Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 6:4 - ಕನ್ನಡ ಸಮಕಾಲಿಕ ಅನುವಾದ

4 ನಾನು ಈಜಿಪ್ಟ್ ದೇಶದೊಳಗಿಂದ ನಿನ್ನನ್ನು ಮೇಲೆ ಬರಮಾಡಿ, ದಾಸತ್ವದ ದೇಶದೊಳಗಿಂದ ನಿನ್ನನ್ನು ವಿಮೋಚಿಸಿ, ಮೋಶೆ, ಆರೋನ್ ಮತ್ತು ಮಿರ್ಯಾಮಳನ್ನು ನಿನಗೆ ನಾಯಕರನ್ನಾಗಿ ಕಳುಹಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಾನು ನಿನ್ನನ್ನು ಐಗುಪ್ತದೇಶದೊಳಗಿಂದ ಪಾರುಮಾಡಿ ದಾಸತ್ವದಿಂದ ಬಿಡಿಸಿದೆನು. ಮೋಶೆಯನ್ನೂ, ಆರೋನನನ್ನೂ ಮತ್ತು ಮಿರ್ಯಾಮಳನ್ನೂ ನಿನಗೆ ನಾಯಕರನ್ನಾಗಿ ಕಳುಹಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಈಜಿಪ್ಟ್ ದೇಶದಿಂದ ನಾನು ನಿನ್ನನ್ನು ಕರೆತಂದೆ; ದಾಸತ್ವದ ಬಂಧನದಿಂದ ನಿನ್ನನ್ನು ಬಿಡುಗಡೆ ಮಾಡಿದೆ. ನಿನಗೆ ಮೋಶೆ, ಆರೋನ್ ಮತ್ತು ಮಿರ್ಯಾಮಳನ್ನು ನಾಯಕರನ್ನಾಗಿ ಕಳುಹಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಾನು ನಿನ್ನನ್ನು ಐಗುಪ್ತದೇಶದೊಳಗಿಂದ ಪಾರುಮಾಡಿ ದಾಸತ್ವದಿಂದ ಬಿಡಿಸಿದೆನು; ಮೋಶೆಯನ್ನೂ ಆರೋನನನ್ನೂ ವಿುರ್ಯಾಮಳನ್ನೂ ನಿನಗೆ ನಾಯಕರನ್ನಾಗಿ ಕಳುಹಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಾನು ಮಾಡಿದ್ದನ್ನು ನಿಮಗೆ ಹೇಳುತ್ತೇನೆ, ನಾನು ನಿಮ್ಮ ಬಳಿಗೆ ಮೋಶೆ, ಆರೋನ್ ಮತ್ತು ಮಿರ್ಯಾಮಳನ್ನು ಕಳುಹಿಸಿದೆನು. ನಾನು ಈಜಿಪ್ಟ್ ದೇಶದಿಂದ ನಿಮ್ಮನ್ನು ಕರೆತಂದೆನು. ಗುಲಾಮತನದಿಂದ ನಿಮ್ಮನ್ನು ಬಿಡಿಸಿ ಸ್ವತಂತ್ರರನ್ನಾಗಿ ಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 6:4
29 ತಿಳಿವುಗಳ ಹೋಲಿಕೆ  

ಯೆಹೋವ ದೇವರು ನಿಮ್ಮನ್ನು ಪ್ರೀತಿಸಿದ್ದರಿಂದಲೂ, ನಿಮ್ಮ ಪಿತೃಗಳಿಗೆ ಮಾಡಿದ ಪ್ರಮಾಣವನ್ನು ನೆರವೇರಿಸುವುದರಿಂದಲೂ, ಯೆಹೋವ ದೇವರು ನಿಮ್ಮನ್ನು ಬಲವಾದ ಕೈಯಿಂದ ಹೊರಗೆ ಬರಮಾಡಿ ನಿಮ್ಮನ್ನು ಗುಲಾಮತನದಿಂದಲೂ, ಈಜಿಪ್ಟಿನ ಅರಸನಾದ ಫರೋಹನ ಕೈಯಿಂದಲೂ ವಿಮೋಚಿಸಿದರು.


ಅದೇ ದಿನದಲ್ಲಿ ಯೆಹೋವ ದೇವರು ಇಸ್ರಾಯೇಲರನ್ನು ಅವರ ಸೈನ್ಯಗಳ ಪ್ರಕಾರ ಈಜಿಪ್ಟ್ ದೇಶದೊಳಗಿಂದ ಹೊರಗೆ ತಂದರು.


ನಾನೇ ನಿಮ್ಮನ್ನು ಈಜಿಪ್ಟ್ ದೇಶದಿಂದ ಕರೆತಂದೆನು. ಅಮೋರಿಯರ ದೇಶವನ್ನು ನಿಮಗೆ ಸೊತ್ತಾಗಿ ಕೊಡಲು, ನಿಮ್ಮನ್ನು ನಾಲ್ವತ್ತು ವರ್ಷ ಮರುಭೂಮಿಯಲ್ಲಿ ನಡೆಸಿದೆನು.


ನಿಮ್ಮ ಜನರಾದ ಇಸ್ರಾಯೇಲನ್ನು ಗುರುತುಗಳಿಂದಲೂ, ಲಕ್ಷಣಗಳಿಂದಲೂ, ಬಲವಾದ ಕೈಯಿಂದಲೂ, ಚಾಚಿದ ತೋಳಿನಿಂದಲೂ, ಮಹಾಭಯದಿಂದಲೂ ಈಜಿಪ್ಟ್ ದೇಶದೊಳಗಿಂದ ಹೊರಗೆ ತಂದಿದ್ದೀರಿ.


ಭೂಲೋಕದಲ್ಲಿ ನಿಮ್ಮ ಜನರಾದ ಇಸ್ರಾಯೇಲರಿಗೆ ಸಮಾನವಾದ ಜನಾಂಗ ಯಾವುದು? ನೀವೇ ಹೋಗಿ ಅವರನ್ನು ಸ್ವಜನರಾಗಿ ವಿಮೋಚಿಸಿ ನಿಮ್ಮ ಹೆಸರನ್ನು ಪ್ರಸಿದ್ಧಿಪಡಿಸಿದ್ದೀರಿ. ಈಜಿಪ್ಟಿನಿಂದ ವಿಮೋಚಿಸಿ ತಂದ ನಿಮ್ಮ ಪ್ರಜೆಗಳ ಎದುರಿನಿಂದ ಜನಾಂಗಗಳನ್ನು ಮತ್ತು ಅವರ ದೇವರುಗಳನ್ನು ಓಡಿಸುವ ಮೂಲಕ ವಿಸ್ಮಯಕರವಾದ ಮಹಾ ಅದ್ಭುತಗಳನ್ನು ಮಾಡಿದ್ದೀರಲ್ಲವೇ?


ಮೋಶೆಯು ಕೂಷ್ ದೇಶದ ಸ್ತ್ರೀಯನ್ನು ವಿವಾಹವಾಗಿದ್ದನು. ಆಕೆಯ ನಿಮಿತ್ತವಾಗಿ ಮಿರ್ಯಾಮಳೂ ಆರೋನನೂ ಮೋಶೆಗೆ ವಿರುದ್ಧವಾಗಿ ಮಾತನಾಡಲಿಕ್ಕೆ ಪ್ರಾರಂಭಿಸಿದರು.


“ನಿನ್ನನ್ನು ಈಜಿಪ್ಟ್ ದೇಶದಿಂದಲೂ ದಾಸತ್ವದ ನಾಡಿನೊಳಗಿಂದಲೂ ಹೊರಗೆ ತಂದ ನಿನ್ನ ದೇವರಾದ ಯೆಹೋವ ದೇವರು ನಾನೇ.


ಈ ಮೋಶೆಯೇ ಇಸ್ರಾಯೇಲರನ್ನು ಈಜಿಪ್ಟಿನಿಂದ ಹೊರಗೆ ನಡೆಸಿಕೊಂಡು ಬಂದನು. ಈಜಿಪ್ಟಿನಲ್ಲಿ, ಕೆಂಪುಸಮುದ್ರದ ಬಳಿಯಲ್ಲಿ, ಅರಣ್ಯದಲ್ಲಿ ಅದ್ಭುತಗಳನ್ನು ಮತ್ತು ಸೂಚಕಕಾರ್ಯಗಳನ್ನು ಮಾಡುತ್ತಾ ನಲವತ್ತು ವರ್ಷಗಳ ಕಾಲ ನಡೆಸಿದನು.


ಮೋಶೆ ಆರೋನರ ಕೈಯಿಂದ ನಿಮ್ಮ ಜನರನ್ನು ಮಂದೆಯ ಹಾಗೆ ನಡೆಸಿದಿರಿ.


ನೀನು ಈಜಿಪ್ಟಿನಲ್ಲಿ ದಾಸನಾಗಿದ್ದೆ ಎಂದೂ, ನಿನ್ನ ದೇವರಾದ ಯೆಹೋವ ದೇವರು ನಿನ್ನನ್ನು ಅಲ್ಲಿಂದ ವಿಮೋಚಿಸಿದರೆಂದೂ ಜ್ಞಾಪಕಮಾಡಿಕೊಳ್ಳಬೇಕು. ಆದ್ದರಿಂದ ಈ ಕಾರ್ಯಗಳನ್ನೆಲ್ಲಾ ಮಾಡಬೇಕೆಂದು ನಾನು ನಿನಗೆ ಆಜ್ಞಾಪಿಸುತ್ತೇನೆ.


ನೀವು ಈಜಿಪ್ಟ್ ದೇಶದಲ್ಲಿ ದಾಸರಾಗಿದ್ದಿರಿ ಎಂದೂ, ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ವಿಮೋಚಿಸಿದರೆಂದೂ ಜ್ಞಾಪಕಮಾಡಿಕೊಳ್ಳಿರಿ. ಆದ್ದರಿಂದ ನಾನು ಈ ಹೊತ್ತು ಇದನ್ನು ನಿಮಗೆ ಆಜ್ಞಾಪಿಸುತ್ತೇನೆ.


ನಾನು ಯೆಹೋವ ದೇವರಿಗೆ ಪ್ರಾರ್ಥನೆಮಾಡಿ, “ಸಾರ್ವಭೌಮ ಯೆಹೋವ ದೇವರೇ, ನೀವು ನಿಮ್ಮ ಮಹಿಮೆಯಿಂದ ವಿಮೋಚಿಸಿ, ಬಲವಾದ ಕೈಯಿಂದ ಈಜಿಪ್ಟಿನೊಳಗಿಂದ ಹೊರಗೆ ಬರಮಾಡಿದ ನಿಮ್ಮ ಜನರನ್ನು ನಾಶಮಾಡಬೇಡಿ.


“ನಿನ್ನನ್ನು ಈಜಿಪ್ಟ್ ದೇಶದಿಂದಲೂ, ದಾಸತ್ವದ ನಾಡಿನೊಳಗಿಂದಲೂ ಹೊರಗೆ ತಂದ ನಿನ್ನ ದೇವರಾದ ಯೆಹೋವ ದೇವರು ನಾನೇ.


ನಿಮ್ಮ ದೇವರಾದ ಯೆಹೋವ ದೇವರು ಈಜಿಪ್ಟಿನಲ್ಲಿ ನಿಮ್ಮ ಕಣ್ಣ ಮುಂದೆಯೇ ನಿಮಗೆ ಮಾಡಿದ್ದೆಲ್ಲದರ ಹಾಗೆ ಯಾವ ದೇವರು ಒಂದು ಜನಾಂಗವನ್ನು ಮತ್ತೊಂದು ಜನಾಂಗದಿಂದ ತಮಗಾಗಿ ಆಯ್ದು ತೆಗೆದುಕೊಳ್ಳುವುದಕ್ಕೆ ಪರೀಕ್ಷೆಗಳು, ಗುರುತುಗಳು, ಅದ್ಭುತಗಳು ಇವುಗಳ ಮೂಲಕವಾಗಿಯೂ, ಯುದ್ಧದಿಂದಲೂ, ಭುಜಬಲದಿಂದಲೂ, ಚಾಚಿದ ತೋಳಿನಿಂದಲೂ, ದೊಡ್ಡ ಭಯಗಳಿಂದಲೂ ಪ್ರಯತ್ನ ಮಾಡಿದರೋ?


ಅವನು ನಿನ್ನ ಪರವಾಗಿ ಜನರ ಸಂಗಡ ಮಾತನಾಡುವನು. ಅವನು ನಿನಗೆ ಬಾಯಿಯಾಗಿರುವನು, ನೀನು ಅವನಿಗೆ ದೇವರಂತಿರುವಿ.


ನಿಮ್ಮನ್ನಾದರೋ ಯೆಹೋವ ದೇವರು ತಮಗೆ ಸ್ವಕೀಯ ಜನರನ್ನಾಗಿ ಮಾಡಿಕೊಳ್ಳಬೇಕೆಂದು ಸಂಕಲ್ಪಿಸಿ, ಕಬ್ಬಿಣವನ್ನು ಕರಗಿಸುವ ಕುಲುಮೆಯೋಪಾದಿಯಲ್ಲಿದ್ದ ಈಜಿಪ್ಟ್ ದೇಶದಿಂದ ಹೊರತಂದರು.


ಆದ್ದರಿಂದ ಈಗ ಬಾ, ನಾನು ನಿನ್ನನ್ನು ಫರೋಹನ ಬಳಿಗೆ ಕಳುಹಿಸುತ್ತೇನೆ. ಇಸ್ರಾಯೇಲರಾದ ನನ್ನ ಜನರನ್ನು ನೀನು ಈಜಿಪ್ಟಿನೊಳಗಿಂದ ಹೊರಗೆ ಬರಮಾಡಬೇಕು,” ಎಂದರು.


ಮೋಶೆಯು ಯೆಹೋವ ದೇವರಿಗೆ, “ಸ್ವಾಮಿ, ನನ್ನನ್ನು ಕ್ಷಮಿಸಿರಿ, ನಾನು ಮೊದಲಿನಿಂದಲೂ ನೀವು ನಿಮ್ಮ ದಾಸನ ಸಂಗಡ ಮಾತನಾಡಿದಂದಿನಿಂದಲೂ ವಾಕ್ಚಾತುರ್ಯವಿಲ್ಲದವನು. ನನ್ನ ಮಾತೂ ನಾಲಿಗೆಯೂ ಮಂದವಾಗಿವೆ,” ಎಂದನು.


ಮೋಶೆ ಆರೋನರ ನಾಯಕತ್ವದಲ್ಲಿ ಈಜಿಪ್ಟ್ ದೇಶದೊಳಗಿಂದ ತಮ್ಮ ಸೈನ್ಯಗಳ ಪ್ರಕಾರ ಹೊರಟ ಇಸ್ರಾಯೇಲರ ಪ್ರಯಾಣದ ಹಂತಗಳ ವಿವರ ಇಲ್ಲಿವೆ.


ಆಗ ಸಮುಯೇಲನು ಜನರಿಗೆ, “ಮೋಶೆಯನ್ನೂ, ಆರೋನನನ್ನೂ ಮುಂದಕ್ಕೆ ತಂದವರೂ, ನಿಮ್ಮ ಪಿತೃಗಳನ್ನು ಈಜಿಪ್ಟ್ ದೇಶದೊಳಗಿಂದ ಬರಮಾಡಿದ ಯೆಹೋವ ದೇವರೇ ಇದಕ್ಕೆ ಸಾಕ್ಷಿ.


ಆದುದರಿಂದ ಮೋಶೆ, ಆರೋನರೂ ಇಸ್ರಾಯೇಲರನ್ನು ಹೊರಗೆ ತರುವುದಕ್ಕಾಗಿ ಈಜಿಪ್ಟಿನ ಅರಸನಾದ ಫರೋಹನ ಸಂಗಡ ಮಾತನಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು