Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 5:3 - ಕನ್ನಡ ಸಮಕಾಲಿಕ ಅನುವಾದ

3 ಆದ್ದರಿಂದ ಹೆರುವವಳು ಒಬ್ಬ ಮಗನನ್ನು ಹೆರುವ ಕಾಲದವರೆಗೂ ಇಸ್ರಾಯೇಲನ್ನು ಕೈಬಿಡಲಾಗುವುದು. ಆಗ ಅವನ ಸಹೋದರರಲ್ಲಿ ಉಳಿದವರು ಇಸ್ರಾಯೇಲರ ಬಳಿಗೆ ಹಿಂದಿರುಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಹೀಗಿರಲು ಪ್ರಸವವೇದನೆ ಪಡತಕ್ಕವಳು ಮಗನನ್ನು ಹೆರುವವರೆಗೂ ನನ್ನ ಜನರು ಶತ್ರುವಶವಾಗಿರುವಂತೆ ಮಾಡುವೆನು. ಅನಂತರ ಆ ಮಗನ ಸಹೋದರರಲ್ಲಿ ಉಳಿದವರು ಇಸ್ರಾಯೇಲರೊಂದಿಗೆ ಹಿಂದಿರುಗುವರು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಇಂತಿರಲು ದಿನತುಂಬಿದವಳು ಹೆರುವವರೆಗೂ ಸರ್ವೇಶ್ವರ ತನ್ನ ಜನರನ್ನು ಶತ್ರುಗಳ ವಶಕ್ಕೆ ಬಿಟ್ಟುಬಿಡುವರು. ಅನಂತರ ಅಳಿದುಳಿದ ಸಹೋದರರು ಬಂದು ಇಸ್ರಯೇಲ್ ಜನರೊಂದಿಗೆ ಸೇರಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಹೀಗಿರಲು ಪ್ರಸವವೇದನೆಪಡತಕ್ಕವಳು ಮಗನನ್ನು ಹೆರುವವರೆಗೂ ನನ್ನ ಜನರು ಶತ್ರುವಶವಾಗಿರುವಂತೆ ಮಾಡುವೆನು. ಅನಂತರ ಆ ಮಗನ ಸಹೋದರರಲ್ಲಿ ಉಳಿದವರು ಇಸ್ರಾಯೇಲ್ಯರೊಂದಿಗೆ ಹಿಂದಿರುಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಸ್ತ್ರೀಯು ತನ್ನ ಮಗನನ್ನು ಹೆರುವ ತನಕ ಯೆಹೋವನು ತನ್ನ ಜನರನ್ನು ತೊರೆದುಬಿಡುವನು. ಅನಂತರ ಉಳಿದ ಅವನ ಸಹೋದರರು ಇಸ್ರೇಲ್ ಜನರ ಬಳಿಗೆ ತಿರುಗಿ ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 5:3
31 ತಿಳಿವುಗಳ ಹೋಲಿಕೆ  

ಅವಳು ಒಬ್ಬ ಮಗನನ್ನು ಹೆರುವಳು, ನೀನು ಆತನಿಗೆ, ‘ಯೇಸು’ ಎಂದು ಹೆಸರಿಡಬೇಕು. ಏಕೆಂದರೆ ಅವರೇ ತಮ್ಮ ಜನರನ್ನು ಅವರ ಪಾಪಗಳಿಂದ ರಕ್ಷಿಸುವರು,” ಎಂದು ಹೇಳಿದನು.


“ಕುಂಟಾದದ್ದನ್ನು ಉಳಿದದ್ದನ್ನಾಗಿಯೂ ತಳ್ಳಿಬಿಟ್ಟಿದ್ದನ್ನು ಬಲವಾದ ಜನಾಂಗವಾಗಿಯೂ ಮಾಡುವೆನು. ಯೆಹೋವ ದೇವರು ಇಂದಿನಿಂದ ಸದಾಕಾಲವೂ ಚೀಯೋನ್ ಪರ್ವತದಲ್ಲಿ ಅವರ ಮೇಲೆ ಆಳುವರು.


“ಎಫ್ರಾಯೀಮೇ, ನಿನ್ನನ್ನು ಹೇಗೆ ಬಿಟ್ಟುಬಿಡಲಿ? ಇಸ್ರಾಯೇಲೇ, ನಿನ್ನನ್ನು ಹೇಗೆ ಕೈಬಿಡಲಿ? ಅದ್ಮದ ಹಾಗೆ ನಿನ್ನನ್ನು ದುರ್ಗತಿಗೆ ಹೇಗೆ ಒಪ್ಪಿಸಲಿ? ಚೆಬೋಯಿಮನಂತೆ ನಿನ್ನನ್ನು ಹೇಗೆ ನಾಶಮಾಡಲಿ? ನನ್ನ ಹೃದಯವು ನನ್ನಲ್ಲಿ ಮಾರ್ಪಟ್ಟಿದೆ. ನನ್ನಲ್ಲಿ ಕರುಣೆ ಉಕ್ಕಿ ಬಂದಿದೆ.


ಆದರೂ ದೇಶವು ಅದರ ನಿವಾಸಿಗಳ ನಿಮಿತ್ತ ಅವರ ದುಷ್ಕ್ರಿಯೆಗಳ ಫಲದಿಂದ ಹಾಳಾಗುವುದು.


ಆದ್ದರಿಂದ ನಾನು ಅವಳನ್ನು ಮೋಹಿಸಿ, ಅವಳನ್ನು ಮರುಭೂಮಿಯೊಳಗೆ ಕರೆದುಕೊಂಡು ಬಂದು, ಅವಳ ಸಂಗಡ ಹಿತಕರವಾಗಿ ಮಾತನಾಡುವೆನು.


“ಆದ್ದರಿಂದ ನಾನು ತಿರುಗಿಕೊಂಡು, ನನ್ನ ಧಾನ್ಯವನ್ನು ಅದರ ಕಾಲದಲ್ಲಿಯೂ, ನನ್ನ ದ್ರಾಕ್ಷಾರಸವನ್ನು ಅದರ ಸುಗ್ಗಿಯ ಸಮಯದಲ್ಲಿಯೂ ತೆಗೆದ ಹಾಗೆ, ಅವಳ ಬೆತ್ತಲೆತನವನ್ನು ಮುಚ್ಚವುದಕ್ಕಿದ್ದ ನನ್ನ ಉಣ್ಣೆಯನ್ನೂ, ನನ್ನ ನಾರುಬಟ್ಟೆಯನ್ನೂ ತೆಗೆದುಕೊಳ್ಳುವೆನು.


ಅನೇಕ ಸಹೋದರರ ಮಧ್ಯೆ ಜ್ಯೇಷ್ಠಪುತ್ರನೆನಿಸುವಂತೆ ದೇವರು ಯಾರನ್ನು ಮೊದಲು ತಿಳಿದುಕೊಂಡರೋ ಅವರನ್ನು ತಮ್ಮ ಪುತ್ರನ ಹೋಲಿಕೆಗೆ ಸಮಾನರಾಗುವಂತೆ ಮುಂದಾಗಿ ನೇಮಿಸಿದರು.


“ಅದಕ್ಕೆ ನಾನು ಉತ್ತರವಾಗಿ ಅವರಿಗೆ, ‘ನಾನು ನಿಮಗೆ ನಿಜವಾಗಿ ಹೇಳುತ್ತೇನೆ: ನೀವು ಈ ನನ್ನ ಸಹೋದರರಲ್ಲಿ ಅತ್ಯಲ್ಪನಾದವನೊಬ್ಬನಿಗೆ, ಮಾಡಿದ್ದು ನನಗೇ ಮಾಡಿದಂತಾಯಿತು,’ ಎನ್ನುವೆನು.


ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತವನ್ನು ಮಾಡುವವನೇ ನನ್ನ ಸಹೋದರ, ಸಹೋದರಿ ಮತ್ತು ತಾಯಿ,” ಎಂದು ಹೇಳಿದರು.


ನೀನು ಉಂಡರೂ ತೃಪ್ತಿಯಾಗದೆ ಇರುವೆ; ನಿನ್ನೊಳಗೆ ಹಸಿವೆಯು ಇರುವುದು; ನೀವು ಸಂಗ್ರಹಿಸುತ್ತೀರಿ ಆದರೆ ಏನನ್ನೂ ಉಳಿಸುವುದಿಲ್ಲ, ಏಕೆಂದರೆ ನೀವು ಉಳಿಸುವದನ್ನು ನಾನು ಕತ್ತಿಗೆ ಕೊಡುತ್ತೇನೆ.


“ಆ ಕಾಲದಲ್ಲಿ ನಾನು ಇಸ್ರಾಯೇಲಿನ ಸಮಸ್ತ ಕುಟುಂಬಗಳಿಗೆ ದೇವರಾಗಿರುವೆನು. ಅವರು ನನ್ನ ಜನರಾಗಿರುವರು,” ಎಂದು ಯೆಹೋವ ದೇವರು ಸಾರುತ್ತಾರೆ.


ಆ ದಿನದಲ್ಲಿ ಯೆಹೋವ ದೇವರು ಉಳಿದ ತಮ್ಮ ಜನರನ್ನು ಬಿಡಿಸಿಕೊಳ್ಳುವುದಕ್ಕೆ ಎರಡನೇ ಸಾರಿ ಕೈಹಾಕಿ ಅಸ್ಸೀರಿಯ, ಈಜಿಪ್ಟ್, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾತ್ ಮತ್ತು ಮೆಡಿಟರೇನಿಯನ್ ಸಮುದ್ರದ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವರು.


ನಿಮ್ಮ ತಂದೆಗಳೂ ಸಹೋದರರೂ ನಡೆದಂತೆ ನೀವೂ ನಡೆಯಬೇಡಿರಿ. ಅವರು ತಮ್ಮ ಪಿತೃಗಳ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ದ್ರೋಹಿಗಳಾದದರಿಂದ ಆತನು ಅವರನ್ನು ನಾಶನಕ್ಕೆ ಒಪ್ಪಿಸಿದನು. ಅದಕ್ಕೆ ನೀವೇ ಸಾಕ್ಷಿಗಳು.


ಯೆಹೋವ ದೇವರು ಯಾರೊಬ್ಬಾಮನ ಪಾಪಗಳ ನಿಮಿತ್ತ ಇಸ್ರಾಯೇಲರನ್ನು ಶತ್ರುಗಳಿಗೆ ಒಪ್ಪಿಸಿಬಿಡುವರು. ಏಕೆಂದರೆ ಯಾರೊಬ್ಬಾಮನೇ ಪಾಪಮಾಡಿ, ಪಾಪವನ್ನು ಮಾಡಲು ಇಸ್ರಾಯೇಲರನ್ನು ಪ್ರೇರೇಪಿಸಿದನು,” ಎಂದನು.


ಕೆಟ್ಟದ್ದನ್ನು ದ್ವೇಷಿಸಿರಿ, ಒಳ್ಳೆಯದನ್ನು ಪ್ರೀತಿಸಿರಿ, ಬಾಗಿಲಲ್ಲಿ ನ್ಯಾಯವನ್ನು ಸ್ಥಾಪಿಸಿರಿ. ಒಂದು ವೇಳೆ ಸರ್ವಶಕ್ತರಾದ ಯೆಹೋವ ದೇವರು ಯೋಸೇಫನ ಗೋತ್ರದಲ್ಲಿ ಉಳಿದವರಿಗೆ ಕನಿಕರಿಸಬಹುದು.


ಇದಲ್ಲದೆ ಯಾಕೋಬನ ಶೇಷವು ಅನೇಕ ಜನಾಂಗಳ ಮಧ್ಯದಲ್ಲಿ ಯೆಹೋವ ದೇವರಿಂದ ಬಂದ ಮಂಜಿನ ಹಾಗೆಯೂ ಹುಲ್ಲಿನ ಮೇಲೆ ಜಡಿಮಳೆಯ ಹಾಗೆಯೂ ಇರುವುದು. ಅದು ಮನುಷ್ಯರಿಗೋಸ್ಕರ ಆತುಕೊಳ್ಳುವುದಿಲ್ಲ, ಮನುಷ್ಯ ಮಕ್ಕಳಿಗಾಗಿ ಕಾದುಕೊಳ್ಳುವುದಿಲ್ಲ.


ಯಾಕೋಬನ ಜನಶೇಷವು ದೇಶದೇಶಗಳೊಳಗೆ ಅನೇಕ ಜನಾಂಗಗಳ ಮಧ್ಯದಲ್ಲಿ, ಅಡವಿಯ ಮೃಗಗಳಲ್ಲಿ ಸಿಂಹದಂತೆಯೂ ಕುರಿಮಂದೆಗಳಲ್ಲಿ ಪ್ರಾಯದ ಸಿಂಹದಂತೆಯೂ ಇರುವುದು. ಅದು ಹಾದುಹೋದರೆ ಇಳಿದುಬಿಟ್ಟು ಹರಿದುಬಿಡುತ್ತದೆ, ಯಾರೂ ಬಿಡಿಸಲಾರರು,


ದೇವರೇ, ಜನರು ನಿಮ್ಮನ್ನು ಕೊಂಡಾಡಲಿ, ಸರ್ವ ಜನಾಂಗಗಳು ನಿಮ್ಮನ್ನು ಸ್ತುತಿಸಲಿ.


ಆತನೇ ಈಗ ಹೀಗೆನ್ನುತ್ತಾನೆ, “ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬಿನ ಕುಲಗಳನ್ನು ಉನ್ನತಪಡಿಸುವುದೂ, ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರುಗಿ ಬರಮಾಡುವುದೂ ಅಲ್ಪ ಕಾರ್ಯವಲ್ಲವೇ, ನನ್ನ ರಕ್ಷಣೆಯು ಭೂಲೋಕದ ಕಟ್ಟಕಡೆಯವರೆಗೆ ವ್ಯಾಪಿಸುವಂತೆ ನಿನ್ನನ್ನು ಸರ್ವಜನಾಂಗಗಳಿಗೂ ಬೆಳಕನ್ನಾಗಿ ಮಾಡುವೆನು.”


“ಇಗೋ, ದಿನಗಳು ಬರಲಿವೆ,” ಎಂದು ಯೆಹೋವ ದೇವರು ಹೇಳುತ್ತಾರೆ. “ಆಗ ನಾನು ದಾವೀದನಿಗೆ ನೀತಿಯುಳ್ಳ ಕೊಂಬೆಯನ್ನು ಎಬ್ಬಿಸುತ್ತೇನೆ. ಒಬ್ಬ ಅರಸನು ರಾಜ್ಯವನ್ನಾಳಿ ವೃದ್ಧಿಯಾಗುವನು. ಭೂಮಿಯಲ್ಲಿ ನ್ಯಾಯವನ್ನೂ, ನೀತಿಯನ್ನೂ ನಡೆಸುವನು.


ಕಳೆದುಹೋದದ್ದನ್ನು ನಾನೇ ಹುಡುಕುವೆನು. ದಾರಿ ತಪ್ಪಿದ್ದನ್ನು ನಾನೇ ಮತ್ತೆ ತರುವೆನು, ಮುರಿದ ಅಂಗವನ್ನು ನಾನೇ ಕಟ್ಟುವೆನು. ದುರ್ಬಲವಾದುದನ್ನು ಬಲಗೊಳಿಸುವೆನು, ಆದರೆ ಕೊಬ್ಬಿದ್ದನ್ನೂ ಬಲಿಷ್ಠವಾದದ್ದನ್ನೂ ನಾನೇ ಸಂಹರಿಸುವೆನು. ನಾನು ನ್ಯಾಯದಿಂದ ಮಂದೆಯನ್ನು ಮೇಯಿಸುವೆನು.


ಆದರೆ ಒಬ್ಬಬ್ಬನು ತನ್ನ ತನ್ನ ದ್ರಾಕ್ಷಿಬಳ್ಳಿಯ ಕೆಳಗೂ ತನ್ನ ತನ್ನ ಅಂಜೂರದ ಗಿಡದ ಕೆಳಗೂ ಕುಳಿತುಕೊಳ್ಳುವನು. ಭಯಪಡಿಸುವವನು ಯಾರೂ ಇರುವುದಿಲ್ಲ. ಏಕೆಂದರೆ ಸೇನಾಧೀಶ್ವರ ಯೆಹೋವ ದೇವರು ಇದನ್ನು ನುಡಿದಿದ್ದಾರೆ.


“ನಾನು ಯೆಹೂದ ವಂಶವನ್ನು ಬಲಪಡಿಸಿ, ಯೋಸೇಫ ಗೋತ್ರವನ್ನು ರಕ್ಷಿಸುವೆನು. ಅವರನ್ನು ಕನಿಕರಿಸುವುದರಿಂದ ಅವರನ್ನು ತಿರುಗಿ ಬರಮಾಡುವೆನು. ನಾನು ಅವರನ್ನು ತಳ್ಳಿಬಿಡಲಿಲ್ಲವೋ ಎಂಬಂತೆ ಇರುವರು. ಏಕೆಂದರೆ ನಾನೇ ಅವರ ದೇವರಾದ ಯೆಹೋವ ದೇವರಾಗಿದ್ದು, ಅವರಿಗೆ ಉತ್ತರಕೊಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು