ಮೀಕ 5:6 - ಕನ್ನಡ ಸಮಕಾಲಿಕ ಅನುವಾದ6 ಅವರು ಅಸ್ಸೀರಿಯ ದೇಶವನ್ನು ಖಡ್ಗದಿಂದಲೂ ನಿಮ್ರೋದನ ದೇಶವನ್ನು ಹಿಡಿದ ಖಡ್ಗದಿಂದಲೂ ಆಳುವರು. ಅಸ್ಸೀರಿಯವು ನಮ್ಮ ದೇಶದಲ್ಲಿ ಬಂದು ನಮ್ಮ ಪ್ರದೇಶವನ್ನು ಮುತ್ತಿಗೆ ಹಾಕಿ ಪ್ರಾಂತಗಳಲ್ಲಿ ನಡೆಯುವಾಗ ಆತನು ನಮ್ಮನ್ನು ತಪ್ಪಿಸುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅವರ ಶಸ್ತ್ರಾಸ್ತ್ರಗಳು ಅಶ್ಶೂರ ದೇಶವನ್ನು ಧ್ವಂಸಮಾಡುವುದು. ನಿಮ್ರೋದ್ ಸೀಮೆಯ ಪ್ರವೇಶಸ್ಥಾನಗಳು ಅವರ ಖಡ್ಗಕ್ಕೆ ತುತ್ತಾಗುವವು. ಅಶ್ಶೂರ್ಯರು ನಮ್ಮ ದೇಶದಲ್ಲಿ ನುಗ್ಗಿ, ನಮ್ಮ ಪ್ರಾಂತ್ಯವನ್ನು ತುಳಿದುಹಾಕುವಾಗ ಆ ಸಮಾಧಾನಪ್ರದನು ನಮ್ಮನ್ನು ಅವರ ಕೈಯೊಳಗಿಂದ ಉದ್ಧರಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಅಸ್ಸೀರಿಯದವರು ಇವರ ಶಸ್ತ್ರಾಸ್ತ್ರಗಳಿಗೆ ತುತ್ತಾಗುವರು. ನಿಮ್ರೋದ್ ಸೀಮೆಯ ಪ್ರವೇಶದ್ವಾರಗಳು ಧ್ವಂಸವಾಗುವುವು. ಅಸ್ಸೀರಿಯದವರು ನಮ್ಮ ನಾಡಿಗೆ ನುಗ್ಗಿ ನಮ್ಮ ಕೋಟೆಯನ್ನು ಆಕ್ರಮಿಸುವಾಗ, ಆ ಶಾಂತಿದಾತನು ನಮ್ಮನ್ನು ರಕ್ಷಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಅವರ ಕತ್ತಿಯು ಅಶ್ಶೂರ ದೇಶವನ್ನು ತಿಂದುಬಿಡುವದು, ನಿಮ್ರೋದ್ ಸೀಮೆಯ ಪ್ರವೇಶಸ್ಥಾನಗಳು ಅವರ ಖಡ್ಗಕ್ಕೆ ತುತ್ತಾಗುವವು; ಅಶ್ಶೂರ್ಯರು ನಮ್ಮ ದೇಶದಲ್ಲಿ ನುಗ್ಗಿ ನಮ್ಮ ಪ್ರಾಂತವನ್ನು ತುಳಿದುಹಾಕುವಾಗ [ಆ ಸಮಾಧಾನಪ್ರದನು] ನಮ್ಮನ್ನು ಅವರ ಕೈಯೊಳಗಿಂದ ಉದ್ಧರಿಸುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಅವರು ತಮ್ಮ ಖಡ್ಗಗಳನ್ನು ಉಪಯೋಗಿಸಿ ಅಶ್ಶೂರದವರನ್ನು ಆಳುವರು. ಅವರು ನಿಮ್ರೋದನ ದೇಶವನ್ನು ಆಳುವರು. ಕೈಯಲ್ಲಿ ಖಡ್ಗವನ್ನು ಹಿಡಿದುಕೊಂಡು ಆ ಜನರನ್ನು ಆಳುವರು. ಆದರೆ ಇಸ್ರೇಲಿನ ರಾಜನು ಅಶ್ಶೂರದವರಿಂದ ನಮ್ಮನ್ನು ರಕ್ಷಿಸುವನು. ಅವರು ನಮ್ಮ ದೇಶದೊಳಕ್ಕೆ ಬಂದು ನಮ್ಮ ಪ್ರದೇಶವನ್ನು ತುಳಿದು ಹಾಳುಮಾಡುವಾಗ ನಾವು ರಕ್ಷಿಸಲ್ಪಡುವೆವು. ಅಧ್ಯಾಯವನ್ನು ನೋಡಿ |