ರಾಜವನಪಾಲಕನಾದ ಆಸಾಫನು, ದೇವಾಲಯದ ಕೋಟೆಯ ಬಾಗಿಲುಗಳನ್ನೂ, ಪಟ್ಟಣದ ಪೌಳಿಗೋಡೆಯನ್ನೂ, ನಾನು ಸೇರುವ ಮನೆಯನ್ನೂ, ಕಟ್ಟಲು ಬೇಕಾಗುವ ತೊಲೆಗಳಿಗಾಗಿ ಮರಗಳನ್ನೂ ಕೊಡಬೇಕಾಗುತ್ತದೆ. ಇದನ್ನೆಲ್ಲಾ ಕೊಡುವಂತೆ ರಾಜರು ನನ್ನ ಕೈಯಲ್ಲಿ ಪತ್ರಗಳನ್ನು ದಯಮಾಡಿ ನೀಡಬೇಕು,” ಎಂದು ಬಿನ್ನವಿಸಿದೆನು. ನನ್ನ ದೇವರ ಕೃಪಾಹಸ್ತ ನನ್ನ ಮೇಲೆ ಇದ್ದುದರಿಂದ, ರಾಜನು ಅವುಗಳನ್ನು ನನಗೆ ಕೊಟ್ಟನು.
ಸಂಕಟಕ್ಕೊಳಗಾದವಳೇ! ಬಿರುಗಾಳಿಯಿಂದ ಬಡಿಯಲಾಗಿ ಆದರಣೆ ಹೊಂದದವಳೇ, ನಾನು ನಿನ್ನ ಕಲ್ಲುಗಳನ್ನು ಸುಂದರವಾದ ಬಣ್ಣಗಳೊಂದಿಗೆ ಇಟ್ಟು, ನಿನ್ನ ಅಸ್ತಿವಾರವನ್ನು ನೀಲಮಣಿಗಳಿಂದ ಹಾಕಿ ಗಾರೆಯಿಂದ ಕಟ್ಟುವೆನು.
ಬಳಿಕ ನಾನು ಅವರಿಗೆ, “ನಮ್ಮ ದುರವಸ್ಥೆ ನಿಮ್ಮ ಕಣ್ಣ ಮುಂದಿರುತ್ತದಲ್ಲವೇ? ಯೆರೂಸಲೇಮ್ ಪಟ್ಟಣ ಹಾಳುಬಿದ್ದಿದೆ; ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗಿವೆ; ಬನ್ನಿ, ಯೆರೂಸಲೇಮಿನ ಗೋಡೆಯನ್ನು ಪುನಃ ಕಟ್ಟೋಣ. ಹೀಗೆ ಮಾಡಿದರೆ, ನಮ್ಮ ಮೇಲಿನ ನಿಂದೆ ನೀಗುವುದು,” ಎಂದು ಹೇಳಿದೆ.
“ಆದ್ದರಿಂದ ನೀನು ಅರಿತು ತಿಳಿಯಬೇಕಾದದ್ದು ಏನೆಂದರೆ, ಯೆರೂಸಲೇಮನ್ನು ತಿರುಗಿ ಕಟ್ಟಲು ಆಜ್ಞೆ ಹೊರಡುವ ದಿನದಿಂದ, ಆಳುವ ಒಬ್ಬ ಅಭಿಷಿಕ್ತರು ಬರುವುದರೊಳಗೆ ಏಳು ವಾರಗಳು ಕಳೆಯಬೇಕು! ಅದು ಪುನಃ ಕಟ್ಟಿದ ಮೇಲೆ, ಅರವತ್ತೆರಡು ವಾರಗಳು ಇರುವುದು. ಕಷ್ಟಕಾಲದಲ್ಲಿ ಬೀದಿ ಚೌಕಗಳಿಂದಲೂ ಕೋಟೆಕೊತ್ತಲುಗಳಿಂದಲೂ ಅದು ಕಟ್ಟಲಾಗುವುದು.
ಆಗ ನಿನ್ನವರು ಪುರಾತನ ಕಾಲದ ಹಾಳಾದ ಸ್ಥಳಗಳನ್ನು ಕಟ್ಟುವರು. ತಲತಲಾಂತರಗಳಿಂದ ಹಾಳುಬಿದ್ದಿರುವ ಅಸ್ತಿವಾರಗಳನ್ನು ನೀನು ಎಬ್ಬಿಸುವೆ. ಬಿದ್ದ ಗೋಡೆಯನ್ನು ಎಬ್ಬಿಸುವ ದೇಶ ಎಂದೂ, ನಿವಾಸಿಗಳಿಗಾಗಿ ನಡೆದಾಡಲು ಹಾದಿಗಳನ್ನು ಉಂಟುಮಾಡುವ ದೇಶ ಎಂದೂ ನಿನಗೆ ಬಿರುದು ಬರುವುದು.