Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 6:6 - ಕನ್ನಡ ಸಮಕಾಲಿಕ ಅನುವಾದ

6 ನಾನು ಯಾವುದರೊಂದಿಗೆ ಯೆಹೋವ ದೇವರ ಮುಂದೆ ಬಂದು, ಯಾವುದರೊಂದಿಗೆ ಉನ್ನತವಾದ ದೇವರ ಮುಂದೆ ಅಡ್ಡಬೀಳಲಿ? ದಹನಬಲಿಗಳ ಮತ್ತು ಒಂದು ವರ್ಷದ ಕರುಗಳ ಸಂಗಡ ಆತನ ಮುಂದೆ ಹೋಗಲೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಾನು ಯೆಹೋವನ ಸನ್ನಿಧಿಯಲ್ಲಿ ಯಾವ ಕಾಣಿಕೆಯೊಡನೆ ಕಾಣಿಸಿಕೊಳ್ಳಲಿ? ಯಾವುದನ್ನರ್ಪಿಸಿ ಮಹೋನ್ನತ ದೇವರ ಸಮ್ಮುಖದಲ್ಲಿ ಅಡ್ಡಬೀಳಲಿ? ಹೋಮದ ಪಶುಗಳನ್ನು ಅಥವಾ ಒಂದು ವರ್ಷದ ಕರುಗಳನ್ನು ತೆಗೆದುಕೊಂಡು ಬಂದು ಆತನ ಮುಂದೆ ಕಾಣಿಸಿಕೊಳ್ಳಲೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನಾನು ಸರ್ವೇಶ್ವರಸ್ವಾಮಿಯ ಸನ್ನಿಧಿಗೆ ಯಾವ ಕಾಣಿಕೆಯೊಂದಿಗೆ ಹೋಗಲಿ? ಮಹೋನ್ನತ ದೇವರಿಗೆ ಹೇಗೆ ಅಡ್ಡಬೀಳಲಿ? ಹೋಮಕ್ಕಾಗಿ, ಒಂದು ವರ್ಷದ ಎಳೆಕರುಗಳನ್ನು ತೆಗೆದುಕೊಂಡುಹೋಗಲೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಾನು ಯೆಹೋವನ ಸನ್ನಿಧಿಯಲ್ಲಿ ಯಾವ ಕಾಣಿಕೆಯೊಡನೆ ಕಾಣಿಸಿಕೊಳ್ಳಲಿ, ಯಾವದನ್ನರ್ಪಿಸಿ ಮಹೋನ್ನತದೇವರ ಸಮ್ಮುಖದಲ್ಲಿ ಅಡ್ಡಬೀಳಲಿ? ಹೋಮದ ಪಶುಗಳನ್ನೂ ಒಂದು ವರುಷದ ಕರುಗಳನ್ನೂ ತೆಗೆದುಕೊಂಡುಬಂದು ಆತನ ಮುಂದೆ ಕಾಣಿಸಿಕೊಳ್ಳಲೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಾನು ದೇವರಾದ ಯೆಹೋವನನ್ನು ಸಂಧಿಸಲು ಬರುವಾಗ ಏನನ್ನು ತೆಗೆದುಕೊಂಡು ಬರಲಿ? ಪರಲೋಕದ ದೇವರಿಗೆ ನಾನು ಅಡ್ಡಬಿದ್ದು ಆರಾಧಿಸುವಾಗ ಏನು ಮಾಡಲಿ? ನಾನು ಕರ್ತನ ಬಳಿಗೆ ಬರುವಾಗ ಸರ್ವಾಂಗಹೋಮದೊಡನೆ ಒಂದು ವರ್ಷದ ಕರುವನ್ನು ತೆಗೆದುಕೊಂಡು ಬರಲೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 6:6
39 ತಿಳಿವುಗಳ ಹೋಲಿಕೆ  

ಜನರು ಇದನ್ನು ಕೇಳಿದಾಗ ಅವರಿಗೆ ಹೃದಯದಲ್ಲಿ ಅಲಗು ನೆಟ್ಟಂತಾಗಿ, “ಸಹೋದರರೇ, ನಾವೇನು ಮಾಡಬೇಕು?” ಎಂದು ಪೇತ್ರನನ್ನೂ ಉಳಿದ ಅಪೊಸ್ತಲರನ್ನೂ ಕೇಳಿದರು.


ಮಹಾಶಬ್ದದಿಂದ ಆರ್ಭಟಿಸಿ, “ಯೇಸುವೇ, ಮಹೋನ್ನತ ದೇವಪುತ್ರನೇ, ನನ್ನ ಗೊಡವೆ ನಿಮಗೆ ಏಕೆ? ದೇವರಾಣೆ, ನನ್ನನ್ನು ಪೀಡಿಸಬೇಡಿರಿ!” ಎಂದು ಅರಚಿದನು.


ಆಗ ಒಬ್ಬನು ಬಂದು ಯೇಸುವಿಗೆ, “ಒಳ್ಳೆಯ ಬೋಧಕರೇ, ನಾನು ನಿತ್ಯಜೀವವನ್ನು ಹೊಂದುವುದಕ್ಕೆ ಯಾವ ಒಳ್ಳೆಯ ಕಾರ್ಯವನ್ನು ಮಾಡಬೇಕು?” ಎಂದು ಕೇಳಿದನು.


ಆಗ ನೆಬೂಕದ್ನೆಚ್ಚರನು ಧಗಧಗನೆ ಉರಿಯುತ್ತಿರುವ ಬೆಂಕಿಯ ಕುಲುಮೆಯ ಬಾಯಿಯ ಸಮೀಪಕ್ಕೆ ಬಂದು, “ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬವರೇ, ಮಹೋನ್ನತ ದೇವರ ಸೇವಕರೇ, ಹೊರಗೆ ಬನ್ನಿರಿ,” ಎಂದನು. ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬವರು ಬೆಂಕಿಯೊಳಗಿಂದ ಹೊರಗೆ ಬಂದರು.


ಆಮೇಲೆ ಅವರನ್ನು ಹೊರಗೆ ಕರೆದುಕೊಂಡು ಬಂದು, “ಮಹನೀಯರೇ, ನಾನು ರಕ್ಷಣೆ ಹೊಂದಲು ಏನು ಮಾಡಬೇಕು?” ಎಂದನು.


ಅವಳು, “ಈ ಮನುಷ್ಯರು ಮಹೋನ್ನತ ದೇವರ ದಾಸರು. ರಕ್ಷಣೆಯ ಮಾರ್ಗವನ್ನು ನಿಮಗೆ ಸಾರುತ್ತಾರೆ,” ಎಂದು ಗಟ್ಟಿಯಾಗಿ ಕೂಗುತ್ತಾ ಪೌಲನ ಮತ್ತು ನಮ್ಮ ಹಿಂದೆಯೇ ಬಂದಳು.


ಯೇಸು ಅವರಿಗೆ, “ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನೀವು ನನ್ನನ್ನು ಹುಡುಕುವುದು ಸೂಚಕಕಾರ್ಯಗಳನ್ನು ನೋಡಿದ್ದರಿಂದಲ್ಲ, ರೊಟ್ಟಿಗಳನ್ನು ತಿಂದು ತೃಪ್ತಿ ಹೊಂದಿದ್ದರಿಂದಲೇ.


ಒಂದು ಸಂದರ್ಭದಲ್ಲಿ ಒಬ್ಬ ನಿಯಮ ಬೋಧಕನು ಎದ್ದು ನಿಂತು ಯೇಸುವನ್ನು ಪರೀಕ್ಷಿಸುವುದಕ್ಕಾಗಿ, “ಬೋಧಕರೇ, ನಾನು ನಿತ್ಯಜೀವವನ್ನು ಪ್ರಾಪ್ತಿಮಾಡಿಕೊಳ್ಳುವುದಕ್ಕೆ ಏನು ಮಾಡಬೇಕು?” ಎಂದು ಕೇಳಿದನು.


ಅವನು ಮಾನವ ಸಮಾಜದಿಂದ ಬಹಿಷ್ಕೃತನಾದನು. ಮಹೋನ್ನತರಾದ ದೇವರು ಮನುಷ್ಯರ ರಾಜ್ಯವನ್ನು ಆಳುತ್ತಾರೆಂದೂ, ಅವರು ತಮಗೆ ಬೇಕಾದವರನ್ನು ಅದಕ್ಕೆ ನೇಮಿಸುತ್ತಾರೆಂದೂ ತಿಳಿಯುವ ತನಕ ಅವನು ಮೃಗಬುದ್ಧಿಯುಳ್ಳವನಾಗಿದ್ದನು. ಅವನ ನಿವಾಸವು ಕಾಡುಕತ್ತೆಗಳ ಸಂಗಡ ಇತ್ತು. ಅವನು ದನಗಳಂತೆ ಹುಲ್ಲನ್ನು ಮೇಯುತ್ತಿದ್ದನು. ಅವನ ಶರೀರ ಆಕಾಶದ ಮಂಜಿನಿಂದ ತೇವವಾಯಿತು.


“ಅರಸನೇ, ಮಹೋನ್ನತರಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನಿಗೆ ಸಾರ್ವಭೌಮತ್ವವನ್ನೂ, ಮಹತ್ತನ್ನೂ, ಕೀರ್ತಿಯನ್ನೂ, ಘನವನ್ನೂ ಕೊಟ್ಟರು.


“ಮಂತ್ರಗಾರರಲ್ಲಿ ಪ್ರಾಮುಖ್ಯನಾದ ಬೇಲ್ತೆಶಚ್ಚರನೇ, ನಿನ್ನಲ್ಲಿ ಪರಿಶುದ್ಧ ದೇವರುಗಳ ಆತ್ಮವಿರುವುದೆಂದು ನಾನು ಬಲ್ಲೆನು. ಯಾವುದೇ ರಹಸ್ಯವು ನಿನಗೆ ಅಸಾಧ್ಯವಾದದ್ದಲ್ಲ. ಆದ್ದರಿಂದ ನಾನು ಕಂಡ ಕನಸಿನ ದರ್ಶನ, ಅದರ ಅರ್ಥವನ್ನೂ ನೀನು ನನಗೆ ಹೇಳು.


ಬನ್ನಿರಿ, ಆರಾಧಿಸೋಣ; ನಮ್ಮನ್ನು ಸೃಷ್ಟಿಸಿದ ಯೆಹೋವ ದೇವರ ಮುಂದೆ ಮೊಣಕಾಲು ಊರೋಣ.


ಭೂಮಿಯ ಶ್ರೀಮಂತರೆಲ್ಲರು ಉಂಡು ಆರಾಧಿಸುವರು; ತಮ್ಮ ಪ್ರಾಣವನ್ನು ಬದುಕಿಸಲಾರದೆ ಧೂಳಿನಲ್ಲಿ ಇಳಿಯುವವರೆಲ್ಲರು ಅವರ ಮುಂದೆ ಅಡ್ಡಬೀಳುವರು.


ದಾವೀದನು ಗಿಬ್ಯೋನ್ಯರಿಗೆ, “ನಾನು ನಿಮಗೆ ಮಾಡಬೇಕಾದದ್ದೇನು? ನೀವು ಯೆಹೋವ ದೇವರ ಬಾಧ್ಯತೆಯನ್ನು ಆಶೀರ್ವದಿಸುವ ಹಾಗೆ, ನಾನು ಯಾವುದರಿಂದ ಪ್ರಾಯಶ್ಚಿತ್ತ ಮಾಡಲಿ,” ಎಂದು ಕೇಳಿದನು.


ನೀವು ಆಯ್ದುಕೊಳ್ಳುವ ಕುರಿಮರಿಯು ದೋಷರಹಿತವಾಗಿರುವ ಒಂದು ವರ್ಷದ ಗಂಡುಮರಿಯಾಗಿರಬೇಕು. ನೀವು ಕುರಿಗಳಿಂದಾಗಲಿ, ಆಡುಗಳಿಂದಾಗಲಿ ತೆಗೆದುಕೊಳ್ಳಬಹುದು.


ಈ ಕಾರಣದಿಂದ, ಪರಲೋಕ ಭೂಲೋಕದಲ್ಲಿರುವ ಪ್ರತಿ ಕುಟುಂಬವೂ ಹೆಸರು ಪಡೆದಿರಲು ಕಾರಣವಾಗಿರುವ ತಂದೆಯ ಮುಂದೆ ನಾನು ಮೊಣಕಾಲೂರುತ್ತೇನೆ:


ಅವರನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಮನಸ್ಸಿನಿಂದಲೂ ನಿನ್ನ ಪೂರ್ಣಶಕ್ತಿಯಿಂದಲೂ ಪ್ರೀತಿಸಿ, ತನ್ನ ನೆರೆಯವನನ್ನು ತನ್ನಂತೆಯೇ ಪ್ರೀತಿಸುವುದು ಎಲ್ಲಾ ದಹನಬಲಿಗಳಿಗಿಂತಲೂ ಯಜ್ಞಗಳಿಗಿಂತಲೂ ಹೆಚ್ಚಿನದಾಗಿದೆ,” ಎಂದನು.


ಇದಲ್ಲದೆ ಪ್ರತಿ ಯಾಜಕನು ಅನುದಿನವೂ ಸೇವೆಮಾಡುತ್ತಾ ನಿಂತಿರುವನು. ಆದರೆ ಎಂದಿಗೂ ಪಾಪಗಳನ್ನು ತೆಗೆದುಹಾಕಲಾರದಂಥ ಯಜ್ಞಗಳನ್ನು ಪದೇಪದೇ ಅರ್ಪಿಸುತ್ತಿದ್ದನು.


ದಹನಬಲಿಗಾಗಿ ಒಂದು ಎಳೆಯ ಹೋರಿ, ಒಂದು ಟಗರು, ಒಂದು ವರ್ಷದ ಒಂದು ಕುರಿಮರಿ,


ಅದಕ್ಕೆ ಸಮುಯೇಲನು ಹೇಳಿದ್ದೇನೆಂದರೆ, “ಯೆಹೋವ ದೇವರ ವಾಕ್ಯಕ್ಕೆ ವಿಧೇಯನಾದರೆ, ಯೆಹೋವ ದೇವರಿಗೆ ಆಗುವ ಸಂತೋಷ ದಹನಬಲಿಗಳಲ್ಲಿಯೂ ಯಜ್ಞಗಳಲ್ಲಿಯೂ ಆಗುವುದೋ? ಇಗೋ, ಯಜ್ಞಕ್ಕಿಂತ ವಿಧೇಯತೆಯು, ಟಗರುಗಳ ಕೊಬ್ಬಿಗಿಂತ ಮಾತುಕೇಳುವುದೇ ಉತ್ತಮವಾಗಿರುವುದು.


ಧನ್ಯವಾದದೊಡನೆ ಅವರ ಸನ್ನಿಧಿಯಲ್ಲಿ ಮುಂದೆ ಬಂದು ಕೀರ್ತನೆಗಳಿಂದ ಅವರಿಗೆ ಜಯಧ್ವನಿ ಮಾಡೋಣ.


ಲೆಬನೋನು ಯಜ್ಞವೇದಿಯ ಬೆಂಕಿಗೆ ಸಾಲದು: ಅದರ ಪ್ರಾಣಿಗಳು ದಹನಬಲಿಗಳಿಗೆ ಸಾಧನವು.


ಶೆಬದಿಂದ ಸಾಂಬ್ರಾಣಿಯೂ ದೂರದೇಶದಿಂದ ಒಳ್ಳೆಯ ಸುಗಂಧವೂ ನನಗೆ ಬರುವುದು ಏತಕ್ಕೆ? ನಿಮ್ಮ ದಹನಬಲಿಗಳು ಮೆಚ್ಚುಗೆಯಾಗಲಿಲ್ಲ. ನಿಮ್ಮ ಬಲಿಗಳು ನನಗೆ ರುಚಿಯಿಲ್ಲ.”


“ ‘ಆದರೆ ದೇಶದ ಜನರು ನಿಶ್ಚಿತ ಹಬ್ಬಗಳಲ್ಲಿ ಯೆಹೋವ ದೇವರ ಮುಂದೆ ಬರುವಾಗ ಉತ್ತರದ ಬಾಗಿಲಿನಿಂದ ಪ್ರವೇಶಿಸಿ ಆರಾಧಿಸಿದ ಮೇಲೆ ಅವನು ದಕ್ಷಿಣದ ಬಾಗಿಲಿನ ಮಾರ್ಗವಾಗಿ ಹೊರಗೆ ಹೋಗಬೇಕು. ಮತ್ತು ದಕ್ಷಿಣ ಬಾಗಿಲಿನ ಮಾರ್ಗವಾಗಿ ಪ್ರವೇಶಿಸುವವನು ಉತ್ತರ ಬಾಗಿಲಿನ ಮಾರ್ಗವಾಗಿ ಹೊರಗೆ ಹೋಗಬೇಕು. ದಕ್ಷಿಣದ ಬಾಗಿಲಿನ ಮಾರ್ಗವಾಗಿ ಪ್ರವೇಶಿಸಿದ ಬಾಗಿಲಿನ ಮಾರ್ಗವಾಗಿಯೇ ತಿರುಗಿ ಹೊರಗೆ ಹೋಗಬಾರದು. ಆದರೆ ಅದಕ್ಕೆ ಎದುರಾಗಿರುವ ಬಾಗಿಲಿನಿಂದ ಹೊರಗೆ ಹೋಗಬೇಕು.


ಅವರು ಯೆಹೋವ ದೇವರನ್ನು ಹುಡುಕುವುದಕ್ಕೆ ತಮ್ಮ ದನಕುರಿಗಳೊಂದಿಗೂ ಹೋಗುವರು. ಆದರೆ ಆತನು ಅವರಿಂದ ತನ್ನನ್ನು ಹಿಂದೆಗೆದುಕೊಂಡಿದ್ದರಿಂದ, ಅವರು ಆತನನ್ನು ಕಾಣುವುದೇ ಇಲ್ಲ.


ನೀವು ನನಗೆ ದಹನಬಲಿಗಳನ್ನೂ ಧಾನ್ಯ ಸಮರ್ಪಣೆಗಳನ್ನೂ ಅರ್ಪಿಸಿದರೂ, ನಾನು ಅವುಗಳನ್ನು ಅಂಗೀಕರಿಸುವುದಿಲ್ಲ. ನಿಮ್ಮ ಕೊಬ್ಬಿದ ಪ್ರಾಣಿಗಳ ಸಮಾಧಾನದ ಬಲಿಗಳನ್ನೂ ನಾನು ಲಕ್ಷಿಸುವುದಿಲ್ಲ.


“ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು. ಅಬೀಬ ತಿಂಗಳಿನ ನೇಮಕವಾದ ಸಮಯದಲ್ಲಿ ಏಳು ದಿನಗಳವರೆಗೆ ನಾನು ನಿಮಗೆ ಆಜ್ಞಾಪಿಸಿದ ಪ್ರಕಾರ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಏಕೆಂದರೆ ನೀವು ಆ ತಿಂಗಳಲ್ಲೇ ಈಜಿಪ್ಟಿನಿಂದ ಹೊರಗೆ ಬಂದಿದ್ದೀರಿ. “ಒಬ್ಬರೂ ಕಾಣಿಕೆಯಿಲ್ಲದೆ ಬರಿಗೈಯಿಂದ ನನ್ನ ಸನ್ನಿಧಿಗೆ ಬರಬಾರದು.


ದೇವರು ನನಗೆ ಮಾಡಿದ ಎಲ್ಲಾ ಉಪಕಾರಗಳಿಗೆ ಬದಲಾಗಿ ನಾನು ಯೆಹೋವ ದೇವರಿಗೆ ಏನು ಮಾಡಲಿ?


ದುಷ್ಟರ ಯಜ್ಞವು ಯೆಹೋವ ದೇವರಿಗೆ ಅಸಹ್ಯ. ಆದರೆ ಯಥಾರ್ಥವಂತರ ಪ್ರಾರ್ಥನೆಯು ಅವರಿಗೆ ಮೆಚ್ಚುಗೆ.


ಯಜ್ಞಕ್ಕಿಂತ ನೀತಿ ನ್ಯಾಯಗಳನ್ನು ನಡೆಸುವುದು ಯೆಹೋವ ದೇವರಿಗೆ ಎಷ್ಟೋ ಮೆಚ್ಚಿಗೆಯಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು