Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 5:4 - ಕನ್ನಡ ಸಮಕಾಲಿಕ ಅನುವಾದ

4 ಆತನು ಯೆಹೋವ ದೇವರ ಬಲದಲ್ಲಿಯೂ ತನ್ನ ದೇವರಾದ ಯೆಹೋವ ದೇವರ ಹೆಸರಿನ ಘನತೆಯಲ್ಲಿಯೂ ನಿಂತುಕೊಂಡು ತನ್ನ ಮಂದೆಯನ್ನು ಮೇಯಿಸುವನು. ಅವರು ನೆಲೆಯಾಗಿರುವರು, ಆತನ ಘನತೆಯು ಭೂಮಿಯ ಅಂತ್ಯಗಳ ಮಟ್ಟಿಗೂ ತಲುಪುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆತನು ಯೆಹೋವನ ಬಲವನ್ನೂ, ತನ್ನ ದೇವರಾದ ಯೆಹೋವನ ನಾಮದ ಮಹಿಮೆಯನ್ನೂ ಹೊಂದಿದವನಾಗಿ ನಿಂತು ತನ್ನ ಹಿಂಡನ್ನು ಮೇಯಿಸುವನು. ಆ ಹಿಂಡು ನೆಮ್ಮದಿಯಾಗಿ ನೆಲೆಗೊಂಡಿರುವುದು. ಆತನು ಭೂಮಿಯ ಕಟ್ಟಕಡೆಯವರೆಗೂ ಪ್ರಬಲನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆತನು ಸರ್ವೇಶ್ವರನಿಂದ ಬರುವ ಶಕ್ತಿಯಿಂದಲೂ ಆ ಸ್ವಾಮಿ ದೇವರ ನಾಮದ ಪ್ರಭಾವದಿಂದಲೂ ತನ್ನ ಜನರನ್ನು ಪರಿಪಾಲಿಸುವನು. ಆ ಜನರು ಸುರಕ್ಷಿತವಾಗಿ ಬಾಳುವರು. ಆತನು ಜಗದ ಕಟ್ಟಕಡೆಯವರೆಗೂ ಪ್ರಬಲನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆತನು ಯೆಹೋವನ ಬಲವನ್ನೂ ತನ್ನ ದೇವರಾದ ಯೆಹೋವನ ನಾಮದ ಮಹಿಮೆಯನ್ನೂ ಹೊಂದಿದವನಾಗಿ ನಿಂತು ತನ್ನ ಹಿಂಡನ್ನು ಮೇಯಿಸುವನು; ಆ ಹಿಂಡು ನೆಮ್ಮದಿಯಾಗಿ ನೆಲೆಗೊಂಡಿರುವದು; ಆತನು ಭೂವಿುಯ ಕಟ್ಟಕಡೆಯವರೆಗೂ ಪ್ರಬಲನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆಗ ಇಸ್ರೇಲರನ್ನು ಆಳುವಾತನು ಯೆಹೋವನ ಶಕ್ತಿಯಲ್ಲಿಯೂ ತನ್ನ ದೇವರಾದ ಯೆಹೋವನ ಹೆಸರಿನಲ್ಲಿಯೂ ನಿಂತು ತನ್ನ ಮಂದೆಗೆ ಆಹಾರವನ್ನೀಯುವನು. ಆತನ ಮಹತ್ತು ಭೂಮಿಯ ಕಟ್ಟಕಡೆಗೆ ಪ್ರಸರಿಸುವದರಿಂದ ಅವರು ಸಮಾಧಾನದಿಂದ ವಾಸಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 5:4
37 ತಿಳಿವುಗಳ ಹೋಲಿಕೆ  

ನಿನ್ನ ಜನರನ್ನೂ ಏಕಾಂತವಾಗಿ ಅಡವಿಯಲ್ಲಿ ಕರ್ಮೆಲಿನ ನಡುವೆ ವಾಸವಾಗಿರುವ ನಿನ್ನ ಬಾಧ್ಯತೆಯ ಮಂದೆಯನ್ನೂ ನಿನ್ನ ಕೋಲಿನಿಂದ ಮೇಯಿಸು. ಅವರು ಪೂರ್ವದ ದಿವಸಗಳಲ್ಲಾದ ಹಾಗೆ ಬಾಷಾನಿನಲ್ಲಿಯೂ ಗಿಲ್ಯಾದಿನಲ್ಲಿಯೂ ಮೇಯಲಿ.


ಅವರು ದೊಡ್ಡವರಾಗಿ ಮಹೋನ್ನತರ ಪುತ್ರ ಎಂದು ಎನಿಸಿಕೊಳ್ಳುವರು. ಕರ್ತದೇವರು ಅವರ ತಂದೆ ದಾವೀದನ ಸಿಂಹಾಸನವನ್ನು ಅವರಿಗೆ ಕೊಡುವರು.


ಏಳನೆಯ ದೇವದೂತನು ತುತೂರಿಯನ್ನು ಊದಿದನು. ಆಗ ಪರಲೋಕದಲ್ಲಿ ಮಹಾ ಧ್ವನಿಗಳುಂಟಾಗಿ, ಹೀಗೆ ಹೇಳಿದವು: “ಲೋಕದ ರಾಜ್ಯವು ನಮ್ಮ ದೇವರ ಮತ್ತು ಅವರಿಗೆ ಸೇರಿದ ಕ್ರಿಸ್ತ ಯೇಸುವಿನ ರಾಜ್ಯವಾಯಿತು, ಈ ಕ್ರಿಸ್ತ ಯೇಸುವೇ ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವರು.”


ಅಂತ್ಯಕಾಲದಲ್ಲಿ ಪ್ರಕಟವಾಗುವುದಕ್ಕೆ ಸಿದ್ಧವಾಗಿರುವ ರಕ್ಷಣೆಗೆ ದೇವರು ನಿಮ್ಮ ನಂಬಿಕೆಯ ಮುಖಾಂತರ ನಿಮ್ಮನ್ನು ತಮ್ಮ ಶಕ್ತಿಯಿಂದ ಕಾಯುತ್ತಾರೆ.


ಕ್ರಿಸ್ತ ಯೇಸುವಿನ ದಾಸನೂ ಯಾಕೋಬನ ಸಹೋದರನೂ ಆಗಿರುವ ಯೂದನು, ತಂದೆಯಾದ ದೇವರಿಗೆ ಪ್ರಿಯರಾದವವರಿಗೂ ಕ್ರಿಸ್ತ ಯೇಸು ಸುರಕ್ಷತೆಯನ್ನೂ ಅವರ ಕರೆಯುವಿಕೆಯನ್ನೂ ಹೊಂದಿದವರಿಗೆ ಬರೆಯುವ ಪತ್ರ:


ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ದೇವರೂ ತಂದೆಯೂ ಆಗಿರುವವರಿಗೆ ಸ್ತೋತ್ರ, ದೇವರು ಕ್ರಿಸ್ತನಲ್ಲಿ ಪರಲೋಕದ ಎಲ್ಲಾ ಆತ್ಮಿಕ ಆಶೀರ್ವಾದಗಳಿಂದ ನಮ್ಮನ್ನು ಆಶೀರ್ವದಿಸಿದ್ದಾರೆ.


ಯೇಸು ಆಕೆಗೆ, “ನನ್ನನ್ನು ಹಿಡಿಯಬೇಡ, ಏಕೆಂದರೆ ನಾನು ಇನ್ನೂ ತಂದೆಯ ಬಳಿಗೆ ಹೋಗಲಿಲ್ಲ. ಆದರೆ ನೀನು ನನ್ನ ಸಹೋದರರ ಬಳಿಗೆ ಹೋಗಿ ಅವರಿಗೆ, ‘ನನ್ನ ತಂದೆಯೂ ನಿಮ್ಮ ತಂದೆಯೂ ನನ್ನ ದೇವರೂ ನಿಮ್ಮ ದೇವರೂ ಆಗಿರುವ ತಂದೆಯ ಬಳಿಗೆ ನಾನು ಹೋಗುತ್ತೇನೆ’ ಎಂದು ತಿಳಿಸು,” ಎಂದರು.


ನಾನು ಮಾಡಿದ್ದರಿಂದ ನೀವು ನನ್ನನ್ನು ನಂಬದಿದ್ದರೂ ಈ ಕಾರ್ಯಗಳನ್ನಾದರೂ ನಂಬಿರಿ. ಆಗ ತಂದೆಯು ನನ್ನಲ್ಲಿಯೂ ನಾನು ತಂದೆಯಲ್ಲಿಯೂ ಇರುವುದು ನಿಮಗೆ ಗೊತ್ತಾಗುವುದು ಹಾಗೂ ಮನದಟ್ಟಾಗುವುದು,” ಎಂದರು.


“ಮನುಷ್ಯಪುತ್ರನಾದ ನಾನು ಮಹಿಮೆಯಲ್ಲಿ ಎಲ್ಲಾ ಪರಿಶುದ್ಧ ದೂತರೊಂದಿಗೆ ಬರುವಾಗ, ನನ್ನ ಮಹಿಮೆಯ ಸಿಂಹಾಸನದ ಮೇಲೆ ಕುಳಿತುಕೊಳ್ಳುವೆನು.


ನಾನು ಸಹ ನಿನಗೆ ಹೇಳುವುದೇನಂದರೆ, ನೀನು ಪೇತ್ರನು. ಈ ಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು. ಪಾತಾಳದ ದ್ವಾರಗಳು ಅದನ್ನು ಜಯಿಸಲಾರವು.


“ ‘ಯೆಹೂದ ಪ್ರಾಂತದಲ್ಲಿರುವ ಬೇತ್ಲೆಹೇಮೇ, ಯೆಹೂದದ ಅಧಿಪತಿಗಳಲ್ಲಿ ನೀನು ಎಷ್ಟು ಮಾತ್ರಕ್ಕೂ ಅಲ್ಪವಲ್ಲ. ಏಕೆಂದರೆ ನನ್ನ ಪ್ರಜೆಗಳಾದ ಇಸ್ರಾಯೇಲನ್ನು ಪರಿಪಾಲಿಸಲು ಒಬ್ಬ ಅಧಿಪತಿಯು ನಿನ್ನೊಳಗಿಂದಲೇ ಬರುವನು,’” ಎಂದು ಹೇಳಿದರು.


ಎಫ್ರಾಯೀಮಿನೊಳಗಿಂದ ರಥಗಳನ್ನೂ ಯೆರೂಸಲೇಮಿನೊಳಗಿಂದ ಯುದ್ಧದ ಕುದುರೆಗಳನ್ನೂ ತೆಗೆದುಬಿಡುವೆನು. ಯುದ್ಧದ ಬಿಲ್ಲು ಸಹ ಮುರಿದು ಹಾಕಲಾಗುವುದು. ಇತರ ರಾಷ್ಟ್ರಗಳಿಗೆ ಸಮಾಧಾನಕರವಾಗಿರುವುದು. ಆತನ ದೊರೆತನವು ಸಮುದ್ರದಿಂದ ಸಮುದ್ರಕ್ಕೂ, ನದಿಯಿಂದ ಭೂಮಿಯ ಅಂತ್ಯಗಳವರೆಗೂ ಇರುವುದು.


ನನ್ನ ಸೇವಕನು ವಿವೇಕಿಯಾಗಿ ಕಾರ್ಯವನ್ನು ಸಾಧಿಸಿ, ಅವನು ಉನ್ನತನಾಗಿ ಮೇಲೆಕ್ಕೇರಿ ಮಹೋನ್ನತನಾಗಿರುವನು.


ಈಗ ಯೆಹೋವ ದೇವರು ಹೀಗೆ ಹೇಳುತ್ತಾರೆ, ಯಾಕೋಬ್ಯರನ್ನು ತನ್ನ ಬಳಿಗೆ ಕರೆತರುವಂತೆಯೂ, ಇಸ್ರಾಯೇಲರನ್ನು ತನ್ನೊಂದಿಗೆ ಸೇರಿಸಿಕೊಳ್ಳುವಂತೆಯೂ ದೇವರು ಗರ್ಭದಲ್ಲಿಯೇ ನನ್ನನ್ನು ತನ್ನ ಸೇವಕನನ್ನಾಗಿ ರೂಪಿಸಿದನು. ಆದರೂ ನಾನು ಯೆಹೋವ ದೇವರ ದೃಷ್ಟಿಯಲ್ಲಿ ಮಾನ್ಯನಾಗಿರುವೆನು. ನನ್ನ ದೇವರೇ ನನಗೆ ಬಲವು.


ಮಾನವರಿಗೆ ನಿಮ್ಮ ಪರಾಕ್ರಮ ಕ್ರಿಯೆಗಳನ್ನೂ, ನಿಮ್ಮ ರಾಜ್ಯದ ಪ್ರಭೆಯ ಘನವನ್ನೂ ತಿಳಿಯಪಡಿಸುವರು.


ಇಸ್ರಾಯೇಲರ ಕಡೆಗೆ ತಮ್ಮ ಪ್ರೀತಿಯನ್ನೂ, ತಮ್ಮ ಸತ್ಯತೆಯನ್ನೂ ಜ್ಞಾಪಕ ಮಾಡಿಕೊಂಡಿದ್ದಾರೆ; ಭೂಮಿಯ ಅಂತ್ಯಗಳಲ್ಲೆವೂ ನಮ್ಮ ದೇವರ ರಕ್ಷಣೆಯನ್ನು ನೋಡಿವೆ.


ಯೆಹೋವ ದೇವರು ಆಳಿಕೆ ಮಾಡುತ್ತಿದ್ದಾರೆ. ಘನತೆಯನ್ನು ಹೊದ್ದುಕೊಂಡಿದ್ದಾರೆ. ಬಲದಿಂದ ತಮ್ಮ ನಡುವನ್ನು ಕಟ್ಟಿಕೊಂಡಿದ್ದಾರೆ. ಆದುದರಿಂದ ಲೋಕವು ಸಹ ಸ್ಥಿರವಾಗಿದೆ, ಕದಲುವುದಿಲ್ಲ.


ದೇವರ ಘನವುಳ್ಳ ಹೆಸರಿಗೆ ಎಂದೆಂದಿಗೂ ಸ್ತೋತ್ರವಾಗಲಿ. ದೇವರ ತೇಜಸ್ಸು ಭೂಮಿಯಲ್ಲೆಲ್ಲಾ ತುಂಬಲಿ. ಆಮೆನ್, ಆಮೆನ್.


ಸಮುದ್ರದಿಂದ ಸಮುದ್ರದವರೆಗೂ ನದಿಯಿಂದ ಭೂಮಿಯ ಕೊನೆಗಳವರೆಗೂ ಅರಸನು ಆಳಲಿ.


ಲೋಕದಲ್ಲಿರುವ ಎಲ್ಲರೂ ಎಚ್ಚರವಾಗಿ ಯೆಹೋವ ದೇವರ ಕಡೆಗೆ ತಿರುಗಿಕೊಳ್ಳುವರು; ಜನಾಂಗಗಳ ಕುಟುಂಬಗಳೆಲ್ಲಾ ದೇವರ ಮುಂದೆ ಅಡ್ಡಬೀಳುವವು.


ಅವನ ವಿಷಯದಲ್ಲಿ ಜಾಗ್ರತೆಯಾಗಿದ್ದು, ಅವನ ಮಾತಿಗೆ ವಿಧೇಯರಾಗಿರಿ. ಅವನಿಗೆ ಕೋಪವನ್ನೆಬ್ಬಿಸಬೇಡಿರಿ. ಏಕೆಂದರೆ ನನ್ನ ಹೆಸರು ಅವನಲ್ಲಿ ಇರುವುದರಿಂದ ಅವನು ನಿಮ್ಮ ದ್ರೋಹಗಳನ್ನು ಮನ್ನಿಸುವುದಿಲ್ಲ.


ಯೆಹೋವ ದೇವರು ತಮ್ಮ ಪವಿತ್ರ ಬಾಹುವನ್ನು ಸಕಲ ಜನಾಂಗಗಳ ಕಣ್ಣೆದುರಿನಲ್ಲಿ ತೋರಿಸಿಕೊಂಡಿದ್ದಾನೆ ಮತ್ತು ಭೂಮಿಯ ಅಂತ್ಯದವರೆಗೂ ನಮ್ಮ ದೇವರ ರಕ್ಷಣೆಯನ್ನು ಕಾಣುವರು.


“ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ನೋಡಿರಿ, ರಕ್ಷಣೆಯನ್ನು ಪಡೆಯಿರಿ. ಏಕೆಂದರೆ ನಾನೇ ದೇವರು, ನನ್ನ ಹೊರತು ಯಾರೂ ಇಲ್ಲ.


“ಖಡ್ಗವೇ, ನನ್ನ ಕುರುಬನಿಗೆ ವಿರೋಧವಾಗಿ, ನನ್ನ ಸಂಗಡಿಗನಾದ ಮನುಷ್ಯನಿಗೆ ವಿರೋಧವಾಗಿ ಎಚ್ಚರವಾಗು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. “ಕುರುಬನನ್ನು ಹೊಡೆ, ಆಗ ಕುರಿಗಳು ಚದರಿಹೋಗುವುವು. ಚಿಕ್ಕವುಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು.


ನಿಮ್ಮ ಕಣ್ಣುಗಳಿಂದ ನೋಡಿ, ‘ಇಸ್ರಾಯೇಲಿನ ಮೇರೆ ಆಚೆಗೂ ಯೆಹೋವ ದೇವರು ಮಹೋನ್ನತರು!’ ಎಂದು ನೀವು ಹೇಳುವಿರಿ.”


ಯೆಹೋವ ದೇವರಾದ ನಾನು ಎಲ್ಲಾ ಪ್ರತಾಪದಿಂದ ಕೂಡಿದ ಅಸ್ಸೀರಿಯದ ಅರಸನೆಂಬ ಮಹಾನದಿಯ ರಭಸವಾದ ದೊಡ್ಡ ಪ್ರವಾಹವನ್ನು ಇವರ ಮೇಲೆ ಬರಮಾಡುವೆನು. ಅದು ತನ್ನ ಕಾಲುವೆಗಳನ್ನೆಲ್ಲಾ ಒಳಗೊಂಡು ದಡಗಳನ್ನೆಲ್ಲಾ ಮೀರಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು