ಮೀಕ 6:14 - ಕನ್ನಡ ಸಮಕಾಲಿಕ ಅನುವಾದ14 ನೀನು ಉಂಡರೂ ತೃಪ್ತಿಯಾಗದೆ ಇರುವೆ; ನಿನ್ನೊಳಗೆ ಹಸಿವೆಯು ಇರುವುದು; ನೀವು ಸಂಗ್ರಹಿಸುತ್ತೀರಿ ಆದರೆ ಏನನ್ನೂ ಉಳಿಸುವುದಿಲ್ಲ, ಏಕೆಂದರೆ ನೀವು ಉಳಿಸುವದನ್ನು ನಾನು ಕತ್ತಿಗೆ ಕೊಡುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನೀನು ತಿಂದರೂ ನಿನಗೆ ತೃಪ್ತಿಯಾಗದು. ಹಸಿವೆಯು ನಿನ್ನೊಳಗೆ ಇದ್ದೇ ಇರುವುದು. ನೀನು ನಿನ್ನವರನ್ನು ಕಳುಹಿಸಿಬಿಟ್ಟರೂ ಅವರನ್ನು ಪಾರುಮಾಡಲಾರಿ. ಪಾರುಮಾಡಿದವರನ್ನೂ ಕತ್ತಿಗೆ ತುತ್ತನ್ನಾಗಿ ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಎಷ್ಟು ತಿಂದರೂ ನಿಮಗೆ ತೃಪ್ತಿಯಾಗದು; ನಿಮ್ಮಲ್ಲಿ ಹಸಿವು ಇದ್ದೇ ಇರುತ್ತದೆ. ನೀವು ಎಷ್ಟು ಕೂಡಿಸಿಟ್ಟರೂ ಅದು ನಿಮಗೆ ಉಳಿಯುವುದಿಲ್ಲ; ಏಕೆಂದರೆ ಉಳಿದುದ್ದನ್ನು ಕದನದಲ್ಲಿ ಹಾಳಾಗಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನೀನು ಉಂಡರೂ ನಿನಗೆ ತೃಪ್ತಿಯಾಗದು; ಹಸಿವೆಯು ನಿನ್ನೊಳಗೆ ಇದ್ದೇ ಇರುವದು; ನೀನು [ನಿನ್ನವರನ್ನು] ಕಳುಹಿಸಿಬಿಟ್ಟರೂ ಅವರನ್ನು ಪಾರುಮಾಡಲಾರಿ; ಪಾರುಮಾಡಿದವರನ್ನೂ ಕತ್ತಿಗೆ ತುತ್ತನ್ನಾಗಿ ಮಾಡುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ನೀವು ತಿನ್ನುವಿರಿ ಆದರೆ ನಿಮ್ಮ ಹೊಟ್ಟೆ ತುಂಬದು. ನೀವು ಹೊಟ್ಟೆಗಿಲ್ಲದವರಂತೆ ಹಸಿವಿನಿಂದಲೇ ಇರುವಿರಿ. ನೀವು ಜನರನ್ನು ಸುರಕ್ಷಿತ ಸ್ಥಳಕ್ಕೆ ತರಲು ಪ್ರಯತ್ನಿಸುವಿರಿ. ಆದರೆ ನೀವು ರಕ್ಷಿಸಿದ ಜನರನ್ನು ಖಡ್ಗಧಾರಿಗಳು ಕೊಂದುಬಿಡುವರು. ಜನರು ನಿಮ್ಮನ್ನು ಹಿಡಿಯುವರು. ಅಧ್ಯಾಯವನ್ನು ನೋಡಿ |