ್ವಂಸಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯೆಹೋವನು ಇಂತೆನ್ನುತ್ತಾನೆ - ಆ ದಿನದಲ್ಲಿ ನಿನ್ನ ಕುದುರೆಗಳನ್ನು ನಿನ್ನೊಳಗಿಂದ ಕಡಿದುಬಿಡುವೆನು, ನಿನ್ನ ರಥಗಳನ್ನು ನಾಶಗೊಳಿಸುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಯೆಹೋವನು ಹೇಳುವುದೇನೆಂದರೆ, “ಆ ಸಮಯದಲ್ಲಿ ನಿನ್ನ ಕುದುರೆಗಳನ್ನು ನಾನು ತೆಗೆದುಬಿಡುವೆನು. ನಿನ್ನ ರಥಗಳನ್ನು ನಾಶಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 5:10
9 ತಿಳಿವುಗಳ ಹೋಲಿಕೆ  

ಎಫ್ರಾಯೀಮಿನೊಳಗಿಂದ ರಥಗಳನ್ನೂ ಯೆರೂಸಲೇಮಿನೊಳಗಿಂದ ಯುದ್ಧದ ಕುದುರೆಗಳನ್ನೂ ತೆಗೆದುಬಿಡುವೆನು. ಯುದ್ಧದ ಬಿಲ್ಲು ಸಹ ಮುರಿದು ಹಾಕಲಾಗುವುದು. ಇತರ ರಾಷ್ಟ್ರಗಳಿಗೆ ಸಮಾಧಾನಕರವಾಗಿರುವುದು. ಆತನ ದೊರೆತನವು ಸಮುದ್ರದಿಂದ ಸಮುದ್ರಕ್ಕೂ, ನದಿಯಿಂದ ಭೂಮಿಯ ಅಂತ್ಯಗಳವರೆಗೂ ಇರುವುದು.


ಅಸ್ಸೀರಿಯ ನಮ್ಮನ್ನು ರಕ್ಷಿಸುವುದಿಲ್ಲ. ನಾವು ಕುದುರೆಗಳ ಮೇಲೆ ಸವಾರಿ ಮಾಡುವುದಿಲ್ಲ. ನಮ್ಮ ಕೈಗಳಿಂದ ಉಂಟು ಮಾಡಿದವುಗಳಿಗೆ, ‘ನೀವು ನಮ್ಮ ದೇವರುಗಳೇ,’ ಎಂದು ನಾವು ಇನ್ನು ಮುಂದೆ ಹೇಳುವುದೇ ಇಲ್ಲ. ಏಕೆಂದರೆ ನಿಮ್ಮಲ್ಲಿ ದಿಕ್ಕಿಲ್ಲದವರಿಗೆ ಅನುಕಂಪ ದೊರೆಯುತ್ತದೆ.”


ಆದರೆ ನಾನು ಯೆಹೂದದ ಮನೆತನದವರನ್ನು ಪ್ರೀತಿಸಿ ಅವರನ್ನು ಬಿಲ್ಲುಬಾಣ, ಖಡ್ಗ, ಕಾಳಗ, ಕುದುರೆ ರಾಹುತರು ಇವುಗಳಿಂದಲ್ಲ, ಅವರನ್ನು ಅವರ ದೇವರಾದ ನಾನೇ ಯೆಹೋವ ದೇವರೇ ರಕ್ಷಿಸುವೆನು,” ಎಂದು ಹೇಳಿದರು.


ನಿಶ್ಚಯವಾಗಿ ಗುಡ್ಡಗಳಿಂದಲೂ, ಬೆಟ್ಟಗಳ ಸಮೂಹದಿಂದಲೂ ನಮಗೆ ಮೋಸವಾಗಿದೆ. ನಿಶ್ಚಯವಾಗಿ ಇಸ್ರಾಯೇಲಿನ ರಕ್ಷಣೆಯು ನಮ್ಮ ದೇವರಾದ ಯೆಹೋವ ದೇವರಲ್ಲಿಯೇ ಇದೆ.


ಅವರ ದೇಶವು ಬೆಳ್ಳಿ ಬಂಗಾರಗಳಿಂದ ತುಂಬಿದೆ. ಅವರ ಬೊಕ್ಕಸಗಳಿಗೆ ಮಿತಿಯಿಲ್ಲ. ಅವರ ದೇಶವು ಕುದುರೆಗಳಿಂದ ತುಂಬಿದೆ, ಅವರ ರಥಗಳಿಗೆ ಮಿತಿಯೇ ಇಲ್ಲ.


ಅರಸನು ತನಗಾಗಿ ಕುದುರೆಗಳನ್ನು ಹೆಚ್ಚಿಸಿಕೊಳ್ಳಬಾರದು. ಕುದುರೆಗಳನ್ನು ಹೆಚ್ಚಿಸಿಕೊಳ್ಳುವ ಹಾಗೆ ಜನರನ್ನು ಈಜಿಪ್ಟ್ ದೇಶಕ್ಕೆ ಕಳುಹಿಸಬಾರದು. “ಆ ಮಾರ್ಗವಾಗಿ ನೀವು ಇನ್ನು ತಿರುಗಿ ಹೋಗಬಾರದು,” ಎಂದು ಯೆಹೋವ ದೇವರು ನಿಮಗೆ ಹೇಳಿದ್ದಾರೆ.


ರಾಜ್ಯಗಳ ಸಿಂಹಾಸನವನ್ನು ಕೆಡವಿಹಾಕುವೆನು. ನಾನು ಇತರ ಜನಾಂಗಗಳ, ರಾಜ್ಯಗಳ ಬಲವನ್ನು ನಾಶಮಾಡುವೆನು. ರಥಗಳನ್ನೂ, ಅವುಗಳಲ್ಲಿ ಸವಾರಿ ಮಾಡುವವರನ್ನೂ ಕೆಡವಿಹಾಕುವೆನು. ಕುದುರೆಗಳೂ ಅದರ ಸವಾರರೂ ಪ್ರತಿಯೊಬ್ಬನೂ ತನ್ನ ಸಹೋದರನ ಖಡ್ಗದಿಂದ ಬೀಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು