Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 5:8 - ಕನ್ನಡ ಸಮಕಾಲಿಕ ಅನುವಾದ

8 ಯಾಕೋಬನ ಜನಶೇಷವು ದೇಶದೇಶಗಳೊಳಗೆ ಅನೇಕ ಜನಾಂಗಗಳ ಮಧ್ಯದಲ್ಲಿ, ಅಡವಿಯ ಮೃಗಗಳಲ್ಲಿ ಸಿಂಹದಂತೆಯೂ ಕುರಿಮಂದೆಗಳಲ್ಲಿ ಪ್ರಾಯದ ಸಿಂಹದಂತೆಯೂ ಇರುವುದು. ಅದು ಹಾದುಹೋದರೆ ಇಳಿದುಬಿಟ್ಟು ಹರಿದುಬಿಡುತ್ತದೆ, ಯಾರೂ ಬಿಡಿಸಲಾರರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಇದಲ್ಲದೆ ಸಿಂಹವು ಕಾಡುಮೃಗಗಳನ್ನು, ಪ್ರಾಯದ ಸಿಂಹವು ಕುರಿಹಿಂಡುಗಳನ್ನು ಹಾದುಹೋಗುವಾಗೆಲ್ಲಾ ಅವುಗಳನ್ನು ಯಾರೂ ರಕ್ಷಿಸಲಾರದಂತೆ ತುಳಿದು, ಸೀಳಿಹಾಕುವ ಹಾಗೆ ಯಾಕೋಬಿನ ಜನಶೇಷವು ದೇಶದೇಶಗಳ, ಬಹು ಜನಾಂಗಗಳ ಮಧ್ಯದಲ್ಲಿ ನಾಶಕರವಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಸಿಂಹವು ತಿರುಗಾಡುತ್ತಾ ಕಾಡುಮೃಗಗಳನ್ನು ಕಬಳಿಸುತ್ತದೆ. ಪ್ರಾಯದ ಸಿಂಹವು ಓಡಾಡುತ್ತಾ ಸುರಕ್ಷಣೆಯಿಲ್ಲದ ಕುರಿಮಂದೆಗಳನ್ನು ಸೀಳಿಹಾಕುತ್ತದೆ. ಅಂತೆಯೇ ಯಕೋಬನ ಅಳಿದುಳಿದ ಜನರು ದೇಶವಿದೇಶಗಳ ಹಲವಾರು ರಾಷ್ಟ್ರಗಳ ನಡುವೆ ನಾಶಕರವಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅಲ್ಲದೆ ಸಿಂಹವು ಕಾಡುಮೃಗಗಳನ್ನು, ಪ್ರಾಯದ ಸಿಂಹವು ಕುರಿಹಿಂಡುಗಳನ್ನು ಹಾದುಹೋಗುವಾಗೆಲ್ಲಾ ಅವುಗಳನ್ನು ಯಾರೂ ರಕ್ಷಿಸಲಾರದಂತೆ ತುಳಿದು ಸೀಳಿಹಾಕುವ ಹಾಗೆ ಯಾಕೋಬಿನ ಜನಶೇಷವು ದೇಶದೇಶಗಳೊಳಗೆ ಬಹುಜನಾಂಗಗಳ ಮಧ್ಯದಲ್ಲಿ ನಾಶಕರವಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆದರೆ ಜನಾಂಗಗಳಲ್ಲಿ ಚದರಿರುವ ಯಾಕೋಬನ ವಂಶದ ಅಳಿದುಳಿದವರು, ಕಾಡಿನಲ್ಲಿರುವ ಪ್ರಾಣಿಗಳಲ್ಲಿ ಸಿಂಹವು ಹೇಗೆ ಇರುವದೋ, ಹಾಗೆಯೇ ಇರುವರು. ಕುರಿಗಳ ಹಿಂಡಿನ ಮಧ್ಯೆಯಿರುವ ಪ್ರಾಯದ ಸಿಂಹದಂತಿರುವರು. ಅದು ತನಗೆ ಇಷ್ಟ ಬಂದಂತೆ ತಿರುಗಾಡುವದು. ಅದು ಒಂದು ಪ್ರಾಣಿಯನ್ನು ಹಿಡಿದರೆ ಅದನ್ನು ಬಿಡಿಸಲು ಯಾರಿಂದಲೂ ಸಾಧ್ಯವಿಲ್ಲ. ಜನಶೇಷವು ಅದರಂತಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 5:8
29 ತಿಳಿವುಗಳ ಹೋಲಿಕೆ  

ಅವರು ಯುದ್ಧದಲ್ಲಿ ಶತ್ರುವನ್ನು ಕೆಸರಿನ ಬೀದಿಗಳಲ್ಲಿ ತುಳಿಯುವ ಶೂರರ ಹಾಗಿರುವರು. ಯೆಹೋವ ದೇವರು ಅವರ ಸಂಗಡ ಇರುವುದರಿಂದ ಯುದ್ಧಮಾಡುವರು. ಕುದುರೆಗಳ ಮೇಲೆ ಸವಾರಿ ಮಾಡುವ ಶತ್ರುವನ್ನು ನಾಚಿಕೆ ಪಡಿಸುವರು.


ಚೀಯೋನ್ ಪುತ್ರಿಯೇ, ಎದ್ದು ತುಳಿ. ಏಕೆಂದರೆ ನಿನ್ನ ಕೊಂಬನ್ನು ಕಬ್ಬಿಣವಾಗಿಯೂ ನಿನ್ನ ಗೊರಸುಗಳನ್ನು ಕಂಚಿನದಾಗಿಯೂ ಮಾಡುವೆನು. ನೀನು ಅನೇಕ ಜನಾಂಗಗಳನ್ನು ಚೂರುಚೂರಾಗಿ ಮಾಡುವೆ. ಅವರ ಕೊಳ್ಳೆಹೊಡೆದು ಸಂಪಾದಿಸಿದ್ದ ಸ್ವತ್ತನ್ನು ಯೆಹೋವ ದೇವರಿಗೂ ಅವರ ಸಂಪತ್ತನ್ನು ಲೋಕದ ಕರ್ತ ದೇವರಿಗೂ ಪ್ರತಿಷ್ಠೆಮಾಡುವೆನು.


ಆ ದಿವಸದಲ್ಲಿ, ಅವಳ ವಿರೋಧವಾಗಿ ಭೂಮಿಯ ಜನಾಂಗಗಳೆಲ್ಲಾ ಒಟ್ಟುಗೂಡಿಕೊಳ್ಳುವಾಗ, ನಾನು ಯೆರೂಸಲೇಮನ್ನು ಎಲ್ಲಾ ಜನರಿಗೆ ಚಲಿಸಲಾಗದ ಕಲ್ಲಾಗಿ ಮಾಡುತ್ತೇನೆ. ಅದನ್ನು ತೆಗೆದುಹಾಕಲು ಪ್ರಯತ್ನಿಸುವವರೆಲ್ಲರು ತಮ್ಮನ್ನು ತಾವೇ ಗಾಯಗೊಳಿಸಿಕೊಳ್ಳುತ್ತಾರೆ.


ಸೇನಾಧೀಶ್ವರ ಯೆಹೋವ ದೇವರು ಅವರನ್ನು ಕಾಪಾಡುವರು. ಅವರು ನಾಶಮಾಡಿ, ಕವಣೆ ಕಲ್ಲುಗಳನ್ನು ಸ್ವಾಧೀನಮಾಡಿಕೊಳ್ಳುವರು. ಕುಡಿದು, ದ್ರಾಕ್ಷಾರಸದಿಂದಾದ ಹಾಗೆ ತೂಗಾಡುವರು. ಅವರು ಬಲಿಪೀಠದ ಮೂಲೆಗಳಿಗೆ ಚಿಮುಕಿಸಲು ಬಳಸುವ ಪಾತ್ರೆಯ ಹಾಗೆಯೂ ತುಂಬಿರುವರು.


ಏಕೆಂದರೆ ನಾನು ಎಫ್ರಾಯೀಮಿಗೆ ಸಿಂಹದ ಹಾಗೆಯೂ, ಯೆಹೂದದ ಮನೆತನದವರಿಗೆ ಪ್ರಾಯದ ಸಿಂಹದ ಹಾಗೆಯೂ ಇರುವೆನು. ನಾನೇ ಅವರನ್ನು ಸೀಳಿಬಿಟ್ಟು ಹೋಗುವೆನು. ನಾನು ಎತ್ತಿಕೊಂಡು ಹೋಗಲು, ಅವರನ್ನು ಯಾರೂ ಬಿಡಿಸಲಾರರು.


“ದೇವರನ್ನು ಮರೆತು ಬಿಡುವವರೇ, ಇದನ್ನು ನಿಮ್ಮ ಮನಸ್ಸಿಗೆ ತಂದುಕೊಳ್ಳಿರಿ. ಇಲ್ಲವಾದರೆ ಎಚ್ಚರಿಕೆಯಾಗಿರಿ. ನನ್ನ ಕೈಯಿಂದ ಬಿಡಿಸುವವರು ಯಾರೂ ಇರುವುದಿಲ್ಲವೆಂಬುದನ್ನು ಗ್ರಹಿಸಿಕೊಳ್ಳಿರಿ.


ಮಾತನಾಡುವ ದೇವರನ್ನು ನೀವು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಭೂಮಿಯ ಮೇಲೆ ಎಚ್ಚರಿಸಿದವರನ್ನು ಅಸಡ್ಡೆ ಮಾಡಿದ್ದಕ್ಕೆ ಅವರು ತಪ್ಪಿಸಿಕೊಳ್ಳದಿದ್ದರೆ, ಪರಲೋಕದಿಂದ ಎಚ್ಚರಿಸುವ ದೇವರಿಂದ ನಾವು ತೊಲಗಿ ಹೋದರೆ, ಹೇಗೆ ತಾನೆ ದಂಡನೆಯಿಂದ ನಾವು ತಪ್ಪಿಸಿಕೊಳ್ಳಬಲ್ಲೆವು?


ಆದರೆ ಯೆಹೂದ್ಯರು ಪೌಲನನ್ನು ವಿರೋಧಿಸಿ ದೂಷಿಸಿದಾಗ, ಅವನು ಅವರನ್ನು ಪ್ರತಿಭಟಿಸುವಂತೆ ತನ್ನ ಬಟ್ಟೆಗಳನ್ನು ಝಾಡಿಸಿ, “ನಿಮ್ಮ ರಕ್ತವು ನಿಮ್ಮ ತಲೆಯ ಮೇಲೆ ಇರಲಿ. ನಿಮ್ಮ ವಿನಾಶಕ್ಕೆ ನೀವೇ ಹೊಣೆ. ಅದಕ್ಕೆ ನಾನು ಜವಾಬ್ದಾರನಲ್ಲ, ಇಂದಿನಿಂದ ನಾನು ಶುದ್ಧಮನಸ್ಸುಳ್ಳವನಾಗಿ ಯೆಹೂದ್ಯರಲ್ಲದವರ ಬಳಿಗೆ ಹೋಗುತ್ತೇನೆ,” ಎಂದನು.


ಯಾರಾದರೂ ನಿಮ್ಮನ್ನು ಸ್ವಾಗತಿಸದೆ ಹೋದರೆ ಇಲ್ಲವೆ ನಿಮ್ಮ ಮಾತುಗಳನ್ನು ಕೇಳದೆ ಹೋದರೆ, ನೀವು ಆ ಮನೆಯನ್ನು ಇಲ್ಲವೆ ಆ ಪಟ್ಟಣವನ್ನು ಬಿಟ್ಟು ಹೊರಡುವಾಗ ನಿಮ್ಮ ಪಾದಗಳಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ.


ಯೆಹೂದನು ಸಿಂಹದ ಮರಿಯಾಗಿದ್ದಾನೆ. ನನ್ನ ಮಗನೇ, ಬೇಟೆಹಿಡಿದು ಮೇಲಕ್ಕೆ ಬಂದೆ. ಅವನು ಸಿಂಹದಂತೆಯೂ ಪ್ರಾಯದ ಸಿಂಹದ ಹಾಗೆಯೂ ಮುದುರಿಕೊಂಡು ಮಲಗಿದ್ದಾನೆ. ಅವನನ್ನು ಕೆಣಕುವವರು ಯಾರು?


ಇಂತಹ ಮಹಾ ರಕ್ಷಣೆಯನ್ನು ನಾವು ಅಲಕ್ಷ್ಯ ಮಾಡಿದರೆ ತಪ್ಪಿಸಿಕೊಳ್ಳುವುದು ಹೇಗೆ? ಈ ರಕ್ಷಣೆಯನ್ನು ನಮಗೆ ಕರ್ತ ಆಗಿರುವ ಯೇಸುವೇ ಮೊದಲು ತಿಳಿಸಿದ್ದಾರೆ. ಅವರಿಂದ ಕೇಳಿಸಿಕೊಂಡವರೂ ನಮಗೆ ಆ ರಕ್ಷಣೆಯನ್ನು ದೃಢಪಡಿಸಿದ್ದಾರೆ.


ಅವರು ಸಿಂಹದ ಹಾಗೆಯೂ, ಸಿಂಹಣಿ ಹಾಗೆಯೂ ಬಾಗಿ ಮಲಗುತ್ತಾನೆ. ಅವನನ್ನು ಎಬ್ಬಿಸುವವನು ಯಾರು? “ನಿಮ್ಮನ್ನು ಆಶೀರ್ವದಿಸುವವನಿಗೆ ಆಶೀರ್ವಾದ ಉಂಟಾಗಲಿ. ಶಪಿಸುವವನಿಗೆ ಶಾಪ ಉಂಟಾಗಲಿ.”


ನಿಮ್ಮಿಂದ ನಮ್ಮ ವೈರಿಗಳನ್ನು ದಬ್ಬುವೆವು; ನಿಮ್ಮ ಹೆಸರಿನಲ್ಲಿ ನಮ್ಮ ಎದುರಾಳಿಗಳನ್ನು ತುಳಿಯುವೆವು.


ನೀವು ಕತ್ತಲನ್ನು ಬರಮಾಡುತ್ತೀರಿ, ಆಗ ರಾತ್ರಿಯಾಗುತ್ತದೆ; ಅದರಲ್ಲಿ ಅಡವಿಯ ಮೃಗಗಳೆಲ್ಲಾ ಸಂಚರಿಸುತ್ತವೆ.


ಮೃಗಗಳಲ್ಲಿ ಬಲಿಷ್ಠವಾಗಿರುವ ಸಿಂಹವು, ಯಾವುದಕ್ಕೂ ಹಿಮ್ಮೆಟ್ಟದು.


ಅವರ ಗರ್ಜನೆಯು ಸಿಂಹ ಆರ್ಭಟಿಸಿದಂತಿದೆ. ಪ್ರಾಯದ ಸಿಂಹ ಆರ್ಭಟಿಸಿದಂತಿದೆ. ಹೌದು, ಗರ್ಜಿಸುತ್ತಾ ಬೇಟೆಹಿಡಿದು ಭದ್ರವಾಗಿ ಹೊತ್ತುಕೊಂಡು ಹೋಗುತ್ತಾರೆ, ಅದನ್ನು ಬಿಡಿಸುವವನು ಒಬ್ಬನೂ ಇಲ್ಲ.


ಅದಕ್ಕಾಗಿ ಅವರು ಬಯಲಿನಿಂದ ಮರಗಳನ್ನು ತೆಗೆದುಕೊಳ್ಳುವುದಿಲ್ಲ ಅಥವಾ ಅರಣ್ಯಗಳಲ್ಲಿ ಯಾವುದನ್ನೂ ಕತ್ತರಿಸಿಕೊಳ್ಳುವುದೂ ಇಲ್ಲ, ಅವರು ಆಯುಧಗಳನ್ನು ಬೆಂಕಿಗೆ ಸೌದೆಯಾಗಿ ಉಪಯೋಗಿಸುವರು. ಅವರು ಸೂರೆಯಾದವುಗಳನ್ನು ಸೂರೆ ಮಾಡುವರು ಮತ್ತು ಕೊಳ್ಳೆ ಹೊಡೆದವರನ್ನು ತಾವು ಕೊಳ್ಳೆಹೊಡೆಯುವರು ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


“ಯಾಕೋಬೇ, ನಿನ್ನವರನ್ನೆಲ್ಲಾ ನಿಶ್ಚಯವಾಗಿ ಕೂಡಿಸುವೆನು. ಇಸ್ರಾಯೇಲಿನಲ್ಲಿ ಉಳಿದವರನ್ನು ನಿಶ್ಚಯವಾಗಿ ಕೂಡಿಸುವೆನು. ಬೊಚ್ರದ ಕುರಿಗಳಂತೆಯೂ ತಮ್ಮ ಹಟ್ಟಿಯ ನಡುವೆ ಇರುವ ಮಂದೆಯಂತೆಯೂ ಅವರನ್ನು ಒಟ್ಟಾಗಿ ಕೂಡಿಸುವೆನು. ಹುಲ್ಲುಗಾವಲಿನ ಕುರಿಮಂದೆಯಂತೆ, ಸ್ಥಳವು ಜನರಿಂದ ತುಂಬಿ ತುಳುಕುವುದು.


“ಕುಂಟಾದದ್ದನ್ನು ಉಳಿದದ್ದನ್ನಾಗಿಯೂ ತಳ್ಳಿಬಿಟ್ಟಿದ್ದನ್ನು ಬಲವಾದ ಜನಾಂಗವಾಗಿಯೂ ಮಾಡುವೆನು. ಯೆಹೋವ ದೇವರು ಇಂದಿನಿಂದ ಸದಾಕಾಲವೂ ಚೀಯೋನ್ ಪರ್ವತದಲ್ಲಿ ಅವರ ಮೇಲೆ ಆಳುವರು.


ಆದ್ದರಿಂದ ಹೆರುವವಳು ಒಬ್ಬ ಮಗನನ್ನು ಹೆರುವ ಕಾಲದವರೆಗೂ ಇಸ್ರಾಯೇಲನ್ನು ಕೈಬಿಡಲಾಗುವುದು. ಆಗ ಅವನ ಸಹೋದರರಲ್ಲಿ ಉಳಿದವರು ಇಸ್ರಾಯೇಲರ ಬಳಿಗೆ ಹಿಂದಿರುಗುವರು.


ಪಾಪಗಳನ್ನು ಮತ್ತು ಅಪರಾಧಗಳನ್ನು ಮನ್ನಿಸುವವನೂ, ತನ್ನ ಬಾಧ್ಯತೆಯ ಶೇಷದ ದ್ರೋಹವನ್ನು ಲಕ್ಷಿಸದವನೂ, ನಿನ್ನ ಹಾಗೆ ಇರುವ ದೇವರು ಯಾರು? ಆತನು ತನ್ನ ಕೋಪವನ್ನು ಎಂದೆಂದಿಗೂ ಇಟ್ಟುಕೊಳ್ಳುವುದಿಲ್ಲ. ಏಕೆಂದರೆ ನೀವು ಕರುಣೆಯಲ್ಲಿ ಸಂತೋಷಪಡುತ್ತೀರಿ.


ಏಕೆಂದರೆ ನಾನು ದೇಶದ ನಿವಾಸಿಗಳನ್ನು ಇನ್ನು ಕನಿಕರಿಸುವುದೇ ಇಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ. “ಆದರೆ ನಾನು ಒಬ್ಬೊಬ್ಬನನ್ನು ಅವನವನ ನೆರೆಯವನ ಕೈಗೂ, ಅವನ ಅರಸನ ಕೈಗೂ ಒಪ್ಪಿಸುವೆನು. ಅವರು ದೇಶವನ್ನು ಧ್ವಂಸಮಾಡುವರು. ಅವರ ಕೈಯೊಳಗಿಂದ ನಾನು ಅವರನ್ನು ತಪ್ಪಿಸುವುದಿಲ್ಲ.”


ಆಗ ದುಷ್ಟರನ್ನು ತುಳಿದುಬಿಡುವಿರಿ. ಏಕೆಂದರೆ ನಾನು ಕಾರ್ಯಸಾಧಿಸುವ ದಿವಸದಲ್ಲಿ ಅವರು ನಿಮ್ಮ ಪಾದಗಳ ಕೆಳಗೆ ಬೂದಿಯಾಗಿರುವರೆಂದು ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಈಜಿಪ್ಟಿನವರು ಹೋಗದಿದ್ದರೆ ಮತ್ತು ಹಬ್ಬವನ್ನು ಆಚರಿಸುವುದಕ್ಕೆ ಬರದಿದ್ದರೆ ಅವರಿಗೂ ಮಳೆ ಬರುವುದಿಲ್ಲ. ಗುಡಾರಗಳ ಹಬ್ಬವನ್ನು ಆಚರಿಸುವುದಕ್ಕೆ ಬಾರದ ಇತರ ಜನಾಂಗಗಳಿಗೆ ಯೆಹೋವ ದೇವರು ಬಾಧಿಸುವ ವ್ಯಾಧಿಯು ಅವರ ಮೇಲೆ ತಗಲುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು